Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಹೊಂಬಳೆ ಸಂಸ್ಥೆಯ ಬಘೀರ ಚಿತ್ರಿಕರಣದ ಸಮಯದಲ್ಲಿ ಚಿತ್ರದಲ್ಲಿನ ಮುಖ್ಯವಾಗಿ ನಡೆಯುವ ಸನ್ನಿವೇಶದ ಬಹು ದೊಡ್ಡ ಸ್ಟಂಟ್ ಸೀನ್ ಫೈಟಿಂಗ್ ವೇಳೆ ರೋರಿಂಗ್ ಸ್ಟಾರ್ ಕನಕ ಶ್ರೀಮುರುಳಿಗೆ ಕಾಲಿಗೆ ಗಂಭೀರವಾದಂತಹ ಗಾಯಗಳಾಗಿದ್ದು ಇದೀಗ ಅವರನ್ನು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಘೀರ ಸಿನಿಮಾ ಶೂಟಿಂಗ್ ವೇಳೆ ನಡೆದ ಘಟನೆಯಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಗಾಯಗೊಂಡಿದ್ದಾರೆ. ಬಘೀರ ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ಸಂಧರ್ಭ ಕಾಲಿಗೆ ಪೆಟ್ಟು ಬಿದ್ದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಘೀರ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಕಾಲಿಗೆ ಗಾಯವಾದ ತಕ್ಷಣ ಅವರನ್ನು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು.ಈ ಒಂದು ಬಘಿರ ಸಿನಿಮಾದಲ್ಲಿ ಅತ್ಯಂತ ದೊಡ್ಡದಾದ ಆಕ್ಷನ್ ಸೀನ್ ಇರುವುದರಿಂದ ಈ ವೇಳೆ ಶ್ರೀ ಮುರುಳಿ ಅವರಿಗೆ ಸ್ಟಂಟ್ ಮಾಡುವ ವೇಳೆ ಕಾಲಿಗೆ ಗಂಭೀರವಾದ ಗಾಯಗಳಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆ ಕೆಸ್ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಹುಬ್ಬಳ್ಳಿ ನಗರದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಆಗ್ರಹಿಸಿದರು. ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ನೇಹಾ ಹತ್ಯೆ ಕೇಸನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಪೊಲೀಸರು ಅಸಮರ್ಥರಿದ್ದು ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದರು. ಇಡೀ ದೇಶವೇ ನೇಹಾ ಹಿರೇಮಠ ಕುಟುಂಬದ ಪರ ಇದೆ.ಸಿಎಂ ಹಾಗೂ ಗೃಹ ಸಚಿವರ ಹೇಳಿಕೆ ಪ್ರಕರಣದ ಹಾದಿಯನ್ನು ತಪ್ಪಿಸುತ್ತಿದೆ. ಕರ್ನಾಟಕದ ಜನತೆ ಇದನ್ನು ಕ್ಷಮಿಸುವುದಿಲ್ಲ. ಸಿಎಂ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪರಿಣಾಮ ಬೀರುತ್ತದೆ.ನೇಹಾ ಹಿರೇಮಠ ತಂದೆಗೂ ರಾಜ್ಯ ಸರ್ಕಾರದ ಮೇಲೆ ಭರವಸೆ ಇಲ್ಲ. ಹಾಗಾಗಿ ತನಿಖೆಯನ್ನು ಸಿಬಿಐಗೆ ವಹಿಸಲು ನಿರಂಜನ ಹಿರೇಮಠ ಸಹ ಮನವಿ ಮಾಡಿದ್ದಾರೆ. ರಾಜ್ಯ ಪೊಲೀಸರು ಅಸಮರ್ಥರಿದ್ದಾರೆ ಹಾಗಾಗಿ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದರು. INDIA ಒಕ್ಕೂಟದ ಬಗ್ಗೆ ಲೇವಡಿ ಇನ್ನೂ ಇಂಡಿಯಾ ಒಕ್ಕೂಟದ…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನದಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಆರು ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹುಬ್ಬಳ್ಳಿ ಈಶ್ವರ ನಗರದ ಮುಸ್ಲಿಂ ಕುಟುಂಬದ ಸುಮಾರು ಎಂಟು ಜನರು ಪ್ರವಾಸಕ್ಕೆ ಎಂದು ದಾಂಡೇಲಿ ಗೆ ತೆರಳಿದ್ದರು. ಈ ವೇಳೆ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿತ್ತು. ಈ ವೇಳೆ ಮಗು ಒಂದು ಆಕಸ್ಮಿಕವಾಗಿ ನದಿಗೆ ಬಿದ್ದಿತ್ತು ಈ ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರಂತೆ ಆರು ಜನ ನದಿಯಲ್ಲಿ ಹೋಗಿದ್ದಾರೆ.ಹಾಗಾಗಿ ಆರು ಜನರು ನಿರುಪಾಲಾಗಿ ಇದೀಗ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಟುಂಬದ ಒಟ್ಟು ಎಂಟು ಜನರು ಪ್ರವಾಸಕ್ಕೆ ಎಂದು ತೆರಳಿದ್ದರು.ಕಾಳಿ ನದಿಯಿಂದ ಇದೀಗ ಪೊಲೀಸರು ಆರು ಮೃತ ದೇಹವನ್ನು ಹೊರ ತೆಗೆದಿದ್ದು ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿ ಆಸ್ಪತ್ರೆಗೆ ಆರು ಶವಗಳನ್ನು ಸ್ಥಳಾಂತರಿಸಲಾಗಿದೆ.ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಕಾಳಿ ನದಿಯಲ್ಲಿ ಈಜಲು ಇಳಿದಿದ್ದ ಹುಬ್ಬಳ್ಳಿಯ ಈಶ್ವರ ನಗರದ ಒಂದೇ ಕುಟುಂಬದ 6 ಜನರು ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದಲ್ಲಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದ ಒಂದೇ ಕುಟುಂಬದ 6 ಪ್ರವಾಸಿಗರು ಇದೀಗ ನೀರುಪಾಲಾಗಿರುವ ಘಟನೆ ನಡೆದಿದೆ. ಕಾಳಿ ನದಿಯಲ್ಲಿ ಈ ಒಂದು ದುರಂತ ಸಂಭವಿಸಿದ್ದು ನದಿಗೆ ಈಜಲು ಇಳಿದಿದ್ದ 6 ಜನ ಪ್ರವಾಸಿಗರು ಈಗ ನಿರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿಯ ಈಶ್ವರ ನಗರದ ಒಂಡೇ ಕುಟುಂಬದ ಆರು ಜನರು ಇದೀಗ ಸಾವನಪ್ಪಿದ್ದಾರೆ.ನದಿಯಲ್ಲಿ ಈಜಲು ಇಳಿದಿದ್ದ ಒಂದೇ ಪ್ರವಾಸಿಗರು ಇದೀಗ ದುರ್ಮರಣ ಹೊಂದಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಗ್ರಾಮದ ಬಳಿ ಕಾಳಿ ನದಿಯಲ್ಲಿ ಈ ಒಂದು ದುರಂತ ಸಂಭವಿಸಿದೆ. ದಾಂಡೇಲಿ ತಾಲೂಕಿನಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ವಿಜಯಪುರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಜಾರಿಗೆ ಮಾಡಿದ್ದು ಅಕ್ರಮವಾಗಿ ಹಣ ಮದ್ಯ ಸೇರಿದಂತೆ ಇತರೆ ವಸ್ತುಗಳನ್ನು ಸಾಗಾಟ ಮಾಡುವವರ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕೆಎ 18 ಎಂಎ 6462 ಸಂಖ್ಯೆಯ ಕಾರಿನಲ್ಲಿ ಹಣ ಸಾಗಿಸುತ್ತಿದ್ದರು. ಬಸವಣ್ಣ ಬಾಗೇವಾಡಿ ತಹಸೀಲ್ದಾರ್ ಸೋಮನಕಟ್ಟಿ ಹಾಗೂ ಪೊಲೀಸ್ ಅಧಿಕಾರಿಗಳು ಸೇರಿ 50 ಲಕ್ಷ ನಗದು ಹಾಗೂ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ಮತ್ತೊಮ್ಮೆ ಮೋದಿ ಸರ್ಕಾರವನ್ನು ತರಲು ಜನ ನಿರ್ಧರಿಸಿದ್ದಾರೆ. ಮೋದಿ ಸರ್ಕಾರ ಬರುವುದು ಸೂರ್ಯ ಚಂದ್ರ ಇರುವುದಷ್ಟೇ ಸತ್ಯ. ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಕಾಂಗ್ರೆಸ್ ಗ್ಯಾರಂಟಿ ರೀತಿ ಅಲ್ಲ.ಬಡವರ ಶೋಷಿತರ ಜನಜೀವನ ಸುಧಾರಿಸುವ ಗ್ಯಾರಂಟಿಯಾಗಿದೆ ಎಂದು ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಬಿಎಸ್ ಯಡಿಯೂರಪ್ಪ ಹೇಳಿದರು.. ಮೋದಿ ದೇಶಕ್ಕೆ ಅಂಟಿದ ಶನಿ ಎಂದು ರಮೇಶ್ ಕುಮಾರ್ ಹೇಳಿಕೆಗೆ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ರಮೇಶ್ ಕುಮಾರ್ ಅವರಿಗೆಲ್ಲ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಬಿಎಸ್ ಯಡಿಯೂರಪ್ಪ ಹೇಳಿದರು. ಲೋಕಸಭಾ ಚುನಾವಣೆಯ ಫಲಿತಾಂಶವೇ ಅವರಿಗೆ ಉತ್ತರ ಕೊಡುತ್ತದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಗೋವಿಂದ ಕಾರಜೋಳ ಗೆದ್ದಾಗಿದೆ. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲುವ ಭರವಸೆ ಇದೆ ಎಂದು ತಿಳಿಸಿದರು.
ಬೆಂಗಳೂರು : ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಹಮ್ಮದ್ ನಲಪಾಡ್ ಚಂಬು ಪ್ರದರ್ಶಿಸಿದರು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಪ್ರಧಾನಿ ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗದಿಂದ ದೂರು ಸಲ್ಲಿಕೆಯಾಗಿದೆ.ವಸಂತ್ ಕುಮಾರ್ ನೇತೃತ್ವದ ನಿಯೋಗದಿಂದ ಇದೀಗ ದೂರು ಸಲ್ಲಿಕೆಯಾಗಿದೆ. ಬಿಜೆಪಿ ಕಾನೂನು ಪ್ರಕೋಷ್ಠ ರಾಜ್ಯಸಂಚಾಲ ವಸಂತ್ ಕುಮಾರ್ ಅವರು ಇದೀಗ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಮೊಹಮ್ಮದ್ ನಲಪಾಡ್ ಹಾಗೂ ಸಿದ್ದಾಪುರ ಜಾನಿ ಪ್ರತಿಭಟನೆ ಮಾಡಿದ್ದಾರೆ ಚೊಂಬು ಪ್ರದರ್ಶಿಸಿದ್ದಾರೆ. ಪೊಲೀಸರು ಇದ್ದರೂ ಕೂಡ ಲೆಕ್ಕಿಸದೆ ಪ್ರಧಾನಿ ಅವರು ಬರುವ ರಸ್ತೆಯಲ್ಲಿ ನುಗ್ಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ : ವಿದ್ಯಾವಂತ ಯುವಕರು ಉದ್ಯೋಗ ನೀಡಿ ಎಂದು ಕೇಳಿದರೆ ಪಕೋಡ ಮಾರಿ ಹೋಗಿ ಎಂದು ಹೇಳುತ್ತಾರೆ. ಮೋದಿ ಪ್ರಧಾನಿ ಆಗೋದಕ್ಕೆ ಲಾಯಕ್ಕಾ ಅಥವಾ ನಾಲಾಯಕ ನೀವೇ ತೀರ್ಮಾನಿಸಿ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಹತ್ತು ವರ್ಷಗಳಾದರೂ ಮೋದಿ ಸಾರ್ವಜನಿಕರಿಗೆ 15 ಲಕ್ಷ ರೂಪಾಯಿ ಹಾಕಿಲ್ಲ.ಚಿಕ್ಕಬಳ್ಳಾಪುರ ಜಿಲ್ಲೆಯ ಹಿಡ್ಲಘಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಮೋದಿ ಜನರಿಗೆ ಭರವಸೆ ನೀಡಿದಂತೆ ನಡೆದುಕೊಂಡಿಲ್ಲ ಎಂದು ಕಿಡಿ ಕಾರಿದರು. ವಿದ್ಯಾವಂತರು ಪಕೋಡ ಮಾರಾಟ ಮಾಡಲು ಹೋಗಿ ಅಂದಿದ್ದಾರೆ. ಮೋದಿ ಪ್ರಧಾನಿ ಆಗೋದಕ್ಕೆ ಲಾಯಕ್ಕಾ? ನಾಲಾಯಕ್? ತೀರ್ಮಾನಿಸಿ. ನಾಲಾಯಕ್ ಅಂತ ಆದ್ರೆ ನರೇಂದ್ರ ಮೋದಿಗೆ ವೋಟ್ ಹಾಕಬೇಡಿ. ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಕೆಟ್ಟ ದಿನಗಳು ಬಂದಿವೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎಂದು ಕಿಡಿ ಕಾರಿದರು.
ಹುಬ್ಬಳ್ಳಿ : ಹುಬ್ಬಳ್ಳಿಯ ಬಿ ವಿ ಬಿ ಕಾಲೇಜಿನಲ್ಲಿ ಭೀಕರವಾಗಿ ಕೊಲೆಯಾದ ನೇಹ ಹಿರೇಮಠ್ ತಂದೆ ನಿರಂಜನ ಹಿರೇಮಠ್ ಗೆ ಇದೀಗ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆಯಾದ ವಿದ್ಯಾರ್ಥಿನಿಯ ತಂದೆಗೆ ಬೆದರಿಕೆ ಕರೆ ಬರುತ್ತಿವೆ. ಕಾಂಗ್ರೆಸ್ ಸರ್ಕಾರದ ಅಸಡ್ಡೆಯೇ ಇದಕ್ಕೆಲ್ಲಾ ಕಾರಣವಾಗಿದೆ ಬೆದರಿಕೆ ಕರೆಗಳ ಬಗ್ಗೆ ನಿರಂಜನ ಹಿರೇಮಠ ನನ್ನ ಮುಂದೆ ಹೇಳಿದ್ದಾರೆ. ಅನೇಕ ವಿಚಾರಗಳನ್ನು ಹೇಳಿದ್ದಾರೆ ಆದರೆ ಅವನಲ್ಲ ಹೇಳಲು ಆಗುವುದಿಲ್ಲ. ಯುವತಿ ನೇಹಾ ಜೀವ ಹೋಗಿದೆ ಕುಟುಂಬಸ್ಥರು ದುಃಖದಲ್ಲಿದ್ದಾರೆ. ನೇಹಾಳನ್ನು ಮತಾಂತರ ಮಾಡಲು ಆರೋಪಿ ಫಯಾಜ್ ಯತ್ನಿಸಿದ್ದ. ಮತಾಂತರವನ್ನು ವಿರೋಧಿಸಿ ನೇಹಾ ಫಯಾಜ್ ನಿಂದ ದೂರವಾಗಿದ್ದಳು. ಇದೇ ಕಾರಣಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಂದಿದ್ದಾನೆ. ಎಂದರು. ನಿಹಾಳ ಫೋಟೋಗಳನ್ನು ಪೊಲೀಸರೇ ವೈರಲ್ ಮಾಡಿದ್ದಾರೆ. ರಾಜ್ಯ ಸರ್ಕಾರವೇ ಮುಂದೆ ನಿಂತು ಫೋಟೋ ವೈರಲ್ ಮಾಡಿದೆ. ಸಿದ್ದರಾಮಯ್ಯ ಇಂತಹ ಚಿಲ್ಲರೆ ರಾಜಕಾರಣ ಮಾಡೋದಾ? ನೇಹಾ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಥಮ ಅವರು ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಿ ನಿರಂಜನ್ ಹಿರೇಮಠ ಹಾಗೂ ನೇಹಾಳ ತಾಯಿ ಅವರನ್ನು ಭೇಟಿಯಾಗಿ ಅವರನ್ನು ಸಂತೈಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಹುಡುಗಿಯರ ಜೊತೆ ನೀವು ಲವ್ ಯಾಕೆ ಮಾಡುತ್ತೀರಿ? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ ಆಗುತ್ತಿರುವುದು. ನಿಮ್ಮ ಪಾಡಿಗೆ, ನಿಮ್ಮ ಸಮುದಾಯದವರನ್ನೇ ಮದುವೆ ಆಗಿ. ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ? ಎಂದು ಪ್ರಶ್ನಿಸಿದ್ದಾರೆ. ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು? ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಇನ್ನೊಮ್ಮೆ ಹಿಂದೂಗಳ ತಂಟೆಗೆ ಬರಬೇಡಿ ಎಂದು ನಟ ಪ್ರಥಮ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಲಾವಿದರು ಎಲೆಕ್ಷನ್ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ. ಅಂಥ ಕಲಾವಿದರನ್ನು ತಲೆ…