Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ಮಹಿಳೆಯೊಬ್ಬರು ಚಿಕಿತ್ಸೆಗೆ ಎಂದು ತೆರಳಿದ್ದರು. ಈ ವೇಳೆ ಮಹಿಳೆಯ ಚಿನ್ನದ ಸರ ಕಳವು ಮಾಡಿದ ಆರೋಪದಡಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜೇಶ್ವರಿ ಎಂಬ ಮಹಿಳೆಯ ಸರ ಕಳುವು ಮಾಡಿರುವ ಆರೋಪದಡಿ ಮೂಡಲಪಾಳ್ಯದ ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರಾಜೇಶ್ವರಿ ಅವರಿಗೆ ಫೆಬ್ರವರಿ 8ರಂದು ತೀವ್ರತರದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾತ್ರಿ ತಮ್ಮ ಪತಿಯೊಂದಿಗೆ ಮೂಡಲಪಾಳ್ಯದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ, ಕರ್ತವ್ಯದಲ್ಲಿದ್ದ ವೈದ್ಯರು ತಪಾಸಣೆ ನಡೆಸಿ ಇಸಿಜಿ ಮಾಡಿಸಲು ಸೂಚಿಸಿದ್ದರು. ಇಸಿಜಿ ಮಾಡುವ ಮುನ್ನ ಮಾಂಗಲ್ಯ ಸರ ಬಿಚ್ಚಿ ತಮ್ಮ ಪತಿಯ ಕೈಗೆ ನೀಡಲು ರಾಜೇಶ್ವರಿ ಅವರನ್ನು ತಡೆದಿದ್ದ ನರ್ಸ್, ದಿಂಬಿನ ಕೆಳಗಿರಿಸಲು ಸೂಚಿಸಿದ್ದರು ಎಂದು ಆರೋಪಿಸಲಾಗಿದೆ. ತಪಾಸಣೆ ಮುಗಿದ ನಂತರ ಸರ ಮರೆತಿದ್ದ ರಾಜೇಶ್ವರಿ ಮನೆಗೆ ತೆರಳಿದ್ದಾರೆ. ಬೆಳಗ್ಗೆ ಸ್ನಾನ ಮಾಡುವಾಗ ಮಾಂಗಲ್ಯ ಸರವನ್ನ ರಾತ್ರಿ ಆಸ್ಪತ್ರೆಯಲ್ಲಿ ಬಿಟ್ಟು…
ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ಆರ್ಟಿಸಿ ಅಟ್ಟಹಾಸ ಮುಂದುವರೆದಿದ್ದು ಇದೀಗ ಬೆಂಗಳೂರಿನ ಯಶವಂತಪುರದ ಬಳಿ ಬೈಕ್ ಸವಾರನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಜೇಂದ್ರ(45) ಎಂದು ಹೇಳಲಾಗುತ್ತಿದ್ದು, ಖಾಸಗಿ ಕಂಪನಿಯಲ್ಲಿ ರಾಜೇಂದ್ರ ಕಾರ್ಯನಿರ್ವಹಿಸುತ್ತಿದ್ದರು. ಅದೇ ರೀತಿ ಇಂದು ಬೆಳಿಗ್ಗೆ ಕೆಲಸಕ್ಕೆ ತೆರಳುವಾಗ ನಿಯಂತ್ರಣ ತಪ್ಪಿ ಬಿದ್ದ ಬೈಕ್ ಸವಾರನ ಮೇಲೆ ಕೆ ಎಸ್ ಆರ್ ಟಿ ಸಿ ಬಸ್ ಹರಿದಿದೆ. ಈ ವೇಳೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆ ಎಸ್ ಆರ್ ಟಿ ಸಿ ಬಸ್ ಹರಿದು ಬೈಕ್ ಸವಾರ ರಾಜೇಂದ್ರ (45) ಸಾವನ್ನಪ್ಪಿದ್ದಾನೆ.ಮೃತ ರಾಜೇಂದ್ರ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯವಹಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಮೆಜೆಸ್ಟಿಕ್ ಕಡೆ ಬರುತ್ತಿದ್ದ ಕೆಎ 06 P 984 ಸಂಖ್ಯೆಯ ಕೆಎಸ್ಆರ್ಟಿಸಿ ಬಸ್ ತುಮಕೂರು ವಿಭಾಗದ ತುರುವೇಕೆರೆ ಘಟಕದ ಬಸ್ ಎಂದು ಹೇಳಲಾಗುತ್ತಿದೆ.ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತಂತೆ ಯಶವಂತಪುರ ಸಂಚಾರಿ…
ಮಡಿಕೇರಿ : ಅಪಘಾತದಲ್ಲಿ ಯುವಕನ ಜೀವನ ಹಾಳು ಮಾಡಿದೆ ಎಂದು ಮನನೊಂದ ವ್ಯಕ್ತಿ ಒಬ್ಬ ಪಶ್ಚಾತಾಪ ಪಟ್ಟುಕೊಂಡು ನೇಣಿಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಹೇರವನಾಡಿನಲ್ಲಿ ನಡೆದಿದೆ. ಅಲ್ಲದೆ ಕಾಕತಾಳಿಯವೆಂಬಂತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಧನಲ್ ಕೂಡ ಇದೀಗಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಅಪಘಾತ ಮಾಡಿದ್ದ ವ್ಯಕ್ತಿ ಯುವಕನ ಜೀವನ ಹಾಳು ಮಾಡಿದೆ ಎಂದು ಮನನೊಂದು ತಮ್ಮಯ್ಯ (57) ತಾನು ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಫೆಬ್ರವರಿ 9ರಂದು ಮಡಿಕೇರಿಯ ಬಳಿಯ ಚೈನ್ ಗೇಟ್ ಬಳಿ ಅಪಘಾತ ನಡೆದಿತ್ತು.ಬೈಕಿನಲ್ಲಿ ಆಗಮಿಸಿದ ಧನಲ್ ಗೆ ಮತ್ತೊಂದು ಬೈಕನಲ್ಲಿ ಬರುತ್ತಿದ್ದ ತಮ್ಮಯ್ಯ ಡಿಕ್ಕಿ ಹೊಡೆದಿದ್ದ.ಈ ವೇಳೆ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಧನಲ್ ಗಾಯಗೊಂಡಿದ್ದ ಸವಾರ ಧನಾಲ್ಗೆ ಗಂಭೀರ ಗಾಯ ಹಿನ್ನೆಲೆ ತಮ್ಮಯ್ಯ ಮನನೊಂದಿದ್ದ ಎಂದು ಹೇಳಲಾಗುತ್ತಿದೆ. ಯುವಕನ ಜೀವನ ನಾನು ಹಾಳು ಮಾಡಿದೆ ಅಂತ ತಮ್ಮಯ್ಯಗೆ ಪಶ್ಚಾತಾಪ ಮೂಡಿದೆ ಮನನೊಂದು ಬೆಳಗಿನ ಜಾವ ತಮ್ಮಯ್ಯ ನೇಣಿಗೆ ಶರಣಾಗಿದ್ದಾನೆ.…
ಮನೆಯಲ್ಲಿ ಮಹಾಲಕ್ಷ್ಮಿಯ ಅಂಶವು ನೆರವೇರಲು ನಾವು ಮಾಡಬೇಕಾದ ಸುಲಭ ಪರಿಹಾರದ ಬಗ್ಗೆ ಇಂದು ನಾವು ನೋಡಲಿದ್ದೇವೆ. ಶುಕ್ರವಾರದಂದು ಮನೆಯಲ್ಲಿ ದೀಪವನ್ನು ಹಚ್ಚಿ ಮತ್ತು ಎಂದಿನಂತೆ ಮಹಾಲಕ್ಷ್ಮಿಗೆ ಸಣ್ಣ ಪೂಜೆಯನ್ನು ಮಾಡಿ ಮತ್ತು ಈ ಪರಿಹಾರವನ್ನು ಪ್ರಯತ್ನಿಸಿ. ನಿಮ್ಮ ಮನೆಯಲ್ಲಿನ ಹಣದ ಸಮಸ್ಯೆಗಳು ಖಂಡಿತವಾಗಿಯೂ ಪರಿಹಾರವಾಗುತ್ತವೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಈ ಸರಳ ಮತ್ತು ಅಗ್ಗದ ಪರಿಹಾರವನ್ನು ತಿಳಿದುಕೊಳ್ಳಲು ಆಸಕ್ತಿಯುಳ್ಳವರು ಈ ಆಧ್ಯಾತ್ಮಿಕ ಪುಸ್ತಕವನ್ನು ಓದುವುದನ್ನು ಮುಂದುವರಿಸಬಹುದು ಮತ್ತು ಪ್ರಯೋಜನ ಪಡೆಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು…
ಬೆಂಗಳೂರು : ಇಂದಿನಿಂದ 10 ದಿನಗಳ ವರೆಗೆ ಕರ್ನಾಟಕ ವಿಧಾನ ಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದ್ದು, ರಾಜ್ಯಪಾಲರ ಭಾಷಣದ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದು, ಸರ್ಕಾರದ ‘ಗ್ಯಾಂರಂಟಿ ಯೋಜನೆ’ಗಳ ಕುರಿತು ರಾಜ್ಯಪಾಲರು ಬಹಳಷ್ಟು ಸುಳ್ಳು ಹೇಳಿದ್ದಾರೆಎಂದು ತಿಳಿಸಿದರು. ರಾಜ್ಯಪಾಲರ ಭಾಷಣ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಅನುಭವದಲ್ಲಿ ಇಷ್ಟು ಸಪ್ಪೆ ನಿರಾಶೆಯ ಯಾವುದೇ ಭವಿಷ್ಯವಿಲ್ಲದ ದಿಕ್ಕು ದೆಸೆ ಇಲ್ಲದ ರಾಜ್ಯಪಾಲರ ಭಾಷಣವನ್ನು ನೋಡಿಲ್ಲ.ರಾಜ್ಯಪಾಲರ ಭಾಷಣ ಕಳೆದ 9 ತಿಂಗಳಲ್ಲಿ ರಾಜ್ಯದಲ್ಲಿ ಯಾವ ರೀತಿ ಅಭಿವೃದ್ಧಿ ಶೂನ್ಯವಾಗಿರುವಂತಹ ಒಂದು ಜನ ವಿರೋಧಿ ಸರ್ಕಾರವಿದೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ತಿಳಿಸಿದರು. ಯಾವುದಾದರೂ ಒಂದು ವಿಚಾರದಲ್ಲಿ ಗಟ್ಟಿಯಾಗಿ ಇಂತಹದರಲ್ಲಿ ನಾವು ಸಾಧನೆ ಮಾಡಿದ್ದೇವೆ ಎಂದು ಅವರಿಗೆ ಹೇಳಕ್ಕೆ ಆಗುವುದಿಲ್ಲ.ಒಂದು ಸುಳ್ಳಿನ ಕಂತೆ ರಾಜಪಾಲರ ಭಾಷಣವಾಗಿದೆ ಗ್ಯಾರಂಟಿಗಳ ಬಗ್ಗೆ ಬಹಳಷ್ಟು ಸುಳ್ಳುಗಳನ್ನು ಹೇಳಿದ್ದಾರೆ ನಾವು ಮಾಡಿರುವಂತಹ ಕೆಲಸವನ್ನು ತಾವು ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ ಎಂದರು. ಉದಾಹರಣೆಗೆ ಪ್ರಧಾನಮಂತ್ರಿ ಆವಾಸ್…
ಬೆಂಗಳೂರು : ಇಂದಿನಿಂದ 10 ದಿನಗಳ ವರೆಗೆ ಕರ್ನಾಟಕ ವಿಧಾನ ಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದ್ದು, ರಾಜ್ಯಪಾಲರ ಭಾಷಣದ ಕುರಿತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ರಾಜ್ಯಪಾಲರ ಭಾಷಣದಲ್ಲಿ ಹೇಳಿರುವುದಿಲ್ಲ ಸತ್ಯಕ್ಕೆ ದೂರವಾಗಿವೆ ಎಂದು ತಿಳಿಸಿದರು. ಒಂದು ಕಡೆ ಹೇಳುತ್ತಾರೆ ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪ ಇಲ್ಲದೆ ನೇರವಾಗಿ ಇವತ್ತು ಎಲ್ಲವೂ ಕೂಡ ಕೆಲಸ ನಡೆಯುತ್ತಿದೆ ಅಂತ ಹೇಳುತ್ತಾರೆ.ಮಧ್ಯವರ್ತಿಗಳ ಹಾವಳಿ ಯಾವ ಮಟ್ಟಕ್ಕೆ ಹೋಗಿದೆ ಅಂದರೆ ಸ್ವತಃ ಕಾಂಗ್ರೆಸ್ ಪಕ್ಷದ ಮಾಜಿ ಮಂತ್ರಿಗಳು ಹೇಳಿದ್ದು 50% ಕಮಿಷನ್ ಸರ್ಕಾರ ರಾಜ್ಯದಲ್ಲಿ ಇದೆ ಎಂದು ಹೇಳುತ್ತಾರೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಸರ್ಕಾರ ಬಂದು 8 ತಿಂಗಳ ಆಗಿದೆ ಸರ್ಕಾರಿ ಕಚೇರಿಗಳಲ್ಲಿ ಸುಮಾರು ಎಂಟು ಲಕ್ಷಕ್ಕೆ ಹೆಚ್ಚು ಕಡತಗಳು ಹಾಗೆ ಬಿದ್ದಿವೆ.ಒಟ್ಟಾರೆಯಾಗಿ ಹೇಳಬೇಕೆಂದರೆ ಎಲ್ಲಾ ರಂಗದಲ್ಲೂ ಕೂಡ ಎಲ್ಲಾ ಕ್ಷೇತ್ರಗಳಲ್ಲೂ ಕೂಡ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯಪಾಲರ ಮುಖೇನ ಇವತ್ತು ಕೇವಲ ಅರ್ಧ ಸತ್ಯವನ್ನು ಹೇಳುವ ಪ್ರಯತ್ನ…
ಬೆಂಗಳೂರು : ಭಾಷೆ ಹೆಸರಿನಲ್ಲೂ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ಮಾಡುತ್ತಾರೆ.ನಾಡು, ನುಡಿ ಮತ್ತು ಜನರ ಬಗೆಗಿನ ಕಾಳಜಿ ಕುರಿತು ನಿಮ್ಮ ಮೊಸಳೆ ಕಣ್ಣೀರಿನ ಕನ್ನಡ ಪ್ರೇಮದಿಂದ ಪಾಠ ಕಲಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡ, ಕನ್ನಡಿಗ ಕರ್ನಾಟಕದ ಬಗ್ಗೆ ದಿಢೀರ್ ಕಾಳಜಿ ಪ್ರದರ್ಶಿಸುತ್ತಿರುವ ಸಿದ್ದರಾಮಯ್ಯ ನವರೇ, ಡಾ. ರಾಜ್ ನೇತೃತ್ವದ ಐತಿಹಾಸಿಕ ಗೋಕಾಕ್ ಚಳುವಳಿಗೆ ಕಾರಣವಾದ ಸರ್ಕಾರ ಯಾವುದು? ಕನ್ನಡಿಗರ ಕಣ್ಮಣಿ ಡಾ. ರಾಜಕುಮಾರ್ ಹಾಗೂ ಸಾಹಿತಿ, ಕಲಾವಿದರನ್ನು ಕನ್ನಡಕ್ಕಾಗಿ ಬೀದಿಗೆ ಇಳಿಸುವ ಪರಿಸ್ಥಿತಿ ತಂದದ್ದು ನಿಮ್ಮ ಕಾಂಗ್ರೆಸ್ ಸರ್ಕಾರ ಎನ್ನುವ ಇತಿಹಾಸ ಮರೆತಿರಾ? ಕನ್ನಡಕ್ಕೆ ಕಂಟಕರಾಗಿದ್ದು, ಕನ್ನಡಿಗರನ್ನು ತಾತ್ಸಾರವಾಗಿ ಕಂಡಿದ್ದು, ಕನ್ನಡ ಹೋರಾಟಗಾರರನ್ನುಜೈಲಿಗಟ್ಟಿದ್ದು, ಮೊನ್ನೆ ಮೊನ್ನೆಯಷ್ಟೇ ಕನ್ನಡ ನಾಮಫಲಕಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟಿದ್ದು ನೀವಲ್ಲವೇ?ನಿಮ್ಮ ಮೊಸಳೆ ಕಣ್ಣೀರಿನ ಕನ್ನಡ ಪ್ರೇಮದಿಂದ ನಾಡು ನುಡಿ ಜನರ ಬಗೆಗಿನ…
ಬೆಂಗಳೂರು : ಇಂದಿನಿಂದ 10 ದಿನಗಳ ಕಾಲದ ವರೆಗೆ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ನಡೆಯತ್ತಿದ್ದು, ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಈ ಮೂಲಕ ರಾಜ್ಯ ಸರ್ಕಾರ ರಾಜ್ಯಪಾಲರ ಮುಖಾಂತರ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದೆ. ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಿದ್ದು ಮೊದಲ ದಿನ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ವಿರುದ್ಧ ಟೀಕಿಸುವ ಮೂಲಕ ರಾಜ್ಯ ಸರ್ಕಾರ ಪರೋಕ್ಷವಾಗಿ ಹೇಳುವ ಪ್ರಯತ್ನ ಮಾಡಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಆದರೆ ಕೇಂದ್ರದಿಂದ ಅನುದಾನ ಪಡೆಯುವುದರಲ್ಲಿ ರಾಜ್ಯ 10ನೇ ಸ್ಥಾನದಲ್ಲಿದೆ. ಈ ಮೂಲಕ ಕೇಂದ್ರದಿಂದ ಪಾಲು ಪಡೆಯಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ವಿವಿಧ ಮೂಲಗಳಿಂದ ಸಿಗಬೇಕಾದ ಸಂಪನ್ಮೂಲಗಳು ಸಿಗುತ್ತಿಲ್ಲ ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯ…
ಬೆಂಗಳೂರು : ಇಂದಿನಿಂದ 10 ದಿನಗಳವರೆಗೆ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ನಡೆಯತ್ತಿದ್ದು, ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ಬಣ್ಣಿಸಿದರು. ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಇಂದು ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು. ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ…
ಬೆಂಗಳೂರು : ಯೂಟ್ಯೂಬ್ ನೋಡಿ ಕಳ್ಳತನ ಮಾಡುತ್ತಿದ್ದ ಖದೀಮ ಇದೀಗ ಪೋಲೀಸರ ಅಥಿತಿಯಾಗಿದ್ದಾನೆ.ಬೆಂಗಳೂರಿನ ಮೈಕೋ ಲೇಔಟ್ ವ್ಯಾಪ್ತಿಯಲ್ಲಿ ಸುನೀಲ್ ಅಲಿಯಾಸ್ ತಮಟೆ ಎನ್ನುವ ಖತರ್ನಾಕ್ ಕಳ್ಳನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.ಅಲ್ಲದೆ ಈ ಖದಿಮ ಪೊಲೀಸರೊಂದಿಗೆ ಸ್ನೇಹ ಬೆಳೆಸಿ ಕಳ್ಳತನ ಮಾಡುತ್ತಿದ್ದ ಎಂದು ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಕದ್ದ ಬಳಿಕ ಸಾಕ್ಷಿ ನಾಶ ಮಾಡುವುದನ್ನು ಈ ಕಿಲಾಡಿ ಕಳ್ಳ ಕಲಿತಿದ್ದ ಎನ್ನಲಾಗುತ್ತಿದ್ದು, ಸುನಿಲ್ ಅಲಿಯಾಸ್ ತಮಟೆ ಬಂಧಿತ ಆರೋಪಿಯಾಗಿದ್ದಾನೆ. ಚೆನ್ನಾಭರಣವನ್ನು ಕದ್ದು ಸಾಕ್ಷಿ ನಾಶ ಮಾಡಿ ಪರಾರಿ ಆಗುತ್ತಿದ್ದ ಎಂದು ಹೇಳಲಾಗುತ್ತಿದ್ದು, ಕೈಗೆ ಧರಿಸಿದ್ದ ಪೊಲೀಸರಿಗೆ ಯಾವುದೇ ರೀತಿಯಾಗಿ ಸುಳಿವು ಬಿಟ್ಟುಕೊಡುತ್ತಿರಲಿಲ್ಲ. ಅಲ್ಲದೆ ಈತ ಪೊಲೀಸ್ ಠಾಣೆಯ ಎದುರೇ ಮನೆಯನ್ನು ಪಡೆದುಕೊಂಡು ವಾಸಿಸುತ್ತಿದ್ದ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ನೇಹ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಪೊಲೀಸರಿಗೆ ಆಘಾತವಾಗಿದ್ದು ಈತ ಕಳ್ಳತನ ಮಾಡಿದ್ದಾನಾ ಎಂದು ಶಾಕ್ ಆಗಿದ್ದಾರೆ ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಹಲವಾರು ಮನೆಗಳಲ್ಲಿ ಹಣ…