Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಇತ್ತೀಚಿಗೆ ನಾಗರೀಕ ಸಮಾಜದಲ್ಲಿ ಯಾವುದೇ ಸಂಬಂಧಗಳಿಗೆ ಬೆಲೆನೇ ಇಲ್ಲದಂತಾಗಿದೆ.ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ತಂದೆಯೇ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಾಲೂಕಿನ ಉದೇವಾರ ಗ್ರಾಮದಲ್ಲಿ ನಡೆದಿದೆ. ಹೌದು ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಮಗಳ ಮೇಲೆ ಸ್ವಂತ ತಂದೆಯೇ ಅತ್ಯಾಚಾರ ಎಸಗಿದ್ದಾನೆ. ಗ್ರಾಮದ ಕೂಲಿ ಕಾರ್ಮಿಕ ಮಂಜುನಾಥ್ (34) ಹೀನಕೃತ್ಯ ಎಸಗಿದ ತಂದೆ ಎಂದು ಹೇಳಲಾಗುತ್ತಿದೆ. ಬಾಲಕಿ ಪಾಪಿ ತಂದೆ ಮಾಡಿದಂತ ಕೃತ್ಯವನ್ನು ತನ್ನ ಸಹೋದರಿಗೆ ಹೇಳಿದ ನಂತರ ವಿಷಯ ಬೆಳಕಿಗೆ ಬಂದಿದ್ದು, ಬಾಲಕಿಯ ಹೇಳಿಕೆ ಆಧರಿಸಿ ಮಹಿಳಾ ಮತ್ತು ಮಕ್ಕಳಾಧಿಕಾರಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಪೋಲಿಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಸಿಇಟಿ ಪರೀಕ್ಷೆಯ ವ್ಯವಸ್ಥೆಯನ್ನು ಹಾಳು ಮಾಡಿದ್ದೆ ಕಾಂಗ್ರೆಸ್ ಹಾಗಾಗಿ, ಇದೀಗ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟ ಆಡಿದೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ವಾರ್ಷಿಕೋತ್ಸವ ಮಾಡಲು ಸಾಧ್ಯವಾಗುತ್ತಿಲ್ಲ. ವೈಜ್ಞಾನಿಕವಾಗಿ ರೂಪಗೊಂಡ ಎನ್ ಇ ಪಿಗೆ ಪಿಲಾಂಜಲಿ ಕೊಟ್ಟಿದೆ. ಎಸ್ಇಪಿ ತರುತ್ತೇನೆ ಎಂದು ಹೇಳಿ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ಪೂರ್ಣಾವಧಿ ಶಿಕ್ಷಣ ಮಂತ್ರಿ ಇಲ್ಲ ಪಾಪ ತಮ್ಮ ಕುಟುಂಬದ ಯಾರನ್ನು ಗೆಲ್ಲಿಸಲು ಓಡಾಡುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. 5 ಮತ್ತು 9ನೇ ತರಗತಿವರೆಗಿನ ಮಕ್ಕಳ ಭವಿಷ್ಯ ಕೋರ್ಟ್ ವರೆಗೆ ಹೋಗಿದೆ.ಮಕ್ಕಳಿಗೆ ಮತದಾನದ ಹಕ್ಕಿಲ್ಲ ಅಂತ ನಿರ್ಲಕ್ಷ ಮಾಡುತ್ತಿದ್ದಾರೆ. ಸಿಇಟಿ ವ್ಯವಸ್ಥೆ ಹಾಳು ಮಾಡಿದ ಕೀರ್ತಿ ಕಾಂಗ್ರೆಸ್ ಸರ್ಕಾರದ್ದು. ಜಿಲ್ಲೆಯ ಹೊರಗೆ ಹೋಗಿ ವಿದ್ಯಾರ್ಥಿಗಳು ಎಕ್ಸಾಮ್ ಬರೆಯಬೇಕಾಯಿತು. ಆದರೆ ಸಚಿವ ಪ್ರಿಯಾಂಕ ಖರ್ಗೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣ ಹಾಗೂ ಚಿಕ್ಕ ಚಿಕ್ಕ ಕೌಟುಂಬಿಕ ಕಲಹಗಳಿಗೆ ಜನರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.ಇದೀಗ ಬೆಂಗಳೂರಿನಲ್ಲಿ ಇಂತಹ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತ ಪತ್ನಿ ಪತಿಯ ಕಿರುಕುಳಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸಂಧ್ಯಾ ಎಂದು ಹೇಳಲಾಗುತ್ತಿದ್ದು, ಆಕೆಯ ಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆಕೆಯ ಪತಿ ನೀಡುತ್ತಿದ್ದ ಕಿರುಕುಳವೇ ಆಕೆಯ ಸಾವಿಗೆ ಕಾರಣ ಎಂದು ಮಹಿಳೆಯ ತಂದೆ ಇದೀಗ ಆರೋಪಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಿನ್ನೆ ಘಟನೆ ನಡೆದಿದೆ. ಸಾವಿಗೆ ಶರಣಾದ ಮಹಿಳೆಯನ್ನು ಸಂಧ್ಯಾ ಎಂದು ಗುರುತಿಸಲಾಗಿದೆ. ಅಳಿಯ ಜಯಪ್ರಕಾಶ್ ಮಗಳಿಗೆ ದಿನವೂ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆರೋಪಿಸಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಧ್ಯಾ ಹಾಗೂ ಜಯಪ್ರಕಾಶ್ ಮದುವೆಯಾಗಿ 5 ವರ್ಷ ಆಗಿದ್ದು,…
ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ.15ರಂದು ಸ್ವದೇಶಕ್ಕೆ ಮರಳಿ ಎಸ್ಐಟಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂಬ ನಿರೀಕ್ಷೆ ಕೊನೆಗೂ ಹುಸಿಯಾಗಿದೆ. ಬುಧವಾರ ಪ್ರಜ್ವಲ್ ಭಾರತಕ್ಕೆ ಮರಳಿಲ್ಲ. ಹಾಗಾಗಿ ಎಸ್ಐಟಿಯ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿದೆ. ಕಳೆದ 15 ದಿನಗಳ ಹಿಂದೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ಗುರು ದಾಖಲಾಗಿತ್ತು ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿದೇಶದಲ್ಲೆ ಇದ್ದುಕೊಂಡು ಕಾನೂನು ಹೋರಾಟಕ್ಕೆ ಮುಂದಾಗಿದ್ದರು ಈ ಕುರಿತಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಅವರು ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಸಿಐಡಿ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಮೊದಲಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು. ಅದಕ್ಕೂ ಯಾವುದೇ ರೀತಿಯಾಗಿ ಸ್ಪಂದಿಸದೆ ಇರುವ ಕಾರಣ ನಂತರ ಇತ್ತೀಚಿಗೆ ರೆಡ್ ಕಾರ್ನರ್ ನೋಟಿಸ್ ಕೂಡ…
ಬೆಂಗಳೂರು : ಠಾಣೆಯಲ್ಲಿ ಸಿವಿಲ್ ವ್ಯಾಜ್ಯ ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಪುನರಾವರ್ತನೆ ಆಗುತ್ತಿರುವುದಕ್ಕೆ ಮತ್ತೊಮ್ಮೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಠಾಣೆಯಲ್ಲಿ ಕೂತು ವಸೂಲಿ ಮಾಡುವುದು ಪೊಲೀಸರ ಕೆಲಸವೇ? ಎಂದು ಆಕ್ರೋಶ ಹೊರಹಾಕಿದೆ. ಹೌದು ನಿವೇಶನವೊಂದರ ಖರೀದಿಗೆ ಸಂಬಂಧಿಸಿದ ವಿಚಾರ ದಲ್ಲಿ ಮಾರಾಟದಾರರಿಗೆ ಹಣ ಪಾವತಿಸಲು ಖರೀದಿದಾ ರರಿಗೆ ಒತ್ತಾಯಿಸಿದ ಹಾಗೂ ಬೆದರಿಕೆ ಹಾಕಿದ ಆರೋಪ ಸಂಬಂಧ ಬೆಂಗಳೂರಿನ ಚಂದ್ರ ಲೇಔಟ್ ಠಾಣೆಯ ಪೊಲೀಸರ ವಿರುದ್ಧ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಯು ಅರ್ಜಿದಾರರನ್ನು ಅನಗತ್ಯವಾಗಿ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡಿ, ಬೆದರಿಕೆ ಹಾಕಿ ಹಣ ಪಾವತಿಸುವಂತೆ ಮಾಡಿದ್ದಾರೆ. ಇದರಿಂದ ಅರ್ಜಿದಾರರು ಮಾನಸಿಕ ಯಾತನೆ ಅನುಭವಿಸಿದ್ದಾರೆ. ಇದೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿದಾರರು ಸಲ್ಲಿಸಿರುವ ಅರ್ಜಿಗೆ ಪ್ರಾಸಿಕ್ಯೂಷನ್ ಪರ ವಕೀಲರು ಸೂಕ್ತ ಮಾಹಿತಿ ನೀಡಿಲ್ಲ. ಇದರಿಂದ ಅರ್ಜಿ ವಿಲೇವಾರಿಯಾಗದೆ ಬಾಕಿಯಿದೆ. ಹಾಗಾಗಿ ಅರ್ಜಿದಾರರ ವಿರುದ್ಧದ ಎಫ್…
ಉಡುಪಿ : ಮೂರು ಬಾರಿ ಶಾಸಕನಾಗಿದ್ದ ನನಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ನಾನು ವಿಧಾನಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ಸಿದ್ದ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು. ನಗರದಲ್ಲಿ ನಿನ್ನೆ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಟಿಕೆಟ್ ಸಿಗ್ಲಿಲ್ಲ ಅಂತ ಮೇ 20ರ ವರೆಗೆ ಗಲಾಟೆ ಮಾಡ್ತಾನೆ, ನಂತರ ನಾಮಪತ್ರ ಹಿಂದಕ್ಕೆ ಪಡೀತಾನೆ ಎಂದು ಪಕ್ಷದ ನಾಯಕರು ತಿಳಿದುಕೊಂಡಿದ್ದಾರೆ. ಆದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ. ಗೆದ್ದು ಬಿಜೆಪಿಯ ವಿಧಾನಪರಿಷತ್ ಸದಸ್ಯನಾಗುತ್ತೇನೆ ಎಂದರು. ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗದಂತೆ ಷಡ್ಯಂತ್ರ ಮಾಡಿದರು. ವಿಧಾನಪರಿಷತ್ ಚುನಾವಣೆಯ ಟಿಕೆಟ್ ಘೋಷಣೆಯ ಸಂದರ್ಭದಲ್ಲಿ ನಾಯಕರು ನನ್ನನ್ನು ಕರೆದು ಮಾತನಾಡಿಸಲಿಲ್ಲ. ಟಿಕೆಟ್ ನೀಡದ ಬಗ್ಗೆ ಮನವರಿಕೆ ಮಾಡಲಿಲ್ಲ. ಈಗ ಬಂದು ಸ್ಪರ್ಧಿಸಬೇಡಿ ಎನ್ನುತ್ತಿದ್ದಾರೆ. ಇಂದು ಅಭಿಮಾನಿಗಳೊಂದಿಗೆ ನಾಮಪತ್ರ ರಘುಪತಿ ಭಟ್ಟರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕಾಗಿ ಉಡುಪಿ,…
ಬೆಂಗಳೂರು : ರಾಜ್ಯದಲ್ಲಿ ನಮ್ಮ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಸರ್ಕಾರ ಬೀಳಿಸಲು 50ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು. ಬದಲಿಗೆ ಎನ್ಡಿಎ ಒಕ್ಕೂಟದ ಬಿಜೆಪಿ ಹಾಗೂ ಜೆಡಿಎಸ್ನ 30ಕ್ಕೂ ಹೆಚ್ಚು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಟ ನಮ್ಮ ರಾಜ್ಯದಲ್ಲಿ ನಡೆಯುವುದಿಲ್ಲ. ಅವರು ಇಲ್ಲಿಗೆ ಬಂದರೂ ಏನೂ ಮಾಡಲಾಗುವುದಿಲ್ಲ. ಬರೆದಿಟ್ಟುಕೊಳ್ಳಿ ಚುನಾವಣೆ ಮುಗಿದ ತಿಂಗಳ ಒಳಗಾಗಿ ಅವರೇಮಾಜಿಯಾಗಲಿದ್ದಾರೆ.ಅವರ ಸರ್ಕಾರವೇ ಪತನ ವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ನ 11-12 ಮಂದಿ ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ನೀವೇ ಹೇಳುತ್ತಿದ್ದೀರಿ. ಹೀಗಿದ್ದಾಗ ಇಷ್ಟು ಬಹುಮತದ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಿಂದೆ ಹೋದವರು ಶೀಘ್ರದಲ್ಲೇ ಮತ್ತೆ ಮಾತೃ ಪಕ್ಷಕ್ಕೆ ವಾಪಸು ರಾಜಿಯಾಗಲಿ ಆಗುತ್ತಾರೆ.ಎಲ್ಲರೂ ಶಿವಸೈನಿಕರು,…
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಬಳಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರದ ಸಿಎಂ ಏಕನಾಥ ಶಿಂಧೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ತಿಳಿಸಿದ್ದರು. ಇವರ ಹೇಳಿಕೆಗೆ ಸಚಿವ ಎಮ್ ಬಿ ಪಾಟೀಲ್ ತೆಲುಗು ನೀಡಿದ್ದು ಚುನಾವಣೆಯ ಬಳಿಕ ಒಂದೇ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ಮಾಜಿ ಆಗುತ್ತಾರೆ ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದರು. ಮಹಾರಾಷ್ಟ್ರದಲ್ಲಿ 30 ರಿಂದ 40 ಶಾಸಕರು ನಮ್ಮ ಕಡೆ ಬರುತ್ತಾರೆ ಎಂದು ಸ್ಪೋಟಕವಾದ ಮಾಹಿತಿ ತಿಳಿಸಿದರು. ಎಲ್ಲರೂ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಳಿ ಹೋಗುತ್ತಾರೆ.NCP ಕಡೆಯು ಹೋಗುತ್ತಾರೆ.ಚುನಾವಣೆ ಮುಗಿದ ತಿಂಗಳ ಬಳಿಕ ಸರ್ಕಾರ ಬೀಳಲಿದೆ. ಅಜಿತ್ ಪವಾರ್ ಶಾಸಕರನ್ನ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ.ವಾಪಸ್ ಶಿವಸೇನೆ ನಾಯಕರು ಉದ್ಧವ್ ಠಾಕ್ರೆ ಬಳಿ ಹೋಗುತ್ತಾರೆ ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಬೀದರ್ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಮುಖವಾದ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿತ್ತು. ಅದರಲ್ಲಿ ಮಹಿಳೆಯರಿಗಾಗಿ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಕೂಡ ಒಂದು. ಇದೀಗ ಬೀದರ್ ಅಲ್ಲಿ ಬಸ್ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಸೀಟಿಗಾಗಿ ಇಬ್ಬರು ಮಹಿಳೆಯರು ಕಿತ್ತಾಡಿಕೊಂಡಿದ್ದಾರೆ. ಬೀದರ್ ಇಂದ ಕಲಬುರಗಿಗೆ ಆಗಮಿಸಲು ಉಚಿತ ಯೋಜನೆಯಡಿಯಲ್ಲಿ ಟಿಕೇಟ್ ಪಡೆದುಕೊಂಡಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಇದು ನನ್ನ ಜಾಗ ಬಿಡು ಎಂದಿದ್ದಾರೆ. ಅದಕ್ಕೆ ಇನ್ನೊಬ್ಬ ಮಹಿಳೆ ನಾನು ಸೀಟ್ ಬಿಡಲ್ಲ ಏನೂ ಮಾಡ್ತಿಯಾ ಎಂದು ಪರಸ್ಪರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ನಂತರ ಇಬ್ಬರ ಗಲಾಟೆ ತಾರಕಕ್ಕೆ ಏರಿದೆ.ಗಲಾಟೆ ಜೋರಾಗುತ್ತಿದ್ದಂತೆ ಓರ್ವ ಮಹಿಳೆ ತನ್ನ ಚಪ್ಪಲಿ ತೆಗೆದು ಜಗಳ ಮಾಡುತ್ತಿದ್ದ ಮಹಿಳೆ ಹೊಡೆದಿದ್ದಾಳೆ.ಚಪ್ಪಲಿ ಹಲ್ಲೆ ಬಳಿಕ ಮೈಮೇಲೆ ಹಾಕಿದ ಬಟ್ಟೆ ಹಿಡಿದು ಮಹಿಳೆಯರು ಎಳೆದಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಹಾಸನ ಸಂಶೋಧ ಪ್ರಚೋಲ ರೇವಣ್ಣ ಅವರು ಕಳೆದ 15 ದಿನಗಳಿಂದ ವಿದೇಶದಲ್ಲಿ ಇದ್ದಾರೆ ಇದೀಗ ಮೇ 15ರಂದು ಟಿಕೆಟ್ ಬುಕ್ ಮಾಡಿದ್ದ ಪ್ರಜ್ವಲ್ ರೇವಣ್ಣ ಕಳೆದ ನಾಲ್ಕು ದಿನಗಳ ಹಿಂದೆ ಅದನ್ನು ಕ್ಯಾನ್ಸಲ್ ಮಾಡಿದರು ಇದೀಗ ಮತ್ತೆ ಬಿಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು ಎಸ್ ಐ ಟಿ ನೀಡುವ ನೋಟಿಸ್ ಹಾಗೂ ಸಿಐಡಿ ಮುಖಾಂತರ ಬ್ಲ್ಯೂ ಕಾರ್ನರ್ ನೋಟಿಸ್ ನೀಡುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಇಂದೇ ಬೆಂಗಳೂರಿಗೆ ಆಗಮಿಸಬೇಕಾಗಿತ್ತು, ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಬುಕ್ ಮಾಡಿದ ಟಿಕೇಟನ್ನು ಕ್ಯಾನ್ಸಲ್ ಮಾಡಿದ್ದರು. ಇದೀಗ ಪ್ರಜ್ವಲ್ ಮತ್ತೆ ಟಿಕೆಟ್ ಬುಕ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ LH 764 ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿದ್ದಾರೆ. ಇಂದು ಬೆಳಗ್ಗೆ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದಾರೆ. ಇಂದು ಮಧ್ಯರಾತ್ರಿ ಬೆಂಗಳೂರಿಗೆ ವಿಮಾನ ಆಗಮಿಸಲಿದೆ ಎಂದು…