Author: kannadanewsnow05

ಬೆಂಗಳೂರು :ಬೆಂಗಳೂರಿನ ಅಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ‌.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆಯಾಗಿವೆ. ಹೌದು ಅ ಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ದಾಳಿ ಮಾಡಿದ್ದು, ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ. ಬಿ‌.ಎಸ್ ಪಾಟೀಲ್ ಅವರು ಸರ್ಚ್ ವಾರಂಟ್‌ಗಳನ್ನು ಹೊರಡಿಸಿದ್ದರು. ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಖುದ್ದು ಪರಿಶೀಲನೆಗೆ ವಾರೆಂಟ್ ಹೊರಡಿಸಲಾಗಿತ್ತು. ಅದರಂತೆ ಸಂಜೆ ವೇಳೆ ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಗಳಲ್ಲೇ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆಯಾಗಿವೆ. ಯಶವಂತಪುರ, ಬ್ಯಾಟರಾಯನಪುರ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಗಳು ನಡೆದು ಜಗಳಗಳು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಿದೆ.ಇದೀಗ ಬೆಂಗಳೂರಿನ ಹನುಮಂತನಗರದಲ್ಲಿ ಕಾರ್ಮಿಕರ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕಾರ್ಮಿಕನ ಬರ್ಬರ ಕೊಲೆ ಮಾಡಲಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಅಜಿತ್ (30) ಎನ್ನುವ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ ಅಜಿತ್ ನ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಹನುಮಂತನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕಲಬುರಗಿ : ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ಮಾಜಿ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಒತ್ತಾಯಿಸಿದರು. ಈ‌ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮುಖ್ಯಮಂತ್ರಿಗಳು ಕೂಡಲೇ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು.ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ. ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಗುಲ್ಬರ್ಗ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು ಮೊದಲಾದ 18 ವೈದ್ಯಕೀಯ ಕಾಲೇಜುಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣಗಳನ್ನು ಖರೀದಿಸಿದ್ದು, 176.70 ಕೋಟಿ ಖರ್ಚು ಮಾಡಿದ್ದಾರೆ ಎಂದರು. ಟೆಂಡರ್ ಕರೆಯಲು ಕಂಪೆನಿ ಹೆಸರನ್ನು ಬದಲಿಸಿದ್ದು, ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ವೈದ್ಯಕೀಯ ಶಿಕ್ಷಣ ಸಚಿವರು, ಈ ಹಗರಣದಲ್ಲಿ ಭಾಗವಹಿಸಿದ ಸುದ್ದಿ ಇದೆ. ಸರಕಾರವು ಶೇ 60 ಮತ್ತು ಸಂಬಂಧಿತ ಸಂಸ್ಥೆಯು ಆಂತರಿಕ ಸಂಪನ್ಮೂಲದಿಂದ ಶೇ…

Read More

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್ 5ರವರೆಗೆ SIT ಕಸ್ಟಡಿಗೆ ನೀಡಿ ಬೆಂಗಳೂರಿನ 42ನೇ ACMM ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮುನಿರತ್ನ ಅವರನ್ನು ಅಕ್ಟೋಬರ್ 5ರ ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮುನಿರತ್ನ ಅವರು ಅಟ್ರಾಸಿಟಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ಬಿಡುಗಡೆಯಾಗಿದ್ದರು. ಬಳಿಕ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲು ಪಾಲಾಗಿದ್ದಾರೆ. ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಮೇಲೆ ಜೈಲು ಸೇರಿದ ಬಳಿಕ ರಾಜ್ಯ ಸರ್ಕಾರ ಈ ಒಂದು ಪ್ರಕರಣದ ತನಿಖೆಗಾಗಿ ಎಸ್ಐಟಿ ತಂಡ ರಚನೆ ಮಾಡಿ ಆದೇಶ ಹೊರಡಿಸಿತ್ತು. ಇದಾದ ಬಳಿಕ ಎಸ್ಐಟಿ ಅಧಿಕಾರಿಗಳು, ತನಿಖೆ ಕೈಗೊಂಡಿದ್ದರು. ಇಂದು ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್ 5 ರವರೆಗೆ SIT ಕಸ್ಟಡಿಗೆ ನೀಡಿ ಕೋರ್ಟ್…

Read More

ಗದಗ : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಂಗಿಯನ್ನು ಅಣ್ಣನೊಬ್ಬ ಭೀಕರವಾಗಿ ಕೊಂದು ಠಾಣೆಗೆ ಬಂದು ಶರಣಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮುಂಡರಗಿ ಪಟ್ಟಣದ ಅನ್ನದಾನೀಶ್ವರ ನಗರದ ಖುರ್ಷಿದಾ (35) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.ಮೃತ ಮಹಿಳೆ 14 ವರ್ಷದ ಹಿಂದೆ ಕಟಿಂಗ್ ಸಲೂನ್ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ 2020 ರಲ್ಲಿ‌ ಮೈಬೂಬ್ ಬೆಟಗೇರಿ ಎಂಬಾತನ ಜೊತೆ ಎರಡನೇ ಮದುವೆಯಾಗಿ ಜೀವನ ನಿರ್ವಹಣೆಗಾಗಿ ಅಣ್ಣನ 15 ಎಕರೆ ಜಮೀನಿನಲ್ಲಿ ಪಾಲು ಕೇಳಿದ್ದ ಖುರ್ಷಿದಾ, ಕೋರ್ಟ್ ಮೆಟ್ಟಿಲೇರಿದ್ದಳು. ಈ ಹಿನ್ನಲೆ ಇಂದು ಮನೆಗೆ ಬಂದು ಕೇಸ್ ವಾಪಸ್ ಪಡೆಯವಂತೆ ಅಣ್ಣ ಒತ್ತಾಯ ಮಾಡಿದ್ದಾನೆ. ಆದರೆ, ಅಣ್ಣನ ಮಾತು ಕೇಳದೆ ವಾಗ್ವಾದಕ್ಕಿಳಿದಿದ್ದ ತಂಗಿಯನ್ನು ಸಿಕ್ಕ ಸಿಕ್ಕಲ್ಲಿ ಮನಬಂದಂತೆ ಚಾಕು ಇರಿದು ಬಳಿಕ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ತಾನೇ ಮುಂಡರಗಿ ಠಾಣೆಗೆ ಬಂದು ಶರಣಾಗಿದ್ದಾನೆ . ಸದ್ಯ ಸ್ಥಳಕ್ಕೆ ಗದಗ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿ ಇರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ ವಕೀಲರಾದ ಸುನಿಲ್ ಅವರು, ಅಚ್ಚರಿಯ ಹೇಳಿಕೆ ಒಂದನ್ನು ನೀಡಿದ್ದು ನಮಗೆ ನೂರಕ್ಕೆ ನೂರರಷ್ಟು ಜಾಮೀನು ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ನಟ ದರ್ಶನ್​ ಭೇಟಿ ಬಳಿಕ ಮಾತನಾಡಿದ ವಕೀಲ ಸುನೀಲ್​, ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್​ 27ರಂದು ನಡೆಯಲಿದೆ. ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯ ತೆಗೆದುಕೊಂಡಿದ್ದಾರೆ. ಬೇಲ್​ ಅರ್ಜಿ ರಿಜೆಕ್ಟ್​ ಆದರೆ ಹೈಕೋರ್ಟ್​ಗೆ ಹೋಗುತ್ತೇವೆ. ನೂರಕ್ಕೆ ನೂರರಷ್ಟು ಜಾಮೀನು ಸಿಗುವ ವಿಶ್ವಾಸವಿದೆ. ಈಗಾಗಲೇ ಮೂವರಿಗೆ ಜಾಮೀನು ಸಿಕ್ಕಿದೆ. ನಮಗೆ ಕೆಲವೊಂದು ಡೌಟ್ಸ್ ಇತ್ತು, ಎಲ್ಲಾ ಕ್ಲಾರಿಫಿಕೇಷನ್ ತಗೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಹೊಸ ಮ್ಯಾನುವಲ್‌ ಪ್ರಕಾರ ಸೌಲಭ್ಯ ನೀಡಲು ಜೈಲಾಧಿಕಾರಿಗೆ ಮನವಿ ಮಾಡಲಾಗಿದೆ. ಹೊಸ ಮ್ಯಾನುವಲ್ ಪ್ರಕಾರ ಮೆಡಿಕಲ್ ಬೆಡ್ ಮತ್ತು ದಿಂಬು ಕೊಡಲು ಅವಕಾಶ ಇದೆ. ಎರಡು ದಿನದಲ್ಲಿ ಮೂಲ ಸೌಲಭ್ಯ ನೀಡದಿದ್ದರೆ ಮಾನವ ಹಕ್ಕುಗಳ‌ ಆಯೋಗಕ್ಕೆ ದೂರು…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಸಿಕ್ಯೂಶನ್ ಗೆ ನೀಡಿದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಆರ್ ಅಶೋಕ್ ಹಾಗೂ ಬಿ ವೈ ವಿಜಯೇಂದ್ರ ಭಾವಚಿತ್ರ ಇರುವ ಪೋಸ್ಟರ್ ಸುಟ್ಟು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ರಾಜ್ಯದ ಹಲವು ಕಡೆಗಳಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಇದಕ್ಕೆ ಕೌಂಟರ್ ಎಂಬಂತೆ ಇದೀಗ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು, ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾವಚಿತ್ರ ಇರುವ ಪೋಸ್ಟರ್ ಸುಟ್ಟು ಹಾಕಿ ನಿಮಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆ ಇದೆಯ ಎಂದು ಕಿಡಿ ಕಾರಿದ್ದಾರೆ. ಬಿಜೆಪಿ ಪ್ರತಿಭಟನೆ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ…

Read More

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ಹೈಕೋರ್ಟ್ ವಜಾಗೋಳಿಸಿದ ಬಳಿಕ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಬಿಜೆಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ತೆರುಗೇಟು ನೀಡಿದ್ದು ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಹಲೋ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪ್ರತಿಭಟನೆಗೆ ತಿರುಗೇಟು ನೀಡಿದರು. ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ತೀರ್ಪು ನೀಡಿದ ಬಳಿಕ ಬೆಂಗಳೂರಿನ ಗ್ರಾಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾಕೆ ಸಮಸ್ತಾನಕ್ಕೆ ರಾಜಿನಾಮೆ ಕೊಡಬೇಕು,? ರಾಜೀನಾಮೆಯ ಮಾತೆ ಬರುವುದಿಲ್ಲ ಎಂದು ಅವರು ತಿಳಿಸಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಜಾಮೀನುನ ಮೇಲೆ ಇಲ್ವಾ? ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ ಬೇಕಾದರೆ ಅವರನ್ನು ಕೇಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.ಸದ್ಯ ನಾನು ತೀರ್ಪು ಏನಿದೆ ಅಂತ ಓದಿಲ್ಲ. ತೀರ್ಪು ಓದಿದ ಬಳಿಕ ಮತ್ತಷ್ಟು ಈ ಕುರಿತು ಮಾತನಾಡುತ್ತೇನೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು 18ನೇ NFIRTW ರಾಷ್ಟ್ರೀಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು ಈ ಒಂದು ಸಮ್ಮೇಳನವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು. ಸಮ್ಮೇಳನವನ್ನು ಉದ್ಘಾಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಸೈನಿಕರು ಮೃತಪಟ್ಟರೂ 60 ಲಕ್ಷ ಮಾತ್ರ ಸಿಗುತ್ತದೆ. ನಮ್ಮ ಸಾರಿಗೆ ನಿಗಮಗಳ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿವಿಮೆ ಸಿಗುವಂತೆ ಮಾಡಿದ್ದೇವೆ. ಅಪಘಾತವಲ್ಲದ ಕಾರಣಕ್ಕೆ ಮೃತಪಟ್ಟರೆ ರೂ. 10 ಲಕ್ಷ . ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ನೌಕರರ ಹೃದಯ ತಪಾಸಣೆ, ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಾರಿಗೆ ನಿಗಮಗಳ ಬಸ್ಸುಗಳು ದಿನಕ್ಕೆ 1.65 ಲಕ್ಷ ಟ್ರಿಪ್ ಮಾಡುತ್ತವೆ. ವಿರೋಧ ಪಕ್ಷದವರು ಅಧಿಕಾರದಲ್ಲಿ ಇರುವಾಗ ಹೊಸ ಬಸ್ ಖರೀದಿ ಮಾಡಲಿಲ್ಲ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿಲ್ಲ ಎಂದು ಟೀಕಿಸಿದರು. ನಿಗಮದ ನೌಕರರ ಬೇಡಿಕೆಗಳನ್ನು ಈಡೇರಿಸಲಾಗುವುದು. ಅಲ್ಲದೇ ವಾಣಿಜ್ಯ ಸಾರಿಗೆ ನಡೆಸುವ ಟ್ಯಾಕ್ಸಿ, ಆಟೊ ಸಹಿತ ಖಾಸಗಿ ವಾಹನಗಳ ನೌಕರರ ಬೇಡಿಕೆಗಳಿಗೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಾನು ಈಗಲೂ ಹೇಳುತ್ತಿದ್ದೇನೆ ಈ ಒಂದು ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಆದೇಶ ಕೊಟ್ಟ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೀನಿ ಅಂತ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಯಾವುದೇ ತಪ್ಪು ಮಾಡಿಲ್ಲ ಎನ್ನುವ ಮೂಲಕ ಸ್ಪಷ್ಟನೆ ನೀಡಿದರು. ಇಂದು ಹೈ ಕೋರ್ಟ್ ತೀರ್ಪಿನ ಬಳಿಕ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನಮ್ಮ ಶಾಸಕರ ಖರೀದಿಗೆ ಬಿಜೆಪಿಯವರು ಪ್ರಯತ್ನಿಸಿದ್ದರು ನಮ್ಮ ಶಾಸಕರು ದುಡ್ಡಿನ ಹಿಂದೆ ಬಿದ್ದಿಲ್ಲ ಹೇಗಾದರೂ ಮಾಡಿ ಸರ್ಕಾರಕ್ಕೆ ಕಪ್ಪು ಮಸಿ ಬಳಿಯಲು ಯತ್ನಿಸಿದ್ದಾರೆ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ. ನಾವು 136 ಸ್ಥಾನ ಗೆದ್ದರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದ್ದಾರೆ.ದುಡ್ಡು ಕೊಟ್ಟು ಶಾಸಕರನ್ನು ಸೆಳೆಯುಕ್ಕೆ ಪ್ರಯತ್ನ ಮಾಡಿದ್ದರು ಆದರೆ ನಮ್ಮ ಶಾಸಕರು ಬಿಜೆಪಿಯವರ ಆಮಿಷಕ್ಕೆ ಒಳಗಾಗಲಿಲ್ಲ .ಅಲ್ಲದೆ ನಮ್ಮ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಇಡೀ ದೇಶದಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಕೂಡ ಕಾಂಗ್ರೆಸ್…

Read More