Author: kannadanewsnow05

ಬೆಂಗಳೂರು : ಕ್ಷುಲಕ ಕಾರಣಕ್ಕೆ ದಂಪತಿಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯು ವಿಕೋಪಕ್ಕೆ ತಿರುಗಿ ರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ 3.30 ರ ಸುಮಾರಿಗೆ ಪತ್ನಿ ಇಂದುವನ್ನು ಪತಿ ಬರ್ಬರವಾಗಿ ಹತ್ಯೆಗೈಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಪತಿಯಿಂದ ಇಂದು ದೂರವಾಗಿದ್ದಳು.ಪತ್ನಿ ಜೊತೆ ಜಗಳ ತೆಗೆದು ರಸ್ತೆಯಲ್ಲಿ ಪತಿ ಇರಿದು ಇಂದುವನ್ನು ಕೊಂದಿದ್ದಾನೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕೊಲೆ ಕುರಿತಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರಗಿ : ಕಳೆದ ಜನವರಿ 22ರಂದು ಕಲಬುರ್ಗಿಯ ಕೋಟನೂರ ರಸ್ತೆಯಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದು ಹೊರಗಡೆ ಬಂದಿದ್ದ ಆರೋಪಿ ಮನೆಯ ಮೇಲೆ 50 ಜನರ ಗುಂಪು ದಾಳಿ ಮಾಡಿತ್ತು. ಈ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಕಲಬುರ್ಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೀಗ ಹಲ್ಲೆ ನಡೆದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಸಂಪೂರ್ಣ ಸತ್ಯಾಂಶ ಹೊರಬರಬೇಕು ಎಂದು ಸಿಐಡಿಗೆ ನೀಡಲು ತೀರ್ಮಾನ ಮಾಡಿದ್ದೆವೆ. ಬಿಜೆಪಿಯವರು ಇದನ್ನ ರಾಜಕೀಯ ಅಸ್ತ್ರ ಮಾಡಿಕೊಳ್ಳೊಕೆ ಬಿಡೋದಿಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಹೇಳಿದ್ದಾರೆ. ಘಟನೆ ಹಿನ್ನೆಲೆ? ಕಳೆದ ಜನವರಿ 22ರಂದು ಕಲ್ಬುರ್ಗಿ ನಗರದ ಹೊರವಲಯದಲ್ಲಿರುವ ಕೂಟನೂರ ರಸ್ತೆಯ ಬಳಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದರು. ಈ…

Read More

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಇದೀಗ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ‌ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಅದೇ ದೂರು ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ. ಇದರ ನಡುವೆಯೂ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ತನಿಖೆಯನ್ನೂ ಎಸ್ಐಟಿ ಕೈಗೆತ್ತಿಕೊಂಡಿದೆ.ದೂರಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ‘ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲ ರೀತಿಯ…

Read More

ಬೀದರ್ : ಅಶ್ಲೀಲ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು? ಹಾಗಾಗಿ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಕುರಿತಂತೆ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್ ಆಗ್ರಹಿಸಿದರು. ಬೀದರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್ ಸುಧೀಗಾರರೊಂದಿಗೆ ಮಾತನಾಡಿ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು.ದೇಶದಲ್ಲಿ ದೊಡ್ಡ ಪ್ರಕರಣ ನಡೆದರೂ ಸಹ ಏಕೆ ಖಂಡಿಸಲಿಲ್ಲ? ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ ಏಕೆ ಖಂಡಿಸಲಿಲ್ಲ? ಮಹಿಳೆಯರ ಮೇಲೆ ದೌರ್ಜನ ನಡೆದಾಗ ಖಂಡಿಸಬೇಕು ಎಂದು ಆಗ್ರಹಿಸಿದರು. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಬೇಕಿತ್ತು. ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಬಗ್ಗೆ ತನಿಖೆಯಾಗಬೇಕು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇವೆ ಮೋದಿ ಅಮಿತ್ ಶಾ ಘಟನೆ ಖಂಡಿಸದಿರುವುದು ದುರ್ದೈವ ಅಂದು ಇದರಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಸಲಿ ಮೊಹಮ್ಮದ್ ತಿಳಿಸಿದರು

Read More

ದಕ್ಷಿಣಕನ್ನಡ : ಇತ್ತೀಚಿಗೆ ರಾಜ್ಯದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪೊಲೀಸರು ಕೂಡ ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್​ ಬೀರಿ ಬಳಿ ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಮೊಹಮ್ಮದ್​​ ಇಶಾನ್​​, ಜಾಫರ್​ ಸಾಧಿಕ್​​ ಬಂಧಿತ ಆರೋಪಿಗಳು ಎನ್ನಲಾಗಿದೆ. ಇನ್ನು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಜಾಫರ್ ಎಂಬಾತನ ವಿರುದ್ಧ ಹಲ್ಲೆ ಮತ್ತು ಕೊಲೆ ಯತ್ನ ಸೇರಿ ಒಟ್ಟು 9 ಕೇಸ್​ಗಳು ದಾಖಲಾಗಿತ್ತು. ಇನ್ನು ಆರೋಪಿ ಮೊಹಮ್ಮದ್‌ ಇಶಾನ್ ವಿರುದ್ಧವು ಈ ಹಿಂದೆ MDMA ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಇಂದು ಖಚಿತ ಮಾಹಿತಿ ಪಡೆದು ದಾಳಿ ಮಾಡಿದಾಗ ಮಾದಕ ವಸ್ತುಗಳು ಪತ್ತೆಯಾಗಿವೆ. ಇನ್ನು ಬಂಧಿತರ ಬಳಿ ಇದ್ದ 9 ಲಕ್ಷ ಮೌಲ್ಯದ 407 ಗ್ರಾಂ. ತೂಕದ MDMA ಮಾದಕವಸ್ತು, ಕಾರು, ಮೊಬೈಲ್​, ನಗದು ಸೇರಿ 16,13,800 ಲಕ್ಷ ಮೌಲ್ಯದ…

Read More

ಬೆಂಗಳೂರು : ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ಚಾಮರಾಜಪೇಟೆಯ ಪಶು ಆಸ್ಪತ್ರೆಯ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ನೀಡಲಾಗಿದ್ದ ಸರ್ಕಾರಿ ಆದೇಶಕ್ಕೆ ಇದೀಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ. ಕಳೆದ ಫೆ.28 ರಂದು ರಾಜ್ಯ ಸರ್ಕಾರ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಶು ಸಂಗೋಪನೆ ಇಲಾಖೆಗೆ ಒಳಪಟ್ಟ ಪಶುಚಿಕಿತ್ಸಾಲಯಕ್ಕೆ ಸೇರಿದ 2 ಎಕರೆ ಜಾಗವನ್ನು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಗೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಚಾಮರಾಜಪೇಟೆ ನಿವಾಸಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನು ವಿಚಾರಣೆ ಮಾಡಿದ ನ್ಯಾಯಾಲಯವು ಚಾಮರಾಜಪೇಟೆ ಪಶು ಆಸ್ಪತ್ರೆಯನ್ನು ವಕ್ಫ್ ಬೋರ್ಡ್‌ಗೆ ನೀಡಲಾದ ಸರ್ಕಾರಿ ಆದೇಶಕ್ಕೆ ತಡೆಯನ್ನು ನೀಡಿದೆ. ಜೊತೆಗೆ, ಚಾಮರಾಜಪೇಟೆಯ ಪಶು ಆಸ್ಪತ್ರೆ ಸ್ಥಳಾಂತರ ಮಾಡುವುದನ್ನು ಕೂಡ ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳುಯಂತೆ ಹೈಕೊರ್ಟ್ ಸೂಚನೆ ನೀಡಿದೆ. ಇನ್ನು ಹೈಕೋರ್ಟ್‌ನಲ್ಲಿ ಆಸ್ಪತ್ರೆ ಭೂಮಿ ಹಸ್ತಾಂತರ ಮತ್ತು ಆಸ್ಪತ್ರೆ ಸ್ಥಳಾಂತದರ ಬಗ್ಗೆ ವಿಚಾರಣೆ ನಡೆಸಿದ ನಂತರ ಪಶು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹೊರಡಿಸಿದ್ದ…

Read More

ಬೆಂಗಳೂರು : ಒಂದು ಕಡೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚುತ್ತಿದ್ದು ಮತ್ತೊಂದೆಡೆ ರಾಜ್ಯದಲ್ಲಿ ಅತಿಯಾದ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇಂದು ರಾಜ್ಯದ 25 ಜಿಲ್ಲೆಗಳಲ್ಲಿ 40 ಕ್ಕೂ ಹೆಚ್ಚು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಜನತೆಗೆ ಈ ವರ್ಷದ ಮಳೆಗಾಲ ಆರಂಭಕ್ಕೂ ಮುನ್ನವೇ ನೆತ್ತರನ್ನು ಸುಡುವ ಬೇಸಿಗೆ ಆರಂಭವಾಗಿದೆ. ನಮ್ಮ ರಾಜ್ಯದ 29 ಜಿಲ್ಲೆಗಳ ಪೈಕಿ 25 ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಹಾಗೂ ಗುಡ್ಡಗಾಡು ಪ್ರದೇಶವಾದ ಕೊಡಗು ಜಿಲ್ಲೆಯಲ್ಲಿ ಮಾತ್ರ 40 ಡಿಗ್ರಿ ಸೆಲ್ಸಿಯಸ್‌ನಿಂದ ಕಡಿಮೆ ಉಷ್ಣಾಂಶವಿದೆ. ನಿನ್ನೆ ಕಲಬುರ್ಗಿ ಜಿಲ್ಲೆಯ ಕಾಳಗಿ ಹೋಬಳಿಯಲ್ಲಿ ಅತ್ಯಧಿಕ 46.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇಂದು ಕೂಡ ರಾಯಚೂರಿನಲ್ಲಿ 46 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು 46…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ್ ಅವರ ಪರವಾಗಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಯಾಚನೆ ಮಾಡಿದರು ಅಲ್ಲದೆ ಇವಂದು ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಯುವಕರಿಗೆ ಪ್ರಧಾನಿ ಮೋದಿ ಅವರು ತಿರುಪತಿ ಟೋಪಿ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಹಮ್ಮಿಕೊಂಡಂತಹ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಯುವಕರಿಗೆ ಪ್ರಧಾನಮಂತ್ರಿ ಮೋದಿ ತಿರುಪತಿ ಟೋಪಿ ಹಾಕಿದ್ದಾರೆ ಎಂದು ಸಿಎಂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು ಮೋದಿ ಸರ್ಕಾರ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ತಿಳಿಸಿದರು. ರಾಜ್ಯದ ಬಿಜೆಪಿ ಸಂಸದರು ಲೋಕಸಭೆಯಲ್ಲಿ ಬಾಯಿ ಬಿಡಲಿಲ್ಲ. ಬಿ ವೈ ರಾಘವೇಂದ್ರ ಸಹ ಲೋಕಸಭೆಯಲ್ಲಿ ರಾಜ್ಯದ ಬಗ್ಗೆ ಮಾತನಾಡಿಲ್ಲ. ತೆರಿಗೆಯಲ್ಲೂ ಕೂಡ ಕೇಂದ್ರ ಸರ್ಕಾರದಿಂದ ನಮಗೆ ಅನ್ಯಾಯವಾಗಿದೆ.ಭದ್ರಾ ಯೋಜನೆಗೆ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಕೂಡ ಬಂದಿಲ್ಲ ಎಂದರು. ಪರಿಹಾರ ಬಿಡುಗಡೆ ಮಾಡದಿದ್ದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು. ಕೇಂದ್ರ…

Read More

ಬೆಳಗಾವಿ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಿಡಿ ಕಾರಿದ್ದು, ದೇವೇಗೌಡರ ಕುಟುಂಬ ಸದಸ್ಯರು ಹಾಸನದಲ್ಲಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಿಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ. ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅಧಿಕವಾಗಿವೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಎಲ್ಲ ಸೂತ್ರದಾರರು ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ತಿದ್ದಾರೆ ಎಂದು ಕಿಡಿ ಕಾರಿದರು. ದೇವೇಗೌಡರ ಮಗ, ಮೊಮ್ಮಗನಿಂದ ಒಂದಲ್ಲ, ಎರಡು ಸಾವಿರ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಒಂದು ಕಡೆ ಪ್ರಧಾನಿ ಮೋದಿ ನಾರಿಶಕ್ತಿ, ಬೇಟಿ…

Read More

ದಾವಣಗೆರೆ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಇಡೀ ದೇಶದಲ್ಲಿ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೊಬ್ಬರ ವಿಡಿಯೋ ಕೂಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದಕ್ಕೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದು ಸಿಎಂ ಗೆ ಗಂಡಸ್ತನ ಇದ್ದರೆ ರಾಮನಗರ ಎಂಎಲ್ಸಿ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಎಂಎಲ್ಎ ಅವರಿಂದಾಗಿ ಇಷ್ಟೆಲ್ಲಾ ಆದರೂ ಯಾಕೆ ಕ್ರಮ ಕೈಗೊಂಡಿಲ್ಲ? ಸಿದ್ದರಾಮಯ್ಯನಿಗೆ ಗಂಡಸ್ಥನ ಇದ್ದರೆ, ಮೊದಲು ಆಕ್ಷನ್ ತೆಗೆದುಕೊಳ್ಳಲಿ. ಇಷ್ಟೆಲ್ಲಾ ಆದರೂ ಆಕ್ಷನ್ ತಗೊಳ್ಳೋದಿಲ್ಲ, ಯಾಕ್ ಹೇಳ್ರೀ? ಅವ್ರು ಮುಸ್ಲಿಮರಲ್ವಾ ಅದಕ್ಕೆ ಎಂದರು. ಪ್ರಕರಣ ತನಿಖೆ ನಡೆಸುವಂತೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೂ, ಕಾಂಗ್ರೆಸ್ ಸರ್ಕಾರ ಮಾತ್ರ ತನಿಖೆಗೆ ವಿಳಂಬ ಮಾಡುತ್ತಿದೆ. ಈ ಬಗ್ಗೆ ಜನರಿಗೆ ಸಿದ್ದರಾಮಯ್ಯ ಸರ್ಕಾರ ಉತ್ತರ ಕೊಡಬೇಕು. ಯಾರ ಜೊತೆಗೆ ನೀವು…

Read More