Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನತೆಗೆ ವರುಣ ಇದೀಗ ತಂಪರೆದಿದ್ದು ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ.ಗಾಳಿ ಸಹಿತ ಮಳೆ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಹಾಕಿದ್ದ ಪೆಂಡಲ್ ಚೆಲ್ಲಾಪಿಲ್ಲಿಯಾಗಿದೆ.ದೇವಸ್ಥಾನದ ಊಟದ ವೇಳೆ ಭಾರಿ ಮಳೆ ಬಂದಿದೆ. ಮಳೆಯಿಂದಾಗಿ ಭಕ್ತರು ಟೇಬಲ್ ಮೇಲಿರುವ ಊಟ ಬಿಟ್ಟು ಓಡಿ ಹೋಗಿರುವ ಘಟನೆ ನಡೆದಿದೆ. ಭಕ್ತರಿಗಾಗಿ ಟೇಬಲ್ ಮೇಲೆ ಬಿಡಿಸಿದ್ದ ಊಟ ಎಲ್ಲ ಇದೀಗ ನೀರು ಪಾಲಾಗಿದೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.ಅಲ್ಲದೆ ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಹೆಬ್ಬಗೋಡಿ ಸೇರಿ ಹಳೇ ಧಾರಾಕಾರವಾಗಿ ವರುಣ ಸುರದಿದ್ದಾನೆ.ಆನೇಕಲ್ ನಲ್ಲಿ ಅಲೆಕಲ್ಲು ಮಳೆ ಸುರಿದಿದೆ.
ಬೀದರ್ : ಪ್ರಜ್ವಲ್ ರೇವಣ್ಣ ಪರಾರಿ ಯಾಗಲು ತಿಳಿಯಬೇಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋನ್ ಅನ್ನು ಟ್ರ್ಯಾಪ್ ಮಾಡಿದರೆ ಪ್ರಜ್ವಲ್ ಪರಾರಿಯಾಗಲು ಸಹಕರಿಸಿದವರ ಕುರಿತಂತೆ ತಿಳಿಯುತ್ತದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. ಇಂದು ಬೀದರ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕರಣದಲ್ಲಿ ತಪ್ಪು ಮಾಡಿದ್ದು ರಾಜ್ಯ ಸರ್ಕಾರ ಆದರೆ ಕೇಂದ್ರ ಸರ್ಕಾರದ ಮೇಲೆ ಹೊಣೆ ಹೊರಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ ಅಲ್ಲ ಎಂದು ಕೇಂದ್ರಕ್ಕೆ ಪತ್ರ ಬರೆದು ಕೊಡಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅವಮಾನ ಮಾಡಬೇಕೆಂಬ ದುರುದ್ದೇಶದ ಸ್ಕೀಮ್ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಬಿಟ್ಟವರು ಮುಖ್ಯಮಂತ್ರಿ ಸಿದ್ದರಾಮಯ್ಯ ಆದರೆ ಅವರು ಪ್ರಧಾನಿ ಮೋದಿ ಅವರಿಗೆ ಪ್ರಶ್ನಿಸುತ್ತಿದ್ದಾರೆ. ಕರ್ನಾಟಕದಲ್ಲಿ ಪೊಲೀಸರು ಇದರ ಸತ್ತಿದ್ದಾರಾ ಇಟಲಿಜೆನ್ಸ್ ಅವರು ಏನು ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಕಿಡಿ ಕಾರಿದರು.
ಬೆಂಗಳೂರು: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದರೆ ಕೋವಿಶೀಲ್ಡ್ ಲಸಿಕೆ ಪರಿಣಾಮಗಳ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯು ಸಮಯೋಚಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದ ಕಾರಣ ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು, ಪೋಷಕರು ಪ್ರಿಡ್ಜ್‌ನಲ್ಲಿ ಇಟ್ಟಿರುವ ನೀರು, ತಂಪು ಪಾನೀಯಗಳು ಕುಡಿಯಬಾರದು. ಐಸ್ ಕ್ರೀಮ್ ಸೇವಿಸಬಾರದು ಎಂದು ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆ ಹೊರಡಿಸಿದ್ದರು. ಇದು ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಸ್ಪಷ್ಟನೆ ನೀಡಿದೆ ಎಂದು ತಿಳಿದುಬಂದಿದೆ. https://twitter.com/DHFWKA/status/1786272793727775167?t=iurFRVBrobe-iccUeWJwMg&s=19
ಮೈಸೂರು : ರಾಜ್ಯದಲ್ಲಿ ಅಲ್ಲಿದೆ ಇಡೀ ದೇಶದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬಾರಿ ಸಂಚಲನ ಮೂಡಿಸಿದೆ. ಇದೀಗ ಎಚ್ ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬು ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದ್ದು, ಅದರಂತೆ ಸತೀಶ್ ಬಾಬುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿರುವ ಮಹಿಳೆಯ ಮಗ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಎಚ್ ಡಿ ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ಧ ದೂರು ಸಲ್ಲಿಸಿದ್ದಾನೆ ಈ ಹಿನ್ನೆಲೆಯಲ್ಲಿ ಇದೀಗ ಕೆ ಆರ್ ನಗರ ಠಾಣೆಯ ಪೊಲೀಸರು ಸತೀಶ್ ಬಾಬುವನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಆದರೆ ಇದೀಗ ಸದೀಸ್ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆಯ ನಂತರ ಮತ ಎಣಿಕೆಯ ದಿನವಾದ ಜೂನ್ 4 ರಂದು ಆಡಳಿತರೂಢ NDA ಒಕ್ಕೂಟ ಮಧ್ಯಾಹ್ನ 12:30ರ ವೇಳೆಗೆ 400 ಸ್ಥಾನಗಳ ಗಡಿಯನ್ನು ದಾಟುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ವಿಶ್ವಾಸ ಭವಿಷ್ಯ ನುಡಿದರು. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಸ್ಪರ್ಧೆ ಇರುವುದನ್ನು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಕೇರಳ ಮತ್ತು ತಮಿಳುನಾಡಿನಲ್ಲಿ ನಾವು ಖಾತೆ ತೆರೆಯಲಿದ್ದೇವೆ. ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ನಾವು ಕಾಂಗ್ರೆಸ್‌ಗಿಂತ ಮುಂದಿದ್ದೇವೆ ಎಂದು ತಿಳಿಸಿದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಎಲೆಕ್ಟ್ರಾನಿಕ್ ಮತಯಂತ್ರ ಟ್ಯಾಂಪರಿಂಗ್ ಆರೋಪಕ್ಕೆ ಪ್ರತಿಕ್ರಿಯಿಸಿ ಟ್ಯಾಂಪರಿಂಗ್ ಆರೋಪಗಳು ನಿಜವಾಗಿದ್ದರೆ ತಮಿಳುನಾಡಿನಲ್ಲಿ, ತೆಲಂಗಾಣದಲ್ಲಿ ಬಿಜೆಪಿ ಗೆಲ್ಲಲಿಲ್ಲ ಯಾಕೆ ಎಂದು ಪ್ರಶ್ನಿಸಿದರು.ಪಶ್ಚಿಮ ಬಂಗಾಳದಲ್ಲಿ ಕನಿಷ್ಟ 30 ಸ್ಥಾನಗಳನ್ನು ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿಯು…
ರಾಯಚೂರು : ಯಾರಾದರೂ ಪಾಕಿಸ್ತಾನ ಜಿಂದಾಬಾದ್ ಎಂದರೆ ನಮಗೆ ತಿಳಿಸಿ ನಾವು ಅವರನ್ನು ಗಲಿಗೇರಿಸಲ್ಲ ಬದಲಾಗಿ ಗುಂಡಿಕ್ಕಿ ಕೊಲ್ಲುತ್ತೆವೆ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಅಂದರೆ ತಿಳಿಸಿ, ಗುಂಡು ಹಾರಿಸುತ್ತೇವೆ. ಸರ್ಕಾರಕ್ಕೆ ತಿಳಿಸಿ ಅವರನ್ನು ಗಲ್ಲಿಗೇರಿಸಲ್ಲ ನಾವೇ ಗುಂಡಿಕ್ಕಿ ಸಾಯಿಸುತ್ತೇವೆ. ಎಂದು ಸಚಿವ ಜಮೀರ್ ಹೇಳಿಕೆ ನೀಡಿದರು. ಅಂತವರು ಯಾರಾದರೂ ಘೋಷಣೆ ಕೂಗಿದರೆ ನಾವೇ ಡಿಶುಂ ಡಿಶುಂ ಅಂತ ಗುಂಡಿಕ್ಕಿ ಕೊಲ್ಲುತ್ತೆವೆ. ಬಿಜೆಪಿ ಅವರಿಗೂ ಈ ತರದ್ದೇ ಬೇಕು ಅಲ್ವಾ? ಬಿಜೆಪಿಯವರಿಗೆ ಒಟ್ಟಿನಲ್ಲಿ ಅಧಿಕಾರಕ್ಕೆ ಬರಬೇಕು ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದರು.
ಶಿವಮೊಗ್ಗ : ಶಿವಮೊಗ್ಗದಲ್ಲಿ ಈ ಬಾರಿ ಗೀತಾ ಶಿವರಾಜ್ ಕುಮಾರ ಗೆಲುವು ಗ್ಯಾರಂಟಿ. ಆದರೆ ರಾಜ್ಯದಲ್ಲಿ ಯಾವ ಮೋದಿ ಆಟವೂ ನಡೆಯೊಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ಪರ ಮತಯಾಚನೆ ವೇಳೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಯಾವತ್ತೂ ಇಷ್ಟೊಂದು ಒಗ್ಗಟ್ಟು ಕಂಡಿರಲಿಲ್ಲ. ಈ ಬಾರಿ ಕಾರ್ಯಕರ್ತರು ಕಮಿಟ್‌ಮೆಂಟ್ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ. ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ ಆದ ಮೇಲೆ ಕೆಲಸಗಳು ಚೆನ್ನಾಗಿ ನಡೆಯುತ್ತಿವೆ. ಮತದಾರರು ಕೂಡ ಈ ಬಾರಿ ಬದಲಾವಣೆ ಮಾಡಬೇಕು ಅಂದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸಂಘಟನೆ ಕೊರತೆ ಇತ್ತು. ಈಗ ಬಹಳ ಚೆನ್ನಾಗಿ ಸಂಘಟನೆ ಆಗಿದೆ ಎಂದರು.ಈ ಬಾರಿ ಗೀತಾ ಶಿವರಾಜ್ ಕುಮಾರ್ ಅವರನ್ನ ಮತದಾರರು ಗೆದ್ದೇ ಗೆಲ್ಲಿಸುತ್ತಾರೆ. ಯಾವ ಮೋದಿಯೂ ಏನೂ ಮಾಡಲು ಆಗಲ್ಲ. ಈ ಬಾರಿ ಗೀತಾ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿ, ಇತ್ತೀಚೆಗೆ ಹುಬ್ಬಳ್ಳಿಯ ಬಿವಿ ಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಈ ಪ್ರಕರಣವನ್ನು ಸಿಬಿಐ ವಹಿಸಿ ಎಂದು ಅಗ್ರಹ ಪಡಿಸಿದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆಯುತ್ತಿದ್ದು ಈ ಒಂದು ಸಮಾವೇಶದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರು ಮಾತನಾಡಿ, ವೈಯಕ್ತಿಕ ವಿಚಾರಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ನಡೆದಿಲ್ಲ ಮತಾಂತರ ಆಗಲು ನೇಹಾ ಹಿರೇಮಠ ಒಪ್ಪದಿದ್ದಕ್ಕೆ ಹತ್ಯೆಯಾಗಿದೆ ಎಂದು ಅವರು ತಿಳಿಸಿದರು. ನೇಹಾ ಕೊಲೆಗೆ ನ್ಯಾಯ ಸಿಗಬೇಕು ಅಂದರೆ ಪ್ರಕರಣವನ್ನು ಸಿಬಿಐಗೆ ವಹಿಸಲಿ.ಅನ್ಯಾಯ ಮಾಡಿದವರಿಗೆ ತಲೆಕೆಳಗೆ ಮಾಡಿ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದರು.
ಹಾವೇರಿ : ಇತ್ತೀಚಿಗೆ ಪ್ರಧಾನಿ ಮೋದಿ ಅವರು, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ತಾಳಿ ಕಿತ್ತುಕೊಳ್ಳುವ ಪಕ್ಷವಲ್ಲ ತಾಳಿಭಾಗ್ಯ ಕೊಡುವ ಪಕ್ಷ ಎಂದು ಹಾವೇರಿ ನಗರದಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್ ನರೇಂದ್ರ ಮೋದಿ ಅವರು ಹೇಳಿಕೆಗೆ ತಿರುಗೇಟು ನೀಡಿದರು. ಹಾವೇರಿ ನಗರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣದ ಬಗ್ಗೆ ಬಿಜೆಪಿಯವರು ಏಕೆ ಮಾತನಾಡುತ್ತಿಲ್ಲ? ಮೋದಿಯಾಗಲಿ ಅಮಿತ್ ಶಾ ಆಗಲಿ ಏಕೆ ಮಾತನಾಡುತ್ತಿಲ್ಲ? ಎಂದು ಹಾವೇರಿ ನಗರದಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಪ್ರಶ್ನಿಸಿದರು. ದೇಶದಲ್ಲಿ ಮೋದಿ ಮಾಡುತ್ತಿರುವ ಭಾಷಣ ಗಂಡಾಂತರಕಾರಿಯಾಗಿದೆ. ಕಾಂಗ್ರೆಸ್ ಬಂದರೆ ಹೆಣ್ಣು ಮಕ್ಕಳ ತಾಳಿ ಸಹ ಬಿಡಲ್ಲ ಅಂತಾರೆ ಕಾಂಗ್ರೆಸ್ ತಾಳಿ ಕಿತ್ತುಕೊಳ್ಳುವ ಪಕ್ಷವಲ್ಲ ತಾಳಿ ಭಾಗ್ಯ ಕೊಡುವ ಪಕ್ಷ. ಗ್ಯಾರಂಟಿಗಳ ಬಗ್ಗೆ ಯಾಕೆ ನೀವು ಇಷ್ಟು ಟೀಕೆ ಮಾಡುತ್ತೀರಿ? ಬಡವರಿಗೆ ಒಳ್ಳೆಯದಾಗುವುದು ನಿಮಗೆ ಬೇಡವಾ? ಎಂದು ಪ್ರಶ್ನಿಸಿದರು.
ಬೆಂಗಳೂರು : ಲೈಂಗಿಕ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಹಿರಂಗ ಮಾಡಿದ ವಿಚಾರ 1 ವಾರದಲ್ಲಿ ಹೊರಬರಲಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ತಿಳಿಸಿದರು. ಬೆಂಗಳೂರಿನಲ್ಲಿ ಇಂದು SIT ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿಡಿಯೋ ಬಹಿರಂಗ ಮಾಡಿದ ವ್ಯಕ್ತಿಯ ಹೆಸರು 1 ವಾರದಲ್ಲಿ ಬಹಿರಂಗವಾಗಲಿದೆ. ಒಂದು ವಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಈ ವಿಚಾರ ತಿಳಿಸಲಿದ್ದಾರೆ ಯಾರು ವಿಡಿಯೋ ಬಿಡುಗಡೆ ಮಾಡಿದ್ದರು ಅನ್ನುವುದು ಹೊರಗಡೆ ಬರುತ್ತದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಮುಖಂಡ ವಕೀಲ ದೇವರಾಜ ಗೌಡ ತಿಳಿಸಿದರು. ನಿನ್ನೆ ಎಸ್ಐಟಿ ವಿಚಾರಣೆಗೆ ಕರೆದಿದ್ದರು.ಇಂದು ಕೂಡ ವಿತರಣೆಗೆ ಬಂದಿದ್ದೆ ವಿಡಿಯೋ ವೈರಲ್ ಮಾಡಿದವರ ಬಗ್ಗೆ ಇದ್ದ ಮಾಹಿತಿಯನ್ನು ನೀಡಿದ್ದೇನೆ. ಯಾರು ಎಂದು ಈಗ ಇಲ್ಲಿ ಹೇಳುವುದಕ್ಕೆ ಸಾಧ್ಯವಿಲ್ಲ. ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕಾಗಿ ಇಷ್ಟೆಲ್ಲ ನಡೆಯುತ್ತಿದೆ ಎಂದು ವಕೀಲಾದೇವರಾಜೇಗೌಡ ಹೇಳಿಕೆ ನೀಡಿದರು.