Author: kannadanewsnow05

ಚಿಕ್ಕಬಳ್ಳಾಪುರ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಕಾವೇರಿದ್ದು, ಇನ್ನು ಹಲವು ಜಿಲ್ಲೆಗಳಲ್ಲಿ ನೀರು ಪ್ರತಿಕ್ರಿಯೆ ಬಂದಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ. ಇಂದು ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೆ ಶಾಲೆ ಮತ್ತು ಕಾಲೇಜಿಗೆ ತೆರಳಿ. ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಜಿಲ್ಲೆಯಲ್ಲಿ ಶಾಲೆ ಮತ್ತು ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಮಾಹಿತಿ ನೀಡಿದರು

Read More

ಬೆಂಗಳೂರು : ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ ಈ ಒಂದು ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಮನೆಯಲ್ಲಿ ಶಿಲ್ಪಾ(35) ಅನುಮಾನಾಸ್ಸಾದವಾಗಿ ಮೃತಪಟ್ಟಿದ್ದಾರೆ.ಪತಿಯ ಮನೆಯವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ಎಂ ರೇವಣ್ಣ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜು ಅವರನ್ನು ಇದೀಗ ಪಕ್ಷದಿಂದ ಅಮಾನತು ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಹಣಕಾಸು ಸೇವೆಗಳ ಕ್ಷೇತ್ರದ ಮುಖ್ಯಸ್ಥರು ಆಗಿರುವಂತ ಟಿ.ಸುರೇಶ್ ಪಕ್ಷದಿಂದ ಅಮಾನತುಗೊಳಿಸಿ ಅದೇಶಿಸಿದ್ದಾರೆ. ಅಲ್ಲದೆ ಹೆಚ್ ಎಂ ರೇವಣ್ಣ ಅವರ ವಿರುದ್ಧ ಆರೋಪ ಮಾಡಿರುವುದರ ಕುರಿತು ಸ್ಪಷ್ಟ ವಿವರ ನೀಡುವವರಿಗೇ ಅಮಾನತು ಮಾಡಲಾಗಿದ್ದು, ಈ ಕುರಿತು ನಂದಿನಿ ನಾಗರಾಜ್ ಅವರಿಗೆ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ನೋಟಿಸ್ ನಲ್ಲಿ ಉಲ್ಲೆಖಿಸಿದ್ದಾರೆ. ಕೈ ಕಾರ್ಯಕರ್ತೆಯ ಆರೋಪವೇನು? ಗ್ಯಾರಂಟಿ ಅನುಷ್ಠಾನ ಯೋಜನೆಗಳ ಅಧ್ಯಕ್ಷರಾದಂತಹ ರವಿಚಂದ್ರನ್ ಅವರು ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರ್ಚ್ 17 ರಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ನಂದಿನಿ ನಾಗರಾಜ್ ಕೆಕೆ ಗೆಸ್ಟ್ ಹೌಸ್ ನಲ್ಲಿ ಇರುವಾಗ ಈ ಘಟನೆ ಆಗಿದೆ. ಇನ್ನು ಈ ಸಂಬಂಧ…

Read More

ಮೈಸೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಚಿಕ್ಕಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು. ಇನ್ನು ಮೈಸೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಗಳನ್ನು ತಡೆದು ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲಕಾಲ ಮಾತಿನ ಚಿಕ್ಕಮಕಿ ನಡೆಯಿತು ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋದ ಘಟನೆ ನಡೆಯಿತು. ಇನ್ನು ಚಿಕ್ಕಮಗಳೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದರು. ಕನ್ನಡಿಗರ ಮೇಲೆ ಹಲ್ಲೆಯಾದರೂ ಕೂಡ ಈ ಸರ್ಕಾರ ಮೌನವಾಗಿದೆ. ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕು ಕೆಲಸ ಮಾಡುತ್ತಿದ್ದಾರೆ ಇದಕ್ಕೆ ಮುಂದೆ ಉತ್ತರ…

Read More

ಬೆಳಗಾವಿ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ MES ಪುಂಡರು ಅಲ್ಲೇ ನಡೆಸಿದ್ದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಈಗಾಗಲೇ ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಆದರೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ಸಿಕ್ಕಿದ್ದು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿ ಗೆಯಾವುದೇ ರೀತಿಯಾಗಿ ಬಂದ್ ಬಿಸಿ ತಟ್ಟಿಲ್ಲ. ಬೆಳಗಾವಿ ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಂದಿನಂತೆ ವಾಹನಗಳು ಸಂಚಾರ ಆರಂಭಿಸಿದ್ದು ಅಂಗಡಿ ಮುಗ್ಗಟ್ಟುಗಳು ಸಹ ಓಪನ್ ಆಗಿವೆ. ಇನ್ನು ಚಿಕ್ಕಮಂಗಳೂರು ಮತ್ತು ಕೊಪ್ಪಳದಲ್ಲಿ ಕನ್ನಡ ಸೇನೆ ಸೇರಿದಂತಹ ವಿವಿಧ ಸಂಘಟನೆಗಳು ಬಸ್ ನಿಲ್ದಾಣ ಬಳಿ ಅಂಗಡಿ ಮುಗ್ಗಟ್ಟುಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುತ್ತಿದ್ದಾರೆ. ಮೌನವಾಗಿ ಪ್ರತಿಭಟನೆ ಮಾಡುವುದಕ್ಕೆ ಅವಕಾಶವಿದ್ದು ಆದರೆ ಪ್ರತಿಭಟನಾಕಾರರು ಒತ್ತಾಯಪೂರ್ವಕವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ…

Read More

ಮಂಡ್ಯ : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರತಿಭಟನೆ ಕಾವು ಹೆಚ್ಚಾಗಿದೆ. ಇನ್ನು ಮಂಡ್ಯ ಜಿಲ್ಲೆಯ ಸಂಜಯ್ ವೃತ್ತದಲ್ಲಿ ಕನ್ನಡ ಸೇನೆ, ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ತಲೆಯ ಮೇಲೆ ತೆನೆ ಹೊತ್ತುಕೊಂಡು ವಿನೂತನ ರೀತಿಯಾಗಿ ಪ್ರತಿಭಟನೆ ಮಾಡಿದರು. ಅಲ್ಲದೆ ಮೇಕೆದಾಟು ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

Read More

ತುಮಕೂರು : ತುಮಕೂರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಲಾಗಿದೆ ಎಂದು ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅತ್ಯಾಚಾರಿ ಆರೋಪಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಪುಸಲಾಯಿಸಿ ಅತ್ಯಾಚಾರ ವೆಸಗಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ ಎಂದು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ದೇವರಾಜು (25) ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದೆ.

Read More

ಚಿಕ್ಕಬಳ್ಳಾಪುರ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಚಿಕ್ಕಬಳ್ಳಾಪುರದಲ್ಲಿ ಕನ್ನಡಪರ ಹೋರಾಟಗಾರರು ಶಿವಸೇನೆ ಪ್ರತಿಕೃತಿಯನ್ನು ದಹಿಸಿ ತೀವ್ರವಾದ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿವಸೇನೆ ಪ್ರತಿಕೃತಿಯನ್ನು ದಹಿಸಿ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಚಿಕ್ಕಬಳ್ಳಾಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕನ್ನಡ ಸೇನೆ ಕರವೇ ಶಿವರಾಮೇಗೌಡ ಬಣ ಮುಖಂಡರು ಪ್ರತಿಭಟಿಸಿದರು. ಇದೆ ವೇಳೆ ಕರ್ನಾಟಕ ಬಂದ್ ಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು. ಇನ್ನೊಂದು ಕಡೆ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.ಬೆಳಗಿನ ಜಾವ 6 ಗಂಟೆ ಸುಮಾರಿಗೆ ಮೈಸೂರಿನ ಬಸ್ ನಿಲ್ದಾಣದ ಬಳಿ ತೆರಳಿದ ಕನ್ನಡ ಪರ ಸಂಘಟನೆಗಳು ಬಸ್ ಸಂಚರಿಸುತ್ತಿದ್ದನ್ನು ಗಮನಿಸಿ ಆಕ್ರೋಶ ಹಾಕಿದ್ದಾರೆ. ಕೂಡಲೇ ಬಸ್ಸಿನ…

Read More

ಮೈಸೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಈಗಾಗಲೇ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆ ಸುಮಾರಿಗೆ ಮೈಸೂರಿನ ಬಸ್ ನಿಲ್ದಾಣದ ಬಳಿ ತೆರಳಿದ ಕನ್ನಡ ಪರ ಸಂಘಟನೆಗಳು ಬಸ್ ಸಂಚರಿಸುತ್ತಿದ್ದನ್ನು ಗಮನಿಸಿ ಆಕ್ರೋಶ ಹಾಕಿದ್ದಾರೆ. ಕೂಡಲೇ ಬಸ್ಸಿನ ಚಾಲಕರಿಗೆ ಕನ್ನಡ ಪರ ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಈ ವೇಳೆ ಬಸ್ಸಿನ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಅದೇ ರೀತಿಯಾಗಿ ಕರ್ನಾಟಕ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದೆ. MES ಪ್ರತಿಕೃತಿ ಡಹಿಸಿ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಚಿಕ್ಕಬಳ್ಳಾಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕನ್ನಡ ಸೇನೆ ಕರವೇ ಶಿವರಾಮೇಗೌಡ ಬಣ ಮುಖಂಡರು ಪ್ರತಿಭಟಿಸಿದರು. ಇದೆ ವೇಳೆ…

Read More

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು  ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹೋರಾಟ ಸ್ಥಗಿತವಾಗಿದ್ದು, ಕೆಎಸ್ಆರ್ಟಿಸಿ ಬಿಎಂಟಿಸಿ ಸಂಚಾರ ಇರುತ್ತದೆ ಆದರೂ ಕೂಡ ಅದರಲ್ಲೂ ಇನ್ನು ಗೊಂದಲ ಇದೆ. ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿದ್ದು, ಟೌನ್ ಹಾಲಿನಿಂದ ಬೆಳಿಗ್ಗೆ 6 ಗಂಟೆಯಿಂದ ಬೃಹತ್ ರ‍್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ. ಏನಿರಲ್ಲ? ಬಂದ್ ವೇಳೆಯಲ್ಲಿ ಹೋಟೆಲ್ ಕ್ಲೋಸ್ ಸಿನಿಮಾ ಥಿಯೇಟರ್ ಬಂದ್ ಸರ್ಕಾರಿ ಕಚೇರಿಗಳು ತೆರೆದಿರೋದು ದೌಟ್ ಸಾರಿಗೆ ಬಸ್ ಸಂಚಾರ ಇರಲ್ಲ. ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.…

Read More