Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಡೀ ದೇಶದ ಜನತೆಗೆ ಅಷ್ಟೇ ಅಲ್ಲ ಬಿಜೆಪಿಯವರಿಗೂ ಕೂಡ ಭಯ ಹುಟ್ಟಿಸಿದ್ದಾರೆ ಎಂದು ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಇಡಿ ದೇಶದಲ್ಲಿ ನರೇಂದ್ರ ಮೋದಿ ಭಯ ಹುಟ್ಟಿಸಿದ್ದಾರೆ. ಬೆಳಗ್ಗೆ ಸದನಕ್ಕೆ ಬಂದಾಗ ರಾಜನಾಥ್ ಸಿಂಗ್ ಗೆ ಅತ್ಯಂತ ನಗುಮುಖದಿಂದ ಸ್ವಾಗತಿಸಿದರು. ಆದರೆ ಮೋದಿ ಮುಖದಲ್ಲಿ ನಗುವಿರು ಇಲ್ಲ ನಗು ಮಾಯವಾಗಿದೆ. ನಿತಿನ್ ಗಡ್ಕರಿ ಪರಿಸ್ಥಿತಿ ಸಹ ಇದೇ ರೀತಿ ಆಗಿದೆ ಎಂದರು. ಮೋದಿಯವರು ಕೇವಲ ದೇಶದ ಜನತೆಗೆ ಮಾತ್ರ ಭಯ ಹುಟ್ಟಿಸಿಲ್ಲ. ಬಿಜೆಪಿಯವರಿಗೂ ಮೋದಿ ಭಯ ಹುಟ್ಟಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಮಾತಿಗೆ ಸ್ಪೀಕರ್ ಓಂ ಬಿರ್ಲಾ ಈ ವೇಳೆ ಆಕ್ಷೇಪ ವ್ಯಕ್ತಪಡಿಸಿದರು. ಸದನದ ಗೌರವ ಉಳಿಸಿ ವ್ಯಕ್ತಿಗತ ದಾಳಿ ಬೇಡ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಿ ಎಂದು…
ಬಳ್ಳಾರಿ : ಸಿಎಂ ಹಾಗೂ ಡಿಸಿಎಂ ವಿಚಾರವಾಗಿ ಯಾರೂ ಬಾಯಿ ಬಿಡಬಾರದು. ಒಂದು ವೇಳೆ ಬಹಿರಂಗ ಹೇಳಿಕೆ ನೀಡಿದರೆ ನೋಟಿಸ್ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇದೀಗ ಶಾಸಕ ಶಿವಗಂಗಾ ಬಸವರಾಜು ಡಿಕೆ ಶಿವಕುಮಾರ್ ಅವರು ಸಿಎಂ ಆಗಲೇಬೇಕು ಹಾಗೆ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 9 ಸ್ಥಾನ ಬರಲು ಡಿಕೆ ಶಿವಕುಮಾರ್ ಅವರೇ ಕಾರಣರಾಗಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ ಎಂದರು. ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಬಳಿಕ ಡಜನ್ಗಟ್ಟಲೆ ಡಿಸಿಎಂ ಮಾಡಲಿ ಬೇಡ ಅನೋದಿಲ್ಲ. ಕೆಲ ಕಾರಣಕ್ಕಾಗಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಸಿಎಂ ಮಾಡಿದೆ. ಡಿಸಿಎಂ ಹುದ್ದೆ ಬೇಕೆಂದವರು ಹೈಕಮಾಂಡ್ ಬಳಿ ತೆರಳಿ ಚರ್ಚಿಸಬೇಕು ಎಂದರು. ಸಿಎಂ…
ಬೆಂಗಳೂರು : ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ವಿಷಯ ಕುರಿತು ಚರ್ಚೆ ಜೋರಾಗಿದ್ದು, ಇದೀಗ ಸಿಎಂ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬದಲಾವಣೆ ವಿಷಯ ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ನಾವು ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಇದು ಬಹಿರಂಗವಾಗಿ ಚರ್ಚಿಸುವ ವಿಷಯವೇ ಅಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಇದೆ ಹೈಕಮಾಂಡ್ ಏನು ಹೇಳುತ್ತದೊ ಅದನ್ನ ನಾವು ಪಾಲಿಸುತ್ತೇವೆ. ಚಂದ್ರಶೇಖರ ಶ್ರೀಗಳ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ಹೆಚ್ಐವಿ ಸೋಂಕಿತನ ಮೇಲೆ ಸಲಿಂಗ ಕಾಮಿ ಅತ್ಯಾಚಾರ ಎಸಗಿ, ಬಳಿಕ ಆತನ ಮನೆಯಲ್ಲಿದ್ದ ನಗದು, ಚಿನ್ನಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ಇಂತಹ ವಿಚಿತ್ರ ಘಟನೆ ನಡೆದಿದ್ದು, 56 ವರ್ಷದ ವ್ಯಕ್ತಿಯ ಮೇಲೆ ಶ್ಯಾಮ್ ಪಾಟೀಲ್ ಎನ್ನುವ ಸಲಿಂಗಕಾಮಿ ಅತ್ಯಾಚಾರ ಎಸಗಿದ್ದಾನೆ.ಹೆಚ್ಐವಿ ಸೋಂಕಿತ ವ್ಯಕ್ತಿ ನೆಟ್ ವರ್ಕ್ ಪಾಸಿಟಿವ್ ಪೀಪಲ್ ಎಂಬ ಹೆಸರಿನ ಎನ್ಜಿಒನಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಹಿಂದೆ ಶ್ಯಾಮ್ ಪಾಟೀಲ್ ಎಂಬ ವ್ಯಕ್ತಿ ತನಗೆ ಟಿಬಿ ಕಾಯಿಲೆ ಇದೆ ಎಂದು ಹೆಚ್ಐವಿ ಸೋಂಕಿತ ವ್ಯಕ್ತಿಗೆ ಪರಿಚಯನಾಗಿದ್ದನು. ಇತ್ತೀಚಿಗೆ ಹೆಚ್ಐವಿ ಸೋಂಕಿತನ ಹೆಂಡತಿ ಮತ್ತು ಮಕ್ಕಳು ಸಂಬಂಧಿಕರ ಮನೆಗೆ ಹೋಗಿದ್ದರು. ಈ ವಿಚಾರ ತಿಳಿದು ಸಲಿಂಗಿ ಕಾಮಿ ಶ್ಯಾಮ್ ಪಾಟೀಲ್ ಹೆಚ್ಐವಿ ಸೋಂಕಿತನ ಮನೆಗೆ ಬಂದಿದ್ದಾನೆ. ಬಳಿಕ ಜ್ಯೂಸ್ನಲ್ಲಿ ನಿದ್ರೆ ಮಾತ್ರೆ ಹಾಕಿ ಹೆಚ್ಐವಿ ಸೋಂಕಿತನಿಗೆ ನೀಡಿದ್ದಾನೆ. ಅಲ್ಲದೆ, ಹೆಚ್ಐವಿ ಸೋಂಕಿತ ವ್ಯಕ್ತಿಯ ಮುಖಕ್ಕೆ ಸ್ಪ್ರೇ…
ಬೆಂಗಳೂರು : ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನ ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ಮೈಸೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮೂಗಿನ ಅಡಿಯಲ್ಲಿ ಇವೆಲ್ಲ ಹಗರಣ ನಡೆದಿವೆ. ಆದರೆ ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮುಚ್ಚಿಹಾಕಲು ನಾಟಕವಡುತ್ತಿದ್ದಾರೆ ಎಂದು ಆರೋಪಿಸಿದರು. ಸಿಎಂ ಮೂಗಿನಡಿ ಸಾವಿರಾರು ಕೋಟಿ ಬೆಲೆ ಬಾಳುವ ಮುಡಾ ಆಸ್ತಿ ಕಳ್ಳರ ಪಾಲಾಗಿದೆ. 69ನೇ ಇಸವಿಯಲ್ಲಿ ಭೂಮಿ ಕಳೆದುಕೊಂಡವರು ಇವತ್ತಿಗೆ ಜ್ಞಾನೋದಯವಾಗಿ ಅರ್ಜಿ ಕೊಟ್ಟಿದ್ದಾರಂತೆ. ಮುಡಾದವರು ಲಕ್ಷ ಲಕ್ಷ ಅಡಿಯನ್ನ ಬಿಟ್ಟು ಕೊಟ್ಟಿದ್ದಾರೆ. ಮುಡಾ ಲೂಟಿಯನ್ನ ನೋಡಿದರೆ ಚಾಲ್ಸ್ ಶೋಬರಾಜ್ ನನ್ನದು ಏನು ಹಗರಣ ಇಲ್ಲ ಅಂದುಕೊಳ್ಳುತ್ತಾರೆ ಎಂದರು.
ಮಂಡ್ಯ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಂದ ಸ್ಯಾಂಡಲ್ ವುಡ್ ಗೆ ಕಳಂಕ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿದ್ದು, ನಟ ದರ್ಶನ್ ನನ್ನು ನನ್ನ ಮಗುವಂತ ತಿಳಿದುಕೊಳ್ಳಿ ಎಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳುವುದು ಬೇಡ.ನಮ್ಮದು ಚಂದನವನ.ಒಂದು ಮಳೆಗೆ ಮರ ಒಣಗಿದರೇನಂತೆ ಇನ್ನೊಂದು ಮಳೆಗೆ ಕಾಡು ಬೆಳೆದೆ ಬೆಳೆಯುತ್ತದೆ. ಸಿನಿಮಾ ಕಲಾವಿದರಾದವರು ಸಣ್ಣದಾಗಿ ಯೋಚನೆ ಮಾಡಬೇಕು. ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು.ದ್ವೇಷವನ್ನ ಕ್ಯಾರೆಕ್ಟರ್ ಮಾಡಬೇಕು. ನಾವು ಆ ರೀತಿ ಸಿನಿಮಾದಲ್ಲಿ ತೋರಿಸಬೇಕು ಅಷ್ಟೇ ನಿಜ ಜೀವನದಲ್ಲಿ ಸ್ಕ್ರಿಪ್ಟನ್ನು ತರಬಾರದು ನಿಜ ಜೀವನದಲ್ಲಿ ಕ್ಯಾರೆಕ್ಟರ್ ಆಗಬಾರದು ಇದು ಕಲಾವಿದರ ಕರ್ತವ್ಯ. ನಟ ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ದಾಗ ತಂದೆ ಎಷ್ಟು ನೋವು ಅನುಭವಿಸುತ್ತಾನೋ, ನಾನು ನೋವು ಅನುಭವಿಸಿದ್ದೇನೆ.…
ಕೊಡಗು : ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿ ನಿರುಪಾಲಾಗಿರುವ ಘಟನೆ ಕೊಡಗು ಜಿಲ್ಲೆ, ಕುಶಾಲನಗರ ತಾಲೂಕಿನ ಹೇರೂರು ಬಳಿ ಈ ಘಟನೆ ನಡೆದಿದೆ. ಹೌದು ಹಾರಂಗಿ ಜಲಾಶಯದ ಹಿನ್ನಿರಿನಲ್ಲಿ ಪ್ರವಾಸಿಗ ನೀರುಪಾಲಾಗಿದ್ದಾನೆ. ಕೊಡಗು ಜಿಲ್ಲೆ, ಕುಶಾಲನಗರ ತಾಲೂಕಿನ ಬೇರೂರು ಬಳಿ ಈ ಘಟನೆ ನಡೆದಿದೆ. ನೀರುಪಾಲದ ಯುವಕನನ್ನು ಮೈಸೂರು ಮೂಲದ ಶಶಿ (30) ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಯುವಕ ಯುವತಿಯರು ಪ್ರವಾಸಕ್ಕೆ ಆಗಮಿಸಿದ್ದರು.ಈ ವೇಳೆ ಹಾರಂಗಿ ಜಲಾಶಯದ ನೀರಿನಲ್ಲಿ ಶಶಿ ಈಜಾಡುತ್ತಿದ್ದ ವೇಳೆ ನೀರು ಪಾಲಾಗಿದ್ದಾನೆ. ನೀರುಪಾಲಾದ ಶಶಿಗಾಗಿ ಇದೀಗ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು : ಇತ್ತೀಚಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ. ಗಳ ಹಗರಣ ನಡೆದಿತ್ತು. ಅದಾದ ಬಳಿಕ ಕಳೆದ ಎರಡು ದಿನಗಳ ಹಿಂದೆ ಬಿಬಿಎಂಪಿಯಲ್ಲಿ ಕೂಡ ಅಕ್ರಮ ಹಣ ವರ್ಗಾವಣೆ ಪ್ರಕರಣ ನಡೆದಿತ್ತು. ಇದೀಗ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತು ತಂಡದ ಸಹಕಾರದಿಂದ ಮುಡಾ ಅಧಿಕಾರಿಗಳು ಸುಮಾರು 5 ಸಾವಿರ ಕೋಟಿ ರೂ. ಗಳ ಅವ್ಯವಹಾರ ನಡೆಸಿದ್ದಾರೆ ಎಂದು ಎಂ.ಎಲ್.ಸಿ ಎಚ್ ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದ ಜಲದರ್ಶಿನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು, ಅಧಿಕಾರಿಗಳು ಸಿಂಡಿಕೇಟ್‌ವೊಂದನ್ನು ರಚಿಸಿಕೊಂಡಿದ್ದಾರೆ. ಇದರ ಮೂಲಕ ಅವ್ಯವಹಾರ ನಡೆಸಿದ್ದಾರೆ. ಅವ್ಯವಹಾರದ ವಿಚಾರ ಹೊರಗೆ ಬರುತ್ತಿದ್ದಂತೆ, ಭಾನುವಾರವಾದರೂ ಅಧಿಕಾರಿಗಳು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಣತಿ ಮೇರೆಗೆ ಮುಡಾದ ಕಡತಗಳನ್ನು ದೊಡ್ಡ- ದೊಡ್ಡ ಸೂಟ್‌ಕೇಸ್‌ಗಳಿಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದರು. ಈ ಒಂದು ಹಗರಣದಲ್ಲಿ ಮುಡಾ ಆಯುಕ್ತ ದಿನೇಶ್ ಕುಮಾರ್, ಶಾಸಕ ಕೆ. ಹರೀಶ್‌ಗೌಡ, ರಾಕೇಶ್ ಪಾಪಣ್ಣ, ಮುಡಾ ಅಧ್ಯಕ್ಷ ಕೆ. ಮರೀಗೌಡ, ಹಿಂದಿನ…
ಹುಬ್ಬಳ್ಳಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಹಾಗೂ ಡಿಸಿಎಂ ಬಗ್ಗೆ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ, ಈ ವಿಷಯವಾಗಿ ಸಂಸದ ಜಗದೀಶ್ ಶೆಟ್ಟರ್ ಅವರು ಮಾತನಾಡಿದ್ದು, ಕಾಂಗ್ರೆಸ್ ಶಾಸಕರಲ್ಲಿಯೇ ಸರ್ಕಾರದ ಬಗ್ಗೆಅಸಮಾಧಾನವಿದೆ ಹಾಗಾಗಿ ಕಾಂಗ್ರೆಸ್ ಶಾಸಕರಿಂದಲೇ ಯಾವುದೇ ಕ್ಷಣದಲ್ಲಾದರೂ ಸರ್ಕಾರ ಪತನ ವಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಸಿಎಂ ಡಿಸಿಎಂ ವಿಷಯದ ಕುರಿತು ಚರ್ಚೆ ನಡೆಯುತ್ತಿರುವ ಪ್ರಶ್ನೆಗಳಿಗೆ ಇಂದು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು,ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ.ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದರು. ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಅದು ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಹೆಚ್ಚಾಗುತ್ತಿದೆ. ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಸರ್ಕಾರ ಪತನವೂ ಆಗಬಹುದು. ಅದು ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗುತ್ತೆ. ಆದರೆ ಯಾವಾಗ ಅನ್ನೋದು ಹೇಳಲು ಬರೋದಿಲ್ಲ…
ಬೆಳಗಾವಿ : ನಮ್ಮನ್ನು ಸೋಲಿಸಲು ಎಲ್ಲಿಂದ ನಿರ್ದೇಶನ ಬಂದಿದೆ ಎಂದು ಗೊತ್ತಿತ್ತು. ಘಾಟಗೆಯವರ ಚಾಡಿ ಮಾತು ಕೇಳುತ್ತಾರೆ ಎಂದು ಹೇಳಿದರು. ನಾನು ಘಾಟಗೆ ಅಲ್ಲ ಹೆಂಡತಿ ಮಕ್ಕಳ ಮಾತನ್ನು ಕೇಳಲ್ಲ. ಮಾಜಿ ಶಾಸಕ ಶ್ಯಾಮ್ ಘಾಟಗೆ ನೀವು ಕುಸ್ತಿ ಆಡಿ ನಮ್ಮ ಚುನಾವಣೆಗೆ ಯಾಕೆ ತೊಂದರೆ ಮಾಡಿದ್ರಿ? ನಿಮಗೆ ಟಿಕೆಟ್ ಕೊಡಿಸಿ ಸಪೋರ್ಟ್ ಮಾಡಿದ್ವಿ, ನೀವ್ಯಾಕೆ ಹೀಗೆ ಮಾಡಿದ್ರಿ ಎಂದು ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೋಗೇರಿಯಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಮಹೇಂದ್ರ ತಮ್ಮಣ್ಣನವರ್ ನೀವು ಸಣ್ಣವರಿದ್ದೀರಿ. ಈಗ ಒಂದು ವರ್ಷವಾಯಿತು ಅಷ್ಟೇ ಬಹಳ ನಿಧಾನವಾಗಿ ಹೋಗಬೇಕು. ಗಾಡಿ ಸ್ಲೋ ಇರಬೇಕು ವೇಗವಾಗಿ ಬಿಡಬಾರದು. ಬಿದ್ದರೆ ಆರ್ ಟಿ ಓ ಲೈಸೆನ್ಸ್ ಕೊಡಲ್ಲ. ಆರ್ ಟಿ ಓ ಕೈಯಲ್ಲಿ ದಾಟಬೇಕು ಎಲ್ಲಾ ಪರಿಶೀಲಿಸಿ, ನಂತರ ಲೈಸೆನ್ಸ್ ಕೊಡುತ್ತಾರೆ ನಮ್ಮ ವಿರುದ್ಧ ಹೇಳಿಕೆ ಕೊಡುವವರು ಕರ್ನಾಟಕದ ತುಂಬಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.…












