Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ವಾರದಲ್ಲಿ ಮೂರು ದಿನ ಮಾತ್ರ ಭೇಟಿಗೆ ಅವಕಾಶ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಗ ಇತ್ತೀಚಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ವಿನೋದ್ ಪ್ರಭಾಕರ್ ಕೂಡ ಭೇಟಿ ನೀಡಿದ್ದರು. ಇಂದು ನಿರ್ದೇಶಕ ನಟ ಪ್ರೇಮ್ ಹಾಗೂ ಪತ್ನಿ ರಕ್ಷಿತಾ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನವರನ್ನು ಭೇಟಿಯಾದರು. ದರ್ಶನ್ರನ್ನ ಭೇಟಿಯಾದ ಬಳಿಕ ಹೊರಬಂದ ರಕ್ಷಿತಾ ಭಾವುಕರಾಗಿದ್ದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ದಿನಗಳಿಂದ ಆಗುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಇದು ದುರಾದೃಷ್ಟಕರ ಘಟನೆ. ಈ ಪ್ರಕರಣ ಆಗಿರುವುದರ ಬಗ್ಗೆ ಬೇಸರ ಖಂಡಿತಾ ಇದೆ. ನಾನು ಹೇಳೋದು ಇಷ್ಟೇ, ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಎಲ್ಲರಿಗೂ ನ್ಯಾಯ ಸಿಗಲಿ ಎಂದು ಹೇಳಿದರು. ನಂತರ ಪ್ರೇಮ್ ಅವರು ಮಾತನಾಡಿ, ನಟ ದರ್ಶನ್ ನನಗೆ ಹಾಗೂ ರಕ್ಷಿತಾಗೆ ಬಹಳ ಆತ್ಮೀಯ ಸ್ನೇಹಿತರು.…
ಕೋಲಾರ : ರಾಹುಲ್ ಗಾಂಧಿ ಇರುವ ಕಾರಣ ಕಾಂಗ್ರೆಸ್ಗೆ ರಾಹುಕಾಲ ಬಂದಿದೆ. ಬೆಲೆ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎರಡು ನಾಲಿಗೆಗಳು ಇವೆ. ಮಾಡಲ್ಲ ಅಂತ ಹೇಳಿದ್ದನ್ನು ಈಗ ಮಾಡುತ್ತಿದ್ದಾರೆ ಮಾದಿತ್ತಿದರೆ ಸಿಎಂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಾರೆ.ಕೇಂದ್ರ ಸರ್ಕಾರ ಏನೋ ನಿಮ್ಮ ಅತ್ತೆ ಮನೆಯ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಜಿಲ್ಲಾಡಳಿತ ಕಚೇರಿಯ ಬಳಿ ಜಿಲ್ಲಾ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿಮಾತನಾಡಿದ ಅವರು, ವಿದ್ಯುತ್ ಬೆಲೆ, ಡಿಸೇಲ್- ಪೆಟ್ರೋಲ್ ಬೆಲೆ, ಹಾಲಿನ ಬೆಲೆ, ಮದ್ಯದ ಬೆಲೆ, ಮುದ್ರಾಂಕ ನೋಂದಣಿ ಬೆಲೆಗಳನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೀವನವು ಆರ್ಥಿಕ ಸಂಕಷ್ಟದಲ್ಲಿರುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಕಾಂಗ್ರೆಸ್ ಸರ್ಕಾರವು ರಾಜ್ಯದ ಜನತೆಗೆ ಐದು ಗ್ಯಾರಂಟಿಗಳ ಮೂಲಕ ಭಾಗ್ಯಗಳನ್ನು ಒಂದು ಕೈಯಲ್ಲಿ ಕೊಟ್ಟು, ಪೆಟ್ರೋಲ್ – ಡೀಸೆಲ್, ಅಗತ್ಯ ವಸ್ತುಗಳ ಬೆಲೆಯೇರಿಸುವ ಮೂಲಕ ಮತ್ತೊಂದು…
ಶಿವಮೊಗ್ಗ : ನಿನ್ನೆ ಹಾಸನದಲ್ಲಿ ಹಾಸನದಲ್ಲಿ ನಡೆದಂತಹ ಭೀಕರ ಅಪಘಾತದಲ್ಲಿ ಟಿಟಿ ವಾಹನದಲ್ಲಿದ್ದ 13 ಜನರು ಸಾವನಪ್ಪಿದ್ದರು. ಮಧುರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂಪಾಯಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ ಇದರ ಬೆನ್ನಲೇ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಅವರು ವೈಯಕ್ತಿಕವಾಗಿ ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂಪಾಯಿ ನೀಡಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಮೃತ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ನಟ ಶಿವಣ್ಣ ಹಾಗೂ ಗೀತಾ ಅವರು ವೈಯಕ್ತಿಕವಾಗಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಮೃತರ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡಲಿದ್ದಾರೆ. ಶೀಘ್ರದಲ್ಲಿ ಮೃತರ ಕುಟುಂಬಕ್ಕೆ ಶಿವಣ್ಣ ಹಾಗೂ ಗೀತಾ ಶಿವರಾಜಕುಮಾರ್ ಪರಿಹಾರ ನೀಡಲಿದ್ದಾರೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ನಿನ್ನೆ ನಸುಕಿನ ಜವ 4 ಗಂಟೆಗೆ…
ಚಿಕ್ಕಬಳ್ಳಾಪುರ : ನಾನು ಕೊಟ್ಟಿರುವ ನಿವೇಶನಗಳಿಗೆ ನಿಮ್ಮ ಫೋಟೋ ಹಾಕಿಕೊಂಡಿದ್ದೀರಿ. ಗಂಡಸರಾಗಿದ್ದರೆ ಜಿಲ್ಲೆಯ ಪ್ರತಿಕ್ಷೇತ್ರದಲ್ಲಿ 25,000 ಸೈಟ್ ಕೊಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಸಿ ಸುಧಾಕರಗೆ ಸಂಸದ ಡಾ.ಕೆ ಸುಧಾಕರ್ ಸವಾಲು ಹಾಕಿದರು. ಚಿಕ್ಕಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂಸಿ ಸುಧಾಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಚಿಮುಲ್ ರದ್ದು ಮಾಡಿ ಮತ್ತೆ ಕೋಚಿಮುಲ್ಗೆ ಸೇರಿಸಿದ್ದೀರಿ. ಬಜೆಟ್ ಮೀಟಿಂಗ್ ನಲ್ಲಿ ಸಚಿವ ಡಾ. ಎಂ ಸಿ ಸುಧಾಕರ್ ಇದ್ದರು. ಚಿಕ್ಕಬಳ್ಳಾಪುರ ಜಿಲ್ಲೆಗೆ ಅನ್ಯಾಯವಾಗುತ್ತಿದ್ದರು ಕೂಡ ಯಾಕೆ ಸಭೆಯಲ್ಲಿ ಮಾತನಾಡಲಿಲ್ಲ ಎಂದರು. ನಿಮಗೆ ಯಾಕೆ ಚಿಕ್ಕಬಳ್ಳಾಪುರ ಜಿಲ್ಲೆ ಬೇಕು ಹೇಳಿ? ನಾನೇನಾದರೂ ನಿಮ್ಮ ಸ್ಥಾನದಲ್ಲಿದ್ದರೆ ರಾಜೀನಾಮೆ ಬಿಸಾಕಿ ಬರುತ್ತಿದ್ದೆ. ಒಂದು ದಿನ ಬದುಕಿದ್ದರೂ ಸಿಂಹದಂತೆ ಬದುಕಬೇಕು.ಅಧಿಕಾರಕ್ಕೆ ಅಂಟಿಕೊಂಡು ಇದೀರಲ್ಲ ನಿಮಗೆ ನಾಚಿಕೆ ಆಗಲ್ವಾ? ಎಂದು ಸಚಿವ ಡಾ. ಎಮ್ ಸಿ ಸುಧಾಕರ್ ವಿರುದ್ಧ ಸಂಸದ ಡಾ. ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ : ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಘಟನೆಯು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಡಿ ಗ್ರಾಮದ ನಂದ್ರೋಳಿ ಎಂಬಲ್ಲಿ ಈ ಘಟನೆ ನಡೆದಿದೆ. ಕೆರೆ ನೀರಿನಲ್ಲಿ ಮುಳುಗಿ ದನರಾಜ (13) ಛಾಯಾ (7) ಸಾವನ್ನಪ್ಪಿರುವ ದುರ್ದೈವಿ ಮಕ್ಕಳು ಎಂದು ಹೇಳಲಾಗುತ್ತಿದೆ. ರಕ್ಷಿಸಲ್ಪಟ್ಟ ತಾಯಿಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಆಕೆಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಚಿಕ್ಕಬಳ್ಳಾಪುರ : ಆಂಧ್ರಪ್ರದೇಶದಲ್ಲಿ ಜಗನ್ಮೋಹನ ರೆಡ್ಡಿಗೆ ಬಂದಂತಹ ಪರಿಸ್ಥಿತಿ ಕೂಡ ರಾಜ್ಯ ಸರ್ಕಾರಕ್ಕೂ ಬರಲಿದೆ ಎಂದು ಬಿಜೆಪಿಯ ಸಂಸದ ಡಾಕ್ಟರ್ ಕೆ ಸುಧಾಕರ್ ಭವಿಷ್ಯ ನುಡಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರದಲ್ಲಿ ಜಗನ್ ಗೆ ಬಂದ ಸ್ಥಿತಿ ರಾಜ್ಯ ಸರ್ಕಾರಕ್ಕೂ ಬರುತ್ತದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಗನ್ ಸ್ಥಿತಿ ಬರುತ್ತದೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಚೆಕ್ಬಳ್ಳಾಪುರ ಜಿಲ್ಲೆ ಕಡೆಗಣಿಸಲಾಗಿದೆ ಎಂದರು. 2023ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿದ್ದೇನೆ. ಸೋತಾಗ ತಂದೆ ತಾಯಿಯನ್ನು ಕಳೆದುಕೊಂಡಷ್ಟು ನೋವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಜನ ಮತ್ತೆ ಪ್ರೀತಿ ತೋರಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸಂಸದ ಕೆ ಸುಧಾಕರ್ ಹೇಳಿದರು.
ಉಡುಪಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಹತ್ತು ಜನ ಪುರುಷರಿಗೆ ಇರುವ ಶಕ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇದೆ. ಅವರ ಆಸ್ಥೆಯಿಂದಲೇ ಇಂದು ರಾಜ್ಯಾದ್ಯಂತ ಗೃಹ ಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಜಾರಿಯಾಗಿದೆ ಎಂದು ತಿಳಿಸಿದ್ದಾರೆ. ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಆಡಳಿತ ವೈಖರಿ ಇತರರಿಗೂ ಮಾದರಿಯಾಗಿದೆ ಎಂದು ವಿನಯ್ ಗುರೂಜಿ ಹೇಳಿದರು.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ಈ ಒಂದು ಅಗ್ನಿ ಅನಾಹುತ ನಡೆದಿದೆ. ಘಟನೆಯಲ್ಲಿ ಖಾಸಗಿ ನರ್ಸಿಂಗ್ ಕಾಲೇಜಿನ ಐದು ಬಸ್ಸುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ. ಆದರೆ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದು ಪರಿಶೀಲನೆ ನಡೆಸುತ್ತಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಳಕೆನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೌದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಈ ಒಂದು ದುರಂತ ಸಂಭವಿಸಿದ್ದು, ಸಂಗಣ್ಣ ಹೊಸೂರು ಎಂಬುವವರ ಪುತ್ರ ಅಭಿನಂದನ ಮೃತ ದುರ್ದೇವಿಯಾಗಿದ್ದಾನೆ.ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಳಿ ಶಿರಾಡಿ ಘಾಟ್ ನಲ್ಲಿ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ದಿಕ್ಕಿಯಾದ ಪರಿಣಾಮ, ಬಸ್ ನಲ್ಲಿದ್ದ ಹಲವು ಪ್ರಯಾಣಿಕಾರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು ಇಂದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಲಿ ಈ ಒಂದು ಅಪಘಾತ ಸಂಭವಿಸಿದೆ. ಈ ವೇಳೆ ಟೆಂಪೋ ಒಂದು ಅಪಘಾತವನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಹಳ್ಳಕ್ಕೆ ಬಿದ್ದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ, ಸದ್ಯ ಶಿರಾಡಿ ಘಾಟ್ ಮಾರ್ಗದಲ್ಲಿ ಇದೀಗ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ. ಬಸ್ ಗಳನ್ನು ತೆರವು ಗೊಳಿಸುವ ಕಾರ್ಯಚರಣೆ ಆರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್ ನಲ್ಲಿ ಈ ಅಪಘಾತ ಸಂಭವಿಸಿದೆ.














