Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನರು ಹಾಗೂ ರೈತರು ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದು ಮಳೆಯಿಂದಾಗಿ ಸ್ವಲ್ಪ ನಿಟ್ಟುಸಿರುಬಿಟ್ಟಿದ್ದಾರೆ. ಇದೀಗ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಂಜೆ ಬಾರಿ ಮಳೆ ಆಯಿತು. ಹೌದು ಇಂದು ಸಂಜೆ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಭಾಷ್ಯಂ ಸರ್ಕಲ್ ಸೇರಿದಂತೆ ಮಹಾನಗರದ ಹಲವೆಡೆ ಮಳೆ ಶುರುವಾಗಿದ್ದು, ಮಳೆ ಹಿನ್ನೆಲೆ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ ಇತ್ತ ನೆಲಮಂಗಲದಲ್ಲಿ ಕೂಡ ಭಾರಿ ಮಳೆಯಾಗಿದ್ದು, ಮಳೆಯದ ಕಾರಣದಿಂದ ಬಾಳೆ, ಅಡಿಕೆ ಮರಗಳು ನೆಲಕಚ್ಚಿದ್ದವು. ಇಂದು ಕೂಡ ಪೀಣ್ಯಾ,ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಬಿರುಗಾಳಿ ಸಹಿತ ಬಾರಿ ಮಳೆ ಶುರುವಾಗಿದೆ. ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.ಏನಾದರು ಅಗಲಿ ಒಟ್ಟಿನಲ್ಲಿ ಮಳೆಯಾಗುತ್ತಿದೆ ಅಂತ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಹಿನ್ನೆಲೆಯಲ್ಲಿ ಇದೀಗ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಪ್ರಮುಖವಾದಂತಹ ಸೂಚನೆ ನೀಡಿದ್ದು ಮಳೆಯಿಂದ ಆಗುವ ಅವಘಡಗಳಿಂದ ಪಾರಾಗುವ ಕುರಿತು ಸೂಚನೆ ನೀಡಿದೆ. ಮಳೆ ಅವಘಡ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹವಮಾನ ಇಲಾಖೆ ಸೂಚನೆ ನೀಡಿದ್ದು, ಮನೆಯೊಳಗೆ ಕಿಟಕಿಗಳು ಹಾಗೂ ಬಾಗಿಲುಗಳನ್ನು ಮುಚ್ಚಬೇಕು. ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಸುರಕ್ಷಿತ ಆಶ್ರಯ ಪಡೆದುಕೊಳ್ಳಿ. ಮಳೆ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯವನ್ನು ಪಡೆಯಬೇಡಿ. ಮಳೆ ಬರುವಾಗ ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣ ಅನ್ ಪ್ಲಗ್ ಮಾಡಿ.ಮಳೆ ಬಂದ ತಕ್ಷಣ ಜಲಮೂಲಗಳಿಂದ ಹೊರ ಬರುವಂತೆ ಸೂಚನೆ ನೀಡಿದೆ. ವಿದ್ಯುತ್ ಶಕ್ತಿಯಿಂದ ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ. ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಲು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಂಡ್ಯ : ಆಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಆರಂಭ ಮಾಡುತ್ತಿದ್ದು ಇದಕ್ಕೆ ಇದೀಗ ಕೃಷಿ ಸಚಿವ ಚೆಲುವರಾಯಸ್ವಾಮಿ ಎಚ್ಡಿಕೆ ಆರೋಪಕ್ಕೆ ತಿರುಗೇಟು ನೀಡಿದ್ದು, ಪೆನ್ ಡ್ರೈವ್ ಪ್ರಕರಣದಿಂದ ಮೈತ್ರಿಯಲ್ಲಿ ಕುಂದರ ಸೃಷ್ಟಿಯಾಗಿದೆ ಎಂದು ತಿಳಿಸಿದರು. ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಅಭದ್ರತೆ ಕಾಡುತ್ತಿದೆ. ಎಚ್ಡಿಕೆ ಈಗ ಚೆಲುವರಾಯಸ್ವಾಮಿ ಯಾವನ್ರಿ ಅಂತಾರೆ ಡಿಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದವರು.ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಸಮರ್ಥವಾಗಿ ಆ ಸ್ಥಾನವನ್ನು ನಿಭಾಯಿಸಿದ್ದಾರೆ. ಡಿಕೆ ಶಿವಕುಮಾರ್ ಅವರು 136 ಸ್ಥಾನಗಳನ್ನು ಗೆಲ್ಲಿಸಿ ಸರ್ಕಾರವನ್ನು ತಂದಿದ್ದಾರೆ. ಈವರೆಗೆ ಎಚ್ ಡಿ ದೇವೇಗೌಡ ಜೆಡಿಎಸ್ ಉಳಿಸಿಕೊಂಡು ಹಾಗೂ ಬೆಳೆಸಿಕೊಂಡು ಬಂದರು.. ಅದನ್ನು ಮುಂದುವರೆಸಲು ಆಗದೆ ಬಿಜೆಪಿ ಜೊತೆಗೆ ಮೈತ್ರಿಯಾಗಿದ್ದಾರೆ.ಪೆನ್ ಡ್ರೈವ್ ಪ್ರಕರಣದಿಂದ ಮೈತ್ರಿಯಲ್ಲಿ ಗೊಂದಲ ಸೃಷ್ಟಿಯಾಗಿದೆ.ಈ ವೇಳೆ ಡಿಕೆ ಶಿವಕುಮಾರ್ ಮೇಲೆ ಮಾತನಾಡುವುದರಿಂದ ವ್ಯಕ್ತಿತ್ವ ಅಲ್ಲಾಡಿಸಬಹುದು.ಈ ವಿಷಯ ಡೈವರ್ಟ್…
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು ಪಿಜಿ ಕಟ್ಟಡದ ಮೇಲಿನಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಮೃತನನ್ನು ಕಲಬುರ್ಗಿ ಮೂಲದ 28 ವರ್ಷದ ಯುವಕ ಎಂದು ಹೇಳಲಾಗುತ್ತಿದ್ದು, ಪಿಜಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕ ಕೆಲಸ ಹುಡುಕಿಕೊಂಡು ಬಂದಿದ್ದ ಎನ್ನಲಾಗುತ್ತಿದೆ. ಆದರೆ ಆತನಿಗೆ ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನೆ ಕುರಿತಂತೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಇದೀಗ ಇಡೀ ದೇಶದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದು ಈ ಕುರಿತಂತೆ ಇಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸುದಿಗೋಷ್ಠಿ ನಡೆಸಿದ್ದು ಈ ಒಂದು ಪ್ರಕರಣದ ಕಥಾನಾಯಕ ನಾನಾದರೆ ಇದರ ಖಳನಾಯಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ನಾಲ್ಕರ ನಂತರ ಈ ಪ್ರಕರಣ ಇರುತ್ತೋ ಇಲ್ಲವೋ ಗೊತ್ತಿಲ್ಲ ಪೆನ್ ಡ್ರೈವ್ ಹಂಚಿದ ನಾಲ್ವರು ರಾಜಾರೋಷವಾಗಿ ಓಡಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ವಾಗ್ದಾಳಿ ಎಂದು ತಿಳಿಸಿದರು. ನಾನು ಇಂತಹ ಅಶ್ಲೀಲ ಪೆನ್ ಡ್ರೈವ್ ಇಟ್ಟುಕೊಂಡಿಲ್ಲ ನನ್ನ ಬಳಿಯೋ ಪೆನ್ ಡ್ರೈವ್ ಬಿಡು ಬಿಡುಗಡೆ ಮಾಡಲು ಮನವಿ ಮಾಡಿದ್ದೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಹಾಗೂ ಸ್ಪೀಕರ್ಗೆ ಮನವಿ ಮಾಡಿದ್ದೆ ಆದರೆ ಪೆನ್ ಡ್ರೈವ್ ಮಾಡಿ ಹೆಣ್ಣುಮಕ್ಕಳ ಮಾನ ಹರಾಜು ಮಾಡಿದ್ದು ನೀವು…
ತಮಿಳುನಾಡು : ಪೊಲೀಸರು ಹಾಗೂ ಸರ್ಕಾರ ಎಷ್ಟೇ ಕ್ರಮಗಳನ್ನು ಕೈಗೊಂಡರು ಕೂಡ ಸ್ಪೋಟ ಸಂಭವಿಸುತ್ತವೆ. ಇದೀಗ ತಮಿಳುನಾಡಿನ ಶಿವಕಾಶಿಯಲ್ಲಿರುವ ಚೆನ್ನಗಲಂಪಟ್ಟಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕೆಲಸ ಮಾಡುತ್ತಿದ್ದ 8 ಕಾರ್ಮಿಕರು ಸಾವನಪ್ಪಿದ್ದು ಇನ್ನೂ ಹಲವು ಕಾರ್ಮಿಕರಿಗೆ ಗಂಭೀರವಾದಂತಹ ಗಾಯಗಳಾಗಿವೆ. ಘಟನೆಯಲ್ಲಿ ಬೆಂಕಿಯ ಕೆನ್ನಾಲಗೆ ಪಕ್ಕದ ಫ್ಯಾಕ್ಟರಿಗೆ ತಗಲುವ ಅಪಾಯವಿದ್ದು, ಸಿಬ್ಬಂದಿಗಳು ಅದನ್ನು ನಿಯಂತ್ರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಫ್ಯಾಕ್ಟರಿಯಲ್ಲಿ ಸಂಪೂರ್ಣ ಹೊಗೆ ತುಂಬಿಕೊಂಡಿರುವ ಕಾರಣ ಕಾರ್ಯಾಚರಣೆ ಕಷ್ಟವಾಗಿದೆ. ಸ್ಫೋಟದ ಪರಿಣಾಮ ಇಡೀ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.ಯಾವ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿದೆ ಅನ್ನೋ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ನವದೆಹಲಿ : ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ಸ್ಪಷ್ಟನೆ ಒಂದನ್ನು ನೀಡಿದ್ದು, ಪ್ರಜ್ವಲ್ ವಿರುದ್ಧ 700 ಮಹಿಳೆಯರು ರಾಷ್ಟ್ರ ಮಹಿಳಾ ಆಗೋಕೆ ದೂರು ನೀಡಿದ್ದಾರೆ ಎಂಬುದು ಸುಳ್ಳು ಎಂದು ಮಹಿಳಾ ಆಯೋಗ ಇದೀಗ ಸ್ಪಷ್ಟನೆ ನೀಡಿದೆ. ಹೌದು ಅಖಿಲ ವಿಡಿಯೋ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 700 ಮಹಿಳೆಯರು ರಹಸ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹರಿದಾಡುತ್ತಿತ್ತು. ಇದೀಗ ರಾಷ್ಟೀಯ ಮಹಿಳಾ ಆಯೋಗ ಸ್ಪಷ್ಟನೆ ನೀಡಿದ್ದು, ಪ್ರಜ್ವಲ್ ಪ್ರಕರಣ ಸಂಬಂಧಪಟ್ಟ ರಾಷ್ಟ್ರೀಯ ಮಹಿಳಾ ಆಯೋಗ ಸ್ಪಷ್ಟನೆ ನೀಡಿದ್ದು, 700 ಮಹಿಳೆಯರು ಎನ್ ಸಿಡಬ್ಲ್ಯೂಗೆ ಯಾವುದೇ ದೂರನ್ನು ನೀಡಿಲ್ಲ. ಈ ಬಗ್ಗೆ ಕೆಲವು ಮಾಧ್ಯಮಗಳು ಸುಳ್ಳು ವರದಿ ಮಾಡುತ್ತಿವೆ ಎಂದು ಸ್ಪಷ್ಟನೆ ನೀಡಿದೆ.
ಚಿತ್ರದುರ್ಗ : ಪತಿಯ ಹಣದ ಆಸೆಗೆ ಬೇಸತ್ತ ಗೃಹಿಣಿ ಒಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. ಹೌದು, ತುಮಕೂರು ಮೂಲದ ಗೀತಶ್ರೀ ಮೃತ ರ್ದುದೈವಿ. ಆಕೆ ಹೊಸದುರ್ಗದ ಗೊರವನಕಲ್ಲು ಗ್ರಾಮದ ಪ್ರಭುಕುಮಾರ್ ಜೊತೆ ಐದಾರು ವರ್ಷದ ಹಿಂದೆ ಮದುವೆ ಆಗಿದ್ದರು. ವಿದ್ಯಾವಂತನಾಗಿದ್ದ ಪ್ರಭುಕುಮಾರ್ ಇಂದಲ್ಲ, ನಾಳೆ ಸರ್ಕಾರಿ ಉದ್ಯೋಗ ಸಿಗುತ್ತದೆಂದು ನಂಬಿಸಿದ್ದನು. ಪ್ರಭುಕುಮಾರ್ ಖಾಸಗಿ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲದೆ ಗೀತಶ್ರೀ ಕೂಡ ಖಾಸಗಿ ಶಾಲೆ ಒಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು. ಇವರಿಗೆ ಮುದ್ದಾದ ಹೆಣ್ಣು ಮಗು ಕೂಡ ಇತ್ತು ಎಂದು ಹೇಳಲಾಗುತ್ತಿದ್ದು, ಆದರೆ ಇತ್ತೀಚಿಗೆ ವರದಕ್ಷಿಣೆ ವಿಚಾರದಲ್ಲಿ ಪ್ರಭುಕುಮಾರ್ ಗೀತಶ್ರೀಗೆ ಕಿರುಕುಳ ನೀಡಲು ಆರಂಭಿಸಿದ್ದ ಕಳೆದ ಕೆಲವು ದಿನಗಳ ಹಿಂದೆ ಗೀತಶ್ರೀ ಅವರ ಮನೆ ಸೇರಿದಳು ಆದರೆ ನಾಲ್ಕು ದಿನಗಳ ಹಿಂದೆ ಮತ್ತೆ ಗೀತಾ ಶ್ರೀ ಗಂಡನ ಮನೆಗೆ ಬಂದಿದ್ದಳು. ಆದರೆ ಇಂದು ಗೀತಶ್ರೀ ಅವಳ ದೇಹವು…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಪ್ರಕರಣಕುರಿತಂತೆ ತಪ್ಪಿಸಸ್ಥರಿಗೆ ಶಿಕ್ಷೆಯಾಗುವುದು ಬೇಕಿಲ್ಲ ಮೈತ್ರಿ ಮುಂದುವರೆಯುತ್ತೋ ಅಥವಾ ಇಲ್ಲವೋ ಎನ್ನುವುದು ಕಾಂಗ್ರೆಸ್ ನವರಿಗೆ ಮುಖ್ಯವಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರು ವಿರುದ್ಧ ಆಕ್ರೋಶ ಹೊರಹಾಕಿದರು. ನಿನ್ನೆ ಹಲವು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.ನನ್ನನ್ನೇ ಗುರಿಯಾಗಿಸಿಕೊಂಡು ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದಾರೆ.ಪೆನ್ ಡ್ರೈವ್ ಬಿಡುಗಡೆ ಮಾಡಲು ಹುನ್ನಾರ ನಡೆಸಿದ್ದೇನೆಂದು ಹೇಳಿದ್ದಾರೆ. ಒಕ್ಕಲಿಗ ನಾಯಕನೆಂದು ಎಲ್ಲೂ ಹೇಳಿಲ್ಲ. ನಾಯಕತ್ವಕ್ಕಾಗಿ ಪೈಪೋಟಿ ನಡೆಸಿಲ್ಲ. ನಾನು ಹಿಟ್ ಅಂಡ್ ರನ್ ಅಲ್ಲ ಎಂದು ಸಚಿವ ಕೃಷ್ಣ ಬೈರೇಗೌಡರು ಹೆಚ್‍ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದು ನಾನು ಹೇಳಿದ್ದೇನೆ. 2006ರಲ್ಲಿ ನಾನು ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ಆಗ ನಾನು ಸಿಎಂ ಆಗಿದ್ದರೂ ನನ್ನ ಮೇಲೆ ಆಪಾದನೆ ಮಾಡಲಾಗಿತ್ತು. ಈ ಒಂದು ಪ್ರಕರಣ ರಾಜ್ಯದಲ್ಲಿ ಅತ್ಯಂತ…
ಬೆಂಗಳೂರು :ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಈ ಸಂಬಂಧ 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿರುವುದಾಗಿ ಇಂಟರ್ ಪೋಲ್ ಎಸ್‌ಐಟಿಗೆ ಮಾಹಿತಿ ನೀಡಿದೆ. ಇದೆಲ್ಲದರ ಮಧ್ಯ ಪ್ರಜ್ವಲ್ ಅವರನ್ನು ಬಂಧಿಸಲು ಕಳೆದ ಎರಡು ದಿನಗಳ ಹಿಂದೆ ಎಸ್ಐಟಿ ಒಂದು ತಂಡ ವಿದೇಶಕ್ಕೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಇದೀಗ ಎಸ್ಐಟಿ ಅಧಿಕಾರಿಗಳು ಅವರ ಬಂಧನಕ್ಕೆ ಬೆಲೆ ಬೀಸಿದ್ದು, ಕಳೆದ ಎರಡು ದಿನಗಳ ಹಿಂದೆ ಎಸ್ಐಟಿ ಒಂದು ತಂಡ ವಿದೇಶಕ್ಕೆ ತೆರಳಿದೆ. ಹಾಗಾಗಿ ವಿದೇಶದಲ್ಲಿ ರೇವಣ್ಣ ಸಿಕ್ಕರೆ ಬಹುತೇಕ ಅವರನ್ನು ಅಲ್ಲಿ ಬಂಧಿಸಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಿದರು. ಆದರೆ…