Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂದೆಯೊಬ್ಬ ತನ್ನ ಸ್ವಂತ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಭೀಕರ ಘಟನೆ ಸಿಲಿಕಾನ್ ಸಿಟಿಯ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇ 1ರ ಬುಧವಾರ ರಾತ್ರಿ ಪ್ರಗತಿಪುರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಇಡೀ ಬಡಾವಣೆಯನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿವರ: ಪ್ರಗತಿಪುರ ನಿವಾಸಿ ಆನಂದ್ ದೊಡ್ಡಮನಿ (45) ಎಂಬುವವರೇ ಮಗನ ಮೇಲೆ ಹಲ್ಲೆ ಮಾಡಿದ ಆರೋಪಿ ತಂದೆ. ಆನಂದ್ ಅವರ ಮಗ ಮಲ್ಲಿಕಾರ್ಜುನ್ (19) ತನ್ನ ತಂದೆಯ ಅನುಮತಿ ಪಡೆಯದೆ ಮನೆಯಲ್ಲಿದ್ದ ಬೈಕ್ ತೆಗೆದುಕೊಂಡು ಹೊರಗೆ ಹೋಗಿದ್ದ ಎನ್ನಲಾಗಿದೆ. ರಾತ್ರಿ ಮಗ ಮನೆಗೆ ವಾಪಸ್ ಬಂದಾಗ ಇದೇ ವಿಷಯವಾಗಿ ತಂದೆ ಮತ್ತು ಮಗನ ನಡುವೆ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಆನಂದ್, ಮಗನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇಬ್ಬರಿಗೂ ಗಂಭೀರ ಗಾಯ: ಬೆಂಕಿ ಹೊತ್ತಿಕೊಂಡ ತಕ್ಷಣ ಮಲ್ಲಿಕಾರ್ಜುನ್ ಕಿರುಚಾಡಲಾರಂಭಿಸಿದ್ದಾನೆ. ಈ ಸಂದರ್ಭದಲ್ಲಿ ಮಗನನ್ನು ಹಿಡಿದುಕೊಂಡಿದ್ದ…

Read More

ಸಾಗರ : ಶಿವಮೊಗ್ಗದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಾವು ಕಚ್ಚಿ ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ನಡೆದಿದೆ. ಸುಳಗೋಡು ಗ್ರಾಮದ ವೀರಭದ್ರ ಎಂಬುವವರ ಪತ್ನಿ ಸ್ವಾತಿ (26) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸ್ವಾತಿ ಆರು ತಿಂಗಳ ಗರ್ಭಿಣಿಯಾಗಿದ್ದರು. ಶನಿವಾರ ಮಧ್ಯಾಹ್ನ ಸುಮಾರು 3:30ರ ವೇಳೆಗೆ ಸುಳಗೋಡು ಗ್ರಾಮದಲ್ಲಿ ಶುಂಠಿ ಕೆಲಸಕ್ಕೆ ತನ್ನ ಪತಿ ಹಾಗೂ ಇತರ ಕೂಲಿ ಕಾರ್ಮಿಕರೊಂದಿಗೆ ಹೋಗಿದ್ದರು. ಕೆಲಸದ ನಡುವೆ ಎಲ್ಲರೂ ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಸ್ವಾತಿ ಅವರ ಬಲಗಾಲಿನ ಮೊಣಕಾಲಿಗೆ ವಿಷಪೂರಿತ ಹಾವು ಕಚ್ಚಿದೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Read More

ಪುಣೆ: ಬಲಪಂಥೀಯ ಸಿದ್ಧಾಂತವಾದಿ ವಿನಾಯಕ್ ದಾಮೋದರ ಸಾವರ್ಕರ್ ಬ್ರಿಟಿಷರ ಆಡಳಿತಾವಧಿಯಲ್ಲಿ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಐದು ಬಾರಿ ಕ್ಷಮಾದಾನ ಕೋರಿ ಅರ್ಜಿಗಳನ್ನು ಸಲ್ಲಿಸಿದ್ದು ಸಲ್ಲಿಸಿದ್ದು ಸತ್ಯ ಎಂದು ಸಾವರ್ಕರ್ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹೇಳಿದ್ದಾರೆ ಎಂದು livelaw.in ವರದಿ ಮಾಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ವೇಳೆ ಈ ವಿಷಯ ಬಹಿರಂಗವಾಗಿದೆ. ಲಂಡನ್‌ ನಲ್ಲಿ ನೀಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಸಾವರ್ಕರ್ ಕುರಿತು ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಈ ದೂರು ದಾಖಲಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪಾಟಿ ಸವಾಲಿನ ವೇಳೆ ಸತ್ಯಕಿ, “ಸಾವರ್ಕರ್ ಜೈಲಿನಲ್ಲಿದ್ದಾಗ ಐದು ಬಾರಿ ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದ್ದರೆಂಬುದು ನಿಜ. ಸಾವರ್ಕರ್ ಮಾತ್ರವಲ್ಲದೆ ಅನೇಕ ರಾಜಕೀಯ ಕೈದಿಗಳು ಕೂಡ ಬ್ರಿಟಿಷ್ ಸರ್ಕಾರಕ್ಕೆ ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಿದ್ದಾರೆ,” ಎಂದು ಹೇಳಿದ್ದಾರೆ. ಗೋವಿನ ಕುರಿತು ಸಾವರ್ಕರ್ ಅವರ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ,…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಮನೆಗೆ ನುಗ್ಗಿ ಮಾರಕಸ್ತ್ರಗಳಿಂದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ರಾಮದಾಸ್ ಕಾಂಪೌಂಡ್ ಬಡಾವಣೆಯಲ್ಲಿ ಈ ಒಂದು ಭೀಕರ ಕೋಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಪ್ರಮೋದ್ (46) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಪ್ರಮೋದನ್ನು ಕೊಲೆ ಮಾಡಿದ್ದು, ಮಹಿಳೆಯ ಜೊತೆ ಆಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಸಿಲಿಕಾನ್ ಸಿಟಿಯ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಸಣ್ಣಪುಟ್ಟ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಗಲಾಟೆಯು ಅಂತಿಮವಾಗಿ ಇಬ್ಬರು ಹಸುಗೂಸುಗಳ ಪ್ರಾಣಪಕ್ಷಿ ಹಾರಿಹೋಗುವಂತೆ ಮಾಡಿದೆ. ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಪವಿತ್ರಾ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘೋರ ಕೃತ್ಯ ಬೆಳಕಿಗೆ ಬಂದಿದೆ. ಘಟನೆಯ ವಿವರ: ಮತ್ತಿಕೆರೆ ನಿವಾಸಿಗಳಾದ ಪ್ರಶಾಂತ್ ಮತ್ತು ಪವಿತ್ರಾ ದಂಪತಿಗಳ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ವಿಚಾರವಾಗಿ ಅಸಮಾಧಾನವಿತ್ತು ಎನ್ನಲಾಗಿದೆ. ಎಂದಿನಂತೆ ಪತಿ-ಪತ್ನಿ ನಡುವೆ ತೀವ್ರ ಗಲಾಟೆ ನಡೆದಿದ್ದು, ಇದರಿಂದ ಮನನೊಂದ ಪವಿತ್ರಾ ತೀವ್ರ ನಿರ್ಧಾರ ಕೈಗೊಂಡಿದ್ದಾರೆ. ತನ್ನಿಬ್ಬರು ಮಕ್ಕಳಾದ ನಿವೇದಾ (4 ವರ್ಷ) ಹಾಗೂ ನಿರ್ಮಲ್ (2 ವರ್ಷ) ಗೆ ವಿಷವುಣಿಸಿ, ಬಳಿಕ ತಾನು ಕೂಡ ವಿಷ ಸೇವಿಸಿದ್ದಾರೆ. ಬೆಳಿಗ್ಗೆ ಬೆಳಕಿಗೆ ಬಂದ ದುರಂತ: ಇಂದು ಬೆಳಿಗ್ಗೆ ಪತಿ ಪ್ರಶಾಂತ್ ನಿದ್ರೆಯಿಂದ ಎದ್ದಾಗ ಪತ್ನಿ ಮತ್ತು ಮಕ್ಕಳು ಅಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಗಾಬರಿಗೊಂಡ ಅವರು ಸ್ಥಳೀಯರ ಸಹಾಯದೊಂದಿಗೆ ಮೂವರನ್ನು…

Read More

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಇಂದು ಮಧ್ಯಾಹ್ನ ಒಂದು ಘೋರ ದುರಂತ ಸಂಭವಿಸಿದೆ. ನಗರದ ಐತಿಹಾಸಿಕ ಕಪಿಲೇಶ್ವರ ದೇವಸ್ಥಾನದ ಸಮೀಪವಿರುವ ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಜಲಸಮಾಧಿಯಾದ ಕರುಣಾಜನಕ ಘಟನೆ ನಡೆದಿದೆ. ಮೃತರ ಗುರುತು: ಮೃತಪಟ್ಟ ಬಾಲಕರನ್ನು ಶಿವಾಜಿನಗರದ ಶಿವಂ ಪರಶುರಾಮ್ ಸಂಡೇಕರ್ (7) ಶಹಪುರದಲ್ಲಿಯ ಪರಶುರಾಮ್ ರಾಜು ನಿಲಾಸ್ಕರ್ (11) ಮತ ಬಾಲಕರು ಎಂದು ತಿಳಿದು ಬಂದಿದೆ ಘಟನೆ ಕುರಿತು ಖಡೆ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಜೆಯ ಮೋಜಿನಲ್ಲಿದ್ದ ಬಾಲಕರು ಈಜಾಡಲು ಹೊಂಡಕ್ಕೆ ಇಳಿದಿದ್ದರು. ಆದರೆ ನೀರಿನ ಆಳ ಮತ್ತು ಸುಳಿಯ ಅಂದಾಜು ಸಿಗದೆ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ: ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ SDRF (ರಾಜ್ಯ ವಿಪತ್ತು ಸ್ಪಂದನಾ ಪಡೆ) ತಂಡ ಸ್ಥಳಕ್ಕೆ ಧಾವಿಸಿದ್ದು, ಮೃತದೇಹಗಳಿಗಾಗಿ ತೀವ್ರ…

Read More

ಬೆಂಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಶೃಂಗೇರಿಯಲ್ಲಿ ಕಾಂಗ್ರೆಸ್ ಅಸಿಂಧು ಸತ್ಯಕ್ಕೆ ಜಯ ವೋಟ್ ಚೋರ್ ಕೌನ್ ಹೈ ರಾಹುಲ್ ಗಾಂಧಿ ಹೈ ಎಂದು ಎಕ್ಸ್ ಖಾತೆಯ ಮೂಲಕ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಕಾಂಗ್ರೆಸ್ ಪಕ್ಷದ ಕರಾಳ ಮುಖವನ್ನ ಮತ್ತೊಮ್ಮೆ ಬಯಲು ಮಾಡಿದೆ. ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ನೀಡಿದ ತಕ್ಕ ಉತ್ತರ. 2023ರ ಚುನಾವಣೆಯಲ್ಲಿ 279 ಅಂಚೆ ಮತಗಳನ್ನು ಅಕ್ರಮವಾಗಿ ತಿರಸ್ಕರಿಸುವ ಮೂಲಕ ಜನಾದೇಶವನ್ನು ಕಸಿದುಕೊಳ್ಳಲಾಗಿತ್ತು. ಅಂದು ಬಿಜೆಪಿ ಅಭ್ಯರ್ಥಿ ಶ್ರೀ ಡಿ.ಎನ್. ಜೀವರಾಜ್ ಅವರ ಮನವಿಯನ್ನು ತಿರಸ್ಕರಿಸಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡರನ್ನು ವಿಜೇತರೆಂದು ಘೋಷಿಸಲಾಗಿತ್ತು. ಅಧಿಕಾರ ಬಲಕ್ಕೆ ಮಣಿಯದ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.…

Read More

ಬೆಂಗಳೂರು: ರಾಜ್ಯದ ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆಸ್ತಿ ಮಾಲೀಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. 2026-27ನೇ ಆರ್ಥಿಕ ವರ್ಷದ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವವರಿಗೆ ನೀಡಲಾಗುವ ಶೇ. 5ರಷ್ಟು ರಿಯಾಯಿತಿ ಸೌಲಭ್ಯದ ಅವಧಿಯನ್ನು ಮೇ 31, 2026ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆಯ ಆದೇಶ: ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಮಹಾಂತಪ್ಪ ಎಸ್. ತುರಕನೂರ ಅವರು ಅಧಿಕೃತ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಆದೇಶದ ಅನ್ವಯ, ರಾಜ್ಯದ ಎಲ್ಲಾ ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ತೆರಿಗೆದಾರರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದಾಗಿ ಲಕ್ಷಾಂತರ ಆಸ್ತಿ ಮಾಲೀಕರಿಗೆ ಆರ್ಥಿಕ ಲಾಭವಾಗಲಿದ್ದು, ತೆರಿಗೆ ಪಾವತಿಸಲು ಹೆಚ್ಚಿನ ಕಾಲಾವಕಾಶ ದೊರೆತಂತಾಗಿದೆ. ಕಾನೂನು ಮತ್ತು ನಿಯಮಾವಳಿ: ಕರ್ನಾಟಕ ಮುನಿಸಿಪಾಲಿಟಿಗಳ ಅಧಿನಿಯಮ, 1964ರ ಕಲಂ 105(1)ರ ಅಡಿ ಪ್ರದತ್ತವಾದ ಅಧಿಕಾರವನ್ನು ಬಳಸಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸಾಮಾನ್ಯವಾಗಿ…

Read More

ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಳು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಕಾರಿನಲ್ಲಿ ಇದ್ದ ಮೂವರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿ ಇದ್ದ ಮೂವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಅಪಘಾತದಲ್ಲಿ ಮೂರುವರೆ ವರ್ಷದ ಮೋಹಿಜ್ ಝಜಾನ್, ಹಾಗೂ ಮುನಿರಾ (45) ಮತ್ತು ಕಾರು ಚಾಲಕ ಮುನೀರ್ (30) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನುಳಿದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಮರಳು ತುಂಬಿದ್ದ ಲಾರಿಯು ಅತಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದೇ ಈ ಅವಘಡಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಜ್ಜುಗುಜ್ಜಾಗಿದ್ದ ಕಾರಿನಿಂದ…

Read More

ಬೆಂಗಳೂರು : ಪ್ರೀತಿಸಿ ಮದುವೆಯಾದರು ಕೂಡ ಇನ್ನೊಂದು ವಿವಾಹಕ್ಕೆ ತಯಾರಿ ಮಾಡಿಕೊಂಡಿರುವ ಭೂಪ, ಮನೆಯವರ ಒತ್ತಡಕ್ಕೆ ಮಣಿದು ಇನ್ನೊಬ್ಬರ ಜೊತೆಗೆ ವಿವಾಹಕ್ಕೆ ಸಿದ್ಧನಾಗಿದ್ದಾನೆ. ಆದರೆ ಹಸೆಮಣೆ ಇರುವಾಗ ಮೊದಲ ಪತ್ನಿ ಎಂಟ್ರಿ ಕೊಟ್ಟಿದ್ದು ಇದೀಗ ಮದುವೆಗೆ ಬ್ರೇಕ್ ಹಾಕಲಾಗಿದೆ. ದೊಡ್ಡಬಳ್ಳಾಪುರದ ಬಸವ ಭವನದಲ್ಲಿ ಇಂದು ಮದುವೆ ಇತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಈ ಒಂದು ಘಟನೆ ನಡೆದಿದ್ದು, ಪೊಲೀಸರ ನೆರವಿನೊಂದಿಗೆ ಮೊದಲ ಪತ್ನಿ ಮದುವೆ ನಿಲ್ಲಿಸಿದ್ದಾಳೆ. ಮದುವೆಗೆ ಎಲ್ಲಾ ಕೂಡ ಏರ್ಪಾಡು ಆಗಿತ್ತು. ಒಂದು ವರ್ಷದ ಹಿಂದೆ ಅಷ್ಟೇ ಕೇರಳ ಮೂಲದ ಯುವತಿಯನ್ನು ಕುಮಾರ ಎಂಬಾತ ಮದುವೆ ಆಗಿದ್ದ. ಇದೀಗ ಮನೆಯವರ ಒತ್ತಡದ ಮೇರೆಗೆ ಈತ ಮತ್ತೊಂದು ಮದುವೆಗೆ ತಯಾರಿ ಮಾಡಿದ್ದ. ಸದ್ಯ ಮೊದಲ ಪತ್ನಿ ಏಳು ತಿಂಗಳ ಗರ್ಭಿಣಿ ಆಗಿದ್ದಾಳೆ. ಇಂದು ಕುಮಾರ್ ಮತ್ತೊಂದು ಮದುವೆಗೆ ತಯಾರಿ ಮಾಡಿಕೊಂಡಿದ್ದ. ರಾತ್ರಿ ಅಷ್ಟೇ , ಮೊದಲ ಪತ್ನಿಗೆ ಆತ ತಿಳಿಸಿರುತ್ತಾನೆ. ಬಲವಂತದಿಂದ ಮದುವೆ ಮಾಡಿಸುತ್ತಿದ್ದಾರೆ ಎಂದು ಅಳಲು ಮೊದಲ ಪತ್ನಿಯ…

Read More