Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಟ ಧ್ರುವ ಸರ್ಜಾ ಅವರು ನಟಿಸಿರುವ ಮಾರ್ಟಿನ್ ಸಿನಿಮಾದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಕೆಟ್ಟದಾಗಿ ರಿವ್ಯೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅಭಿಮಾನಿಗಳು ದೂರ ನೀಡಿದ್ದರು. ಹಾಗಾಗಿ ಸುಧಾಕರನನ್ನು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಳಿಕ ಇನ್ನೊಮ್ಮೆ ಈ ರೀತಿ ಪುನರಾವರ್ತಿತ ಆಗ್ಬಾರ್ದು ಎಂದು ವಾರ್ನಿಂಗ್ ಕೊಟ್ಟು ಕಳುಸಿದ್ದಾರೆ ಎಂದು ತಿಳಿದುಬಂದಿದೆ. ನಟ ಧ್ರುವ ಸರ್ಜಾ ಅವರ ಮಾರ್ಟಿನ್ ಸಿನಿಮಾದ ಕುರಿತಂತೆ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಸಾಮಾಜಿಕ ಜಾಲತಾಣದಲ್ಲಿ ನಾನು ಜೀವನದಲ್ಲಿ ನೋಡಿದ ಅತ್ಯಂತ ಕೆಟ್ಟ ಸಿನಿಮಾ. ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಎಲ್ಲರೂ ಕೆಜಿಎಫ್ ಸಿನಿಮಾ ಕಾಪಿ ಮಾಡುತ್ತಿದ್ದಾರೆ. ಕೆಜಿಎಫ್ ಸಿನಿಮಾ ಮಾದರಿಯಲ್ಲಿಯೇ ಕಳಪೆಯಾಗಿ ಉಪೇಂದ್ರ ಅವರ ‘ಕಬ್ಜ’ ಸಿನಿಮಾ ಮಾಡಲಾಗಿದೆ. ಕಬ್ಜ ಸಿನಿಮಾದ ಮುಂದುವರಿದ ಕಳಪೆ ಭಾಗ ಎನ್ನುವಂ ರೀತಿಯಲ್ಲಿ ಮಾರ್ಟಿನ್ ಸಿನಿಮಾ ಮಾಡಲಾಗಿದೆ ಎಂದು ಹೇಳಿಕೆ ನೀಡಿರುವ ವಿಡಿಯೋ ಅಪ್ಲೋಡ್ ಮಾಡಿದ್ದರು. ಈ ಕುರಿತು ನಟ ಧ್ರುವ ಸರ್ಜಾ…
BREAKING : ನನ್ನ ಕೇಸ್ ಬಗ್ಗೆ ಬಹಿರಂಗಪಡಿಸಿದರೆ ‘ರಾಜಕೀಯ ನಿವೃತ್ತಿ’ ಘೋಷಿಸುತ್ತೇನೆ : ಸರ್ಕಾರಕ್ಕೆ ಸಿಟಿ ರವಿ ಸವಾಲು
ವಿಜಯಪುರ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಪಡೆದ ವಿಚಾರವಾಗಿ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು, ಇದರಲ್ಲಿ ನನ್ನ ಕೇಸ್ ಕೂಡ ಪಡೆದಿದ್ದಾರೆ ಅಂತ ಹೇಳಿದ್ದಾರೆ. ಹಾಗಾದರೆ ನನ್ನ ಮೇಲೆ ಯಾವ ಕೇಸ್ ಇತ್ತು? ಯಾರು ಅರ್ಜಿ ಹಾಕಿದ್ದರು ಎಂಬುದನ್ನು ಬಹಿರಂಗಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸರ್ಕಾರಕ್ಕೆ ಸವಾಲು ಹಾಕಿದರು. ವಿಜಯಪುರದಲ್ಲಿ ಎಂಎಲ್ಸಿ ಸಿಟಿ ರವಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ನವರು ಸುಳ್ಳು ಬುರುಕರು ಸುಳ್ಳು ಹೇಳಿದ್ದಾರೆ.ನನ್ನ ಮೇಲೆ ಯಾವುದೇ ಒಂದು ಮೊಕದ್ದಮೆ ಇರಲಿಲ್ಲ. ನಾನು ಯಾವುದೇ ಅರ್ಜಿ ಈ ಸರ್ಕಾರಕ್ಕೆ ಕೊಟ್ಟಿಲ್ಲ. ನನ್ನ ಯಾವ ಪ್ರಕರಣ ಇಂಪಾರ್ಟೆಂಟ್ ಇಲ್ಲ. ಜನರ ದಿಕ್ಕು ತಪ್ಪಿಸಲು ನನ್ನ ಕೇಸ್ ಬಗ್ಗೆ ಹೇಳುತ್ತಿದ್ದಾರೆ ಎಂದು ತಿಳಿಸಿದರು. ಸಿಟಿ ರವಿ ಕೇಸ್ ಸಹ ಹಿಂಪಡೆದಿದ್ದೇವೆ ಅಂತ ಹೇಳಿದ್ದಾರೆ. ನಮಗೆ ಇವರ ಕೃಪೆ ಬೇಡ.ನನ್ನ ವಿರುದ್ಧದ ಕೆ ಎಸ್ ಹಿಂಪಡೆದ ಆದೇಶದ ಪ್ರತಿ ಕೊಡಿ ನನ್ನ ಮೇಲೆ…
ವಿಜಯಪುರ : ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ಬಸನಗೌಡ ಪಾಟೀಲ ವಾಕ್ಸಮರ ತಾರಕಕ್ಕೆ ಏರಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅಪ್ಪ ಯಾರೆಂಬುದೇ ಅವರಿಗೆ ಗೊತ್ತಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ವಿಜಯಪುರದಲ್ಲಿ ನಡೆದ ಹಿಂದೂ ಆಸ್ತಿಗಳ ಸಂರಕ್ಷಣೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ಅವರ ಅಪ್ಪ ಯಾರೆಂಬುದೇ ಅವರಿಗೆ ಗೊತ್ತಿಲ್ಲ. ನಿನ್ನ ಮತ್ತಜ್ಜನ ಹೆಸರು ಮಲ್ಲಪ್ಪ ಅಥವಾ ಕಲ್ಲಪ್ಪ ಇತ್ತೋ ಗೊತ್ತಿಲ್ಲ. ಹಿಂದೂಸ್ಥಾನದಲ್ಲಿ ಇರುವ ಎಲ್ಲ ಮುಸ್ಲಿಮರು ಔರಂಗಜೇಬ, ಟಿಪ್ಪು ಸುಲ್ತಾನ ಹಾಗೂ ಆದಿಲ್ ಶಹಾನ ಖಡ್ಗಕ್ಕೆ ಹೆದರಿಕೊಂಡು ಮತಾಂತರ ಆದವರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ವಕ್ಫ್ ಬೋರ್ಡ್ ಆಸ್ತಿ ಯತ್ನಾಳ್ ಅವರಪ್ಪನ ಆಸ್ತಿಯಲ್ಲ ಎಂದು ಹೇಳಿದ್ದಾರೆ. ನೀನು ನಮ್ಮಪ್ಪನ ಆಸ್ತಿಯಲ್ಲ. ನಿನ್ನ ಮತ್ತಜ್ಜನ ಹೆಸರು ಮಲ್ಲಪ್ಪ ಅಥವಾ ಕಲ್ಲಪ್ಪ ಇತ್ತೋ ಗೊತ್ತಿಲ್ಲ.…
ರಾಯಚೂರು : ದಸರಾ ಹಬ್ಬದ ಅಂಗವಾಗಿ ದುರ್ಗಾದೇವಿ ಜಾತ್ರೆಯಲ್ಲಿ ಮಾಡಿದ ಮಾಂಸದ ಊಟವನ್ನು ಸೇವಿಸಿ ಒಂದೇ ಕುಟುಂಬದ ಮೂವರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ನಡೆದಿದೆ. ದಸರಾ ಹಬ್ಬದ ಅಂಗವಾಗಿ ತಾಂಡಾದಲ್ಲಿರುವ ದುರ್ಗಾದೇವಿ ಜಾತ್ರೆಯ ಅಂಗವಾಗಿ ಮನೆಯಲ್ಲಿ ಮಾಂಸದೂಟ ಮಾಡಿದ್ದರು. ಜಾತ್ರೆಯ ಮರುದಿನ ಸಂಜೆ ಮಾಂಸದ ಅಡುಗೆ ಮಾಡಿದ್ದು, ಊಟ ಸೇವಿಸಿದ್ದರು.ನಂತರ ಇಂದು ಬೆಳಿಗ್ಗೆ ಮೇಲೆ ಏಳೋಕೆ ಆಗದೆ ಅಸ್ವಸ್ಥರಾಗಿದ್ದಾರೆ. ಕೂಡಲೇ ಶಿವು ಸರ್ಕಾರ (40) ಸುಮಿತ್ರಾ (37) ಅಜಯ (14) ಎಂಬುವವರನ್ನು ಗ್ರಾಮಸ್ಥರ ಸಹಕಾರದಿಂದ ಲಿಂಗಸೂಗೂರಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಘಟನೆ ಕುರಿತಂತೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದರು. ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಒಂದು ಅವಘಡ ಸಂಭವಿಸಿದೆ.ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ ಮಾಡಿದೆ. ಘಟನೆ ಕುರಿತಂತೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಬಳಿಕ ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತೆ ಸ್ಪಷ್ಟನೆ ನೀಡಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಎಲ್ಲಾ ಉಪಚುನಾವಣೆಗೂ ಕಾಂಗ್ರೆಸ್ ತಯಾರಾಗಿದೆ ಈಗಾಗಲೇ ಉಪಚುನಾವಣೆಯ ಕೆಲಸವನ್ನು ಆರಂಭಿಸಿದ್ದೇವೆ. ರಾಜ್ಯದ ಮೂರು ಉಪಚುನಾವಣೆಯನ್ನು ನಾವು ಗೆಲ್ಲುತ್ತೇವೆ. ಅಲ್ಲದೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು ತಿಳಿಸಿದರು.
ಮಂಡ್ಯ: ಇತ್ತೀಚಿಗೆ ರಾಜ್ಯದಲ್ಲಿ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿವೆ. ಮೊದಲು ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅವ್ಯವಹಾರ ಹಗರಣ ಬೆಳಕಿಗೆ ಬಂತು. ಬಳಿಕ ಮುಡಾ ಹಗರಣ ಬೆಳಕಿಗೆ ಬಂತು. ಇದೀಗ ಮಂಡ್ಯ ಜಿಲ್ಲೆಯಲ್ಲಿ ಸಹಕಾರ ಸಂಘದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು ಈ ಕುರಿತಂತೆ ಮೇಲುಕೋಟೆಯ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗಂಭೀರವಾದಂತಹ ಆರೋಪ ಮಾಡಿದ್ದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ. ಎಂದು ಅವರು ಗಂಭೀರವಾಗಿ ಆರೋಪಿಸಿದರು. ಈ ಕುರಿತಂತೆ ದರ್ಶನ್ ಪುಟ್ಟಣ್ಣಯ್ಯ ಅವರು, ಸಹಕಾರ ಸಂಘದಲ್ಲಿ ಕೋಟ್ಯಾಂತರ ರೂಪಾಯಿ ಹಣ ದುರ್ಬಳಕೆ ಆಗಿರುವುದು ನಿಜ ಆದರೆ ಈ ಕುರಿತು ಯಾವುದೇ ದೂರು ಬಂದಿಲ್ಲ.ಮುಂದಿನ ದಿನಗಳಲ್ಲಿ ಈ ಬಗ್ಗೆ ದೂರು ನೀಡುತ್ತೇವೆ. ಸದ್ಯ ರೈತರ ಹಣ ಮೊದಲು ರಿಕವರಿ ಆಗಬೇಕು. ಏಕೆಂದರೆ ರೈತರು ಇಲ್ಲಿ ಕೇವಲ ತಮ್ಮ ಹಣವನ್ನು ಅಷ್ಟೇ ಅಲ್ಲದೆ ಆಭರಣಗಳನ್ನು ಕೂಡ ಇಟ್ಟಿದ್ದಾರೆ ಹಾಗಾಗಿ…
ಮಂಗಳೂರು : ತೀವ್ರ ಕುತೂಹಲ ಮೂಡಿಸಿದ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ದಿನಾಂಕ ಇಂದು ಘೋಷಣೆಯಾಗಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದ್ದು ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ಇನ್ನು ಈ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒಟ್ಟಾರೆಯಾಗಿ NDA ಅಭ್ಯರ್ಥಿ ಚನ್ನಪಟ್ಟಣ ಉಪ ಚುನಾವಣೆಯ ಅಖಾಡದಲ್ಲಿ ಇರುತ್ತಾರೆ ಎಂದು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಕುರಿತಂತೆ ಹಲವು ಬಾರಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆಯಾಗಿದೆ. ನಾವು ತಕ್ಷಣ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಒಟ್ಟಾರೆಯಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಅಖಾಡದಲ್ಲಿ ಇರುತ್ತಾರೆ ಎಂದು ತಿಳಿಸಿದರು. ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿಯ ಶಿಗ್ಗಾವಿ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ ಚನ್ನಪಟ್ಟಣದಿಂದ ಹೆಚ್‍ಡಿ ಕುಮಾರಸ್ವಾಮಿ, ಸಂಡೂರು ಕ್ಷೇತ್ರದಿಂದ ತುಕಾರಾಂ ಹಾಗೂ ಶಿಗ್ಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿದ್ದರು. ಈ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ 57ನೇ ಸಿ ಸಿ ಹೆಚ್ ನ್ಯಾಯಾಲಯವು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪರ ವಕೀಲರ ಮೂಲಕ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ನಿನ್ನೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಹಾಗೂ ಪೊಲೀಸರ ಎಸ್ ಪಿ ಪಿ ಪರ ವಕೀಲರ ವಾದ ಮತ್ತು ಪ್ರತಿ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯವು ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ಹಿನ್ನೆಲೆಯಲ್ಲಿ ನಿನ್ನೇನೆ ನಡೆದ ದರ್ಶನ್ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗಿತ್ತು. ಅದರಂತೆ ಇಂದು ನಟ ದರ್ಶನ್ ಪರ ವಕೀಲ ಸುನಿಲ್ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ…
ಬೆಳಗಾವಿ : ಪ್ರತಿ ವರ್ಷ ನವೆಂಬರ್ 1 ಬಂತಂದರೆ ಸಾಕು ಬೆಳಗಾವಿ ಗಡಿ ಭಾಗದಲ್ಲಿ ಎಂಇಎಸ್ ಪುಂಡರ ಹಾವಳಿ ಹೆಚ್ಚಾಗುತ್ತದೆ. ಈ ಬಾರಿ ಕೂಡ ನವೆಂಬರ್ 1 ರಂದು ಕರಾಳ ದಿನಾಚರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಎಂಇಎಸ್ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಮಾಡಿತ್ತು. ಆದರೆ ಕರಾಳ ದಿನಾಚರಣೆಗೆ ಅವಕಾಶ ಇಲ್ಲ ಎಂದು ಖಡಕ್ಕಾಗಿ ಡಿಸಿ ಮಹಮ್ಮದ್ ರೋಷನ್ ಎಚ್ಚರಿಕೆ ನೀಡಿದ್ದಾರೆ. ಹೌದು ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್ ರೋಷನ್ ಅವರು ನವೆಂಬರ್ 1 ರಂದು ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಬೆಳಗಾವಿ ಡಿಸಿ ಕಚೇರಿಯಲ್ಲಿ ಎಂಇಎಸ್ ಮುಖಂಡರಿಗೆ ಬುದ್ಧಿವಾದ ಹೇಳಿದ್ದಾರೆ. ನವೆಂಬರ್ 1ರಂದು ಬಿಟ್ಟು ಪರ್ಯಾಯ ದಿನ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲು ಅವಕಾಶ ಕೊಡ್ತೇನಿ.ಆದ್ರೆ ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ. ಗಣೇಶೋತ್ಸವ,…














