Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಒಂದು ರಾತ್ರಿ ಬೆತ್ತಲೆ ಪೂಜೆಗೆ ಕುಳಿತರೆ 30 ಲಕ್ಷ ನೀಡುವುದಾಗಿ ಯುವತಿಗೆ ಪಕ್ಕದ ಮನೆಯ ಕಾಮುಕನೊಬ್ಬ ಆಫರ್ ಕೊಟ್ಟಿದ್ದಾನೆ. ಚೈತ್ರ ಎನ್ನುವ ಯುವತಿಗೆ ಪಕ್ಕದ ಮನೆಯ ಕಾಮುಕ ಕಿರಣ್ ಎಂಬಾತ ಬರೋಬ್ಬರಿ 30 ಲಕ್ಷ ಆಫರ್ ಕೊಟ್ಟಿದ್ದಾನೆ. ಕಿರಣ್ ವಿರುದ್ಧ ಯುವತಿ ಚೈತ್ರ ಗಂಭೀರ ಆರೋಪ ಮಾಡಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ದೊಡ್ಡಮಣ್ಣಗುಡ್ಡೆ ದೊಡ್ಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಚೈತ್ರಳನ್ನು ಬಳಸಿಕೊಂಡು ಮಾಟ ಮಂತ್ರ ಮಾಡಿಸುವಂತಹ ಶಂಕೆ ಕೂಡ ವ್ಯಕ್ತವಾಗಿದೆ. ಕಾರು ಚಾಲಕನಾಗಿ ಕಿರಣ್ ಕೆಲಸ ಮಾಡುತ್ತಿದ್ದು, ಏಪ್ರಿಲ್ 12 ರಂದು ಚೈತ್ರಾಗೆ ಕರೆ ಮಾಡಿ ಈ ರೀತಿಯಾಗಿ ಆಫರ್ ಕೊಟ್ಟಿದ್ದಾನೆ. ಬೆತ್ತಲೆಯಾಗಿ ಒಂದು ರಾತ್ರಿ ಪೂಜೆ ಮಾಡಿದರೆ ನನಗೆ 30 ಲಕ್ಷ ಹಣ ಕೊಡುವುದಾಗಿ ಈತ ಆಫರ್ ಕೊಟ್ಟಿದ್ದಾನೆ. ಬಳಿಕ ಚೈತ್ರ ಕಿರಣ ವಿರುದ್ಧ ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾಳೆ. ವಾಟ್ಸಪ್ ನಲ್ಲಿ ಫೋಟೋ ಕೂಡ ಶೇರ್…
BREAKING : ಬೆಂಗಳೂರಲ್ಲಿ ಮಾಟ, ಮಂತ್ರ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ : ಜ್ಯೋತಿಷಿ ವಿರುದ್ಧ ‘FIR’
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ ನಡೆದಿದ್ದು, ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆಯೊಂದು ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಘಟನೆಯ ಹಿನ್ನೆಲೆ: ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ಆರೋಪಿ ಮೋಹನ್ ಕುಮಾರ್ ಎಂಬಾತ ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಪರಿಚಯವಾಗಿದ್ದನು. ಮಹಿಳೆಯ ಆರ್ಥಿಕ ಅಭಿವೃದ್ಧಿಗಾಗಿ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಈತ, ಆಕೆಯನ್ನು ನಂಬಿಸಿ ವಂಚಿಸಿದ್ದಾನೆ. ಜೂನ್ 30, 2025 ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದನು. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು, ವಾಪಸ್ಸಾಗುವಾಗ ಕಾರಿನಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಆರೋಪಿ, ಪತಿ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ್ದಾನೆ. ವಾಮಾಚಾರದ ಭೀತಿ ಮತ್ತು ಬೆದರಿಕೆ:…
ಚಿತ್ರದುರ್ಗ: ರಾಜ್ಯಾದ್ಯಂತ ಸೂರ್ಯನ ಪ್ರಖರತೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇತ್ತೀಚೆಗಷ್ಟೇ ರಾಯಚೂರಿನಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕರೊಬ್ಬರು ಬಲಿಯಾಗಿದ್ದ ಘಟನೆ ಮಾಸುವ ಮುನ್ನವೇ, ಈಗ ಚಿತ್ರದುರ್ಗ ಜಿಲ್ಲೆಯ ಜಗಳೂರು ಮೂಲದ ವ್ಯಕ್ತಿಯೊಬ್ಬರು ತೀವ್ರ ಶಾಖಕ್ಕೆ ಸಿಲುಕಿ ಆಂಧ್ರಪ್ರದೇಶದಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯ ವಿವರ: ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ನಿವಾಸಿಯಾದ ಐ.ಎಂ. ಫಯಾಜ್ (45) ಮೃತಪಟ್ಟ ದುರ್ದೈವಿ. ಫಯಾಜ್ ಅವರು ಆಂಧ್ರಪ್ರದೇಶದ ಆದೋನಿ ಸಮೀಪವಿರುವ ಪ್ರಸಿದ್ಧ ಗುಡಿಕಲ್ ದರ್ಗಾದ ಉರುಸ್ ಕಾರ್ಯಕ್ರಮಕ್ಕೆ ತೆರಳಿದ್ದರು. ಕುಟುಂಬ ಸದಸ್ಯರೊಂದಿಗೆ ದೈವದರ್ಶನಕ್ಕೆಂದು ತೆರಳಿದ್ದ ಅವರು, ಅಲ್ಲಿನ ವಿಪರೀತ ಸೆಕೆಯನ್ನು ತಾಳಲಾರದೆ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಕುಸಿದು ಬಿದ್ದ ಫಯಾಜ್: ಉರುಸ್ ಪ್ರಯುಕ್ತ ದರ್ಗಾದಲ್ಲಿ ಭಕ್ತರ ಜನಸಾಗರವೇ ನೆರೆದಿತ್ತು. ಈ ವೇಳೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಗಾಳಿಯ ಸಂಚಾರವೂ ಕಡಿಮೆ ಇತ್ತು ಎನ್ನಲಾಗಿದೆ. ಕುಟುಂಬಸ್ಥರ ಜೊತೆ ದರ್ಗಾದ ಆವರಣದಲ್ಲಿದ್ದ ಫಯಾಜ್ ಅವರು ಹಠಾತ್ತನೆ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ,…
ಉತ್ತರಕನ್ನಡ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಜೋಯಿಡ ತಾಲೂಕಿನ ಚಪಾಲಿ ಗವಳಿವಾಡದಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ ಒಬ್ಬಳು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಜೋಯಿಡಾ ತಾಲೂಕಿನ ಚಪಾಲಿ ಗೌಳಿವಾಡದ ಗ್ರಾಮದ ವಿದ್ಯಾರ್ಥಿನಿ ಗಂಗೂ ಗವಳಿ (13) ಸಾವನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಗೆ ಯಾವುದೇ ರೀತಿಯಾದ ಕಾಯಿಲೆಗಳು ಇರಲಿಲ್ಲ ಹೃದಯ ಸಂಬಂಧಿ ಸಮಸ್ಯೆಯಿಂದ ಬಾಲಕಿ ಬಳಲುತ್ತಿರಲಿಲ್ಲ. ಎಲ್ಲ ಮಕ್ಕಳಂತೆ ನಿತ್ಯ ಆಟ ಪಾಠದಲ್ಲಿ ವಿದ್ಯಾರ್ಥಿನಿ ತೊಡಗುತಿದ್ದಳು. ಸಾವಿಗೆ ಮುನ್ನ ದಿನ ಸಂಜೆವರೆಗೂ ಬಾಲಕಿ ಆಟ ಆಡಿದಳು. ಮರುದಿನ ಬೆಳಿಗ್ಗೆ ವಾಂತಿ ಮಾಡಿದ ಕೆಲವೇ ಕ್ಷಣಗಳಲ್ಲಿ ವಿದ್ಯಾರ್ಥಿನೀ ಸಾವನ್ನಪ್ಪಿದ್ದಾಳೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉ.ಕನ್ನಡ / ತುಮಕೂರು : ರಾಜ್ಯದಲ್ಲಿ ಇಂದು ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ಪತ್ನಿಯರ ಅಕ್ರಮ ಸಂಬಂಧಕ್ಕೆ ಬೇಸತ್ತು ಇಬ್ಬರು ಗಂಡಂದಿರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ . ಪತ್ನಿ ಪರಪುರುಷನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು ಅಲ್ಲದೆ, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಇನ್ನೊಂದು ಕಡೆ ಉತ್ತರಕನ್ನಡದ ದಾಂಡೇಲಿಯಲ್ಲಿ ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಲಕೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಜೀವನ್ (10) ಪ್ರಾಣೇಶ್ (5) ಮಕ್ಕಳನ್ನು ಕೊಲೆಗೈದು ಶಿವಣ್ಣ (40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಗಂಡು ಮಕ್ಕಳನ್ನು ಉಸಿರುಗುಟ್ಟಿಸಿ ಸಾಯಿಸಿ ಶಿವಣ್ಣ ನೇಣಿಗೆ ಶರಣಾಗಿದ್ದಾರೆ. ಪಾಲ್ಕೆರೆ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇಗುಲದ ಅರ್ಚಕನಾಗಿದ್ದ ಶಿವಣ್ಣ. ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ ಶಿವಣ್ಣ ಪತ್ನಿ, ಪರಪುರುಷನ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರವು ಬಹಳ ದಿನಗಳಿಂದ ಖಾಲಿ ಇದ್ದ ರಾಜ್ಯ ಮಾಹಿತಿ ಆಯೋಗದ (Karnataka Information Commission) ಅತ್ಯುನ್ನತ ಹುದ್ದೆಯನ್ನು ಭರ್ತಿ ಮಾಡಿದೆ. ರಾಜ್ಯದ ನೂತನ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ. ಸತ್ಯವತಿ ಅವರನ್ನು ನೇಮಕಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶನಿವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ. ದೀರ್ಘಕಾಲದಿಂದ ತೆರವಾಗಿದ್ದ ಈ ಪ್ರಮುಖ ಸ್ಥಾನಕ್ಕೆ ಅರ್ಹ ಅಧಿಕಾರಿಯ ಆಯ್ಕೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಯ್ಕೆ ಸಮಿತಿಯು ಇತ್ತೀಚೆಗೆ ಸಭೆ ನಡೆಸಿ ಚರ್ಚಿಸಿತ್ತು. ಸಮಿತಿಯ ಶಿಫಾರಸಿನ ಮೇರೆಗೆ ರಾಜ್ಯಪಾಲರು ಈಗ ಜಿ. ಸತ್ಯವತಿ ಅವರ ಹೆಸರನ್ನು ಅಂತಿಮಗೊಳಿಸಿ ಮುದ್ರೆ ಒತ್ತಿದ್ದಾರೆ. ಇದರೊಂದಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗುವ ಮೇಲ್ಮನವಿಗಳ ವಿಲೇವಾರಿಗೆ ಹೆಚ್ಚಿನ ವೇಗ ಸಿಗುವ ನಿರೀಕ್ಷೆಯಿದೆ. ಜಿ. ಸತ್ಯವತಿ ಅವರು ಈ ಹಿಂದೆ ಸರ್ಕಾರದ ವಿವಿಧ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ದಕ್ಷ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಐಎಎಸ್ ಅಧಿಕಾರಿಯಾಗಿ ವಿವಿಧ ಇಲಾಖೆಗಳಲ್ಲಿ ಅವರು ತೋರಿದ ಕಾರ್ಯದಕ್ಷತೆ ಮತ್ತು…
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸಂಧ್ಯಾ (16) ಎನ್ನುವ ವಿದ್ಯಾರ್ಥಿನೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೈರೇಗೌಡನಹಳ್ಳಿ ಒಂದು ಘಟನೆ ನಡೆದಿದೆ. ಬೈರೇಗೌಡನಹಳ್ಳಿಯಲ್ಲಿ ಚಿಕ್ಕಬಳ್ಳಾಪುರ ಮೂಲದ ರಾಘವೇಂದ್ರ ಮತ್ತು ಜ್ಯೋತಿ ದಂಪತಿಯ ಪುತ್ರಿ ಸಂಧ್ಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾಭ್ಯಾಸಕ್ಕಾಗಿ ಅಕ್ಕ ಶೈಲಜಾ ಮನೆಗೆ ಪುತ್ರಿಯನ್ನು ರಾಘವೇಂದ್ರ ಕಳುಹಿಸಿದ್ದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಂಧ್ಯಾ 90 ಪರ್ಸೆಂಟ್ ಅಂಕ ಪಡೆದು ಟಾಪರ್ ಆಗಿದ್ದಳು. ಮೆಡಿಕಲ್ ಓದುವ ಆಸೆಯಿಂದ ನಿನ್ನೆ ಸಂಧ್ಯ ಅರ್ಜಿಯನ್ನು ತಂದಿದ್ದಾಳೆ. ಇದೆ ವೇಳೆ ಅಜ್ಜಿಗೆ ಹುಷಾರಿಲ್ಲ ಎಂದು ಕುಟುಂಬದ ಸದಸ್ಯರು ಆಸ್ಪತ್ರೆಗೆ ತೆರಳಿದ್ದಾರೆ. ಮನೆಯಲ್ಲಿ ಸಂಧ್ಯಾಳನ್ನು ಒಬ್ಬಳನ್ನೇ ಬಿಟ್ಟು ಕುಟುಂಬಸ್ಥರು ಆಸ್ಪತ್ರೆಗೆ ತೆರಳಿದ್ದಾರೆ. ಬಳಿಕ ಮನೆಯವರು ಮನೆಗೆ ಬಂದು ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಡೆತ್ ನೋಟ್ ನಲ್ಲಿ ಸಾರಿ ಅಪ್ಪ ಎಂದು ಬಾಲಕಿ…
ಚಿಕ್ಕಮಗಳೂರು: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇಂದು ನಗರದ ಐಡಿಎಸ್‌ಜಿ (IDSG) ಸರ್ಕಾರಿ ಕಾಲೇಜಿನಲ್ಲಿ ಮುಕ್ತಾಯಗೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ತಮ್ಮ ಗೆಲುವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ದೀರ್ಘಕಾಲದ ಕಾನೂನು ಹೋರಾಟಕ್ಕೆ ಸದ್ಯ ತೆರೆ ಬಿದ್ದಂತಾಗಿದೆ. ತೀವ್ರಗೊಂಡ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ ಚುನಾವಣಾ ಫಲಿತಾಂಶ ಪ್ರಕಟವಾದಾಗಿನಿಂದಲೂ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ವಾತಾವರಣ ನಿರ್ಮಾಣವಾಗಿತ್ತು. ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಕಾನೂನು ಹೋರಾಟ ಆರಂಭಿಸಿದ್ದರು. ಇಂದು ಮರು ಎಣಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಕಾಲೇಜು ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಎರಡೂ ಪಕ್ಷಗಳ ಕಾರ್ಯಕರ್ತರು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದು, ರಾಜಕೀಯ ಸಂಚಲನ ಮೂಡಿಸಿತ್ತು. ಮರು ಎಣಿಕೆಯ ಅಂಕಿ-ಅಂಶಗಳ ವಿವರ ಶೃಂಗೇರಿ ಕ್ಷೇತ್ರದಲ್ಲಿ ಒಟ್ಟು 1,822 ಅಂಚೆ ಮತಗಳು…
ನವದೆಹಲಿ: ಜಾಗತಿಕ ಮಟ್ಟದಲ್ಲಿ ಏವಿಯೇಷನ್ ಟರ್ಬೈನ್ ಇಂಧನ (ATF) ದರಗಳಲ್ಲಿ ಕಂಡುಬಂದಿರುವ ಭಾರಿ ಏರಿಕೆ ಹಾಗೂ ವಾಯುಪ್ರದೇಶದ ನಿರ್ಬಂಧಗಳಿಂದಾಗಿ ಏರ್ ಇಂಡಿಯಾ ಸಂಸ್ಥೆಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಮುಂಬರುವ ಜೂನ್ ಮತ್ತು ಜುಲೈ ತಿಂಗಳಲ್ಲಿ ತನ್ನ ಅಂತರರಾಷ್ಟ್ರೀಯ ವಿಮಾನ ಸೇವೆಗಳನ್ನು ಕಡಿತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ವರದಿಯಾಗಿದೆ. India Today ಗೆ ಲಭ್ಯವಾದ ಆಂತರಿಕ ಸಂವಹನ ಮಾಹಿತಿಯ ಪ್ರಕಾರ, ವಿಮಾನಯಾನ ಸಂಸ್ಥೆಯ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕ್ಯಾಂಪ್‌ಬೆಲ್ ವಿಲ್ಸನ್ ಸಿಬ್ಬಂದಿಗೆ ಕಳುಹಿಸಿದ ಸಂದೇಶದಲ್ಲಿ “ಹೆಚ್ಚುತ್ತಿರುವ ಕಾರ್ಯಾಚರಣಾ ಸವಾಲುಗಳ ನಡುವೆ ಜೂನ್ ಹಾಗೂ ಜುಲೈನಲ್ಲಿ ವೇಳಾಪಟ್ಟಿಗಳನ್ನು ಕಡಿಮೆ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ” ಎಂದು ತಿಳಿಸಿದ್ದಾರೆ. ಜೆಟ್ ಇಂಧನದ ಭಾರೀ ಬೆಲೆ ಏರಿಕೆ, ವಾಯುಪ್ರದೇಶ ಮುಚ್ಚುವಿಕೆ ಹಾಗೂ ದೀರ್ಘ ಹಾರಾಟ ಮಾರ್ಗಗಳ ಪರಿಣಾಮವಾಗಿ ಎಪ್ರಿಲ್ ಮತ್ತು ಮೇ ತಿಂಗಳಲ್ಲೇ ಕೆಲವು ವಿಮಾನ ಸೇವೆಗಳು ಕಡಿತಗೊಂಡಿವೆ ಎಂದು ಅವರು ಹೇಳಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ವ್ಯಾಪಕ ಪರಿಣಾಮ, ಬದಲಾದ ಕರೆನ್ಸಿ ವಿನಿಮಯ ದರಗಳು ಹಾಗೂ…
ಬೆಂಗಳೂರು : ಕಳೆದ 3 ವರ್ಷಗಳಿಂದ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನಲೆಯಲ್ಲಿ ಲಕ್ಷಾಂತರ ಅರ್ಹ ಬಡವರು ಬಿಪಿಎಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಬಡವರು ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದರೂ, ರಾಜ್ಯ ಸರಕಾರ ಮಾತ್ರ ಕಳೆದ 3 ವರ್ಷಗಳಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನೇ ಕರೆದಿಲ್ಲ. ಇದರಿಂದ ಅರ್ಹ ಬಡವರು ಬಿಪಿಎಲ್ ಸೌಲಭ್ಯ ವಂಚಿತರಾಗಿದ್ದಾರೆ. ರಾಜ್ಯ ಸರಕಾರದ ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಸ್ತುತ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನೆಲೆಯವರಿಗೆ, ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ, ಬುಡಕಟ್ಟು ಜನಾಂಗದವರಿಗೆ ಆದ್ಯತಾ ಪಡಿತರ ಚೀಟಿ ನೀಡುತ್ತಿದೆ. ಇದರ ಹೊರತಾಗಿ ಲಕ್ಷಾಂತರ ಮಂದಿ ಬಿಪಿಎಲ್ ಪಡಿತರ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಲ್ಲಿ ಅಂತ್ಯೋದಯ ಅನ್ನ ಪಡಿತರ ಚೀಟಿ (ಎಎವೈ)ಗಳು 10,47,080 ಇದ್ದು, 42,76,526 ಫಲಾನುಭವಿಗಳಿದ್ದಾರೆ. ಆದ್ಯತಾ ಪಡಿತರ ಚೀಟಿಗಳು(ಬಿಪಿಎಲ್) 1,14,38,886 ಇದ್ದು, 4,00,46,744 ಫಲಾನುಭವಿಗಳಿದ್ದಾರೆ. ಆದ್ಯತೇತರ ಪಡಿತರ ಚೀಟಿಗಳು 29,71,601 ಇದ್ದು, 1,02,18,470 ಫಲಾನುಭವಿಗಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ 1,54,57,567 ಪಡಿತರ…














