Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ಸಾವನಪ್ಪಿದ್ದರು. ಇಂದು ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅವರ ಹುಟ್ಟೂರಾದ ಸೋಮನಹಳ್ಳಿಗೆ ತಂದು, ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಎಸ್ಎಮ್ ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಅವರು ತಾತನ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು. ಈ ಒಂದು ಅಂತ್ಯಕ್ರಿಯೆಯಲ್ಲಿ ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದು, ಅಂತ್ಯಕ್ರಿಯೆಗೆ ಸುಮಾರು 15 ಜನ ಸ್ವಾಮೀಜಿಗಳು ವೇದ ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ, ಒಕ್ಕಲಿಗ ಸಂಪ್ರದಾಯದಂತೆ ಎಸ್ ಎಂ ಕೃಷ್ಣ ಅವರ ಚಿತೆಗೆ ಅವರ ಪ್ರೀತಿಯ ಮೊಮ್ಮಗ ಆದಂತಹ ಅಮರ್ತ್ಯ ಅವರು ಅಗ್ನಿಸ್ಪರ್ಶಿಸುವ ಮೂಲಕ ತಾತನ ಚಿತೆಗೆ ಅಗ್ನಿಸ್ಪರ್ಶಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಅಂತ್ಯಕ್ರಿಯೆಗೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್…
ಬೆಂಗಳೂರು : ಕಳೆದ ಹಲವು ದಿನಗಳ ಹಿಂದೆ ತಮಿಳುನಾಡಿನಲ್ಲಿ ಉಂಟಾಗಿದ್ದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲು ಬಿರಿತ್ತು. ಬಳಿಕ ಆ ಒಂದು ಚಂಡಮಾರುತದಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಹಲವರು ಅವಂತರ ಸೃಷ್ಟಿಯಾಗಿತ್ತು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೌದು ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಮತ್ತು 18 ಡಿಗ್ರಿ ಇರಲಿದೆ ಎಂದು ಇಲಾಖೆ ಮಾಹಿತಿ…
ಮಂಡ್ಯ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ನಿನ್ನೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದು ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅದಕ್ಕೂ ಮುನ್ನ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮಾಜಿ ಸಿಎಂ SMK ವಿಧಿವಶ ಹಿನ್ನೆಲೆಯಲ್ಲಿ ಸರ್ಕಾರದಿಂದ ಗೌರವ ವಂದನೆ ಸಮರ್ಪಿಸಲಾಯಿತು. ಸರ್ಕಾರದಿಂದ SMKಗೆ ಅಂತಿಮ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು. ಡಿಕೆಶಿಯಿಂದ ಕಣ್ಣೀರ ಬೀಳ್ಕೊಡುಗೆ ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದ ಬಳಿಕ, ಮೂರು ಬಾರಿ ಕುಶಾಲು ತೋಪು ಸಿಡಿಸಿ ಗೌರವ ಸೂಚಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತ್ಯಕ್ರಿಯೆಗೊಂಡ ಅಂತಿಮ ನಮ ಸಲ್ಲಿಸಿದರು. ಅವರ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು…
ಹುಬ್ಬಳ್ಳಿ : ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ 29 ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ಡಿಸೆಂಬರ್ 7 ರಿಂದ 10, 2024 ರವರೆಗೆ ಒಡಿಶಾದ ಪುರಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶಾದ್ಯಂತದ ಸ್ಪರ್ಧಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದರು. ನೈಋತ್ಯ ರೈಲ್ವೆ ತಂಡವು ಒಟ್ಟು ಏಳು ಸ್ಪರ್ಧಿಗಳನ್ನು ಒಳಗೊಂಡಿತ್ತು, ಅದರಲ್ಲಿ ನಾಲ್ವರು – ವೆಂಕಪ್ಪ ಕೆ, ಮೇಘಾ ಗುಗಾಡ್, ಕಾವೇರಿ ಮುರಾನಾಳ್ ಮತ್ತು ಚೈತ್ರಾ ಬೋರ್ಜಿ ಅವರನ್ನೊಳಗೊಂಡ ತಂಡ 60 ಕಿ.ಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು. ವೈಯಕ್ತಿಕ ಸಾಧನೆಗಳು: 1. ಬಾಗಲಕೋಟೆಯಲ್ಲಿ ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕಲೆಕ್ಟರ್ ಆಗಿರುವ ವೆಂಕಪ್ಪ ಕೆ. 60 ಕಿ.ಮೀ ಮಿಶ್ರ ತಂಡ ರಿಲೇ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 2. ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿರುವ, ಕಾವೇರಿ ಮುರಾನಾಳ್: •…
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮನವಿ ಮಾಡಿದ್ದು,ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಶ್ರೀ ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ…
ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಇದೀಗ ಚಲನಚಿತ್ರ ನಟ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಕೂಡ ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಂದ ಕಲಿಯೋದು ತುಂಬಾ ಇದೆ. ಇಂದಿನ ಯುವ ರಾಜಕಾರಣಿಗಳಿಗೆ ಅವರ ರಾಜಕೀಯ ಜೀವನ ಮಾರ್ಗದರ್ಶನವಾಗಿದೆ.ನಮ್ಮ ದೇಶ ಇಂದು ಒಳ್ಳೆ ನಾಯಕನನ್ನು ನಾವು ಕಳೆದುಕೊಂಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಗುರುತಿಸುತ್ತಾರೆಂದರೆ ಅದೆಲ್ಲ ಕ್ರೆಡಿಟ್ ಎಸ್. ಎಂ ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಅಭಿಷೇಕ್ ಅಂಬರೀಶ್ ಅವರು ಸಂತಾಪ ಸೂಚಿಸಿದರು.. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ…
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರವು ಇದೀಗ ಅವರ ಹುಟ್ಟುವದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮಕ್ಕೆ ತಲುಪಿದೆ. ಇವಳೇ ದಾರಿ ಉದ್ದಕ್ಕೂ ಸಹಸ್ರಾರು ಜನರು ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಇಂದು ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದಿಂದ ಹೊರಟ ಅವರ ಪಾರ್ಥಿವ ಶರೀರವು, ಬಿಡದಿ ರಾಮನಗರ ಚನ್ನಪಟ್ಟಣದ ಮೂಲಕ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮಕ್ಕೆ ತಲುಪಿದೆ. ಈ ವೇಳೆ ಸೋಮನಹಳ್ಳಿಯ ಗ್ರಾಮದ ಎಲ್ಲಾ ಜನರು ಎಸ್ಎಮ್ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಈಗಾಗಲೇ ಸೋಮನಹಳ್ಳಿ ಗ್ರಾಮದಲ್ಲಿ ಭಾನುಪ್ರಕಾಶ್ ಅವರು ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಲಿದೆ. ಸ್ಥಳದಲ್ಲಿ ಸಚಿವ ಚೆಲುವರಾಯಸ್ವಾಮಿ ಅಂತ್ಯಕ್ರಿಯೆ ಸಕಲ ಸಿದ್ಧತೆ ಪರಿಶೀಲನೆ ಮಾಡಿದರು.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮುದ್ರದ ಬಿಸ್ನಲ್ಲಿ ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಮುರುಡೇಶ್ವರ ಪೊಲೀಸರು ಮೊರಾರ್ಜಿ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಸೇರಿದಂತೆ ಆರು ಜನರ ವಿರುದ್ಧ ಸ್ವಯಂ ಪ್ರೇರಿತ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ವಸತಿ ಶಾಲೆಯ ಶಿಕ್ಷಕರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪೊಲೀಸರಿಂದ ಇದೀಗ ಸುಮೊಟೋ ಕೇಸ್ ದಾಖಲಾಗಿದೆ.ಮೊರಾರ್ಜಿ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಮುಖ್ಯ ಶಿಕ್ಷಕಿ ಶಕಲಾ (40) ಶಿಕ್ಷಕರಾದ ಆರು ಸುನಿಲ್ (33) ಎಸ್ ಚೌಡಪ್ಪ (34) ಎಸ್ ವಿಶ್ವನಾಥ್ (27) ಸಿಎನ್ ಶಾರದಮ್ಮ (37) ಹಾಗೂ ಕೆ ನರೇಶ್ (30) ಎನ್ನುವವರ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಹಲವು ಶಿಕ್ಷಕ, ಸಿಬ್ಬಂದಿಗಳನ್ನು ವಜಾ ಕೂಡ ಮಾಡಲಾಗಿದೆ.
ಬೆಂಗಳೂರು : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚಿನಲ್ಲಿ ವಿದ್ಯಾರ್ಥಿನಿಯರು ಮುದ್ರ ಪಾಲಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿನಿಯರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಸಂತಾಪ ಸೂಚಿಸಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ. ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ…
ಚಾಮರಾಜನಗರ : ನಿನ್ನೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಶಾಸಕ ಎಸ್ ಜಯಣ್ಣ ಅವರು ಕೂಡ ಹೃದಯಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ತೆರಳಿ ಜಯಣ್ಣ ಅವರ ಅಂತಿಮ ದರ್ಶನ ಪಡೆದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎಸ್ ಜಯಣ್ಣನಿನ್ನೆ ನಿಧನರಾಗಿದ್ದಾರೆ.ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಮಾಜಿ ಶಾಸಕ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದರು. ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ಜಯಣ್ಣ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಆಪ್ತ ಹಾಗೂ ಗೆಳೆಯನನ್ನು ನೋಡಿ ಸಿಎಂ ಸಿದ್ದರಾಮಯ್ಯ ಭಾವುಕರಾದರು.












