Subscribe to Updates
Get the latest creative news from FooBar about art, design and business.
Author: kannadanewsnow05
ಕೊಡಗು : ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿ ನಿರುಪಾಲಾಗಿರುವ ಘಟನೆ ಕೊಡಗು ಜಿಲ್ಲೆ, ಕುಶಾಲನಗರ ತಾಲೂಕಿನ ಹೇರೂರು ಬಳಿ ಈ ಘಟನೆ ನಡೆದಿದೆ. ಹೌದು ಹಾರಂಗಿ ಜಲಾಶಯದ ಹಿನ್ನಿರಿನಲ್ಲಿ ಪ್ರವಾಸಿಗ ನೀರುಪಾಲಾಗಿದ್ದಾನೆ. ಕೊಡಗು ಜಿಲ್ಲೆ, ಕುಶಾಲನಗರ ತಾಲೂಕಿನ ಬೇರೂರು ಬಳಿ ಈ ಘಟನೆ ನಡೆದಿದೆ. ನೀರುಪಾಲದ ಯುವಕನನ್ನು ಮೈಸೂರು ಮೂಲದ ಶಶಿ (30) ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಯುವಕ ಯುವತಿಯರು ಪ್ರವಾಸಕ್ಕೆ ಆಗಮಿಸಿದ್ದರು.ಈ ವೇಳೆ ಹಾರಂಗಿ ಜಲಾಶಯದ ನೀರಿನಲ್ಲಿ ಶಶಿ ಈಜಾಡುತ್ತಿದ್ದ ವೇಳೆ ನೀರು ಪಾಲಾಗಿದ್ದಾನೆ. ನೀರುಪಾಲಾದ ಶಶಿಗಾಗಿ ಇದೀಗ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು : ಇತ್ತೀಚಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ. ಗಳ ಹಗರಣ ನಡೆದಿತ್ತು. ಅದಾದ ಬಳಿಕ ಕಳೆದ ಎರಡು ದಿನಗಳ ಹಿಂದೆ ಬಿಬಿಎಂಪಿಯಲ್ಲಿ ಕೂಡ ಅಕ್ರಮ ಹಣ ವರ್ಗಾವಣೆ ಪ್ರಕರಣ ನಡೆದಿತ್ತು. ಇದೀಗ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತು ತಂಡದ ಸಹಕಾರದಿಂದ ಮುಡಾ ಅಧಿಕಾರಿಗಳು ಸುಮಾರು 5 ಸಾವಿರ ಕೋಟಿ ರೂ. ಗಳ ಅವ್ಯವಹಾರ ನಡೆಸಿದ್ದಾರೆ ಎಂದು ಎಂ.ಎಲ್.ಸಿ ಎಚ್ ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದ ಜಲದರ್ಶಿನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು, ಅಧಿಕಾರಿಗಳು ಸಿಂಡಿಕೇಟ್‌ವೊಂದನ್ನು ರಚಿಸಿಕೊಂಡಿದ್ದಾರೆ. ಇದರ ಮೂಲಕ ಅವ್ಯವಹಾರ ನಡೆಸಿದ್ದಾರೆ. ಅವ್ಯವಹಾರದ ವಿಚಾರ ಹೊರಗೆ ಬರುತ್ತಿದ್ದಂತೆ, ಭಾನುವಾರವಾದರೂ ಅಧಿಕಾರಿಗಳು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಣತಿ ಮೇರೆಗೆ ಮುಡಾದ ಕಡತಗಳನ್ನು ದೊಡ್ಡ- ದೊಡ್ಡ ಸೂಟ್‌ಕೇಸ್‌ಗಳಿಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದರು. ಈ ಒಂದು ಹಗರಣದಲ್ಲಿ ಮುಡಾ ಆಯುಕ್ತ ದಿನೇಶ್ ಕುಮಾರ್, ಶಾಸಕ ಕೆ. ಹರೀಶ್‌ಗೌಡ, ರಾಕೇಶ್ ಪಾಪಣ್ಣ, ಮುಡಾ ಅಧ್ಯಕ್ಷ ಕೆ. ಮರೀಗೌಡ, ಹಿಂದಿನ…
ಹುಬ್ಬಳ್ಳಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಹಾಗೂ ಡಿಸಿಎಂ ಬಗ್ಗೆ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ, ಈ ವಿಷಯವಾಗಿ ಸಂಸದ ಜಗದೀಶ್ ಶೆಟ್ಟರ್ ಅವರು ಮಾತನಾಡಿದ್ದು, ಕಾಂಗ್ರೆಸ್ ಶಾಸಕರಲ್ಲಿಯೇ ಸರ್ಕಾರದ ಬಗ್ಗೆಅಸಮಾಧಾನವಿದೆ ಹಾಗಾಗಿ ಕಾಂಗ್ರೆಸ್ ಶಾಸಕರಿಂದಲೇ ಯಾವುದೇ ಕ್ಷಣದಲ್ಲಾದರೂ ಸರ್ಕಾರ ಪತನ ವಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಸಿಎಂ ಡಿಸಿಎಂ ವಿಷಯದ ಕುರಿತು ಚರ್ಚೆ ನಡೆಯುತ್ತಿರುವ ಪ್ರಶ್ನೆಗಳಿಗೆ ಇಂದು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು,ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ.ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದರು. ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಅದು ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಹೆಚ್ಚಾಗುತ್ತಿದೆ. ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಸರ್ಕಾರ ಪತನವೂ ಆಗಬಹುದು. ಅದು ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗುತ್ತೆ. ಆದರೆ ಯಾವಾಗ ಅನ್ನೋದು ಹೇಳಲು ಬರೋದಿಲ್ಲ…
ಬೆಳಗಾವಿ : ನಮ್ಮನ್ನು ಸೋಲಿಸಲು ಎಲ್ಲಿಂದ ನಿರ್ದೇಶನ ಬಂದಿದೆ ಎಂದು ಗೊತ್ತಿತ್ತು. ಘಾಟಗೆಯವರ ಚಾಡಿ ಮಾತು ಕೇಳುತ್ತಾರೆ ಎಂದು ಹೇಳಿದರು. ನಾನು ಘಾಟಗೆ ಅಲ್ಲ ಹೆಂಡತಿ ಮಕ್ಕಳ ಮಾತನ್ನು ಕೇಳಲ್ಲ. ಮಾಜಿ ಶಾಸಕ ಶ್ಯಾಮ್ ಘಾಟಗೆ ನೀವು ಕುಸ್ತಿ ಆಡಿ ನಮ್ಮ ಚುನಾವಣೆಗೆ ಯಾಕೆ ತೊಂದರೆ ಮಾಡಿದ್ರಿ? ನಿಮಗೆ ಟಿಕೆಟ್ ಕೊಡಿಸಿ ಸಪೋರ್ಟ್ ಮಾಡಿದ್ವಿ, ನೀವ್ಯಾಕೆ ಹೀಗೆ ಮಾಡಿದ್ರಿ ಎಂದು ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೋಗೇರಿಯಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಮಹೇಂದ್ರ ತಮ್ಮಣ್ಣನವರ್ ನೀವು ಸಣ್ಣವರಿದ್ದೀರಿ. ಈಗ ಒಂದು ವರ್ಷವಾಯಿತು ಅಷ್ಟೇ ಬಹಳ ನಿಧಾನವಾಗಿ ಹೋಗಬೇಕು. ಗಾಡಿ ಸ್ಲೋ ಇರಬೇಕು ವೇಗವಾಗಿ ಬಿಡಬಾರದು. ಬಿದ್ದರೆ ಆರ್ ಟಿ ಓ ಲೈಸೆನ್ಸ್ ಕೊಡಲ್ಲ. ಆರ್ ಟಿ ಓ ಕೈಯಲ್ಲಿ ದಾಟಬೇಕು ಎಲ್ಲಾ ಪರಿಶೀಲಿಸಿ, ನಂತರ ಲೈಸೆನ್ಸ್ ಕೊಡುತ್ತಾರೆ ನಮ್ಮ ವಿರುದ್ಧ ಹೇಳಿಕೆ ಕೊಡುವವರು ಕರ್ನಾಟಕದ ತುಂಬಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.…
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಸಮೀಪ ಅನುಮಾನಸ್ಪದವಾಗಿ ಓಡಾಡುತ್ತಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾರಾಟ ಮಾಡಲು ಪ್ಲಾನ್ ಮಾಡಿದ್ದ 4 ಆರೋಪಿಗಳನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ಪ್ರದೀಪ್( 23) ಪ್ರೀತಮ್ (26) ಶ್ರೇಯಸ್(24) ಅಭಿಷೇಕ್( 25 ) ಎಂದು ಗುರುತಿಸಲಾಗಿದೆ. ಬಂಧಿತರು ಬೈಕ್ ನಲ್ಲಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಬೆಟ್ಟದ ಪಾಲಾರ್ ರಸ್ತೆಯಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ವಿಷಯ ತಿಳಿದ ಮಹದೇಶ್ವರಬೆಟ್ಟ ಪೋಲಿಸ್ ಠಾಣೆಯ ಪೊಲೀಸರ ತಂಡವು ಸ್ಥಳಕ್ಕೆ ಆಗಮಿಸಿ ಪರೀಶೀಲಿಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಕೂಡಲೇ ನಾಲ್ವರನ್ನು ಬಂಧಿಸಿ ಸುಮಾರು 190 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮಹದೇಶ್ವರಬೆಟ್ಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ : ಮಾಗಡಿ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ ಮಂಜು ಪೊಲೀಸರ ಮೇಲೆ ದರ್ಪ ತೋರಿದ್ದು, ಅಪಘಾತ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಪೊಲೀಸರು ಹೆಲ್ಮೆಟ್ ಧರಿಸದ ವಾಹನಗಳನ್ನು ತಡೆಗಟ್ಟಿ ಪೊಲೀಸರು ದಂಡ ಹಾಕುತ್ತಿದ್ದರು. ಈ ವೇಳೆ ಸವಾರರು ಹಾಗೂ ಪೊಲೀಸರ ಮಧ್ಯ ಕಿರಿಕ್ ಉಂಟಾಗಿದ್ದು, ಸ್ಥಳಕ್ಕೆ ಬಂದ ಮಾಜಿ ಶಾಸಕ ಎ ಮಂಜು ಸ್ಥಳೀಯರಿಗೆ ದಂಡ ವಿಧಿಸದಂತೆ ಪೊಲೀಸರಿಗೆ ತಾಕೀತು ಮಾಡಿರುವ ಘಟನೆ ನಡೆದಿದೆ. ಹೌದು ಇಂದು ಬೆಂಗಳೂರು-ಮಾಗಡಿ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಳ ಹಿನ್ನೆಲೆ ಹೆಲ್ಮೆಟ್ ಕಡ್ಡಾಯ ನಿಯಮದ ಪ್ರಕಾರ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ದಂಡ ವಿಧಿಸುವಾಗ ವಾಹನ ಸವಾರರ ಜೊತೆ ಪೊಲೀಸ್ ಸಿಬ್ಬಂದಿ ಕಿರಿಕ್ ಆಗಿದೆ. ಇದೇ ವೇಳೆ ಸ್ಥಳಕ್ಕೆ ಬಂದಿದ್ದ ಮಾಗಡಿ ಮಾಜಿ ಶಾಸಕ ಎ.ಮಂಜುನಾಥ್ ಸ್ಥಳೀಯರಿಗೆ ದಂಡ ಹಾಕದಂತೆ ಪೊಲೀಸರಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಎಸ್ಐ ನಮ್ಮ ನಿಯಮ ಏನಿದೆಯೋ ಅದನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದಾಗ ನೀನು ಹೆಚ್ಚಿಗೆ ಮಾತನಾಡಬೇಡ ಎಸ್ಪಿ ಜೊತೆಗೆ…
ಧಾರವಾಡ :ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ. ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿದ ಮಗನಂತೆ ಆಗಿದೆ. ರಾಜ್ಯದ ಆಡಳಿತ ನಿಷ್ಕ್ರಿಯಯಗೊಳ್ಳುತ್ತಿದೆ. ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ಸಿಎಂ ಸಿದ್ದರಾಮಯ್ಯ ವಿಫಲ ಆಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಧಾರವಾಡದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ. ಇದರ ಎಲ್ಲ ಪರಿಣಾಮ ರಾಜ್ಯದ ಆಡಳಿತ ಮೇಲೆ ಆಗಿದೆ. ರಾಜ್ಯದ ಆಡಳಿತ ನಿಷ್ಕ್ರಿಯಯಗೊಳ್ಳುತ್ತಿದೆ. ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ವಿಫಲ ಆಗಿದ್ದಾರೆ. ಆಂತರಿಕ ಸಮಸ್ಯೆ ಬಗೆಹರಿಸಿಕೊಂಡು ಜನರ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಆದರೆ ಬೆಲೆ ಏರಿಕೆ ಮಾಡಿ ಜನರಿಂದ ಹಣ ಪಡೆದು ಜನರಿಗೆ ಕೊಡುತ್ತಿದ್ದಾರೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಸಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಒಬ್ಬ ವಿಫಲ ಮುಖ್ಯಮಂತ್ರಿ ಎಂದು ಜೋಶಿ ಹರಿಹಾಯ್ದರು.ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ. ಹೆಚ್ಚು ಡಿಸಿಎಂಗಳನ್ನು ಸೃಷ್ಟಿ ಮಾಡಬೇಕು ಎಂದು ಸಿಎಂ ತಮ್ಮ ಅನುಯಾಯಿಗಳಿಂದ ಒತ್ತಾಯ ಮಾಡಿಸಿದರೆ,…
ಮಂಡ್ಯ : ಸಿಎಂ ಕುರ್ಚಿ ಖಾಲಿ ಎಲ್ಲಿದೆ? ಖಾಲಿ ಇದ್ದಾಗ ಅದರ ಬಗ್ಗೆ ಮಾತಾಡಲಿ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಚಂದ್ರಶೇಖರ್ ಸ್ವಾಮೀಜಿಯ ಅಭಿಪ್ರಾಯ ಅವರ ವೈಯಕ್ತಿಕ. ಈಗ ಸಿದ್ದರಾಮಯ್ಯ ಸಿಎಂ ಖುರ್ಚಿಯಲ್ಲಿ ಕುಳಿತಿದ್ದಾರೆ. ಸಿಎಂ ಖುರ್ಚಿ ಖಾಲಿ ಎಲ್ಲಿದೆ?. ಖಾಲಿ ಇರುವಾಗ ಚರ್ಚೆ ಮಾಡಬೇಕು. ಖಾಲಿ ಇಲ್ಲದಿರುವಾಗ ಚರ್ಚೆ ಅಗತ್ಯವಿಲ್ಲ. ಸ್ವಾಮೀಜಿ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು. ಒಕ್ಕಲಿಗರು, ಲಿಂಗಾಯತರು, ದಲಿತರು ಕೇಳ್ತಿದ್ದಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ. ನಮ್ಮದು ಹೈಕಮಾಂಡ್ ಪಕ್ಷ. ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಹೈಕಮಾಂಡ್ ಹಾಕಿದ ಗೆರೆಯನ್ನ ನಾವ್ಯಾರು ದಾಟುವುದಿಲ್ಲ. ಇದು ನಮ್ಮ ಪಕ್ಷದ ಪಾಲಿಸಿ. ಏನೇ ಇದ್ದರೂ ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ…
ಬೆಂಗಳೂರು : ಸಿದ್ದರಾಮಯ್ಯ ಅವರು ಬಂದಾಗ ಅವರ ಬಳಿ ಸಮಸ್ಯೆ ಹೇಳಿ ಸುಮ್ಮನಾಗಬಾರದು, ಸಮಸ್ಯೆ ಹೇಳಿ ನಂತರ ಆಗಾಗ್ಗೆ ಹೋಗಿ ಅವರ ತಲೆ ನಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ಹಾಸ್ಯ ಚಟಾಕಿ ಹಾರಿಸಿದರು. ಹೌದು ನಿರ್ಮಾಪಕರ ಸಂಘದ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ನಟರಾದ ಶಿವರಾಜ್ ಕುಮಾರ್, ಜಗ್ಗೇಶ್ ಹಾಗೂ ಇನ್ನೂ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮುಂದೆ ಬೇಡಿಕೆಗಳ ಸರಮಾಲೆಯನ್ನೇ ಇಡಲಾಯ್ತು. ಚಿತ್ರರಂಗದ ಸಮಸ್ಯೆಗಳ ಬಗ್ಗೆ ಒಬ್ಬರ ಹಿಂದೊಬ್ಬರು ಹೇಳುತ್ತಲೇ ಇದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್, ಚಿತ್ರರಂಗದ ಕೆಲಸಗಳನ್ನು ಪಟ್ಟು ಹಿಡಿದು ಮಾಡಿಸಬೇಕು, ಸಿದ್ದರಾಮಯ್ಯ ಅವರು ಬಂದಾಗ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ತಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ ಆಗಾಗ ಹೋಗಿ ತಲೆ ಕೆಡಸಿದರೆ ನಮ್ಮ ಕೆಲಸ ಬೇಗ…
ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಕಡ್ಡಾಯವಾಗಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಹೌದು ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ. ಅಲ್ಲದೆ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಕೂಡ ಆಗ್ರಹ ಕೇಳಿಬಂದಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ…













