Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಪಲ್ಟಿಯಾಗಿ ಆರು ಮಂದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸುಮಾರು 25ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನರಿಪುರ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕ್ಯಾಂಟರ್ ನಲ್ಲಿ ಮೇಕೆಗಳು ಹಾಗೂ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದು ಕ್ಯಾಂಟರ್ ಪಲ್ಟಿಯಾಗಿದೆ. ಗಾಯಗೊಂಡ ಆರು ಜನರನ್ನು ತಕ್ಷಣ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಘಟನೆ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಡಿಕ್ಕಿಯಾಗಿ ಕೆಎಸ್ಆರ್ಟಿಸಿ ಚೆಕಿಂಗ್ ಇನ್ಸ್ಪೆಕ್ಟರ್ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಚೆಕಿಂಗ್ ಇನ್ಸ್ಪೆಕ್ಟರ್ ಶಕುನಿಗೌಡ (57) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆದ್ದಾರಿಯಲ್ಲಿ ಬಸ್ ತಡೆದು ಶಕುನಿ ಗೌಡ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಶಕುನಿಗೌಡ ಸಾವನ್ನಪ್ಪಿದ್ದಾರೆ.ಅಪಘಾತದ ಕುರಿತು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮೈಸೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬರನ್ನು ಬರಬರವಾಗಿ ಕೊಲೆ ಮಾಡಿದ್ದಾರೆ ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ಈ ಒಂದು ಕೊಲೆ ನಡೆದಿದೆ. ಟಿ ನರಸೀಪುರ ಹಳೆ ತಿರುಮಕೂಡಲಿನ ವಿನೋದ್ (32) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಘಟನಾ ಸ್ಥಳಕ್ಕೆ ಟಿ ನರಸಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿ ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ಆಗಿದ್ದು ಇದೀಗ ಜನರಲ್ಲಿ ಆತಂಕ ಮನೆ ಮಾಡಿದೆ. ಮೈಸೂರು, ಚಿಕ್ಕಮಗಳೂರು ಹಾಗು ಚಾಮರಾಜನಗರದಲ್ಲಿ ಹುಲಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ ಆಗಿದೆ. ಹೌದು ಬೆಂಗಳೂರಿನ ಕಡಬಗೆರೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ಆಗಿದೆ. ಲಾರಿ ರಾಮಣ್ಣ ಎಂಬವರ ಮನೆಯ ಬಳಿ ಚಿರತೆ ಓಡಾಡಿದೆ.ಡಿಸೆಂಬರ್ 11ರಂದು ಚಿರತೆ ನಾಯಿಮರಿ ಎಳೆದೋಯ್ದಿದೆ. ಚಿರತೆ ಕಾಣಿಸಿಕೊಂಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಾಗಾಗಿ ಗ್ರಾಮಸ್ಥರಿಗೆ ಹಾಗೂ ಎಲ್ಲರಿಗೂ ಎಚ್ಚರಿಕೆಯಿಂದ ಇರಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ
ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಒಂದು ನಡೆದಿದ್ದು ವಿದ್ಯುತ್ ಶಾಕ್ನಿಂದ ಯುವಕನೊಬ್ಬ ಸಾವನಪ್ಪಿದ್ದಾನೆ ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ಶಾಕ್ ತಗುಲಿ ಯುವಕ ಸಾವನಪ್ಪಿದ್ದಾನೆ.ಮೃತನನ್ನು ಅರುಣ್ ಕುಮಾರ್ (32) ಎಂದು ತಿಳಿದುಬಂದಿದೆ. ಬೆಂಗಳೂರಿನ ಗಿರಿನಗರದ ಅಪಾರ್ಟ್ಮೆಂಟ್ ನಲ್ಲಿ ಈ ಒಂದು ಘಟನೆ ನಡೆದಿದೆ ಅಪಾರ್ಟ್ಮೆಂಟ್ ನಲ್ಲಿ ಹೈಟೆನ್ಶನ್ ವೈರ್ ಮೇಲೆ ಬಿಳಿ ಕೂತಿರುತ್ತೆ ಆ ಗಿಳಿಯನ್ನ ರಕ್ಷಣೆ ಮಾಡಲು ಅರುಣ್ ಪ್ರಯತ್ನ ಮಾಡುತ್ತಾರೆ. ಸ್ಟೀಲ್ ಪೈಪ್ ಗೆ ಕಡ್ಡಿ ಕಟ್ಟಿ ಅದನ್ನು ಓಡಿಸಲು ಮುಂದಾಗುತ್ತಾರೆ. ಆಗ ವಿದ್ಯುತ್ ತಂತಿ ಪೈಪ್ ಗೆ ವಿದ್ಯುತ್ ತಂತಿ ತಗುಲಿ ಅರುಣ್ ಕುಮಾರ್ ಸ್ಥಳದಲ್ಲೇ ಸಾವನಪುತ್ತಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಕೂಡ ಚಿಕಿತ್ಸೆ ಫಲಕರಿಯಾಗಿದೆ ಅರುಣ್ ಕುಮಾರ್ ಸಾವನ್ನಪ್ಪಿದ್ದಾರೆ.
ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಕೋಲಾರ ಹೊರವಲಯದ ಟಮಕ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯದಳ ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ತೆರಳಿ ಶೋಧ ನಡೆಸುತ್ತಿದ್ದಾರೆ. ಇ-ಮೇಲ್ ಸಂದೇಶ ಬಂದ ತಕ್ಷಣ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಕಳೆದ ಎರಡು ದಿನಗಳ ಹಿಂದೆ ಗದಗದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಥಳಿಸಿದ್ದ ಘಟನೆ ನಡೆದಿತ್ತು. ಇದೀಗ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ಪ್ರೌಢ ಶಾಲೆಯ ಪ್ರಾಂಶುಪಾಲ ಕಲ್ಲಪ್ಪ ಬೆಳಗಾವ್ಕರಿಗೆ ಪೋಷಕರು ಥಳಿಸಿದ್ದಾರೆ ಬೆಳಗುಂದಿ ಬಾಲಕಿಯರ ಪ್ರೌಢಶಾಲೆಯಲ್ಲಿ ಈ ಒಂದು ಘಟನೆ ನಡೆದಿದ್ದು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಇರುವ ಹೈಸ್ಕೂಲ್ನಲ್ಲಿ ಇಂದು ಈ ಘಟನೆ ನಡೆದಿದೆ. ಘಟನೆ ತಿಳಿದು ಶಾಲೆಗೆ ನುಗ್ಗಿ ಸ್ಥಳೀಯರು ಮತ್ತು ಪೋಷಕರು ಪ್ರಾಂಶುಪಾಲನಿಗೆ ಥಳಿಸಿದ್ದಾರೆ. ಪ್ರಾಂಶುಪಾಲನ ವಿರುದ್ಧ ವಿದ್ಯಾರ್ಥಿನಿಯರು ಕೂಡ ಆಕ್ರೋಶ ಹೊರಹಾಕಿದ್ದಾರೆ. ಪ್ರಾಂಶುಪಾಲ ಕಲ್ಲಪ್ಪನನ್ನು ವಶಕ್ಕೆ ಪಡೆದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಘಟನೆ ಕುರಿತು ಬೆಳಗಾವಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಮಾನಹಾನಿ ಮಾಡಿದ್ದಾರೆ ಎಂದು ಬಿಜೆಪಿ ದಾಖಲಿಸಿರುವ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಆರೋಪಿಯನ್ನಾಗಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಅವರ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ. ವಿಚಾರಣೆಯ ವೇಳೆ ರಾಹುಲ್ ಪರ ವಾದ ಮಂಡಿಸಿದ ವಕೀಲರು, ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಒಂದು ಟ್ವೀಟ್ಗೆ ರಾಹುಲ್ ಗಾಂಧಿ ಅವರನ್ನು ತಳುಕು ಹಾಕಲು ಯಾವುದೇ ದಾಖಲೆ ಇಲ್ಲ. ಅರ್ಜಿದಾರರನ್ನು ಗುರಿಯಾಗಿಸಬಹುದಾದ ಟ್ವೀಟ್ ಇಲ್ಲವೇ, ಪ್ರಕಟಣೆ ಇಲ್ಲ. ಯಾರೋ ಜಾಹೀರಾತಿನ ಪ್ರಕಟಣೆ ನೀಡಿದ್ದರೂ ಅದು ಸರ್ಕಾರದ ಕುರಿತದ್ದಾಗಿದೆಯೇ ಹೊರತು ಬಿಜೆಪಿಯನ್ನು ಗುರಿಯಾಗಿಸಿಲ್ಲ. ಪ್ರಕರಣದಲ್ಲಿ ಸಮನ್ಸ್ ಜಾರಿ ಮಾಡುವಾಗ ಮ್ಯಾಜಿಸ್ಟ್ರೇಟ್ ವಿವೇಚನೆ ಬಳಸಿಲ್ಲ. ಜಾಹೀರಾತು ಪ್ರಕಟಿಸಲು ರಾಹುಲ್ ಗಾಂಧಿ ಅನುಮತಿಸಿರುವುದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ಇಲ್ಲ. ಒಮ್ಮೆ ಸರ್ಕಾರ…
ಬೆಳಗಾವಿ : ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಸುಲಭವಾಗಿ ಬಿಡುವುದಿಲ್ಲ ಬಿವೈ ವಿಜಯೇಂದ್ರ ಡಿಕೆ ಶಿವಕುಮಾರ್ ರನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದ. ಬಿಜೆಪಿ ಅಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಮಾತುಕತೆ ನಡೆಸಿದ್ದಾರೆ. ಅಮಿತ್ ಶಾ ಮುಂದೆ ಕೂಡ ಚರ್ಚೆ ಆಗಿತ್ತು. ಸಿಎಂ ಡಿಸಿಎಂ ಎಲ್ಲವು ವ್ಯಾಪಾರ ಆಗಿತ್ತು ಆದರೆ ಅಮಿತ್ ಶಾ ಒಪ್ಪಿಲ್ಲ ಎಂದು ಶಾಸಕ ಯತ್ನಾಳ್ ಸ್ಪೋಟಕ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರು ಇವರ ಜೊತೆಗೆ ಡಿಕೆ ಶಿವಕುಮಾರ್ ಜೊತೆ ಸರ್ಕಾರ ಮಾಡುವುದು ಬೇಡ ಇದು ನಮ್ಮ ಬಿಜೆಪಿ ಸಂಸದರಿಂದ ಮಾಹಿತಿ ಬಂದಿರುವುದು. ಅಮಿತ್ ಶಾ ಅವರ ಮುಂದೆ ಈ ಕುರಿತು ಚರ್ಚೆಯಾಗಿದ್ದು ಅವರು ಒಪ್ಪಿಲ್ಲ. ದೆಹಲಿಯಲ್ಲಿ 28 ಕಿಲೋಮೀಟರ್ ದೂರದಲ್ಲಿ ನೋಯ್ಡಾ ರಸ್ತೆಯಲ್ಲಿ ಫೈವ್ ಸ್ಟಾರ್ ಹೋಟೆಲ್ನಲ್ಲಿ ಸಿಎಂ ಹಾಗೂ ಡಿಸಿಎಂ ಆಗುವ ವಿಚಾರವಾಗಿ ಚರ್ಚೆ ಮಾಡಿದರು. ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೆಂದ್ರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇದ್ರು ಎಂದು ಪರೋಕ್ಷವಾಗಿ…
ಬೆಳಗಾವಿ : ರಾಜ್ಯದಲ್ಲಿ ಕುರ್ಚಿ ಕದನದ ನಡುವೆ ಡಿನ್ನರ್ ಪಾಲಿಟಿಕ್ಸ್ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದ್ದು, ಇದರ ಮಧ್ಯ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ. ಇನ್ನು ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಸಿಎಂ ಮಾಡ್ತೀನಿ ಅಂದ್ರೆ ಬಿಜೆಪಿಗೆ ವಾಪಸ್ ಹೋಗ್ತೀನಿ ವಾಪಸ್ ಬಿಜೆಪಿಗೆ ಬನ್ನಿ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಕರೆದಿದ್ದಾರೆ. ಅಮಿತ್ ಶಾ ಬಳಿ ನಿಯೋಗ ಹೋಗುವ ಬಗ್ಗೆ ಹೇಳಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.














