Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕನ್ನಡದ ರಿಯಾಲಿಟಿ ಶೋಗಳಲ್ಲಿ ಅತ್ಯಂತ ಜನಪ್ರಿಯವಾದ ರಿಯಾಲಿಟಿ ಶೋ ಸದ್ಯಕ್ಕೆ ಬಿಗ್ ಬಾಸ್ ಸೀಸನ್ 11. ಈಗಾಗಲೇ ಬಿಗ್ ಬಾಸ್ ಸ್ಪರ್ಧಿ ಹಾಗೂ ಕನ್ನಡ ನಾಡಿನ ಎಲ್ಲ ಜನತೆಗೆ ಮೆಚ್ಚುಗೆಗೆ ಪಾತ್ರವಾದಂತಹ ಹನುಮಂತು ಟಿಕೆಟ್ ಟು ಫಿನಾಲೆ ಟಾಸ್ಕ್ ಗೆದ್ದು ಫಿನಾಲೆಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಿದ್ದಾರೆ. ಇದೆಲ್ಲದರ ಮಧ್ಯ ಮತ್ತೊಂದು ವಿಷಯ ಹರಿದಾಡುತ್ತಿದ್ದು, ಫಿನಾಲೆ ಇನ್ನು ಕೆಲವೇ ದಿನಗಳಿಷ್ಟೇ ಇವೆ. ಈ ನಡುವೆ ವಿಕಿಪಿಡಿಯಾ ಬಿಗ್ ಬಾಸ್ ಸೀಸನ್ -11ರ ವಿನ್ನರ್ ಯಾರೆಂದು ಫಿನಾಲೆಗೂ ಮೊದಲೇ ಹೆಸರು ರಿವೀಲ್ ಮಾಡಿ ಇಕ್ಕಟ್ಟಿಗೆ ಸಿಲುಕಿದೆ. ವಿಕಿಪಿಡಿಯಾದಲ್ಲಿ ಹನುಮಂತು ವಿನ್ನರ್, ತ್ರಿವಿಕ್ರಮ್ ರನ್ನರ್ ಅಪ್ ಎಂದು ವಿಕಿಪಿಡಿಯಾದಲ್ಲಿ ಹಾಕಲಾಗಿದೆ. ಫಿನಾಲೆಗೂ ಮುನ್ನ ಈ ರೀತಿ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಇದನ್ನು ನೋಡಿ ಕೆಲ ವೀಕ್ಷಕರು ಖುಷ್ ಆಗಿದ್ದು, ಇನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ. ಚೈತ್ರಾ ಆಚೆ ಹೋದ ಬಳಿಕ ಬಿಗ್…
ಹಾಸನ : ಹಾಸನದಲ್ಲಿ ಚಲಿಸುತ್ತಿದ್ದಂತಹ ಕೆಎಸ್ಆರ್ಟಿಸಿ ಬಸ್ಸಿನ ಚಕ್ರಗಳು ಏಕಾಏಕಿ ಕತ್ತರಿಸಿ ಕಳಚಿ ಬಿದ್ದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಈ ಒಂದು ಅನಾಹುತ ನಡೆದಿದೆ ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರು ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೌದು ಸಕಲೇಶಪುರ ತಾಲೂಕಿನ ಬ್ಯಾದನೆ ಬಳಿ ಭಾರಿ ಅನಾಹುತ ಒಂದು ತಪ್ಪಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ನ ಚಕ್ರಗಳು ಏಕಾಏಕಿ ಕತ್ತರಿಸಿ ಬಿದ್ದಿವೆ. ಸಕಲೇಶಪುರದಿಂದ ಕೆಎಸ್ಆರ್ಟಿಸಿ ಬಸ್ ಬೇಲೂರಿಗೆ ತೆರುಳುತ್ತಿತ್ತು. ಚಕ್ರಗಳು ಕಳಚಿ ಬೀಳುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಡ್ಡಾದಿಡ್ಡಿ ಚಲಿಸಿದೆ. ಕೂಡಲೇ ಚಾಲಕ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಪ್ರಾಣಪಾಯದಿಂದ ಪಾರು ಮಾಡಿದ್ದಾನೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಈ ಒಂದು ಭಾರಿ ದುರಂತ ಇದೀಗ ತಪ್ಪಿದೆ. ಘಟನೆ ಕುರಿತಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸನೊಬ್ಬ ರಸ್ತೆಯ ಮೇಲೆ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ. ಇಂದು ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಘಟನೆ ಮಾಸುವ ಮುನವೇ ಚಿಕ್ಕಮಂಗಳೂರಿನಲ್ಲಿ ಸ್ವೀಟ್ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಸ್ವೀಟ್ ಮಾರಾಟ ಮಾಡುವ ನೆಪದಲ್ಲಿ ಇಬ್ಬರು ಆರೋಪಿಗಳು ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಒಂದು ಘಟನೆ ಬೆಳಕಿಗೆ ಬಂದಿದೆ. ಅಸ್ಸಾಮಿನಿಂದ ಬಂದು ಸಂತೆಯಲ್ಲಿ ಸ್ವೀಟ್ ಜೊತೆಗೆ ಗೋಮಾಂಸ ಮಾರಾಟ ಮಾಡಲಾಗುತ್ತಿತ್ತು. ಅಕ್ರಮ ಬಾಂಗ್ಲಾದೇಶ ನಿವಾಸಿಗಳು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ವೀಟ್ ಡಬ್ಬದ ಪಕ್ಕದಲ್ಲಿನ ಬ್ಲಾಕ್ ಬ್ಯಾಗ್ ನಲ್ಲಿ ಗೋಮಾಂಸ ಪತ್ತೆಯಾಗಿದೆ. ಗೋಮಾಂಸದ ಸಮೇತ ಪೊಲೀಸರು ಮಾರಾಟಗಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಫಿ ತೋಟದ ಕೆಲಸಕ್ಕೆ ಬಂದಿದ್ದವರಿಂದ ಗೋಮಾಂಸ ಮಾರಾಟ ಮಾಡಲಾಗುತ್ತಿದೆ. ಬಣಕಲ್…
ಬಾಗಲಕೋಟೆ : ಸೈಬರ್ ವಂಚಕರು ಜನಸಾಮಾನ್ಯರನ್ನು ಗುರಿಯಾಗಿಸಿ ಕೊಂಡು ಡಿಜಿಟಲ್ ಮತ್ತು ಒನ್ಲೈನ್ ವಂಚನೆಯ ಮೂಲಕ ಅವರ ಖಾತೆಯಲ್ಲಿದ್ದಂತಹ ಲಕ್ಷಾಂತರ ಹಣವನ್ನು ದೋಚಿರುವ ಪ್ರಕರಣಗಳನ್ನು ನಾವು ಕೇಳಿದ್ದೇವೆ. ಆದರೆ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೂಡ ಇದೀಗ ವಂಚನೆ ಎಸಗಿರುವುದು ಬೆಳಗೆ ಬಂದಿದೆ. ಹೌದು ಬಾಗಲಕೋಟೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಮೊಬೈಲ್ನಲ್ಲಿ ಒಂದು ಲಿಂಕ್ ಬರುತ್ತದೆ. ಈ ಒಂದು ಲಿಂಕ್ ಓಪನ್ ಮಾಡಿದ್ ತಕ್ಷಣ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಕಾಣಿಸಿಕೊಳ್ಳುತ್ತದೆ. ಲಿಂಕ್ ಓಪನ್ ಮಾಡಿದ ತಕ್ಷಣ ನಿಮ್ಮ ಖಾತೆಯಲ್ಲಿನ ಹಣ ಫೋನ್ ಪೇ ಮೂಲಕ 749 ವಂಚಕರ ಖಾತೆಗೆ ವರ್ಗಾವಣೆಯಾಗುತ್ತದೆ. ಮೊಬೈಲ್ ರಿಚಾರ್ಜ್ ಹೆಸರಿನಲ್ಲಿ ವಂಚಕರು ಈ ಒಂದು ಲಿಂಕ್ ಕ್ರಿಯೇಟ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನ ಮೊಬೈಲ್ ಇಂದ ಮೊಬೈಲ್ ಗೆ ಫೇಕ್ ಲಿಂಕ್ ಪಾಸ್ ಆಗುತ್ತಿದ್ದು, ಮತ್ತೊಂದೆಡೆ ಫೇಕ್ ಲಿಂಕ್ ಓಪನ್ ಮಾಡಿದ್ರೆ ಸಿಎಂ ಸಿದ್ದರಾಮಯ್ಯ ಪೋಟೋ ಓಪನ್ ಆಗುತ್ತೆ.…
ಬೆಂಗಳೂರು : ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದುಷ್ಕರ್ಮಿ ಒಬ್ಬ ಹಸುಗಳ ಕೆಚ್ಚಲು ಕೊಯ್ದಿದ್ದ ಘಟನೆ ನಡೆದಿತ್ತು. ಘಟನೆ ಸಂಭಂದ ಎಂದು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಈ ಒಂದು ಘಟನೆ ವಾಸುವ ಮುನ್ನವೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯ ಬಳಿ ಹಾಡು ಹಗಲೇ ಮೇಯುತ್ತಿದ್ದ ಲಕ್ಷಾಂತರ ಮೌಲ್ಯದ ಎರಡು ಹಸುಗಳನ್ನು ಕಳ್ಳತನ ಮಾಡಲಾಗಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿಣ ಕುಂಟೆಯ ಬಳಿ ಹಾಡು ಹಗಲೇ ಮೇಯುತಿದ್ದ ಎರಡು ಹಸುಗಳನ್ನು ಕಳ್ಳತನ ಮಾಡಲಾಗಿದೆ. ಒಂದುವರೆ ಲಕ್ಷ ಮೌಲ್ಯದ ಜರ್ಸಿ ಹಸು ಹಾಗೂ ಮಲೆನಾಡಿನ ಗಿಡ್ಡ ತಳಿಯ ಹಸು ಕಳ್ಳತನ ಮಾಡಲಾಗಿದೆ.ಎರಡು ಹಸು ಕಳೆದುಕೊಂಡು ಸದ್ಯ ರೈತರ ರಾಮಕೃಷ್ಣ ಕಂಗಾಲಾಗಿದ್ದಾರೆ. ಈ ಕುರಿತು ನೆಲಮಂಗಲದ ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಳಗಾವಿ : ಖಾಸಗಿ ಆಸ್ಪತ್ರೆಯಲ್ಲಿ ನೌಕರ ಒಬ್ಬ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಆಜರಿ ಸರ್ಜಿಕಲ್ ಹಾಸ್ಪಿಟಲ್ ನಲ್ಲಿ ಈ ಒಂದು ಘಟನೆ ನಡೆದಿದೆ. ಸುಭಾಷ್ (32) ಆತ್ಮಹತ್ಯೆ ಮಾಡಿಕೊಂಡಂತಹ ವ್ಯಕ್ತಿ ಎಂದು ತಿಳಿದುಬಂದಿದೆ.ಭಾನುವಾರ ರಜೆ ಇದ್ದರೂ ಕೂಡ ಸುಭಾಷ್ ಆಸ್ಪತ್ರೆಯಲ್ಲೇ ಉಳಿದಿದ್ದ. ಆಸ್ಪತ್ರೆಯಲ್ಲಿ ಯಾರು ಇಲ್ಲದ ವೇಳೆ ಸುಭಾಷ್ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಇದುವರೆಗೂ ನಿಖರವಾದಂತ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.
ವಿಜಯಪುರ : ತವರು ಮನೆಯಿಂದ ಅಣ್ಣ ಆಸ್ತಿ ಕೊಡಲ್ಲ ಎಂದು ಹೇಳಿದಾಗ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದು ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬೇನಾಳ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿ ಆಲಮಟ್ಟಿಯ ಎಡದಂಡೆ ಕಾಲುವೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದ ಬಳಿಕ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆಯ ನೀಡಗುಂದಿ ತಾಲೂಕಿನ ಬೆನಾಳ ಗ್ರಾಮದ ಬಳಿ ಇರುವ ಆಲಮಟ್ಟಿ ಎಡದಂಡೆ ಕಾಲುವೆಯ ಬಳಿ ತಾಯಿಯೋಬ್ಬಳು ತನ್ನ ನಾಲ್ವರು ಮಕ್ಕಳನ್ನು ಮೊದಲು ಕಾಲುವಿಗೆ ಎಸೆದಿದ್ದಾಳೆ. ಬಳಿಕ ತಾನು ಕೂಡ ಮಕ್ಕಳು ಸಾವನ್ನಪ್ಪಿದ ಬಳಿಕ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ತನು ನಿಂಗರಾಜ್ ಭಜಂತ್ರಿ (5) ರಕ್ಷಾ ನಿಂಗರಾಜ್ ಭಜಂತ್ರಿ (3) ಹುಸೇನ್ ನಿಂಗರಾಜ್ ಭಜಂತ್ರಿ ಹಾಗೂ ಹಸನ್ ಸೇರಿದಂತೆ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.…
ಕಲಬುರ್ಗಿ : ತವರು ಮನೆಗೆ ಹೋಗಿದ್ದ ತನ್ನ ಪತ್ನಿಯನ್ನು ಕರೆತರುವಂತೆ ಪತಿಯೊಬ್ಬ ಕುಡಿದ ನಶೆಯಲ್ಲಿ ಪೊಲೀಸ್ ಠಾಣೆಗೆ ಬಂದು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ನಡೆದಿದೆ. ಚಿಂಚೋಳಿ ತಾಲ್ಲೂಕಿನ ಚಿಂತಕುಂಟಾ ಗ್ರಾಮದ ನಿವಾಸಿ ಶಿವಕುಮಾರ ಅಮೃತ ಕಟ್ಟಿಮನಿ (28) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.ವಾಹನ ಚಾಲಕನಾದ ಶಿವಕುಮಾರ ಮದ್ಯ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ಬಂದಿದ್ದ. ತನ್ನ ಹೆಂಡತಿ ಯಲಕಪಳ್ಳಿಯ ತನ್ನ ತವರು ಮನೆಗೆ ಹೋಗಿದ್ದಾಳೆ. ಅವಳನ್ನು ಕರೆ ತಂದು ನನ್ನ ಜೊತೆಗೆ ಕಳುಹಿಸಬೇಕು ಎಂದು ಹೆಡ್‌ಕಾನ್‌ಸ್ಟೆಬಲ್ ಸುರೇಶ್ ಅವರಿಗೆ ಕೇಳಿಕೊಂಡರು. ಬಾಯಾರಿಕೆ ಆಗುತ್ತದೆ ಎಂದ ಶಿವಕುಮಾರ, ಠಾಣೆಯಲ್ಲಿದ್ದ ನೀರನ್ನು ಗ್ಲಾಸ್‌ನಲ್ಲಿ ತುಂಬಿಕೊಂಡರು. ನನ್ನ ಹೆಂಡತಿಯನ್ನು ನೀವು ಕರೆಸದೆ ಇದ್ದರೇ ಇಲ್ಲಿಯೇ ಸತ್ತು ಹೋಗುತ್ತೇನೆ ಎಂದು ಜೇಬಿನಲ್ಲಿ ಇರಿಸಿದ್ದ ಮಾತ್ರೆಗಳನ್ನು ಬಾಯಿಗೆ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯ ಆತನ ವಿರುದ್ಧ ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿ ಆಲಮಟ್ಟಿಯ ಎಡದಂಡೆ ಕಾಲುವೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದು ಕೊಂದ ಬಳಿಕ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಹೌದು ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬೆನಾಳ ಗ್ರಾಮದ ಬಳಿ ಇರುವ ಆಲಮಟ್ಟಿ ಎಡದಂಡೆ ಕಾಲುವೆಯ ಬಳಿ ತಾಯಿಯೋಬ್ಬಳು ತನ್ನ ನಾಲ್ವರು ಮಕ್ಕಳನ್ನು ಮೊದಲು ಕಾಲುವಿಗೆ ಎಸೆದಿದ್ದಾಳೆ ಬಳಿಕ ತಾನು ಕೂಡ ಮಕ್ಕಳು ಸಾವನ್ನಪ್ಪಿದ ಬಳಿಕ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ತನು ನಿಂಗರಾಜ್ ಬಜಂತ್ರಿ (5) ರಕ್ಷಾ ನಿಂಗರಾಜ್ ಬಜಂತ್ರಿ (3) ಹುಸೇನ್ ನಿಂಗರಾಜ್ ಭಜಂತ್ರಿ ಸೇರಿದಂತೆ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲ್ಹಾರ ತಾಲೂಕಿನ ತಲೆಗಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ವೇಳೆ ಕಾಲುವೆಗೆ ಜಿಗಿದಿದ್ದ ತಾಯಿ ಭಾಗ್ಯಗಳನ್ನು ಕೂಡಲೇ ಸ್ಥಳಿಯರು ರಕ್ಷಣೆ ಮಾಡಿದ್ದಾರೆ ಸದ್ಯ ಘಟನಾ ಸ್ಥಳಕ್ಕೆ ನಡೆಗುಂದಿ ಠಾಣೆ ಪೊಲೀಸರು ಭೇಟಿ ನೀಡಿದ್ದು…
ಹಾವೇರಿ : ಇಂದು ರಾಜ್ಯದಲ್ಲಿ ಪ್ರತ್ಯೇಕ ಮೂರು ಅಗ್ನಿ ಅವಘಡಗಳು ಸಂಭವಿಸಿವೆ. ಮೊದಲನೆಯದಾಗಿ ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಜನ ಗಾಯಗೊಂಡಿದ್ದಾರೆ. ಬಳಿಕ ಬೆಂಗಳೂರಿನ ನೆಲಮಂಗಲದಲ್ಲಿ ಗಾರ್ಮೆಂಟ್ಸ್ ಅಂಗಡಿಗೆ ಬೆಂಕಿ ತಗುಲಿ 40 ಲಕ್ಷಕ್ಕೂ ಅಧಿಕ ಬಟ್ಟೆಗಳು ಸುಟ್ಟು ಕರಕಲಾಗಿವೆ. ಇದೀಗ ಹಾವೇರಿಯಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಎರಡು ಲಕ್ಷಕ್ಕೂ ಅಧಿಕ ವಸ್ತುಗಳು ಸುಟ್ಟು ಭಸ್ಮವಾಗಿದೆ. ಹೌದು ಹಾವೇರಿಯ ಮಂಜುನಾಥ ನಗರದಲ್ಲಿ ಫ್ರಿಡ್ಜ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ನಗರದ ಚನ್ನಬಸಪ್ಪ ಗೂಳಪ್ಪನವರ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿದ್ದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ಅಗ್ನಿ ಅವಘಡದ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಾವ ಕಾರಣಕ್ಕಾಗಿ ಫ್ರಿಡ್ಜ್ ಸ್ಪೋಟಗೊಂಡಿದೆ ಎಂದು ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.












