Author: kannadanewsnow05

ಉತ್ತರಕನ್ನಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು ಚಲಿಸುತ್ತಿರುವ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಚರಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿ ಸಂಚರಿಸುತ್ತಿದ್ದ 5 ಜನರ ಪೈಕಿ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮೃತರನ್ನು ದಂಪತಿಗಳೆಂದು ತಿಳಿದು ಬಂದಿದ್ದು, ಈ ಒಂದು ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿಯ 63 ರ ಬೊಳೆಯ ಜಮಗೋಡ ಬಳಿ ಭಾನುವಾರ ಸಂಜೆ ನಡೆದಿದೆ. ಮುಂಬಯಿ ಅಂದೇರಿಯ ನಾಗೇಂದ್ರ ಸದಾಶಿವ ಭಟ್ಕಳ (72) ಹಾಗೂ ಇವರ ಪತ್ನಿ ಸುಧಾ ನಾಗೇಂದ್ರ ಭಟ್ಕಳ (65) ಮೃತ ಪಟ್ಟವರು.ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು ನಮಿತಾ ನಿತ್ಯಾನಂದ ನಾಯಕ (56), ದೀಪ್ತಿ ವಿಶ್ವಾಸ ಪ್ರಭು (36) ಹಾಗೂ ಮಂಗಳೂರಿನ ನಿತ್ಯಾನಂದ ವಾಮನ ನಾಯಕ ಗಾಯಗೊಂಡವರು. ದೀಪ್ತಿ ವಿಶ್ವಾಸ ಪ್ರಭು ಅವರಿಗೆ ಗಂಭೀರ ಸ್ವರೂಪ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ನಾಗೇಂದ್ರ ಸದಾಶಿವ ಭಟ್ಕಳ ಅವರ ಕುಟುಂಬದವರು ಮಂಗಳೂರಿನಿಂದ ಅಂಕೋಲಾದ ಶ್ರೀ ಲಕ್ಷ್ಮೀನಾರಾಯಣ…

Read More

ವಿಜಯನಗರ : ಬೆಂಗಳೂರಿನಲ್ಲಿ ರಾಕ್ಷಸರು ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸುಗಳ ಕೆಚ್ಚಲು ಕೊಯ್ದಿರುವುದು ತಪ್ಪು. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ ಎಂದು ತಿಳಿಸಿದರು. ಇಂದು ವಿಜಯನಗರ ಜಿಲ್ಲೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಪ್ರಕರಣದ ಕುರಿತು ಮಾತನಾಡಿದ ಅವರು, ಘಟನೆ ಕುರಿತು ಈಗಾಗ್ಲೇ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ. ಯಾರು ಅಂತ ಪತ್ತೆಹಚ್ಚಲು ಕಮಿಷನರಿಗೆ ತಿಳಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ ಎಂದು ಅವರು ತಿಳಿಸಿದರು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲೇಬೇಕು. ಯಾರು ಮಾಡಿದ್ದಾರೆ ಅಂತ ನನಗೆ ಗೊತ್ತಿಲ್ಲ. ಅದಕ್ಕೆ ಹಿಂದೂ ಸಂಘಟನೆಗಳು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಆ ರೀತಿ ಮಾಡಬಾರದು. ತಪ್ಪಿತಸರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ನಡೆದಿದ್ದು, ಶಾಲೆಯ ವಾಚ್ ಮೆನ್ ನನ್ನು ಹೆಡ್ ಮಾಸ್ಟರ್ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೆಳಗಿ ತಾಲೂಕಿನ ನಾಗರಾಳ ಎಂಬ ಗ್ರಾಮದಲ್ಲಿ ನಡೆದಿದೆ. ನೀರು ಕಾಯಿಸುವ ವಿಚಾರಕ್ಕೆ ಹೆಡ್ ಮಾಸ್ಟರ್ ಹಾಗೂ ವಾಚ್ ಮ್ಯಾನ್ ನಡುವೆ ಗಲಾಟೆ ನಡೆದಿದೆ. ಕಟ್ಟಿಗೆಯಿಂದ ಹೆಡ್ ಮಾಸ್ಟರ್ ವಾಚ್ ಮೆನ್ ಇವಳೆ ಗಾಯಗೊಂಡ ವಾಚ್ ಮಣ್ಣನ್ನು ನಾಗಪ್ಪಗೆ ಥಳಿಸಿದ್ದ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಾಗ ನಾಗಪ್ಪ ತೋಳಮಟ್ಟಿ (55) ಸಾವನ್ನಪ್ಪಿದ್ದಾನೆ. ವಾಚ್ಮನ್ ನಾಗಪ್ಪನನ್ನು ಮುಖ್ಯ ಶಿಕ್ಷಕ ಧನರಾಜ ರಾಥೋಡ್ ಕಟ್ಟಿಗೆಯಿಂದ ಥಳಿಸಿದ್ದಾನೆ. ನಾಗರಾಳ ಗ್ರಾಮದ ರಾಧಾಕೃಷ್ಣ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಳಗಾವಿ : ಇತ್ತೀಚಿಗೆ ದೇಶದಲ್ಲಿ ಕಾಮುಕರ ಅಟ್ಟಹಾಸ ಮೀರುತ್ತಿದ್ದು, ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಅಂಗನವಾಡಿಗೆ ನುಗ್ಗಿ ಶಿಕ್ಷಕೀಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿಯಲ್ಲಿ ಅಡುಗೆ ಮಾಡುವ ಮಹಿಳಾ ಸಹಾಯಕಿಯ ಗಂಡನೊಬ್ಬ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿರುವ ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛ ಮಾಡುವಂತೆ ಅಡುಗೆ ಮಾಡುವ ಮಹಿಳೆಗೆ ಶಿಕ್ಷಕಿ ಹೇಳಿದ್ದಾರೆ. ಈ ವಿಚಾರವನ್ನ ತನ್ನ ಗಂಡನಿಗೆ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಹೋಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಅಂಗನವಾಡಿಗೆ ಆಗಮಿಸಿದ್ದ ಆರೋಪಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಅಂತಾ ಅವಾಚ್ಯವಾಗಿ ನಿಂದಿಸಿದ್ದಾರೆ.ಇದೇ‌ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್​​ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ…

Read More

ಹಾವೇರಿ : ಹಾವೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೆಕ್ಕೆಜೋಳದ ರಾಶಿಗೆ ಬೆಂಕಿ ಬಿದ್ದು 10 ಕ್ಕೂ ಅಧಿಕ ಬಣವೆಗಳು ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಕಲಕೋಟಿ ಗ್ರಾಮದಲ್ಲಿ ನಡೆದಿದೆ. ಹೌದು ಗ್ರಾಮದ ರೈತರ 4 ಮೆಕ್ಕೆಜೋಳದ ತೆನೆಯ ರಾಶಿ, 6 ಮೇವಿನ ಬಣವೆಗಳು ಸುಟ್ಟು ಭಸ್ಮವಾಗಿದೆ. ರೈತರಾದ ದ್ಯಾಮಣ್ಣ ತಳವಾರ ಮತ್ತು ಮೃತ್ಯುಂಜಯ ಹಿರೇಮಠ ಸೇರಿದಂತೆ ಹಲವು ರೈತರು ಮೆಕ್ಕೆಜೋಳದ ರಾಶಿ ಮಾಡಲು ಹಾಕಿದ್ದರು. ಅಲ್ಲಿದ್ದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬಣವೆಗಳಿಗೆ ಬೆಂಕಿ ಹತ್ತಿ ಸುಟ್ಟು ಭಸ್ಮವಾಗಿದೆ. ಮೊದಲೇ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರಿದ್ದು, ಇದರ ಮಧ್ಯ ಮೆಕ್ಕೆಜೋಳದ ರಾಶಿಗೆ ಬೆಂಕಿ ಬಿದ್ದ ಕಾರಣ ರೈತರು ಕಂಗಾಲಾಗಿದ್ದಾರೆ. ಇದೀಗ ಸುಮಾರು 10 ಲಕ್ಷಕ್ಕೂ ಅಧಿಕ ಮೌಲ್ಯದ ಮೆಕ್ಕೆಜೋಳದ ತೆನೆಯ ರಾಶಿ ಸುಟ್ಟು ಭಸ್ಮವಾಗಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ…

Read More

ಬೆಂಗಳೂರು : ರೌಡಿಶೀಟರ್ ಒಬ್ಬ ತನ್ನ ಬರ್ತಡೆಯ ವೇಳೇ ಗದ್ದಲ ನಡೆಸಿದ್ದಾನೆ. ಈ ವೇಳೆ ಕಿರಿಕಿರಿಯಿಂದ ಪಕ್ಕದ ಮನೆಯ ಮಹಿಳೆ ಒಬ್ಬರು ಗದ್ದಲ ಮಾಡಿರುವುದನ್ನು ಪ್ರಶ್ನಿಸಿದ್ದಾರೆ. ಈ ವೇಳೆ ರೌಡಿ ಶೀಟರ್ ಆಕೆ ಹಾಗೂ ಆಕೆಯ ತಮ್ಮನ ಮೇಲೆ ದಾಳಿ ಮಾಡಿ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ತಿರುಪಾಳ್ಯದಲ್ಲಿ ನಡೆದಿದೆ. ಕಳೆದ ಶನಿವಾರ ನಡೆದ ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೌಡಿಶೀಟರ್ ಕರಿಯ ವಿಜಿ ಈ ಒಂದು ಕೃತ್ಯ ಎಸಗಿದ್ದಾನೆ.ಕರಿಯ ವಿಜಿ ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮದ್ಯ ಪಾರ್ಟಿ ಆಯೋಜಿಸಿದ್ದ. ಮದ್ಯದ ಅಮಲಿನಲ್ಲಿ ಡಿಜೆ ಗದ್ದಲವೂ ಜೋರಾಗಿತ್ತು. ಇದನ್ನು ಪಕ್ಕದ ಮನೆಯ ಮಂಜುಳಾ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ರೌಡಿಶೀಟರ್, ಚಾಕುವಿನಿಂದ ಇರಿದಿದ್ದಾನೆ ಎಂದು ನೆರೆಮನೆಯವರು ತಿಳಿಸಿದ್ದಾರೆ. ಘಟನೆ ನಡೆದ ಬಳಿಕ ರೌಡಿ ಶೀಟರ್ ಕರಿಯ ವಿಜಿ ಹಾಗೂ ಆತನ ಜೊತೆಗೆ ಇದ್ದಂತಹ ಉಳಿದವರು ತಲೆಮರಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆ…

Read More

ಬೆಂಗಳೂರು : ಅಧಿಕಾರ ವಹಿಸಿಕೊಂಡು ಆರು ತಿಂಗಳು ಕಳೆದರೂ ರಾಜ್ಯ ಕಾಂಗ್ರೆಸ್ ಸರ್ಕಾರ ನನಗೆ ಕಾರು ನೀಡಿಲ್ಲ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದರು. ಇದೀಗ ಈ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್‌ ಕುಮಾರಸ್ವಾಮಿ ಅವರಿಗೆ ಕಾರು ಹಂಚಿಕೆ ಮಾಡಿರುವುದಾಗಿ ಹೇಳಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಕಾಂಗ್ರೆಸ್‌ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು, ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿರುತ್ತದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ ಮಾಸದ ಕಾರಣ ನೀಡಿ ಸಂಕ್ರಾಂತಿಯ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024ರಲ್ಲಿ ಹೆಚ್.ಡಿ.ಕುಮಾರಸ್ವಾಮಿರವರ ಹೊಸ ವಾಹನದ ಪ್ರಸ್ತಾಪಕ್ಕೆ ಅನುಗುಣವಾಗಿ ಆರ್ಥಿಕ ಇಲಾಖೆಗೆ ಪತ್ರ ಬರೆದಿತ್ತು. ಕರ್ನಾಟಕದ ಸುಮಾರು 6…

Read More

ಬೆಂಗಳೂರು : ಸಿ ಎ ಫೌಂಡೇಶನ್ ಪರೀಕ್ಷೆಗೆ ಅಡ್ಡಿ ಎಂದು ಬಿಕಾಂ ಪರೀಕ್ಷೆ ಮುಂದೂಡಲು ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ ಮೇಲ್ಮನವಿ ಸಲ್ಲಿಸಿದ್ದು, ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ತುರ್ತು ವಿಚಾರಣೆ ನಡೆದಿದ್ದು, ಬಿಕಾಂ ಪರೀಕ್ಷೆಗಳಿಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ ಪರೀಕ್ಷೆ ಮುಂದೂಡಿಕೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ನ್ಯಾ. ಅನು ಶಿವರಾಮನ್ನ, ನ್ಯಾ. ಎಂ.ಐ ಅರುಣ್ ಅವರ ಪೀಠದಲ್ಲಿ ಈ ಒಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಿತು. ಸಿ ಎ ಫೌಂಡೇಶನ್ ಪರೀಕ್ಷೆಗೆ ಅಡ್ಡಿ ಎಂದು ಪರೀಕ್ಷೆ ಮುಂದೂಡಲು ಹೈಕೋರ್ಟ್ ಆದೇಶಿಸಿತ್ತು. ನಾಳೆಯಿಂದ ಆರಂಭವಾಗುವ 1,3  ಹಾಗೂ 5ನೇ ಸೆಮಿಸ್ಟರ್ ಬಿಕಾಂ ಪರೀಕ್ಷೆ ಮುಂದೂಡಗೆ ಮಾಡಲಾಗಿತ್ತು. ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿ.ಕಾಮ್ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ.ಹೀಗಾಗಿ ಏಕದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ಮನವಿ ಸಲ್ಲಿಸಿತ್ತು. ಬೆಂಗಳೂರು ವಿಶ್ವವಿದ್ಯಾಲಯದಿಂದ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್…

Read More

ಕೊಪ್ಪಳ : ಕೊಪ್ಪಳ ನಗರದಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು, ಚಾಕುನಿಂದ ಇರಿದು ಪತಿಯಿಂದಲೇ ಪತ್ನಿಯ ಬರ್ಬರ ಕೊಲೆಯಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ಮೂಲದ ಗೀತಾ (25) ಸಾವನ್ನಪ್ಪಿರುವ ಮಹಿಳೆ ಎಂದು ತಿಳಿದುಬಂದಿದ್ದು, ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಪತಿ ರಾಜೇಶ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಕೊಪ್ಪಳಸದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಇಬ್ಬರೂ ಸ್ಟೀಲ್ ಪಾತ್ರೆ ಮಾಡಲು ಬಂದಿದ್ದರು. ನಾಲ್ಕು ದಿನಗಳ ಹಿಂದೆ ಇಬ್ಬರೂ ಜಗಳವಾಡಿ ಪೊಲೀಸ್ ಠಾಣೆಗೆ ಹೋಗಿದ್ದರು.ಆದರೆ ಮತ್ತೆ ಜಗಳವಾಡಿ ರಾಜೇಶ್ ಪತ್ನಿ ಗೀತಾ ವನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ.ಆರೋಪಿ ರಾಜೇಶ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ವಿಜಯಪುರದಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಒಂದು ತಿಳಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಇದ್ದಂತಹ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆದಿದೆ ಹೌದು ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬೈಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರು ಸಾವನಪ್ಪಿದ್ದಾರೆ. ಸಾಗರ್ ಬೈಜಿನಾಳ್ (21) ಹಾಗೂ ಸುದೀಪ ಗುದ್ದಿ (21) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More