Author: kannadanewsnow05

ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪರಿಷತ್ ನಲ್ಲಿ ಮೀಸಲಾತಿ ಹೋರಾಟದ ಕೋಲಹಲ ಆರಂಭವಯಿತು. ಈ ವೇಳೆ ಸದನದ ಬಾವಿಗೆಳಿದು ಬಿಜೆಪಿ ಸದಸ್ಯರಿಂದ ಪ್ರತಿಭಟನೆ ನಡೆಸಲಾಯಿತು. ಆಡಳಿತ ಮತ್ತು ವಿಪಕ್ಷ ನಾಯಕರ ಮಧ್ಯೆ  ಮಾತಿನ ಚಕಮಕಿ ನಡೆದಿದ್ದರಿಂದ ಗದ್ದಲ ಕೋಲಾಹಲ ಹಿನ್ನೆಲೆ ಸದನವನ್ನು ಮುಂದೂಡಿಕೆ ಮಾಡಲಾಯಿತು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಮಧ್ಯಾಹ್ನ 3 ಗಂಟೆಗೆ ಕಲಾಪ ಮುಂದೂಡಿದರು.

Read More

ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿರುವ ಕುರಿತಂತೆ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಕ್ಕೆ ಖಂಡನೆ ವ್ಯಕ್ತವಾಯಿತು. ವಿಧಾನ ಪರಿಷತ್ ಕಲಾಪ ಆರಂಭವಾದ ಕೂಡಲೇ ವಿಪಕ್ಷ ಸದಸ್ಯರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಪಂಚಮಸಾಲಿ ಮೀಸಲಾತಿ ಹೋರಾಟ ಮಾಡುವವರ ಮೇಲೆ ಲಾಠಿಚಾರ್ಜ್ ಬೀಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಅಲ್ಲದೆ ಕೂಡಲೇ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಭಮಯಾಚಿಸುವಂತೆ ಒತ್ತಾಯಪಡಿಸಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಪಂಚಮಸಾಲಿ ನಾಯಕರ ಒತ್ತಾಯ ಸಂವಿಧಾನಕ್ಕೆ ವಿರುದ್ಧವಾಗಿ ಹೋಗೋದಕ್ಕೆ ಆಗಲ್ಲ ಎಂದು ವಿಧಾನ ಪರಿಷತ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಹಿಂದುಳಿದ ವರ್ಗದ ಅಡಿ ಅವಕಾಶ ಪಡೆದುಕೊಳ್ಳಬೇಕಾದರೆ ಸಂವಿಧಾನದ ಪ್ರಕಾರವೇ ಆಗಬೇಕು.ಯಾರೇ ಹಿಂದುಳಿದ ವರ್ಗಕ್ಕೆ ಸೇರಿಸಬೇಕಾದರೆ ಶಾಶ್ವತ ಹಿಂದುಳಿದ ಆಯೋಗದ ವರದಿ ಬೇಕು ಎಂದು ಇದೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣವು ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಮಾರತಹಳ್ಳಿ ಇನ್ಸ್ಪೆಕ್ಟರ್ ಅವರನ್ನು ಈ ಒಂದು ಪ್ರಕರಣದ ತಡಿ ಖಾದಿಕಾರಿಯಾಗಿ ನೇಮಕ ಮಾಡಲಾಗಿದೆ. ಹೌದು ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಮಾರತಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ನೇಮಕ ಮಾಡಲಾಗಿದೆ. ಅತುಲ ಆತ್ಮಹತ್ಯೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿಯಾಗಿ ಇನ್ಸ್ಪೆಕ್ಟರ್ ದರ್ಜೆ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಪ್ರಕರಣ ಹಿನ್ನೆಲೆ? ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ 24 ಪುಟಗಳ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತುಲ್ ವಿರುದ್ಧ ಪತ್ನಿ ನಿಕಿತಾ ಸಿಂಘಾನಿಯಾ ವರದಕ್ಷಿಣೆ ಸೇರಿ 9 ಪ್ರಕರಣಗಳನ್ನು ದಾಖಲಿಸಿದ್ದಳು. ಪತಿಯ ಕಡೆಯವರು ತನಗೆ 10 ಲಕ್ಷ ರೂ. ವರದಕ್ಷಿಣೆ ಕೇಳಿದ್ದರಿಂದಲೇ ತನ್ನ ತಂದೆ ಆಘಾತದಿಂದ ಸಾವನ್ನಪ್ಪಿದ್ದರು ಎಂದು ಆಕೆ ಆರೋಪಿಸಿದ್ದಳು. ಹಾಗಾಗಿ ಈ ವರದಕ್ಷಿಣೆ ಪ್ರಕರಣ ಮತ್ತಷ್ಟು ಗಟ್ಟಿಯಾಗಿ ನ್ಯಾಯಾಲಯದಲ್ಲಿ ನಿಂತಿತ್ತು,…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಿನ ದೋಣಿಕಣ ಬಡಾವಣೆಯಲ್ಲಿ ವೈದ್ಯ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಗಂಡ ವೃತ್ತಿಯಲ್ಲಿ ವೈದ್ಯನಾಗಿದ್ದರೂ ಮಾನವೀಯತೆಯನ್ನೇ ಮರೆತು ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗೃಹ ಬಂಧನಕ್ಕೆ ಒಳಗಾದ ಮಹಿಳೆಯನ್ನು ವಿನುತಾ ರಾಣಿ (45) ಎಂದು ತಿಳಿದುಬಂದಿದೆ. ಸದ್ಯ ಮಹಿಳೆಯನ್ನು ಗೃಹಬಂಧನದಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೂತಾ ರಾಣಿಯನ್ನು 22 ವರ್ಷಗಳ ಹಿಂದೆ ಡಾ.ರವಿಕುಮಾರ್ ಎಂಬ ವೈದ್ಯನಿಗೆ ವಿವಾಹ ಮಾಡಿಕೊಡಲಾಗಿತ್ತು.ಕಳೆದ 1 ವರ್ಷದ ಹಿಂದೆ ವಿನುತಾರಾಣಿ ಅವರಿಗೆ ಡಾ.ರವಿಕುಮಾರ್ ವಿಚ್ಛೇದನ ನೀಡಿದ್ದಾರೆ. ವಿನುತಾ ರಾಣಿ ಮೂಲತಃ ಶಿವಮೊಗ್ಗದ ವಿನೋಬಾನಗರದವರು, ಆದರೆ ವಿಚ್ಛೇದನ ನೀಡಿ ಕೂಡಾ ಆಕೆಯನ್ನು ಮನೆಯಲ್ಲಿ ಕೂಡಿ ಹಾಕಿದ್ದಾನೆ ಎಂದು ವಿನುತಾ ರಾಣಿ ಅವರ ಮನೆಯವರು ಆರೋಪಿಸಿದ್ದಾರೆ. ಇದೀಗ ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಆಕೆಯ ಪತಿ ಡಾ, ರವಿಕುಮಾರ್ ಅಲ್ಲಿಂದ ನಾಪತ್ತೆಯಾಗಿದ್ದಾನೆ.…

Read More

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಅಧಿಕಾರದ ದರ್ಪದಿಂದ ಮೆರೆಯುತ್ತಿದ್ದಾರೆ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು. ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಳಗಾವಿ ಸುವರ್ಣಸೌಧದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸ್ವಾಮೀಜಿ, ರೈತಾಪಿ ವರ್ಗದ ಧರಣಿ- ಹೋರಾಟದ ಸ್ಥಳಕ್ಕೆ ತೆರಳಿ ಮನವಿ ಸ್ವೀಕರಿಸಬೇಕಿತ್ತು. ಮುಖ್ಯಮಂತ್ರಿಗಳಿಗೆ ಏನು ಧಾಡಿ ಆಗಿತ್ತು ಎಂದು ಪ್ರಶ್ನಿಸಿದರು. ಇಲ್ಲೇ ಸುವರ್ಣ ಸೌಧದಲ್ಲಿ ಇದ್ದರೂ ಸಹ ಮುಖ್ಯಮಂತ್ರಿಗಳು ಮನಸ್ಸು ಮಾಡಲಿಲ್ಲ. ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡುವ ಸೌಜನ್ಯವನ್ನು ತೋರಲಿಲ್ಲ; ಬದಲಾಗಿ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದು, ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಆಗಿರುವುದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು. ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ಲಾಠಿ ಚಾರ್ಜ್ ಮಾಡಿಸಿದ್ದಾರೆ ಎಂಬ…

Read More

ಹುಬ್ಬಳ್ಳಿ : ಪಂಚಮಸಾಲಿ ಸಮುದಾಯದವರಿಗೆ 2 A ಮೀಸಲಾತಿ ನೀಡುವ ವಿಚಾರಕ್ಕೆ ಸುವರ್ಣ ಸೌಧದ ಬಳಿ ಪ್ರತಿಭಟನಾ ಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ವಿರೋಧಿಸಿ ರಾಜ್ಯಾದ್ಯಂತ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹುಬ್ಬಳ್ಳಿ ಹಾಗೂ ಗದಗದಲ್ಲಿ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಸಮುದಾಯ ಹೋರಾಟಗಾರರು, ಉಣಕಲ್ ಕೆರೆಯ ಬಳಿ ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದ ಘಟನೆ ನಡೆಯಿತು. ಇನ್ನು ಗದಗದಲ್ಲಿ ಕೂಡ ಜಿಲ್ಲಾಧಿಕಾರಿ ಕಚೇರಿಯ ಸಮೀಪ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಒಬ್ಬರ ಕಾಲಿಗೆ ಬೆಂಕಿ ತಗುಲಿದ ಘಟನೆ ನಡೆಯಿತು.

Read More

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಕಲಾಪ ಆರಂಭವಾಗಿದ್ದು, ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆಯಿತು. ಇದರ ಮಧ್ಯ ಬೆಳಗಾವಿಯ ಹಿರೇಬಾಗೇವಾಡಿ ಬಳಿ ಪಂಚಮಸಾಲಿ ಹೋರಾಟದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಪಂಚಮಸಾಲಿ ಹೋರಾಟ ಸ್ಥಳಕ್ಕೆ ಮಾರಕಾಸ್ತ್ರ ತಂದಿದ್ದು ಪತ್ತೆಯಾಗಿದೆ. ಹೌದು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಹೋರಾಟ ನಡೆಸಲಾಗುತ್ತಿದ್ದು, ಸ್ಕೂಟರ್ ಮೇಲೆ ಇದ್ದಂತಹ ಮಾರಕಾಸ್ತ್ರಗಳನ್ನು ಕಂಡು ಪೊಲೀಸರೆ ಶಾಕ್ ಆಗಿದ್ದಾರೆ. ಪಂಚಮಸಾಲಿ ಹೋರಾಟಕ್ಕೆ ಬಂದವರು ಮಾರಕಾಸ್ತ್ರ ತಂದಿದ್ದರ ಅಥವಾ ಬೇರೆ ಯಾರಾದರೂ ತೆಗೆದುಕೊಂಡು ಹೋಗುತ್ತಿದ್ದೀರಾ ಅಂತ ಪೊಲೀಸರು ಪರಿಶೀಲನೆ ಮಾಡಿಸುತ್ತಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ.

Read More

ಕೊಡಗು : ಇಂದಿನ ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ. ಪೋಷಕರಾಗಲಿ ಬೇರೆ ಯಾರೇ ಏನೇ ಅಂದರೂ ಕೂಡ ಸಾಕು ಏನಾದರೂ ಒಂದು ಅನಾಹುತ ಮಾಡಿಕೊಳ್ಳುತ್ತಾರೆ. ಇದೀಗ ಕೊಡಗಿನಲ್ಲೂ ಕೂಡ ಅಂಥದ್ದೇ ಘಟನೆ ನಡೆದಿದ್ದು, ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಅಕ್ಕ ತಮ್ಮ ನಡುವೆ ಮೊಬೈಲ್ ವಿಚಾರವಾಗಿ ಗಲಾಟೆಯಾಗಿದ್ದು, ಮನನೊಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಕೊಡಗು ಜಿಲ್ಲೆಯ ಕುಶಾಲ್ ನಗರದ ಆದಿಶಂಕರಾಚಾರ್ಯ ಬಡಾವಣೆ ನಿವಾಸಿ ರಣಜಿತ್ ಸಿಂಗ್ ಅವರ ಪುತ್ರಿ ಭಾವನ (19) ಮೃತ ದುರ್ದೈವಿ ಎಂದು ತಿಳಿದುಬಂದಿದೆ. 10ನೇ ತರಗತಿ ಮುಗಿಸಿಕೊಂಡ ಭಾವನಾ ಅಪ್ಪನಿಗೆ ಸಹಾಯ ಮಾಡಲು ಫ್ಯಾನ್ಸಿ ಸ್ಟೋರ್ ಅಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಡಿ.8 ರಂದು ಅಂಗಡಿಯಲ್ಲಿದ್ದ ಭಾವನ ಹಾಗೂ ಆಕೆಯ ತಮ್ಮನಾದ ಮಹಿಪಾಲ್ ನಡುವೆ ಜಗಳವಾಗಿದೆ. ಇದರಿಂದ ಬೇಸರಗೊಂಡ ಭಾವನ ಮನೆಗೆ ಹೋಗಿರುವುದಾಗಿ ತಿಳಿಸಿ ಹೊರಟಿದ್ದಾಳೆ. ಮನೆಗೆ ಹೋಗುತ್ತೇನೆ ಎಂದು ಹೇಳಿದ ಭಾವನ ರಾತ್ರಿಯಾದರೂ ಮನೆಗೆ ಬಾರದೆ ಇದುದ್ದನ್ನು ತಿಳಿದು ತಂದೆ…

Read More

ಬೆಳಗಾವಿ : ಬೆಳಗಾವಿಯಲ್ಲಿ ಸುವರ್ಣಸೌಧ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ತಡೆದು ಲಾಠಿಚಾರ್ಜ್ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸುವರ್ಣಸೌಧ ಮುತ್ತಿಗೆ ಹಾಕುವುದನ್ನು ತಡೆಯಬೇಕಾಗಿತ್ತು. ಹಾಗಾಗಿ ಅನಿವಾರ್ಯವಾಗಿ ಲಾಠಿಚಾರ್ಜ್ ಮಾಡಬೇಕಾಯಿತು ಎಂದು ಪೊಲೀಸರು ನಡೆದುಕೊಂಡ ರೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಹದೇವಪ್ಪ, ವೆಂಕಟೇಶ್, ಸುಧಾಕರ್ ಅವರನ್ನ ಮೂರು ಜನ ಸಚಿವರುಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅದರಲ್ಲಿ ಸ್ಥಳೀಯ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಕೂಡ ಇದ್ದರು ಅವರು ಕೂಡ ಮುಖ್ಯಮಂತ್ರಿಗಳು ಈ ರೀತಿ ಹೇಳಿದ್ದಾರೆ. ಎಲ್ಲರು ಕುಳಿತುಕೊಂಡು ಚರ್ಚೆ ಮಾಡೋಣ ಬನ್ನಿ ಅಂತ ಹೇಳಿದ ಕಳಿಸಿದ್ದಾರೆ ಎಂದರು. ಆಗಲು ಕೂಡ ಇಲ್ಲ ನಾವು ಬರೋದಿಲ್ಲ ಮುಖ್ಯಮಂತ್ರಿಗಳೇ ಇಲ್ಲಿಗೆ ಬರಲಿ ಅಂತ ಹೇಳಿದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬರೋದಿಕ್ಕೆ ಸಾಧ್ಯವಿಲ್ಲ ಎಂದಾಗ ಇದಕ್ಕಿದಂತೆ ಸ್ವಾಮೀಜಿಯವರು ವಿಧಾನಸೌಧಕ್ಕೆ ಹೋಗೋಣ ಬನ್ನಿ ಎಂದು ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ರಸ್ತೆಗೆ…

Read More

ಬೆಳಗಾವಿ : ಬೆಳಗಾವಿಯಲ್ಲಿ ಸುವರ್ಣ ಸೌಧ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಘಟನೆಯ ಸಂಪೂರ್ಣ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಪಡೆದುಕೊಂಡರು. ಬೆಳಗಾವಿಯ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಕರಣದ ಕುರಿತು ಮಾಹಿತಿ ನೀಡಿದರು. ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿರುವ ಕುರಿತಂತೆ, ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ ರೋಷನ್ ಮಾಹಿತಿ ನೀಡಿದ್ದು, ಅವರಿಂದ ವಿಡಿಯೋ ಮತ್ತು ಹೈಕೋರ್ಟ್ ಆದೇಶದ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಕುರಿತಂತೆ ಹೈಕೋರ್ಟ್ ಹೋರಾಟಕ್ಕೆ ಅನುಮತಿ ನೀಡಿತ್ತು. ಆದರೆ ಪ್ರತಿಭಟನೆ ವೇಳೆ ಹೈ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದು ಬೆಳಗಾವಿ ಡಿಸಿ ಮಾಹಿತಿ ನೀಡಿದ್ದಾರೆ.ಲಾಠಿಚಾರ್ಜ್ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣವಾದ ಮಾಹಿತಿ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದರು. ಸದನದಲ್ಲಿ ಸಿದ್ದರಾಮಯ ಈ ಕುರಿತು ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

Read More