Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಳ ಮಾಡಿಲ್ಲ. ಉತ್ಪಾದನೆಯಾಗುತ್ತಿರುವ ಹಾಲಿನಲ್ಲಿ 50 ml ಹೆಚ್ಚುವರಿ ಮಾರಾಟಕ್ಕಾಗಿ ಗ್ರಾಹಕರಿಗೆ ಕೊಂಚ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನು ನೀಡಿ ಅದಕ್ಕೆ ತಕ್ಕ ದರವನ್ನಷ್ಟೇ ನಿಗದಿ ಮಾಡಲಾಗಿದೆ. ಹಾಗಾಗಿ ಹೋಟೆಲ್‌ಗಳಲ್ಲಿ ಕಾಫಿ, ಟೀ ದರ ಹೆಚ್ಚಳವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೌದು ಕಾಫಿ ಟೀ ದರ ಹೆಚ್ಚಳ ಸಲ್ಲದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ನೀಡಿದ ಬೆನ್ನಲ್ಲೇ ರೈತರಿಗೆ ಸಹಾಯವಾಗಲು KMF 50ML ಹೆಚ್ಚಳ ಮಾಡಿದೆ. ಹೆಚ್ಚುವರಿ ಹಾಲನ್ನು ನೀಡಿ ₹2 ದರ ಏರಿಕೆ ಮಾಡಿದೆ. ಇದರಿಂದ ನಮ್ಮ ಉದ್ಯಮಕ್ಕೆ ಯಾವುದೇ ಹೆಚ್ಚಿನ ಹೊರೆಯಾಗುವುದಿಲ್ಲ. ಕಾಫಿ ಮತ್ತು ಟೀ ಬೆಲೆಯಲ್ಲಿ ಯಾವುದೇ ಏರಿಕೆಯಾಗುವುದಿಲ್ಲ ಎಂದು ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ , ಕೆಎಂಎಫ್ ಹಾಲಿನ ದರ ಏರಿಕೆ ಮಾಡಿಲ್ಲ. ರಾಜ್ಯದಲ್ಲಿ 90 ಲಕ್ಷ ಲೀಟರ್ ಇದ್ದ ಹಾಲಿನ ಉತ್ಪಾದನೆ 99 ಲಕ್ಷ…
ನವದೆಹಲಿ : ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುವೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಸಚಿವ ಕುಮಾರಸ್ವಾಮಿಯನ್ನೂ ಭೇಟಿ ಮಾಡಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್, ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ.ಇನ್ನು, ಕಾಂಗ್ರೆಸ್‌ನಿಂದ ಡಿಕೆಶಿ ಕುಟುಂಬದವರು ನಿಂತರೆ ದೊಡ್ಡ ಹೋರಾಟ ನಡೆಯುವುದು ಗ್ಯಾರಂಟಿ ಎಂದರು
ಬೆಂಗಳೂರು : ಪೊಲೀಸರು ಎಷ್ಟೇ ಕಠಿಣವಾದ ಅಂತಹ ಕ್ರಮ ಕೈಗೊಂಡರು ಬೆಂಗಳೂರಿನಲ್ಲಿ ಪುಂಡರ ಅಟಹಾಸ ನಿಲ್ಲುತ್ತಿಲ್ಲ ಇದೀಗ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಸುಮಾರು ಎಂಟಕ್ಕೂ ಹೆಚ್ಚು ಕಾರುಗಳಿಗೆ ಆನೆ ಮಾಡಿದ್ದು, ಕಲ್ಲು ಎತ್ತಿ ಹಾಕಿ ಗಾಜುಗಳನ್ನು ಪುಡಿಪುಡಿ ಮಾಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಹೌದು ಇಂದು ಬೆಳಗಿನ ಜಾವ 3:00ಗೆ ಮೈಸೂರು ಬೆಂಗಳೂರು ಮುಖ್ಯ ರಸ್ತೆಯ ಬ್ಯಾಟರಾಯನಪುರದಲ್ಲಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ ಸುಮಾರು 8 ಕಾರುಗಳ ಮೇಲೆ ದಾಳಿ ಮಾಡಿದ್ದು ಕಲ್ಲು ಎತ್ತಿ ಹಾಕಿ ಗಾಜುಗಳು ಸೇರಿದಂತೆ ಕಾರುಗಳ ಇತರೆ ಭಾಗಗಳ ಮೇಲೆ ಕಲ್ಲು ಎತ್ತಿ ಹಾಕಿ ಹಾನಿ ಮಾಡಿದ್ದಾನೆ. ಘಟನೆ ಕುರಿತಂತೆ ಬ್ಯಾಟರಾಯಣಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಸಂಬಂಧಿಸಿದಂತೆ ದರ್ಶನ್ ಮುಖ್ಯ ಪಾತ್ರ ವಹಿಸುವುದಕ್ಕೆ ಪೊಲೀಸರಿಗೆ ಇದುವರೆಗೂ ಒಂದಲ್ಲ ಎರಡಲ್ಲ 30 ಸಾಕ್ಷಿಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಹೌದು ಕೊಲೆಗೆ ದರ್ಶನ್ ಮುಖ್ಯ ಪಾತ್ರ ವಹಿಸಿದ್ದಕ್ಕೆ ಇದೀಗ ಪೊಲೀಸರಿಗೆ ಎಲ್ಲ ರೀತಿಯ ಸಾಕ್ಷಗಳು ಲಭ್ಯವಾಗಿವೆ.ದರ್ಶನ್ ವಿರುದ್ಧ ಒಂದಲ್ಲ ಎರಡಲ್ಲ ಮೂವತ್ತಕ್ಕೂ ಹೆಚ್ಚು ಸಾಕ್ಷಗಳು ಲಭ್ಯವಾಗಿವೆ ಎಲ್ಲಾ ರೀತಿ ಸಾಕ್ಷಾಧಾರಗಳು ಪೊಲೀಸರಿಗೆ ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ. ಹೌದು ಚಿತ್ರದುರ್ಗದಿಂದ ಬೆಂಗಳೂರಿಗೆ ರೇಣುಕಾ ಸ್ವಾಮಿಯನ್ನು ಕರೆದುಕೊಂಡು ಬಂದಿದ್ದರಿಂದ ಆತನನ್ನು ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಶಟ್ ಒಂದರಲ್ಲಿ ಕೂಡಿಹಾಕಿ ಅಲ್ಲೇ ಮಾಡಿ ಭೀಕರವಾಗಿ ಕೊಲೆ ಮಾಡಿ ನಂತರ ಶವ ಸಾಗಾಟ ಮಾಡಿದ ಕ್ಷಣದವರೆಗೂ ಇಲ್ಲಿಯವರೆಗೆ ಒಟ್ಟು 30 ಸಾಕ್ಷಿಗಳು ಪೊಲೀಸರಿಗೆ ಲಭ್ಯವಾಗಿವೆ.ಪ್ರತಿಯೊಂದು ಸಾಕ್ಷಿಗಳನ್ನು ಪೊಲೀಸರು ಇದೀಗ ಸಂಗ್ರಹಿಸಿದ್ದಾರೆ. ಸದ್ಯ ಈ ಒಂದು ಪ್ರಕರಣದಲ್ಲಿ ನಟ ದರ್ಶನವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾನೂನು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ವಿರುದ್ಧ ಹಲವರು ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ, ಇನ್ನೂ ಕೆಲವರು ನಟ ದರ್ಶನ್ ಪರವಾಗಿ ನಿಂತಿದ್ದಾರೆ. ಇದೀಗ ಈ ಒಂದು ಸಾಲಿಗೆ ನಟಿ ಭಾವನಾ ಅವರು ಕೂಡ ಸೇರ್ಪಡೆಯಾಗಿದ್ದಾರೆ. ಹೌದು ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೆಲವರು ದರ್ಶನ್ ಪರ ನಿಂತರೆ ಇನ್ನೂ ಕೆಲವರು ದರ್ಶನ್ ಅವರನ್ನು ವಿರೋಧಿಸಿದ್ದಾರೆ. ದರ್ಶನ್ ಮಾಡಿದ್ದನ್ನು ತಪ್ಪು ಎಂದು ಕೆಲವರು ಕರೆದಿದ್ದಾರೆ. ಆದರೆ, ಭಾವನಾ ರಾಮಣ್ಣ ಅವರು ದರ್ಶನ್ ಪರ ನಿಂತಿದ್ದಾರೆ. ದರ್ಶನ್ ಪರವಾಗಿ ಮಾತನಾಡಿದ ನಟಿ ಭಾವನಾ ಅವರು, ಯಾವುದೇ ಹೆಣ್ಣಾದರೂ ಅವರಿಗೆ ಮನೆ ಇರುತ್ತದೆ, ಮನಸ್ಸು ಇರುತ್ತದೆ. 19 ವರ್ಷದ ಹುಡುಗಿಗೆ ಈ ರೀತಿ ಮೆಸೇಜ್ ಬಂದಿದ್ದರೆ ಅವಳು ಆತ್ಮಹತ್ಯೆ ಮಾಡಿಕೊಳ್ಳಬಹುದು. ಘೋರ ಕೃತ್ಯ ನಡೆದ ಬಳಿಕ ಅದರ ಬಗ್ಗೆ ಚರ್ಚೆ ನಡೆಸಬಹುದು ಅಷ್ಟೇ, ಆದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತೀಯರು ಎಮೋಷನಲ್ ಪರ್ಸನಲ್. ದರ್ಶನ್…
ಬಳ್ಳಾರಿ : ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಮೃತನನ್ನು . ಕೃಷ್ಟಪ್ಪ(62) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾಕ್ಸಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತಕ್ಷಣ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಕಲ್ಬುರ್ಗಿಯಿಂದ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಕಡೆಗೆ ತೆರಳುತ್ತಿದ್ದ ಈ ಒಂದು ಟಿಟಿ ವಾಹನದಲ್ಲಿ ಮಕ್ಕಳು ಸೇರಿದಂತೆ 16 ಜನರು ಇದ್ದರು. ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹೀಗೆ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ : ರಾಜ್ಯದಲ್ಲಿ ಡೇಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾವೇರಿ ಜಿಲ್ಲೆಯಲ್ಲಿ ಡೇಂಘಿ ಮಹಾಮಾರಿಗೆ ಮೊದಲ ಬಲಿಯಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ 30 ವರ್ಷದ ಮಹಿಳೆ ಡೇಂಘಿಗೆ ಸಾವನ್ನಪ್ಪಿದ್ದಾರೆ. ಹೌದು ಮಹಾಮಾರಿ ಡೇಂಘಿಗೆ 30 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯ (30) ಎಂಬ ಮಹಿಳೆ ಇದೀಗ ಸಾವನ್ನಪ್ಪಿದ್ದಾರೆ.ಹಾವೇರಿ ನಗರದ ಮಲ್ಲಾಡದ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಗೌಸಿಯ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು ಈ ವೇಳೆ ಚಿಕಿತ್ಸೆ ಫಲಿತದೆ ಗೌಸಿಯ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಇದೀಗ ವೈದ್ಯರ ವಿರುದ್ಧ ಗಂಭೀರವಾದಂತಹ ಆರೋಪ ಮಾಡುತ್ತಿದ್ದಾರೆ. ಇನ್ನು ಡೇಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದಂತೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಡೇಂಘಿ ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸಭೆಯಲ್ಲಿ…
ದಕ್ಷಿಣಕನ್ನಡ : ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು, ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪ ಜೈನರಗುರಿಯಲ್ಲಿ ನಡೆದಿದೆ. ಹೌದು ಈ ಒಂದು ಘಟನೆ ಇಂದು ನಸುಕಿನ ಜಾವದಲ್ಲಿ ನಡೆದಿದ್ದು, ಕುಟುಂಬದ ಸದಸ್ಯರು ಬೆಳಗಿನ ಜಾವ ನಿದ್ದೆಯಲ್ಲಿದ್ದರು ಈ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಈ ವೇಳೆ ಮಣ್ಣಿನ ಅಡಿ ಮಕ್ಕಳು ಸಿಲುಕಿಕೊಂಡಿದ್ದರು. ಅದೃಷ್ಟವಶಾತ್ ಮಣ್ಣಿನಡಿ ಸಿಲುಕಿದ ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮನೆ ಮೇಲೆ ಧರೆ ಕುಸಿದಿದ್ದರಿಂದ ಗೋಡೆ ಕುಸಿದ ಬೆನ್ನಲ್ಲೇ ಇಬ್ಬರು ಮಕ್ಕಳನ್ನ ಮನೆಯವರು ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿ ಉಂಟಾಗಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಮಣ್ಣು…
ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಲಿದ್ದಾರೆ. ಹೌದು ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನಗಳ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಲಿದ್ದಾರೆ. ಇಂದು ರಾಜ್ಯದ 28 ಸಂಸದರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಅಲ್ಲದೇ ನಾಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಅಭಿನಂದಿಸಲಿದ್ದಾರೆ. ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವದರಿಂದ ನರೇಂದ್ರ ಮೋದಿಗೆ ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಜೂನ್ 29ರಂದು ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನದ ಬಗ್ಗೆ ಸಿಎಂ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಕಳೆದ ವರ್ಷ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭ್ರೂಣಹತ್ಯೆ ಪ್ರಕರಣ ಬಾರಿ ಸದ್ದು ಮಾಡಿತ್ತು. ಆದರೂ ಕೂಡ ಪೊಲೀಸ್ ಇಲಾಖೆ ಎಷ್ಟೇ ಕಠಿಣವಾದಂತ ಕ್ರಮ ಕೈಗೊಂಡರು ಸಹ ಇತ್ತೀಚಿಗೆ ಕೂಡ ಹಲವು ಭ್ರೂಣಹತ್ಯೆ ಪ್ರಕರಣಗಳು ನಡೆದಿದ್ದವು. ಭ್ರೂಣಹತ್ಯೆ ತಡೆಗೆ ಇದೀಗ ಆರೋಗ್ಯ ಇಲಾಖೆ ಹೊಸ ಪ್ಲಾನ್ ಮಾಡಿದ್ದು ತನ್ನ ವ್ಯಾಪ್ತಿಯಲ್ಲೇ ಪೊಲೀಸ್ ವಿಭಾಗ ತೆರೆಯಲು ಮುಂದಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು, ಮಾತನಾಡಿದ್ದು, ಆರೋಗ್ಯ ಇಲಾಖೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಶ್ರೇಣಿ ಹುದ್ದೆ ಸೃಷ್ಟಿಸಿ ಅವರ ಮೂಲಕ ಪೊಲೀಸ್ ಇಲಾಖೆ ಜತೆಗೂಡಿ ಭ್ರೂಣಹತ್ಯೆ ತಡೆಯಲು ವ್ಯವಸ್ಥಿತ ಕಾರ್ಯತಂತ್ರ ರೂಪಿಸಲು ಉದ್ದೇಶಿಸಿರುವುದಾಗಿ ಸಚಿವರು ಘೋಷಿಸಿದರು. ಬೆಂಗಳೂರಿನ ಬೈಯಪ್ಪನಹಳ್ಳಿ ಪ್ರಕರಣದ ಬಳಿಕ, ಮಂಡ್ಯ- ಪಾಂಡವಪುರ, ಮೈಸೂರು, ಬಾಗಲಕೋಟೆ, ಬೆಳಗಾವಿ ಸೇರಿ ವಿವಿಧ ಕಡೆ ಪ್ರಕರಣ ಬೆಳಕಿಗೆ ಬಂದಿವೆ. ನಮ್ಮ ಆಸ್ಪತ್ರೆಯೊಂದರ ಆವರಣದ ವಸತಿ ಗೃಹದಲ್ಲೇ ಭ್ರೂಣಹತ್ಯೆ ಮಾಡುತ್ತಿದ್ದುದು ಗಮನಕ್ಕೆ ಬಂದಿತ್ತು. ಅವರನ್ನು ರೆಡ್ ಹ್ಯಾಂಡ್ ಆಗಿ…













