Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಾಮಾನ್ಯವಾಗಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತಿತ್ತು ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಊಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಒಂದು ಯೋಜನೆ ರೂಪಿಸಿತ್ತು. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ, ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ಪಿಯುಸಿ ವಿದ್ಯಾರ್ಥಿಗಳಿಗೂ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್, ಸಿಕ್ಕಿದ್ದು ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆದಿದೆ ಸರ್ಕಾರಿ ಕಾಲೇಜುಗಳ ಪ್ರವೇಶ ಅತಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ. ಈ ಮೂಲಕ ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಇನ್ಮುಂದೆ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿ ವನಿಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ
ಬೆಂಗಳೂರು : ಇತ್ತೀಚಿಗೆ ಜಿಎಸ್‌ಟಿ ಕಡಿತಾದ ಬೆನ್ನೆಲೆ ಕೆಎಂಎಫ್ ನಂದಿನಿ ತುಪ್ಪ ಸೇರಿದಂತೆ ಹಲವು ವಸ್ತುಗಳ ಮೇಲಿನ ದರ ಕಡಿಮೆ ಮಾಡಿತ್ತು. ಇದೀಗ ಗ್ರಾಹಕರಿಗೆ ದರ ಏರಿಕೆ ಶಾಕ್ ನೀಡಿದ್ದು ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆಯಾಗಿದೆ. ಹೌದು ಜಿಎಸ್‌ಟಿ ಕಡಿತದ ಬಳಿಕ ಕೆಎಂಎಫ್ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿತು. ಆದರೆ ತುಪ್ಪಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ದಿಢೀರ್ ದರ ಏರಿಕೆ ಮಾಡಿದೆ ಈ ಮೂಲಕ ರಾಜ್ಯದ ಜನತೆಗೆ ಶಾಕ್ ನೀಡಿದೆ. ಒಂದು ಲೀಟರ್ ನಂದಿನಿ ತುಪ್ಪಕ್ಕೆ, ಇದೀಗ ರೂ.700 ನಿಗದಿ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಕೆ ಸುರೇಶ್ ಮಾತನಾಡಿದ್ದು ತುಪ್ಪ ಹಾಲಿನ ದರ ಸರ್ಕಾರ ಏರಿಕೆ ಮಾಡಿದೆ ಒಟ್ಟು ಸುಮಾರು 95 ಲಕ್ಷಕ್ಕಿಂತ ಒಂದು ಕೋಟಿ ಲೀಟರ್ ಪ್ರತಿದಿನ ಉತ್ಪತ್ತಿಯಾಗುತ್ತದೆ ನಾವು 50 ಲಕ್ಷ ಮಾತ್ರ ಹಾಲು ಮಾರಾಟ ಮಾಡಲಾಗುತ್ತೆ. ಉಳಿದ 50 ಲಕ್ಷ ಲೀಟರ್ಗೆ ರೈತರಿಗೆ ಹಣ ಕೊಡುತ್ತೇವೆ ಅದು ನಮಗೆ ನಷ್ಟ…
ಬೆಂಗಳೂರು : ಬೆಂಗಳೂರಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವರ್ತೂರು ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಪರಾಧ ವಿಭಾಗದ ಸಿಬ್ಬಂದಿಯಾದ ಸಂಜಯ್ ರಾಥೋಡ್, ಸಂತೋಷ್ ಕುದರಿ ಹಾಗೂ ಅರ್ಚನಾ ಅವರನ್ನು ಅಮಾನತುಗೊಳಿಸಿ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಕೆ. ಪರಶುರಾಮ ಆದೇಶಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸುಂದರಿ ಬೀಬಿ (34) ಬೆಂಗಳೂರಿನ ವರ್ತೂರು ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು. ಅಕ್ಟೋಬರ್ 31ರಂದು ಫ್ಲ್ಯಾಟ್‌ನಲ್ಲಿ ಕಸ ಗುಡಿಸುವಾಗ ಕೆಳಗೆ ಬಿದ್ದಿರುವ 100 ರೂಪಾಯಿಯನ್ನು ಮಾಲೀಕರಿಗೆ ಕೊಟ್ಟಿದ್ದಾರೆ. ಆದರೆ ಹಣದ ಜೊತೆಗೆ ಮನೆಯಲ್ಲಿ ಚಿನ್ನದ ಉಂಗುರು ಕಳ್ಳತನವಾಗಿದೆ ಎಂದು ಆರೋಪಿಸಿದ್ದ ಫ್ಲ್ಯಾಟ್ ಮಾಲೀಕರು ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸುಂದರಿ ಬೀಬಿ ಹಾಗೂ ಆಕೆಯ ಪತಿಯನ್ನು ಠಾಣೆಗೆ ಕರೆದೊಯ್ದಿದ್ದ ಪೊಲೀಸರು ಮನಬಂದಂತೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತರೊಬ್ಬರು ಮಧ್ಯ ಪ್ರವೇಶಿಸಿದ ಬಳಿಕ ದಂಪತಿಯನ್ನು ಬಿಟ್ಟು ಕಳಿಸಿರುವ…
ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ. ಅಲ್ಲದೆ ಆಳಂದ್ ಕ್ಷೇತ್ರದಲ್ಲೂ ಕೂಡ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಇದರ ಬೆನ್ನಲ್ಲೆ ಇದೀಗ ಹರಿಯಾಣದಲ್ಲಿ 25 ಲಕ್ಷ ಮತಗಳ ಅಂತರ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ. ಸಿಎಂ ನಯಾಬ್ ಸಿಂಗ್ ಸೈನಿ ಮಾತು ಉಲ್ಲೇಖಿಸಿ ಈ ಒಂದು ಆರೋಪ ಮಾಡಿದ್ದು, ಸಿಎಂ ನವಾಬ್ ಸಿಂಗ್ ಸೈನಿ ವ್ಯವಸ್ಥೆ ಎಂದು ಹೇಳಿದ್ದಾರೆ ಅವರ ಮುಖದಲ್ಲಿ ನಗು ನೋಡಿ ನಮ್ಮ ಬಳಿ ಎಲ್ಲಾ ವ್ಯವಸ್ಥೆಗಳಿವೆ ಅಂತ ಸಿಎಂ ಹೇಳಿದ್ದರು. 22 ಸಾವಿರ ಮತಗಳ ಅಂತರ ನಮ್ಮ ಹಾಗೂ ಅವರ ನಡುವೆ ಇದೆ. ಈ ಮಹಿಳೆ ಹರಿಯಾಣದ 10 ಬೂತ್ ಗಳಲ್ಲಿ ಮತದಾನ ಮಾಡಿದ್ದಾಳೆ. ಬೇರೆ ಬೇರೆ ಹೆಸರಿನಲ್ಲಿ ಈ ಮಹಿಳೆ ಮತದಾನ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರುನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮಗಳ ಮೃತದೇಹ ಸಾಗಿಸಲು ತಂದೆ ಒಬ್ಬರಿಗೆ ಲಂಚ ಕೇಳಿದ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ರಾಷ್ಟೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ನೀಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಐಜಿಪಿಗೆ ನೋಟಿಸ್ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಎರಡು ವಾರಗಳಲ್ಲಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಪೂರ್ಣವಾಗಿ ವರದಿ ನೀಡುವಂತೆ ಸೂಚನೆ ನೀಡಿದೆ. ಆಂಬುಲೆನ್ಸ್ ಚಾಲಕ, ಪೊಲೀಸ್ ಸಿಬ್ಬಂದಿ, ಸ್ಮಶಾನದ ಸಿಬ್ಬಂದಿ ಹಾಗು ಸರ್ಕಾರಿ ಅಧಿಕಾರಿಗಳು ಲಂಚ ಪಡೆದ ಬಗ್ಗೆ ಆರೋಪ ಕೇಳಿಬಂದಿತ್ತು. ಲಂಚ ನೀಡಿದ ಬಗ್ಗೆ ಖಾಸಗಿ ಸಂಸ್ಥೆಯ ಮಾಜಿ ಮುಖ್ಯ ಹಣಕಾಸು ಅಧಿಕಾರಿಯಾಗಿದ್ದ ಶಿವಕುಮಾರ್ ಗಂಭೀರವಾಗಿ ಆರೋಪ ಮಾಡಿದ್ದರು. ಈ ಕುರಿತು ಶಿವಕುಮಾರ್ ರಾಜ್ಯದಲ್ಲಿ ಲಂಚಾವತಾರ ಕಂಡು ಶಾಕ್ ಗೆ ಒಳಗಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಓರ್ವ ಇನ್ಸ್ಪೆಕ್ಟರ್…
ಬೆಂಗಳೂರು : ಕಬ್ಬು ಬೆಳೆಗಾರರಿಗೆ ದರ ಹೆಚ್ಚಿಸುವಂತೆ ಈಗಾಗಲೇ ಬೆಳಗಾವಿ ಜಿಲ್ಲೆಯಾದ್ಯಂತ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಈ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಜೆಡಿಎಸ್ ಅಧಿಕಾರದಲ್ಲಿದ್ದಾಗ ಏನು ದರ ನಿಗದಿ ಮಾಡಿದ್ದರೋ ಅದಕ್ಕಿಂತಲೂ ಹೆಚ್ಚಿನ ದರ ಈಗ ರಾಜ್ಯ ಸರ್ಕಾರ ನೀಡುತ್ತೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಅಭಿಮಾನಿಗಳ ಸಂಕಲ್ಪ ವಿಚಾರಕ್ಕೆ ಸಂಬಂಧಪಟ್ಟಂತೆ ಅದು ಅಭಿಮಾನಿಗಳ ಒತ್ತಾಯ ಈಗ ಕುಮಾರಸ್ವಾಮಿ ವಿಜಯೇಂದ್ರ ಅಶ್ವಥ್ ನಾರಾಯಣ ಆರ್ ಅಶೋಕ ಜಿ ಪರಮೇಶ್ವರ್ ಜಮೀರ್ ಅಹ್ಮದ್ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಎಂದು ಅಭಿಮಾನಿಗಳು ಹೇಳುತ್ತಾರೆ ಅವರವರ ಊರಿಗೆ ಹೋದಾಗ ಈ ರೀತಿ ಹೇಳಿಕೆ ನೀಡುವುದು ಸಾಮಾನ್ಯ ಭಾಗಿಯೆಲ್ಲವೂ ರಾಜಕೀಯ ನಾಯಕರ ನಡುವೆ ಚರ್ಚೆಯಾಗುತ್ತದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದರು.a
ಬೆಂಗಳೂರು : ಬೆಂಗಳೂರಲ್ಲಿ ರಾಜಾರಾಮ್ ಮೋಹನರಾಯ್ ರಸ್ತೆಯಲ್ಲಿರುವ EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ ಆರೋಪ ಪ್ರಕರಣ ಸಂಬಂಧ ಆರೋಪಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದ ಕಬ್ಬನ್ಪಾರ್ಕ್ ಠಾಣೆ ಪೊಲೀಸರು, ಎ1 ಗೋಪಿನಾಥ್, ಎ2 ಜಗದೀಶ್, ಎ7 ಲಕ್ಷ್ಮೀ, ಎ9 ಲಿಂಗೇಗೌಡ, ಎ10 ರಾಮನುಜ ಮನೆಯಲ್ಲಿ ಶೋಧ ನಡೆಸಿದ್ದಾರೆ. ಹೌದು EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ ಆರೋಪ ಪ್ರಕರಣ ಸಂಬಂಧ ಆರೋಪಿಗಳಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಕಬ್ಬನ್ಪಾರ್ಕ್ ಠಾಣೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಚಿನ್ನಾಭರಣ, ನಗದು, ದಾಖಲೆ, ಹೂಡಿಕೆ ಪತ್ರಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಸೊಸೈಟಿಯ ಸಿಇಒ ಜಿ.ಗೋಪಿನಾಥ್, ಲೆಕ್ಕಾಧಿಕಾರಿ ಬಿ.ಎಲ್.ಜಗದೀಶ್ ಪತ್ನಿ ಲಕ್ಷ್ಮೀ ಜಗದೀಶ್ ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸೊಸೈಟಿಯಲ್ಲಿ ಲೆಕ್ಕಾಧಿಕಾರಿಯಾಗಿದ್ದ ಜಗದೀಶ್‌ಗೆ ಇದ್ದಿದ್ದು ಕೇವಲ 21…
ಬೆಂಗಳೂರು : ಬೆಂಗಳೂರಲ್ಲಿ ಲಿಫ್ಟಿನಲ್ಲಿ ನಾಯಿ ಮೇಲೆ ಹಲ್ಲೆ ಮಾಡಿ ಕೊಂದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪುಷ್ಪಲತಾ ವಿರುದ್ಧ ಮತ್ತೊಂದು fir ದಾಖಲಾಗಿದೆ. ಚಿನ್ನಾಭರಣ ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ನಾಯಿಮರಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಪುಷ್ಪಾಲತಾಳನ್ನು ನಿನ್ನೆ ಪೊಲೀಸರು ಅರೆಸ್ಟ್ ಮಾಡಿದ್ದರು. ಸದ್ಯ ಪ್ರಕರಣ ಸಂಬಂಧ ಪುಷ್ಪಲತಾ ನ್ಯಾಯಾಂಗ ಬಂಧನದಲ್ಲಿ ಇದ್ದಾಳೆ. ಇದೀಗ ಬಾಗಲೂರು ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ರಾಶಿಕಾ ನೀಡಿದ ದೂರಿನ ಮೇರೆಗೆ ಪುಷ್ಪಲತಾ ಮೇಲೆ ಎಫ್ಐಆರ್ ದಾಖಲಾಗಿದೆ. ನವೆಂಬರ್ ಎರಡರಂದು ಮನೆಯಲ್ಲಿ ಇಟ್ಟಂತಹ ಚಿನ್ನಾಭರಣ ಕಾಣೆಯಾಗಿದೆ. ಸುಮಾರು 50 ಗ್ರಾಂ ಚಿನ್ನದ ಸರ ಮತ್ತು ಒಂದು ಉಂಗುರ, ಒಂದು ವಜ್ರದ ಉಂಗುರ ಕಾಣೆಯಾಗಿದೆ ಎಂದು ದೂರು ದಾಖಲಿಸಿದ್ದಾರೆ. ಮನೆ ಕೆಲಸದಾಕೆ ಪುಷ್ಪಲತಾ ಮೇಲೆ ಅನುಮಾನ ವ್ಯಕ್ತಪಡಿಸಿ ವಿಚಾರಣೆ ನಡೆಸಲಾಗುತ್ತಿದೆ. ಪುಷ್ಪಲತಾ ಕಳ್ಳತನ ಮಾಡಿದ್ದನ್ನು ಒಪ್ಪಿಕೊಂಡಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಪೊಲೀಸರು…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವೃದ್ದೆಯನ್ನು ನಿಂಗವ್ವ ಮುಳಗೋಡ (75) ಎಂದು ತಿಳಿದುಬಂದಿದೆ. ನಿಂಗವ್ವನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ವೃದ್ದೆ ನಿಂಗಮ್ಮನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತಂತೆ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














