Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು, ತಂದೆಯ ಆಸ್ತಿಗಾಗಿ ಅಕ್ಕ ಮತ್ತು ತಮ್ಮನ ನಡುವೆ ಗಲಾಟೆ ನಡೆದಿದೆ. ಈ ವೇಳೆ ತಮ್ಮ ಅಕ್ಕನಿಗೆ ಕೆಲವು ಕೆಟ್ಟ ಪದಗಳಿಂದ ಬೈದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಅಕ್ಕನ ಮಗ ಸ್ವಂತ ಸೋದರಮಾವನ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಗ್ರಾಮದ ಸಿದ್ದರಾಮೇಗೌಡ ಎಂದು ತಿಳಿದುಬಂದಿದ್ದು, ಇನ್ನು ಸಿದ್ದರಾಮೇಗೌಡನ ಅಕ್ಕನ ಮಗ ಸಂಜಯ್ ಕೊಲೆ ಮಾಡಿರುವ ಆರೋಪಿ ಎಂದು ತಿಳಿದುಬಂದಿದೆ. ಸಿದ್ದರಾಮೇಗೌಡ ಮತ್ತು ಆತನ ಅಕ್ಕ ನಿರ್ಮಲ ನಡುವೆ 26 ಎಕರೆ ತೆಂಗಿನ ತೋಟ, 24 ವಾಣಿಜ್ಯ ಮಳಿಗೆ, ಸೈಟ್ ವಿಚಾರವಾಗಿ ವಿವಾದವಿತ್ತು. ತಂದೆಯ ಆಸ್ತಿಗಾಗಿ ನಿರ್ಮಲ ನ್ಯಾಯಾಲಯದಲ್ಲಿ ದಾವೆ ಕೂಡ ಹೂಡಿದ್ದರು. ಇದೇ ವಿಚಾರವಾಗಿ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಸಿದ್ದರಾಮೇಗೌಡ ಅಕ್ಕನನ್ನು ಕೆಟ್ಟ ಪದಗಳಿಂದ ಬೈದಿದ್ದ, ಇದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡ ಅಕ್ಕನ ಮಗ ಸಂಜಯ್ ಮರ್ಡರ್ ಪ್ಲಾನ್ ಮಾಡಿದ್ದ. ಅದರಂತೆ…
ಬೆಂಗಳೂರು : ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚಿನಲ್ಲಿ ವಿಜಯನಗರ ಜಿಲ್ಲೆಯ ಮೂಲದ ಮಹಿಳೆಯೋರ್ವಳನ್ನು, ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಸ್ಥಳೀಯರು ಆಕೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ ಇನ್ನು ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಪ್ರಕರಣ ಕುರಿತು ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು.ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ…
ಬೆಳಗಾವಿ : ಹೋಳಿ ಹಬ್ಬ ಆಚರಣೆ ಆರಂಭವಾದಾಗಿನಿಂದ ರಾಜ್ಯದಲ್ಲಿ ಅನೇಕ ಕಡೆಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಇದೀಗ ಬೆಳಗಾವಿಯಲ್ಲಿ ಕೂಡ ಹೋಳಿ ಹಬ್ಬ ಆಚರಣೆ ಬಳಿಕ ಇಬ್ಬರು ಬಾಲಕರು ಸ್ನಾನಕೆಂದು ಬಾವಿಗೆ ತೆರಳಿದ್ದಾರೆ. ಈ ವೇಳೆ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಾಕ್ಸಂಬಾ ಗ್ರಾಮದಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಾಕ್ಸಂಬಾ ಗ್ರಾಮದಲ್ಲಿ ಹೋಳಿ ಆಚರಣೆ ಬಳಿಕ ಸ್ನಾನಕ್ಕೆಂದು ಬಾವಿಗೆ ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.ಹೋಳಿ ಆಚರಿಸಿ ಬಾವಿಗೆ ಸ್ನಾನಕ್ಕೆ ಹೋಗಿದ್ದಾಗ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ್ದಾರೆ.ಮೃತ ಬಾಲಕರನ್ನು ವೇದಾಂತ ಹಿರೇಕೋಡಿ (11) ಮನೋಜ್ ಕಲ್ಯಾಣಿ (9) ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಇಬ್ಬರು ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದಲಕ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.
ಮಂಡ್ಯ : ಹೊಳಿ ಹಬ್ಬದ ನಿಮಿತ್ಯವಾಗಿ ಪಾರ್ಟಿಯಲ್ಲಿ ಕಲುಷಿತ ಆಹಾರ ಸೇವನೆಯಿಂದಾಗಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಯಲ್ಲಿ ನಡೆದಿತ್ತು. ಮೇಘಾಲಯ ಮೂಲದ ಕೇರ್ ಲಾಂಗ್ (14) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದ, ನಿನ್ನೆ ನಾಮೀಬಂತೈ (12) ಎಂಬ ವಿದ್ಯಾರ್ಥಿ ಕೂಡ ಮೃತಪಟ್ಟಿದ್ದ.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ತಿಳಿಸಿದ್ದಾರೆ. ಪ್ರಕರಣ ಹಿನ್ನೆಲೆ? ಕಳೆದ ಮಾರ್ಚ್ 14 ರಂದು ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು. ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ಪಲಾವ್ ಮಾಡಿಸಲಾಗಿತ್ತು. ಉಳಿಕೆಯಾದ ಪಲಾವ್ ಅನ್ನು…
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಸರ್ಕಾರಿ ಪಬ್ಲಿಕ್ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಾಪತ್ತೆಯಾಗಿದ್ದಂತಹ ಶ್ರೇಯಸ್ (16) ಎನ್ನುವ ವಿದ್ಯಾರ್ಥಿಯ ಮೃತ ದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ಕಳಸ ಪಬ್ಲಿಕ್ ಸ್ಕೂಲ್‍ನಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್(16) ಎಂಬ ವಿದ್ಯಾರ್ಥಿ ಮಾ.16ರಿಂದ ಕಾಣೆಯಾಗಿದ್ದ. ಶಾಲೆ ಬಿಟ್ಟ ನಂತರ ವಿದ್ಯಾರ್ಥಿ ಮನೆಗೆ ತೆರಳಿರಲಿಲ್ಲ. ಈ ಬಗ್ಗೆ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿಯ ಪತ್ತೆಗಾಗಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಲಾಗಿತ್ತು. ಮಂಗಳವಾರ ರಾತ್ರಿ ಕಳಸ ಬಾಳೆಹೊಳೆ ನಡುವಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮೇಲಿತ್ತಿ ಪರಿಶೀಲಿಸಲಾಗಿ ಅದು ನಾಪತ್ತೆಯಾಗಿದ್ದ ವಿದ್ಯಾರ್ಥಿಯದ್ದೇ ಎಂದು ತಿಳಿದು ಬಂದಿದೆ. ಈತ ಮೂಲತಃ ಬೇಲೂರಿನವನಾಗಿದ್ದು, ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ಕಳಸ ಪಬ್ಲಿಕ್ ಸ್ಕೂಲ್‍ಗೆ ಹೋಗುತ್ತಿದ್ದ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಅವರ ಕಚೇರಿಯಲ್ಲಿ ಕಳ್ಳತನ ನಡೆದಿದೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕರಾದಂತಹ ಮಹೇಶ್ ತೆಂಗಿನಕಾಯಿ ಅವರ ಕಚೇರಿಯಲ್ಲಿ ಕಳ್ಳತನ ನಡೆದಿದೆ. ಮಾರ್ಚ್ 16ರಂದು ಈ ಒಂದು ಕಳ್ಳತನ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಜೆಸಿ ನಗರದ ಟೌನ್ ಹಾಲ್ ಕಟ್ಟಡದಲ್ಲಿರುವ ಮಹೇಶ್ ತೆಂಗಿನಕಾಯಿ ಕಚೇರಿಯಲ್ಲಿ, ಕಚೇರಿಯ ಹಿಂಬಾಗಿಲಿನಿಂದ ಒಳನುಗ್ಗಿ ಕಳ್ಳತನ ನಡೆಸಿದ್ದಾರೆ. ಅವರ ಕೇಂದ್ರ ಕಚೇರಿ ಇದೆ. ಕಚೇರಿಯ ಹಿಂಬದಿಯಿಂದ ಬಂದು ಖದೀಮರು ಕಳ್ಳತನ ಮಾಡಿದ್ದಾರೆ. ಮಾರ್ಚ್ 16 ರಂದು ನಡೆದಿರುವ ಕಳ್ಳತನ ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಅಪರೂಪದ ಪ್ರಕರಣ ನಡೆದಿದ್ದು, ಮಳೆ ಹಾನಿ ಪರಿಹಾರ ನೀಡದ್ದಕ್ಕೆ ಪಟ್ಟಣ ಪಂಚಾಯಿತಿಯನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಜೆಎಂಎಫ್ ಸಿ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದೆ. 2014ರಲ್ಲಿ ಮಳೆಯಿಂದ ಶ್ರೀಧರ ನಾಯಕ್ ಮನೆಗೆ ನೀರು ನುಗ್ಗಿತ್ತು. ಶ್ರೀಧರ ನಾಯಕ ಮನೆಗೆ ಒಳಚರಂಡಿ ನೀರು ನುಗ್ಗಿ ಹಾನಿ ಆಗಿತ್ತು. ಮಳೆ ಹಾನಿ ಈ ವೇಳೆ ಶ್ರೀಧರ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಪರಿಹಾರ ಅರ್ಜಿಯನ್ನು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿರಸ್ಕರಿಸಿದ್ದರು. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಆದೇಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಶ್ರೀಧರ ನಾಯ್ಕಗೆ 80,000 ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶಿಸಿ 10 ತಿಂಗಳು ಕಳೆದರೂ ಕೂಡ ಪರಿಹಾರ ನೀಡಿಲ್ಲ. ಹಾಗಾಗಿ ಕೋರ್ಟ್ ಆದೇಶ ಉಲ್ಲಂಘನೆಯಾದ ಹಿನ್ನೆಲೆ ಪಟ್ಟಣ ಪಂಚಾಯತಿ ಕಚೇರಿ ಜಪ್ತಿಗೆ ಆದೇಶಿಸಿದೇ. ನ್ಯಾಯಾಲಯದ ಸಿಬ್ಬಂದಿಯಿಂದ ಹೊನ್ನಾವರ ಪಟ್ಟಣ ಪಂಚಾಯಿತಿ ಕಚೇರಿ ಇದೀಗ…
ಉಡುಪಿ : ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ಮಹಿಳೆ ಒಬ್ಬಳು ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸ್ಥಳೀಯ ನಿವಾಸಿಗಳಾದ ಲಕ್ಷ್ಮಿಬಾಯಿ, ಸುಂದರ್, ಶಿಲ್ಪ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಒಂದು ವಿಡಿಯೋ ವೈರಲ್ ಆಗಿತ್ತು.
ಬೆಂಗಳೂರು : ಇತ್ತೀಚಿಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಮಾತನಾಡುವ ಬರದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಲಾಗಿದೆ. ಎಸ್ ಕಿರಣ್ ಎಂಬುವವರಿಂದ ಕೋರ್ಟಿಗೆ ಖಾಸಗಿ ದೂರು ಸಲ್ಲಿಕೆಯಾಗಿದೆ. BNS ಸೆಕ್ಷನ್ 299, 352, 356 (2) ರ ಅಡಿ ಕ್ರಮ ಕೋರಿ ಖಾಸಗಿ ದೂರು ದಾಖಲಾಗಿದೆ. ಸಿಎಂ ಹೇಳಿದ್ದೇನು? ವಿಧಾನಸಭೆಯಲ್ಲಿ ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಚರ್ಚೆ ನಡೆಯುವಾಗ, ರಾಜ್ಯದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ಗಳಿಂದಲೇ ಅಪರಾಧಗಳು ನಡೆಯುತ್ತವೆ. ನಿಮ್ಮಿಂದ ಹಾಗೂ ಆರ್ ಎಸ್ ಎಸ್ ನವರಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆಗೆ ವಿಪಕ್ಷ…
ಕೊಪ್ಪಳ : ಕೊಪ್ಪಳದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ವಾಣಿಜ್ಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಕೊಪ್ಪಳ ರಸ್ತೆಯ ಸಿಬಿಎಸ್ ವೃತ್ತದ ಸಮೀಪದ ಹಳೇಯ ಪವನಬಾರ್ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ದಾದಾಪೀರ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಹೊಸ ಜನರೇಟರ್, ಕೃಷಿ ಮತ್ತು ರೈತರಿಗೆ ಉಪಯುಕ್ತವಾಗುವ ಯಂತ್ರೋಪಕರಣಗಳ ಮಾರಾಟ ಮಾಡಲಾಗುತಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿಯಿಂದ ಹೊಗೆ ಮಳಿಗೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ದಾದಾಪೀರ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸುವ ಹೊತ್ತಿಗೆ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗೆ ನಾಶವಾಗಿದ್ದವು. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ, ಈ ಹೊತ್ತಿಗಾಗಲೆ ಅಂಗಡಿಯಲ್ಲಿದ್ದ ಬಹುತೇಕ ಹೊಸ ಉಪಕರಣಗಳು ಹಾಗೂ ರೈತರು ರಿಪೇರಿಗೆ ನೀಡಿದ್ದ ಕೃಷಿ ಪರಿಕರಗಳು ಸುಟ್ಟು ಕರಕಲಾಗಿವೆ.…













