Author: kannadanewsnow05

ಬೆಂಗಳೂರು : ತಮ್ಮ ಸ್ಕೂಟರ್‌ಗೆ ಬಸ್ ಡಿಕ್ಕಿಯಾಗಿದೆ ಎಂದು ಆರೋಪಿಸಿ ಬಿಎಂಟಿಸಿ ಬಸ್ ಚಾಲಕನ ಮೇಲೆ ಮಹಿಳೆ ಹಾಗೂ ಆಕೆಯ ಸೋದರ ಹಲ್ಲೆ ನಡೆಸಿರುವ ಘಟನೆ ಮಾಗಡಿ ರಸ್ತೆಯ ಸುಮನಹಳ್ಳಿ ಮೇಲೇತುವೆ ಬಳಿ ಶನಿವಾರ ನಡೆದಿದೆ. ಕಾಮಾಕ್ಷಿಪಾಳ್ಯದ ಸವಿತಾ ಹಾಗೂ ಆಕೆಯ ಸೋದರ ಚಂದ್ರಶೇಖರ್‌ಮೇಲೆ ಆರೋಪ ಬಂದಿದ್ದು, ಈ ಘಟನೆ ಸಂಬಂಧ ಬಸ್ ಚಾಲಕ ಅಮರೇಶ್ ನೀಡಿದ ದೂರಿನ ಮೇರೆಗೆ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ತನ್ನ ಇಬ್ಬರು ಮಕ್ಕಳ ಜತೆ ಸುಮನಹಳ್ಳಿ ಮೇಲೇತುವೆ ಕಡೆಯಿಂದ ಸವಿತಾ ಮನೆಗೆ ಮರಳುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಮಹಿಳೆಯಿಂದ ಚಾಲಕನ ಮೇಲೆ ಹಲ್ಲೆ ಆರೋಪ ಕೇಳಿಬಂದಿದ್ದು, ಬಿಎಂಟಿಸಿ ಬಸ್ ಡಿಪೋ 27ರ ಎಲೆಕ್ಟ್ರಿಕ್ ವಾಹನ ಕೆ 51 ಎಕೆ 4215 ಬಸ್ ಚಾಲಕ ಅಮರೇಶ್ ಮೇಲೆ ಮಹಿಳೆ ಹಲ್ಲೆ ಮಾಡಿದ್ದಾಳೆ. ಜಾಲಹಳ್ಳಿ ಕ್ರಾಸ್ನಿಂದ ಕೆಆರ್ ಮಾರ್ಕೆಟ್ ಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು. ಬಲಭಾಗದಲ್ಲಿ ಬಿಎಂಟಿಸಿ…

Read More

ಬೆಂಗಳೂರು : ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ .ವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು BY ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ. ‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ದುರಂತ ಸಂಭವಿಸಿದ್ದು ಕಟ್ಟಡದ ಕಾಮಗಾರಿ ನಡೆಸುತ್ತಿದ್ದ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ, ಬೆಂಗಳೂರಿನ ಜಿ ಎನ್ ಆರ್ ಕಲ್ಯಾಣ ಮಂಟಪದ ಬಳಿಯ ಕಟ್ಟಡದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಕಲ್ಬುರ್ಗಿ ಮೂಲದ ಶರಣಪ್ಪ (42) ಮೃತಪಟ್ಟಿರುವ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ಇನ್ನು ಈ ಒಂದು ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಕಾರ್ಮಿಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದ್ದು, ಕೂಡಲೇ ಅವರನ್ನು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಟ್ಟಡದ ಮೇಲಿದ್ದ ಈ ಇಬ್ಬರು ಕಾರ್ಮಿಕರು ಬಿದ್ದಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ : ಟೂರಿಸ್ಟ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸಂಪೂರ್ಣವಾಗಿ ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ, ಪೂರ್ತಿಯಾಗಿ ವಾಹನ ಸುಟ್ಟು ಕರಕಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಅದೃಷ್ಟವಶಾತ್ ಟೂರಿಸ್ಟ್ ವಾಹನದಲ್ಲಿ ಸಂಚರಿಸುತ್ತಿದ್ದ 11 ಜನರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ‌.‌ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ‌ ಸಂಪೂರ್ಣ ಸುಟ್ಟು ಹೋಗಿದೆ‌. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ. ಕೂಡಲೇ ಅಗ್ನಿಶಾಮಕ ದಳದವರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಟೂರಿಸ್ಟ್ ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.ಬಳಿಕ ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.

Read More

ಬೆಂಗಳೂರು : ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ತೀವ್ರವಾಗುವ ನಡೆದಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಬಾಂಬನ್ನು ಸಿಡಿಸಿದ್ದು, ವಕ್ಫ್ ಆಸ್ತಿ ಕಬ್ಬಳಿಕೆಯ ಬಗ್ಗೆ ಮೌನವಾಗಿರಲು ಬಿವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು BY ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ.…

Read More

ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ಹೆರಿಗೆ ಆದಮೇಲೆ ತಾಯಿ ಒಬ್ಬಳು ಮಗುವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೊಲದ ಬೀಬಿಜಾನ್ ಎನ್ನುವ ಮಹಿಳೆಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಕಳೆದ ಡಿಸೆಂಬರ್ ಹತ್ತರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿತ್ತು ಹೆರಿಗೆ ಆದ ಬಳಿಕ ತಾಯಿ ಬೀಬಿಜಾನ್ ನವಜಾತ ಹೆಣ್ಣು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಳು, ಸರಿಯಾದ ರೀತಿ ಆರೈಕೆ ಸಿಗದೇ ನವಜಾತ ಹೆಣ್ಣು ಮಗು ಸಾವನ್ನಪ್ಪಿತ್ತು. ಗರ್ಭದಲ್ಲಿ ಮಗು ಅಡ್ಡಲಾಗಿ ಮಲಗಿದ್ದ ಹಿನ್ನೆಲೆಯಲ್ಲಿ ಇದರಿಂದ ಕುಟುಂಬಕ್ಕೆ ಕೇಡಾಗುತ್ತೆ ಎಂದು ತಾಯಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾಳೆ.ಸದ್ಯ ಪರಾರಿ ಆಗಿದ್ದ ತಾಯಿ ಬೀಬಿಜಾನ್ ಎನ್ನುವ ಮಹಿಳೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಸಾಮಾನ್ಯವಾಗಿ ಹುಡುಗರು ಬರ್ತಡೇ, ಮದುವೆ ಇನ್ಯಾವುದೇ ಸಮಾರಂಭಕ್ಕೆ ತಮ್ಮ ಆತ್ಮೀಯ ಗೆಳೆಯರನ್ನು ಮುಂಚಿತವಾಗಿ ಕರಿಸುತ್ತಾರೆ. ಅದೇ ರೀತಿಯಾಗಿ ಬೆಂಗಳೂರಿನಲ್ಲಿ ಬರ್ತಡೆಗೆ ಎಂದು ಸ್ನೇಹಿತ ಒಬ್ಬ ತನ್ನ ಗೆಳೆಯನಿಗೆ ಆಹ್ವಾನ ನೀಡಿದ್ದಾನೆ. ಆದರೆ ಆತ ಬರ್ತಡೇಗೆ ಎಂದು ಬಂದು ಸ್ನೇಹಿತನ ಮದುವೆಗೆ ಎಂದು ತೆಗೆದಿಟ್ಟಿದ ಚಿನ್ನಾಭರಣವನ್ನೇ ಕದ್ದಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಚಿನ್ನಾಭರಣ ಕದ್ದ ಆರೋಪಿಯನ್ನು ಭರತ್ ಎಂದು ಗುರುತಿಸಲಾಗಿದ್ದು, ಭರತ್ , ಸ್ನೇಹಿತ ಮಣಿ ಇಬ್ಬರು ಆತ್ಮೀಯ ಸ್ನೇಹಿತರು .ಏರೋನಾಟಿಕ್ಸ್ ಇಂಜಿನಿಯರ್ ವ್ಯಾಸಂಗ ಮಾಡಿದ್ದ ಭರತ್, ಖಾಸಗಿ ಕಂಪೆ‌ನಿಯಲ್ಲಿ ಕೆಲಸ ಮಾಡಿ ಕೈ ತುಂಬಾ ಸಂಬಳ ಪಡೆಯುತ್ತಿದ್ದ. ಉತ್ತರಹಳ್ಳಿಯ ಮೂಕಾಂಬಿಕ ನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಡಿಸೆಂಬರ್ 4 ರಂದು ಭರತ್ ಬರ್ತಡೇ ಇದ್ದು ಮಣಿ ಮನೆಯಲ್ಲಿ ಯೇ ಸೆಲೆಬ್ರೇಷನ್ ಮಾಡೋದಕ್ಕೆ ಪ್ಲಾನ್ ಮಾಡಿದ್ದಾರೆ. ಭರತ್ ರಾತ್ರಿ ಮಣಿಯ ಮ‌ನೆಯಲ್ಲಿ ವಾಸ್ತವ್ಯ ಹೂಡಿದ್ದ. ಮಣಿಗೆ ಮದುವೆ ನಿಗದಿಯಾಗಿದ್ದು ಇದಕ್ಕಾಗಿ ಮನೆಯವರು…

Read More

ಕೋಲಾರ : ಸಾಲಗಾರರ ಕಾಟಕ್ಕೆ ಮನನೊಂದ ಮಹಿಳೆಯೊಬ್ಬರು ನಿದ್ದೆ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಎಂಬಲ್ಲಿ ನಡೆದಿದೆ. ಸಾಲಗಾರರ ಕಾಟ ತಾಳಲಾಗದೆ ಕೋಮಲದೇವಿ ಎನ್ನುವ ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಪುತ್ರಿಯ ವಿದ್ಯಾಭ್ಯಾಸ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದರು. ಸಾಲ ಕೊಟ್ಟಿರುವವರು ಮನೆಯ ಬಳಿ ಗಲಾಟೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನಿದ್ದೆ ಮಾತ್ರ ಸೇವಿಸಿ ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಕೋಮಲ ದೇವಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿ ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಕೋರರಿಗೆ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದವರಿಗೆ ಕಾಂಗ್ರೆಸ್ ಮತ್ತು ಕೊಡುತ್ತೆ. ಆದರೆ ಮೀಸಲಾತಿಗಾಗಿ ಶಾಂತಿಯುತವಾಗಿ ಹೋರಾಟ ಮಾಡಿದ ನಮಗೆ ಲಾಠಿಚಾರ್ಜ್ ಮಾಡುತ್ತದೆ ಎಂದು ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಠಾಣೆಗೆ ಬೆಂಕಿ ಹಚ್ಚಿದ ವರಿಗೆ ಇವರು ಮುತ್ತು ಕೊಡುತ್ತಾರೆ. ಡಿಜೆ ಹಳ್ಳಿ ಕೇಜಿಹಳ್ಳಿ ಗಲಭೆ ಕೋರರಿಗೆ ಇವರು ಮುತ್ತು ಕೊಡುತ್ತಾರೆ. ಕುಕ್ಕರ್ ಬಾಂಬ್ ಇಟ್ಟವರಿಗೂ ಕಾಂಗ್ರೆಸ್ನವರು ಮತ್ತು ಕೊಡುತ್ತಾರೆ. ಆದರೆ ಶಾಂತಿಯುತ ಹೋರಾಟ ಮಾಡಿದ ನಮಗೆ ಮಾತ್ರ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ಬೆಲ್ಲದ್ ವ್ಯಂಗ್ಯವಾಡಿದರು. ಸುಳ್ಳು ಹೇಳುವುದರಲ್ಲಿ ಸಿಎಂ ಸಿದ್ದರಾಮಯ್ಯ ನಿಸ್ಸಿಮರು. ಮೀಸಲಾತಿ ಕೊಡುವುದು ಹೇಗೆ ಸಂವಿಧಾನ ವಿರೋಧವಾಗುತ್ತೆ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಶ್ವೇತ ಪತ್ರ ಹೊರಡಿಸಲಿ. ಲಿಂಗಾಯತರು, ಒಕ್ಕಲಿಗರು,…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ಮೆಂಟ್ ಒಂದರ 16ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಸಮೀಪ RMZ ಗ್ಯಾಲರಿಯ ಅಪಾರ್ಟ್ಮೆಂಟಲ್ಲಿ ನಡೆದಿದೆ. ಬೆಂಗಳೂರಿನ ಯಲಹಂಕದ RMZ ಗ್ಯಾಲರಿಯ ಅಪಾರ್ಟ್ಮೆಂಟಲ್ಲಿ ಘಟನೆ 16ನೇ ಫ್ಲೋರ್ ನಿಂದ ಹಾರಿ ರವಿಕುಮಾರ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರವಿಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಯಲಹಂಕ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More