Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹಾಡು ಹಗಲೇ 17 ವರ್ಷದ ಬಾಲಕಿಯ ಮೇಲೆ ದುರುಳನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ರವಿಕುಮಾರ್ (39) ನನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಆರೋಪಿಯ ಬಳಿ 70,000 ಹಣ ಪಡೆದಿದ್ದ ಎನ್ನಲಾಗಿದೆ. ಈ ಹಿಂದೆ 30 ಸಾವಿರ ರೂಪಾಯಿಯನ್ನು ಬಾಲಕಿಯ ತಂದೆ ಸಾಲವನ್ನು ತೀರಿಸಿದ್ದ. ಇನ್ನುಳಿದ 40,000 ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಎನ್ನಲಾಗಿದೆ. ಬಾಲಕಿಯ ತಂದೆ ಹಣ ವಾಪಸ್ ನೀಡಲು ವಿಳಂಬವಾಗಿದ್ದಕ್ಕೆ ಆರೋಪಿ ರವಿಕುಮಾರ್ ಪಿಡಿಸುತ್ತಿದ್ದ.ಈ ಹಿಂದೆ ಬಲವಂತವಾಗಿ ಬಾಲಕಿಗೆ ರವಿಕುಮಾರ್ ಕಿಸ್ ಕೊಟ್ಟಿದ್ದ.ಕಿಸ್ ಕೊಟ್ಟಿರುವುದನ್ನು ರವಿಕುಮಾರ್ ಫೋಟೋ ತೆಗೆದುಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಕೂಡ ಹಾಕಿದ್ದ. ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಾಲಕಿ ನೀಡಿದ…
ಕಲಬುರ್ಗಿ : ಕಲಬುರ್ಗಿ ಜೈಲಿನಲ್ಲಿ ಕರ್ಮಕಾಂಡ ಮುಂದುವರೆದಿದ್ದು ಇದೀಗ ಜೈಲಿನಲ್ಲಿ ಮಾದಕ ವಸ್ತುಗಳಾದಂತಹ ಬೀಡಿ, ಸಿಗರೇಟ್ ಗುಟ್ಕಾ, ಪಾನ್ ಮಸಾಲಗಳಂತಹ ಮಾದಕ ವಸ್ತುಗಳು ಪತ್ತೆಯಾಗಿದ್ದು ಈ ಕುಡಿದಂತೆ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ಕಳೆದ ಕೆಲವು ದಿನಗಳ ಹಿಂದೆ ಜೈಲಿನಲ್ಲಿ ಇರುವಂತಹ ಕೆಲವು ಕೈದಿಗಳು ಮೊಬೈಲ್ ಬಳಸಿಕೊಂಡು ವಿಡಿಯೋ ಕಾಲ್ ಮಾಡುವುದರ ಮೂಲಕ ಜೈಲಿನಲ್ಲಿ ರಾಜಾರೋಷವಾಗಿ ಎಲ್ಲ ರೀತಿಯ ಅನುಕೂಲಗಳನ್ನು ಪಡೆಯುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಲಬುರ್ಗಿ ಕಮಿಷನರ್ ಡಾ.ಶರಣಪ್ಪ ಅವರ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ಮಾಡಲಾಗಿತ್ತು. ಇದೀಗ ಜೈಲಿನ ಗೋಡೆಯ ಬಳಿ ಕೆಲವು ಕೈದಿಗಳಿಗೆ ಸಂಬಂಧಪಟ್ಟವರು ಕಾಗದದಲ್ಲಿ ಬೀಡಿ, ಸಿಗರೇಟ್, ಗುಟ್ಕಾ ಹಾಗೂ ಪಾನ್ ಮಸಾಲ ಗಳನ್ನು ಉಂಡೆ ಮಾಡಿ ಚೆಂಡಿನ ರೂಪದಲ್ಲಿ ಎಸೆದು ಹೋಗುತ್ತಿರುವ ಆರೋಪ ಕೇಳಿ ಬಂದಿದೆ.ಜೈಲಿನ ಒಳಭಾಗದ ಗೋಡೆಗಳ ಬಳಿ ಚೆಂಡಿನ ಆಕಾರದ ಪ್ಲಾಸ್ಟಿಕ್ ಚೀಲಗಳಿಂದ ಮಾಡಿದ ಉಂಡೆಗಳು ಪತ್ತೆಯಾಗಿದ್ದು, ಈ ಉಂಡೆಗಳಲ್ಲಿ ತಂಬಾಕು, ಗುಟ್ಕಾ, ಬೀಡಿ,…
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟರಾಗಿ ಗುರುತಿಸಿಕೊಂಡಿರುವ ಗುರುಪ್ರಸಾದ ಅವರ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಹೌದು ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 2019ರಲ್ಲಿ ಟೋಟಲ್ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು.75 ಪುಸ್ತಕಗಳ ಐದು ಸೆಟ್ ಖರೀದಿಸಿದ್ದರಂತೆ. ಒಂದು ಸೆಟ್ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕು ಎಂದು ದೂರಿನಲ್ಲಿ ಉಲ್ಲೇಖಸಿದ್ದಾರೆ. ಇದಾದ ಬಳಿಕ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ಅವರಿಗೆ ಈ…
ಬೆಂಗಳೂರು : ಸಾಮಾನ್ಯವಾಗಿ ಮಹಿಳೆಯರು ಎಲ್ಲೇ ಸಭೆ ಸಮಾರಂಭಕ್ಕೆ ತೆರಳುವಾಗ ಚಿನ್ನ ಧರಿಸುವುದು ರೂಢಿ. ಆದರೆ ರಸ್ತೆಯಲ್ಲಿ ಹೋಗುವಾಗ ಮಾತ್ರ ತುಂಬಾ ಎಚ್ಚರದಿಂದ ಇರಬೇಕು. ಇದೀಗ ಬೆಂಗಳೂರಿನಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಮೇಲಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಳ್ಳರು ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಹೌದು ಪಲ್ಸರ್ ಬೈಕ್ ನಲ್ಲಿ ಬಂದಂತಹ ಇಬ್ಬರು ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಮತ್ತು ಹಾರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಓಬಳಾಪುರ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. 7 ಲಕ್ಷಕ್ಕೂ ಹೆಚ್ಚು ಮೌಲ್ಯದ 90 ಗ್ರಾಂ ತೂಕದ ಚಿನ್ನಾಭರಣ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಒಬಳಾಪುರ ಗ್ರಾಮದ ನಿವಾಸಿ ವನಿತ ಚಿನ್ನಾಭರಣ ಕಳೆದುಕೊಂಡ ಮಹಿಳೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮೂವರು ಹೆಣ್ಣು ಮಕ್ಕಳು ದಿಢೀರ್ ನಾಪತ್ತೆಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇದೀಗ ನಾಪತ್ತೆಯಾಗಿದ್ದ ಮೂವರು ಹೆಣ್ಣು ಮಕ್ಕಳು ಪತ್ತೆಯಾಗಿದ್ದಾರೆ. ಹಾಗಾಗಿ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಹೌದು ಈ ಒಂದು ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಿಯಪ್ಪನಪಾಳ್ಯದಲ್ಲಿ ಸಂಜೆ 4 ಗಂಟೆಗೆ ನಡೆದಿತ್ತು. ಕಾಣೆಯಾದ ಮಕ್ಕಳನ್ನು ಹರ್ಷಿತ (3) ನಿಶ್ವಿಕ (6) ಹಾಗೂ ರಶ್ಮಿತಾ (10) ಎಂದು ನಾಪತ್ತೆಯಾದ ಮಕ್ಕಳು ಎಂದು ಹೇಳಲಾಗಿತ್ತು. ಮೂವರು ಹೆಣ್ಣು ಮಕ್ಕಳು ಮನೆಯ ದಾರಿತಪ್ಪಿ ಬೇರೆ ರಸ್ತೆ ತೆರಳಿದ್ದರು ಕುಟುಂಬದ ಸದಸ್ಯರು ಹುಡುಕುತ್ತಿದ್ದ ವೇಳೆ ಮಕ್ಕಳು ಕಣ್ಣಿಗೆ ಬಿದ್ದಿದ್ದಾರೆ. ಮರಿಯಪ್ಪನ ಪಾಳ್ಯದಲ್ಲಿ ಮೂವರು ಹೆಣ್ಣು ಮಕ್ಕಳು ಪತ್ತೆಯಾಗಿದ್ದಾರೆ. ಮಕ್ಕಳು ನಾಪತ್ತೆ ಬಗ್ಗೆ ದೂರು ನೀಡಲು ಪೋಷಕರು ಠಾಣೆಗೆ ಆಗಮಿಸಿದ್ದರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ಒಂದು ನಡೆದಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಮೂವರು ಹೆಣ್ಣು ಮಕ್ಕಳು ದಿಢೀರ್ ನಾಪತ್ತೆಯಾಗಿದ್ದಾರೆ. ಈ ಒಂದು ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಿಯಪ್ಪನಪಾಳ್ಯದಲ್ಲಿ ಸಂಜೆ 4 ಗಂಟೆಗೆ ನಡೆದಿದೆ. ಕಾಣೆಯಾದ ಮಕ್ಕಳನ್ನು ಹರ್ಷಿತ (3) ನಿಶ್ವಿಕ (6) ಹಾಗೂ ರಶ್ಮಿತಾ (10) ಎಂದು ನಾಪತ್ತೆಯಾದ ಮಕ್ಕಳು ಎಂದು ತಿಳಿದು ಬಂದಿದೆ. ಮನೆಯಿಂದ ಹೊರಗೆ ಬಂದು ಮಕ್ಕಳು ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಾರೆ. ಮೂರು ಮಕ್ಕಳ ಪೋಷಕರು ಎಷ್ಟೇ ಹುಡುಕಾಡಿದರು ಕೂಡ ಸಿಗದ ಹಿನ್ನೆಲೆಯಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಮಕ್ಕಳ ಶೋಧ ಕಾರ್ಯ ಆರಂಭಿಸಿದ್ದಾರೆ.
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಯೋಗ್ಯ ಎಂದು ಅವಹೇಳನಕಾರಿ ಪದ ಬಳಕೆ ಮಾಡಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಚಕ್ರವರ್ತಿ ಸೂಲಿಬೆಲೆ ಅವರ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಅರ್ಜಿದಾರ ಚಕ್ರವರ್ತಿ ಸೂಲಿಬೆಲೆ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಈ ಪ್ರಕರಣ ಕಾನೂನಿನ ಸ್ಪಷ್ಟ ದುರ್ಬಳಕೆಯಾಗಿದೆ. ಹಾಗಾಗಿ, ತಡೆ ನೀಡಬೇಕು. ಅಲ್ಲದೆ, ಸದ್ಯ ಕರ್ನಾಟಕ ಹೈಕೋರ್ಟ್ ಅರ್ಧ ಪ್ರಕರಣವನ್ನು ಮುಕ್ತಾಯಗೊಳಿಸಿದ್ದು, ಇನ್ನರ್ಧ ವಿಚಾರಣೆ ಬಾಕಿ ಇದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪಂಕಜ್ ಮಿತ್ತಲ್ ಅವರಿದ್ದ ವಿಭಾಗೀಯ ಪೀಠದ ವಾದ ಮಂಡಿಸಲಾಯಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯ, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿತು. ಪ್ರಕರಣ ಹಿನ್ನೆಲೆ? ಕಳೆದ ಜನವರಿ ಎಂದು ರಾಯಚೂರಿನಲ್ಲಿ ನಮೋ ಭಾರತ್…
ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಬೆನ್ನಿನಲ್ಲಿ ಊತ ಹಾಗೂ ವಿಪರೀತ ನೋವು ಕಾಣಿಸಿಕೊಂಡಿದೆ. ಇದೀಗ ವಿಮ್ಸ್ ಆಸ್ಪತ್ರೆಯ ವೈದ್ಯರು ನಟ ದರ್ಶನ್ ಅವರಿಗೆ ಫಿಜಿಯೋ ಥೆರಪಿ, ಚಿಕಿತ್ಸೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರ ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಬೆನ್ನಿನ ಹಿಂಭಾಗ ಊತ ಹಾಗೂ ವಿಪರೀತವಾದಂತ ನೋವು ಕಾಡುತ್ತಿತ್ತು.ಈ ಹಿನ್ನೆಲೆಯಲ್ಲಿ ಹಲವಾರು ಬಾರಿ ವೈದ್ಯರು ಹಾಗೂ ಜೈಲಿನ ಮೇಲಾಧಿಕಾರಿಗಳು ದರ್ಶನ್ ಅವರಿಗೆ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಸೂಚಿಸಿದ್ದರೂ ಕೂಡ ಇಲ್ಲ ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯುತ್ತೇನೆ ಎಂದು ಹಠ ಮಾಡಿದ್ದರು. ಇದೀಗ ಅವರ ಪತ್ನಿ ವಿಜಯಲಕ್ಷ್ಮಿ ಅವರು ಜೈಲಿಗೆ ಭೇಟಿ ನೀಡಿದ್ದ ವೇಳೆ ಅವರ ಮಾತಿಗೆ ಸ್ಪಂದಿಸಿ ಚಿಕಿತ್ಸೆಗೆ ಒಪ್ಪಿದ್ದಾರೆ. ಹೌದು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಿನ್ನೆ ಜೈಲಿಗೆ ಭೇಟಿ ನೀಡಿದ್ದಾಗ, ಚಿಕಿತ್ಸೆ ಪಡೆದುಕೊಳ್ಳಿ ಎಂದು ಕಣ್ಣೀರು ಹಾಕಿದ್ದರು.…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೀಡಿದ್ದ 14 ನಿವೇಶನಗಳ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಇಡಿ ಅಧಿಕಾರಿಗಳ ಈ ಒಂದು ವಿಚಾರಣೆಗೆ ಸ್ವತಹ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ಬೆಚ್ಚಿಬಿದ್ದಿದ್ದಾರೆ. ಹೌದು ನಿನ್ನೆ ಮುಡಾ ಕಚೇರಿಯ ಮೇಲೆ ದಾಳಿ ಮಾಡಿದ ಹಿಡಿ ಅಧಿಕಾರಿಗಳು ಇಂದು ಕೂಡ ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಇಡಿ ಅಧಿಕಾರಿಗಳ ತನಿಖಾ ಪ್ರಕ್ರಿಯೆಯನ್ನು ಕಂಡು ಸ್ವತಃ ಮುಡಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಚ್ಚಿಬಿದ್ದಿದ್ದಾರೆ. ಅಧಿಕಾರಿಗಳ ಮೊಬೈಲ್ ಪರಿಶೀಲನೆ! ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ಕಡತಗಳು ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುವುದರ ಜೊತೆಗೆ ಕಚೇರಿಯ ಎಲ್ಲಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಮೊಬೈಲ್ ಗಳನ್ನು ಸಹ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಮುಡಾದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಾಗಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು…
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ವೋಟರ್ ಐಡಿ ಹಗರಣ ಪ್ರಕರಣ ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್ಸಿ ತುಳಸಿ ಮುನಿರಾಜು ಗೌಡ ಹೇಳಿಕೆ ನೀಡಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ತನಿಖೆಗೆ ಐಪಿಎಸ್ ಅಧಿಕಾರಿ ನೇಮಿಸಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಜಾಲಹಳ್ಳಿ ಠಾಣೆಯ ಪೊಲೀಸರು ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ. ಇದರ ಹಿಂದೆ ಆರ್ ಆರ್ ನಗರ ಶಾಸಕ ಮುನಿರತ್ನ ಹಾಗೂ ಅವರ ಪಟಾಲಂ ಇದೆ. ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳಿಗೆ ಶಾಸಕರು, ಬೆದರಿಕೆ ಹಾಕುತ್ತಿದ್ದಾರೆ. ನಾನು ಸಾಕ್ಷಿ ಹೇಳಲು ಹೋದರು ಪೊಲೀಸರು ದಾಖಲಿಸಿಕೊಂಡಿಲ್ಲ. ಬಿಜೆಪಿಯಲ್ಲಿದ್ದರು 6 ವರ್ಷದಿಂದ ನಿರಂತರವಾಗಿ ಹೋರಾಡುತ್ತಿದ್ದೇನೆ. ರಾಜ್ಯ ಪಾಲರು ನ್ಯಾಯಾಧೀಶರಿಗೆ ಪ್ರಕರಣ ಸಂಬಂಧ ದೂರ ಕೊಡುತ್ತೇನೆ. ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ತುಳಸಿ, ಮುನಿರಾಜು ದೂರು ನೀಡಿದ್ದಾರೆ. ಮೂರ್ನಾಲ್ಕು ವರ್ಷದಿಂದ ಪ್ರಕರಣದ ತನಿಖೆ ನಡೆಸದೆ ವಿಳಂಬ…














