Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಕುರಿತು ವಿಜಯಾನಂದ ಕಾಶಪ್ಪನವರ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ. ಕಲ್ಲು ತೂರಲು ಸ್ವಾಮೀಜಿಯೇ ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಒಂದು ಹೇಳಿಕೆಗೆ ಸದನದಲ್ಲಿ ಭಾರಿ ಕೋಲಾಹಲ ಗಲಾಟೆ ಉಂಟಾಗಿ ಸದನ ಮುಂದೂಡಲಾಯಿತು.ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಕಾಶಪ್ಪನವರ ಅವರು, ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ನಮ್ಮ ಸಮಾಜದ ಅಮಾಯಕರ ಮೇಲೆ ಲಾಠಿ ಚಾರ್ಕ್ ಮಾಡುವ ಹಾಗಾಯಿತು. ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್ಎಸ್ಎಸ್ನವರು. ಪೊಲೀಸರ ಮೇಲೆ ಕಲ್ಲು ತೂರಲು ಪ್ರವೋಕ್ ಮಾಡಿದ್ದು ಸ್ವಾಮೀಜಿ. ಸಮಾಜವನ್ನ ಕಟ್ಟುವ ಕೆಲಸ ನಮಗೆ ಗೊತ್ತಿದೆ ಎಂದು…
ಕೋಲಾರ : ಮುರುಡೇಶ್ವರ ಬೀಚ್ ನಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆ ಹೋದಾಗ ನಾಲ್ವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿಯರ ತವರೂರಿಗೆ ಅವರ ಮೃತದೇಹಗಳನ್ನು ರವಾನಿಸಲಾಗಿದೆ. ಈಗ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗುಟ್ಟಳ್ಳಿ ಗ್ರಾಮದ ವಂದನಾ ಎಂಬ ವಿದ್ಯಾರ್ಥಿನಿ ವೈದ್ಯೆಯಾಗಿ ತನ್ನ ತಾಯಿಯನ್ನು ಸಾಕುವ ಕನಸು ಹೊತ್ತಿದ್ದಳು. ಆದರೆ ಮುಡೇಶ್ವರದಲ್ಲಿ ನಡೆದ ಆ ಒಂದು ಘಟನೆ ಅವಳ ಜೀವವನ್ನೇ ಬಲಿ ಪಡೆಯಿತು. ಹೌದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗುಟ್ಟಳ್ಳಿ ನಿವಾಸಿಯಾದ ವಂದನಾ ಸಹೋದರಿ ಚಾಂದನಿ ಈ ಕುರಿತು ಹೇಳಿಕೆ ನೀಡಿದ್ದಾಳೆ. ಪ್ರವಾಸಕ್ಕೆ ಹೊರಡುವ ಒಂದು ವಾರ ಮೊದಲು ಅಪರಿಚಿತ ವಿದ್ಯಾರ್ಥಿನಿಯರ ಕೊಠಡಿಗೆ ನುಗ್ಗಿದ್ದ. .ಕೊತ್ತೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅಪರಿಚಿತ ಒಬ್ಬ ನುಗ್ಗಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಬಳಿ ಇರುವ ಮೊರಾರ್ಜಿ ವಸತಿ ಶಾಲೆ ಹೆಣ್ಣು ಮಕ್ಕಳ ಕೊಠಡಿಗೆ ಅಪರಿಚಿತ ನುಗ್ಗಿದ್ದರ ಬಗ್ಗೆ ಪ್ರಾಂಶುಪಾಲೇಗೆ ದೂರು ನೀಡಲಾಗಿತ್ತು.…
ಕೋಲಾರ : ಕಳೆದ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್ನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಅದರಲ್ಲಿ ಬದುಕುಳಿದು ಬಂದಂತಹ ವಿದ್ಯಾರ್ಥಿನಿಯಾದ ಪಲ್ಲವಿ ಸಮುದ್ರದ ಅಲೆಗಳ ಹೊಡೆತಕ್ಕೆ ನಾವು ನಾಲ್ಕಲ್ಲ 15 ಜನರು ಮುಳುಗಿ ಹೋಗಿ ಸಾಯುತ್ತಿದ್ದೆವು ಎಂದು ಕಣ್ಣೆದುರಿಗೆ ನಡೆದ ನೈಜ ಘಟನೆ ವಿವರಿಸಿದ್ದಾಳೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆಕೆ, ದೊಡ್ಡ ದೊಡ್ಡ ಅಲೆಗಳಿಗೆ 15 ಜನರು ಸಮುದ್ರದ ಅಲೆಗಳ ಮಧ್ಯ ಸಿಲುಕಿಕೊಂಡಿದ್ದರು. ಈ ವೇಳೆ ನಾವು ನಾಲ್ವರು ಅಲ್ಲ ಸುಮಾರು 15 ಜನರು ಸಿಲುಕಿಕೊಂಡಿದ್ದೆವು. ಕೂಡಲೇ ಅಲ್ಲಿದ್ದ ಸ್ಥಳೀಯ ಲೈಫ್ ಗಾರ್ಡ್ಸ್ ಸಿಬ್ಬಂದಿ ಹಾಗೂ ಶಿಕ್ಷಕರು ಉಳಿದವರನ್ನು ಕಾಪಾಡಿದರು ಆದರೆ ನಾಲ್ವರು ಮಾತ್ರ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳಿಗೆ ವಿದ್ಯಾರ್ಥಿನಿ ಪಲ್ಲವಿ ಮಾಹಿತಿ ನೀಡಿದ್ದಾಳೆ. ಅಲ್ಲದೆ ಇಂದು ಮೃತ ನಾಲ್ವರು ವಿದ್ಯಾರ್ಥಿನಿಯರ ಮೃತದೇಹಗಳು ಸ್ವ ಗ್ರಾಮಕ್ಕೆ…
ಬೆಂಗಳೂರು : ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಇದೀಗ ಹೈಕೋರ್ಟ್ ರದ್ದುಗೊಳಿಸಿದೆ. ಹೌದು 2022 ನವೆಂಬರ್ 9 ರಂದು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ವಕೀಲ ದಿಲೀಪ್ ಕುಮಾರ್ ಎಂಬುವರು ಐಪಿಸಿ ಸೆಕ್ಷನ್ 153, 500ರ ಅಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ದಾಖಲಿಸಿದ್ದರು. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಂದು ಹೈಕೋರ್ಟ್ ವಿಚಾರಣೆ ನಡೆಸಿ ಪ್ರಕರಣವನ್ನು ರದ್ದುಗೊಳಿಸಿದೆ. ಸತೀಶ್ ಜಾರಕಿಹೊಳಿ ಹೇಳಿದ್ದೇನು? ‘ಹಿಂದೂ’ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಸಚ್ಚುವ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ?…
ಚಿಕ್ಕಬಳ್ಳಾಪುರ : ಹಣಕಾಸಿನ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆ ನಡೆದು, ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಆರ್‌ಟಿಓ ಕಚೇರಿ ಬಳಿ ಒಂದು ಕೃತ್ಯ ನಡೆದಿದೆ. ಬೆಂಗಳೂರು ಮೂಲದ ಆನಂದ್ ಎನ್ನುವವನಿಗೆ ಸುರೇಶ ಎನ್ನುವ ಸ್ನೇಹಿತ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಗಾಯಾಳು ಆನಂದನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೇವರಬಿಸನಹಳ್ಳಿಯ ಆದರ್ಶ ಟ್ರೀ ಫಾರಂನಲ್ಲಿ ಇವರಿಬ್ಬರು ಚಾಲಕರಾಗಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಸಪ್ಪಂಗಿಹಳ್ಳಿಗೆ ಆನಂದ ಮತ್ತು ಸುರೇಶ್ ಬಂದಿದ್ದರು. ಈ ವೇಳೆ ಚಂದ್ರು ಮನೆಗೆ ತೆರಳುತ್ತಿದ್ದಾಗ ಆನಂದಗೆ ಸುರೇಶ ಚಾಕು ಇರದಿದ್ದಾನೆ ಹಣಕಾಸು ವಿಚಾರವಾಗಿ ಜಗಳವಾಗಿ ಚಾಕು ಇರಿದಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಘಟನೆ ಕುರಿತಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸುಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈ ಕೋರ್ಟ್ ಈ ಒಂದು ಪ್ರಕರಣದ ತನಿಖೆಗೆ ಸೂಚನೆ ನೀಡಿದ್ದು, ಹೈಕೋರ್ಟಿನ ಈ ಒಂದು ಆದೇಶದ ಹಿನ್ನೆಲೆ, ಇದರಿಂದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ತೀವ್ರ ಸಂಕಷ್ಟ ಎದುರಾಗಿದೆ. ಹೌದು ಇಂದು ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದುಕೋರಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ. ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದೆ. ಅಲ್ಲದೇ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಆದೇಶಿಸಿದೆ. ಕೇಸ್ ಹಿನ್ನೆಲೆ ಏನು? ತಾವು ಪರಿಶಿಷ್ಟ ಜಾತಿಗಳ ಪಟ್ಟಿಗೆ ಬರುವ ಬುಡುಗ ಜಂಗಮ ಜಾತಿಗೆ ಸೇರಿದವರೆಂದು ಘೋಷಿಸಿಕೊಂಡು ಜಿ.ಮಂಜುನಾಥ್ ಅವರು 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು.…
ಮೈಸೂರು : ಮೈಸೂರಿನ ಆರ್ ಟಿ ಓ ಕಚೇರಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಮೈಸೂರಿನ ಆರ್ ಟಿ ಓ ಕಚೇರಿ ಮೇಲೆ ದಿಢೀರ್ ಎಂದು ಏಕಾಏಕಿ ದಾಳಿ ಮಾಡಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ನೇತೃತ್ವದ ತಂಡದಿಂದ ಕಾರ್ಯಚರಣೆ ನಡೆಸಲಾಗುತ್ತಿದ್ದು ಐದು ವಾಹನಗಳಲ್ಲಿ ಆಗಮಿಸಿ ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ ನಡೆಸಲಾಗುತ್ತಿದೆ. ಸಾರ್ವಜನಿಕ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರನೆ ದಾಳಿ ಮಾಡಿದ್ದಾರೆ ದಾಖಲೆ ಮತ್ತು ಹಣ ಪರಿಶೀಲನೆ ಮಾಡುತ್ತಿದ್ದಾರೆ.
ಬೆಂಗಳೂರು : ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಹೈಕೋರ್ಟ್ ಯತ್ನಾಳ್ ವಿರುದ್ಧ ದಾಖಲಾಗಿದ್ದ FIR ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೌದು ಕಳೆದ ಸೆಪ್ಟೆಂಬರ್ 18 ರಂದು ಈ ಕುರಿತು ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಿಸಿದ್ದರು. ಇದೀಗ FIR ಅನ್ನು ಹೈಕೋರ್ಟ್ ರದ್ದುಪಡಿಸಿದೆ. FIR ನಲ್ಲಿ ಏನಿತ್ತು? ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ಜೊತೆಗೆ ರಾಹುಲ್ ಗಾಂಧಿ ಅವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. ಆದರೂ ಸಹ…
ಬೆಳಗಾವಿ : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ನವದೆಹಲಿ : ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಿಂಕ್ರೊನೈಸ್ ಮಾಡುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲು ಯೋಜಿಸಲಾಗಿದೆ. ಕೇಂದ್ರ ಸಚಿವ ಸಂಪುಟ ಗುರುವಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು ಇದೇ ಕುರಿತು ಸಮಗ್ರ ಮಸೂದೆಯನ್ನು ತರುವ ಸಾಧ್ಯತೆಯಿದೆ. ಬುಧವಾರ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಗಾಗಿ ಬಲವಾದ ಪಿಚ್ ಮಾಡಿದರು ಮತ್ತು ಆಗಾಗ್ಗೆ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರತಿಪಾದಿಸಿದರು.













