Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಬಿಟ್ಟು ಕೆಳಗೆ ಇಳಿರಿ ಕೇವಲ 24 ಗಂಟೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬಿಡಿ ಅಧಿಕಾರದಿಂದ ಇಳೀರಿ ನೀವು 24 ಗಂಟೆಯಲ್ಲಿ ಅವರನ್ನ ನಾವು ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ಅಧಿಕಾರದಿಂದ ಬಿಟ್ಟು ಇಳೀರಿ. ನಿಮ್ಮ ಯೋಗ್ಯತೆಗೆ ಅವರನ್ನ ಬಿಟ್ಟು ಕಳುಹಿಸಿದ್ದೀರಿ. ಪ್ರಜ್ವಲ್ ನಮ್ಮ ಎಂಪಿ ಅಲ್ಲ. ಅವರು ಕೈ ಬೆಂಬಲಿತ ಎಂಪಿ ನಮ್ಮ ಎಂಪಿ ಆಗಲು ಇನ್ನೂ ಒಂದು ತಿಂಗಳು ನಾಲ್ಕು ದಿನ ಬಾಕಿ ಇದೆ. ನಮ್ಮ ಎಂಪಿಯಾಗಿ ಆಯ್ಕೆಯಾದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಆರ್ ಅಶೋಕ್ ತಿಳಿಸಿದರು.
ಯಾದಗಿರಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ. ವೀಸಾ ಪಾಸ್ ಪೋರ್ಟ್ ಕೊಡೋರು ಬಿಜೆಪಿಯವರೇ ತಾನೆ. ಅಮಿತ್ ಶಾ ಗೆ ಗೊತ್ತಿದ್ದರೂ ಪ್ರಜ್ವಲ್ ಗೆ ಟಿಕೆಟ್ ಯಾಕೆ ಕೊಟ್ಟರು? ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದವನಿಗೆ ಟಿಕೆಟ್ ಹಾಕಿ ಕೊಡಬೇಕು? ಹಾಗಾಗಿ ಪ್ರಕರಣ ಕುರಿತಂತೆ ಎಸ್ಐಟಿಯಿಂದ ಪಾರದರ್ಶಕವಾಗಿ ತನಿಖೆ ನಡೆಯುತ್ತದೆ ಎಂದು ತಿಳಿಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಅವರು, ಕಾರ್ತಿಕ್ ಪ್ರಜ್ವಲ್ ರೇವಣ್ಣ ಡ್ರೈವರ್ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ ಡ್ರೈವ್ ಕೊಟ್ಟಿದ್ದು. ಎಚ್ ಡಿ ಕುಮಾರಸ್ವಾಮಿ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಾರೆ. ಕೇಂದ್ರ ಸಚಿವ ಅಮಿತ್ ಶಾ ಗೆ ಗೊತ್ತಿದ್ದರೂ ಯಾಕೆ ಪ್ರಜ್ವಲ್ ಗೆ ಟಿಕೆಟ್ ಕೊಟ್ಟರು? ಎಸ್ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ ಎಂದು…
ಬೆಂಗಳೂರು : ಅಶ್ಲೀಲ ವಿಡಿಯೋ ಬಿಡುಗಡೆಯಲ್ಲಿ ಮಹಾ ನಾಯಕನ ಕೈವಾಡ ಇದೆ ಎಂದು ನೇರ ಹೆಸರು ಹೇಳದೆ ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಗುಡುಗಿದ್ದರು. ಇದೀಗ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕುಮಾರಸ್ವಾಮಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದೂ, ವಿಡಿಯೋ ಬಿಡುಗಡೆ ಹಿಂದೆ ಮೈತ್ರಿ ನಾಯಕರು ಹಾಗೂ ಹೆಚ್ಡಿ ಕುಮಾರಸ್ವಾಮಿ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಬಳಿ ವಿಡಿಯೋ ಇದ್ದಿದ್ದರೆ ಮುಂಚೆಯೇ ಬಿಡುಗಡೆ ಮಾಡುತ್ತಿದ್ದರು. ಇದರ ಹಿಂದೆ ಹಾಸನ ನಾಯಕರ ಕೈವಾಡ ಇದೆ. ಕುಮಾರಸ್ವಾಮಿ ಕೈವಾಡ ಕೂಡ ಇದೆ ಎಂದು ಅವರು ಆರೋಪಿಸಿದರು. ಹೆಣ್ಣು ಮಕ್ಕಳಿಗೆ ಅನ್ಯಾಯ ಆಗಿರುವ ಬಗ್ಗೆ ಗಮನ ಹರಿಸಬೇಕಿದೆ. ಈ ಕೇಸ್ ಬಗ್ಗೆ ಹಾಸನ ಜಿಲ್ಲೆಯಲ್ಲಿ ಮೊದಲೇ ಗುಸುಗುಸು ಇತ್ತು. ಹಾಗೆಂದು ವೀಡಿಯೋ ನೋಡಿದವರು ಯಾರೂ ಇರಲಿಲ್ಲ. ನ್ಯಾಯಾಲಯದ ತಡೆಯಾಜ್ಞೆ ತಂದಾಗ ಅದು ಖಚಿತ ಆಗಿದೆ. ಪೆನ್ಡ್ರೈವ್ ಬಿಡುಗಡೆಯಾದಾಗ ಬಹಿರಂಗವಾಗಿ ಚರ್ಚೆ ಆಗಿದೆ. ಈ ವಿಡಿಯೋ ಹಿಂದೆ ಹಾಸನ…
ಬಾಗಲಕೋಟೆ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಸಚಿವ ಕೆ ಎನ್ ರಾಜಣ್ಣ ಸ್ಪೋಟ ವಾದಂತಹ ಆರೋಪ ಮಾಡಿದ್ದು 6 ತಿಂಗಳ ಹಿಂದೆಯೇ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ಟೇ ತೆಗೆದುಕೊಂಡಿದ್ದರು ಎಂದು ಸ್ಫೋಟಕ ವಾದಂತಹ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಈ ಘಟನೆ ನಿನ್ನೆ ಮೊನ್ನೆಯದ್ದಲ್ಲ. ಆರು ತಿಂಗಳ ಮುಂಚೆ ಪ್ರಜ್ವಲ್ ಸ್ಟೇ ತೆಗೆದುಕೊಂಡಿದ್ದಾರೆ. ಪ್ರಜ್ವಲ್ ಸ್ಟೇ ತೆಗೆದುಕೊಂಡಾಗ ನನಗೆ ಅನುಮಾನ ಇತ್ತು. ಸುಮ್ಮನೆ ಯಾರು ಅಷ್ಟೇ ತೆಗೆದುಕೊಳ್ಳುವುದಿಲ್ಲ ಎಂದು ಅವರು ತಿಳಿಸಿದರು. ಅಸಹಾಯಕ ಮಹಿಳೆಯರ ದುರ್ಬಳಕೆ ಖಂಡನೀಯ. ಮನೆ ಕೆಲಸದ ಮಹಿಳೆಯನ್ನು ಇವರು ಬಳಸಿಕೊಂಡಿದ್ದಾರೆ. ವಿಡಿಯೋ ಮಾಡಿಕೊಂಡಿದ್ದು ಒಂದು ಭಯಾನಕ ದುಷ್ಕೃತ್ಯವಾಗಿದೆ. ರಾಜ್ಯ ರಾಜಕೀಯದಲ್ಲಿ ಇದೊಂದು ಕಪ್ಪು ಚುಕ್ಕೆಯಾಗಿದೆ ಎಂದು ಅವರು ತಿಳಿಸಿದರು. ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ ಕೇಂದ್ರ ಮಲತಾಯಿ ಧೋರಣೆ ಅನುಸರಿಸಿದೆ. ಹಾಗಾಗಿ ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು.…
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲವೆಂದು ಅಸಮಾಧಾನಗೊಂಡಿದ್ದ ಹಾವೇರಿಯ ಬಿಜೆಪಿಯ ಮಾಜಿ ಶಾಸಕ ನೆಹರು ಓಲೆಕಾರ್ ಅವರು ಇದೀಗ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಓಲೆಕಾರ್ ಬಿಜೆಪಿಗೆ ಗುಡ್ ಬಾಯ್ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ. ನೆಹರು ಓಲೆಕಾರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ನೆಹರು ಓಲೆಕಾರ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆಪ್ತನಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ವಿಧಾನಸಭಾ ಚುನಾವಣೆಯಲ್ಲಿ ಮುನಿಸಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಇದೀಗ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.
ವಿಜಯಪುರ : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಡಿಕೆ ಶಿವಕುಮಾರ ಬಿಡುಗಡೆ ಮಾಡಿದ್ದಾರೆಂಬ ಅರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೇ ಬರಲ್ಲ ಎಂದರು. ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ವಿಜಯಪುರ ಜಿಲ್ಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು,ಶಿವಕುಮಾರ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೇ ಬರಲ್ಲ. ಡಿಕೆಶಿ ಹೆಸರನ್ನು ನೂರು ಸಲ, ನೂರು ವಿಚಾರಗಳಲ್ಲಿ ಹೇಳುತ್ತಾರೆ. ಜಾರಕಿಹೋಳಿ ವಿಚಾರದಲ್ಲಿಯೂ ಡಿಕೆಶಿ ಹೆಸರು ಹೇಳಿದ್ದರು ಬಿಜೆಪಿಯವರು ಮಹಿಳಾ ವಿರೋಧಿಗಳು. ಬಿಜೆಪಿಯವರು ಮಹಿಳೆಯರಿಗೆ ಯಾವುದೇ ಶಿಕ್ಷಣ ಕೊಟ್ಟಿಲ್ಲ. ಮಾತೃ ಶಕ್ತಿ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರದ ಮಹಿಳೆ ಮೇಲೆ ರ ಅತ್ಯಾಚಾರ ಆದಾಗ ಮಾತನಾಡಿಲ್ಲ ಎಂದರು. ಉತ್ತರ ಪ್ರದೇಶದಲ್ಲಿ ಒಬ್ಬರು ತಪ್ಪು ಮಾಡಿದರೆ ಬುಲ್ಡೋಜರ್ ನಿಂದ ಮನೆ ಒಡೆಯುತ್ತಾರೆ, ಯುಪಿಯಲ್ಲಿ ಎಂಪಿ ಯನ್ನು ಗುಂಡಿಕ್ಕಿ ಕೊಂದರು, ಈ ವಿಚಾರದಲ್ಲಿ ಅಮಿತ್ ಶಾ ಬಾಯಿ…
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿರೋಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಕ್ಕೆ ಗೃಹ ಸಚಿವ ಜಿ ಪರಮೇಶ್ವರ ತಿರುಗೇಟು ನೀಡಿದ್ದಾರೆ.ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್ಡಿ ರೇವಣ್ಣರನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು. ವಿದೇಶದಲ್ಲಿರೋ ಪ್ರಜ್ವಲ್ ಕರೆ ತರುವ ವಿಚಾರವಾಗಿ ಮಾತನಾಡಿ, ಎಸ್ಐಟಿ ಈಗಾಗಲೇ ನೊಟೀಸ್ ಜಾರಿ ಮಾಡಿದೆ. ಪ್ರಜ್ವಲ್ ವಿದೇಶಕ್ಕೆ…
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತೆ ಆಗಿದೆ. ಇತ್ತೀಚಿಗೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ವಿರೂಪಾಕ್ಷಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ರಾತ್ರಿ 10.30 ರ ವೇಳೆಗೆ ಕೊಡಿಗೇಹಳ್ಳಿ ವಿರೂಪಾಕ್ಷಪುರದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ ಪುಂಡರು ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ. ನಂತರ ದಂಪತಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾರೆ. ಅಷ್ಟರಲ್ಲಿ ಅವರನ್ನು ಅಟ್ಟಾಡಿಸಿಕೊಂಡು ಹೋದ ಪುಂಡರು, ಹೆಂಡತಿಯನ್ನು ಕಳುಹಿಸಿಕೊಡುವಂತೆ ಗಂಡನಿಗೆ ಬೆದರಿಕೆ ಹಾಕಿದ್ದಾರೆ. ತಕ್ಷಣವೇ ದಂಪತಿ ಸಹಾಯ ಕೋರಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಬಳಿಕ ಬಿಹಾರ ಪೊಲೀಸರಿಗೂ ಫೋನ್ ಮಾಡಿ ನೆರವು ಕೋರಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು :ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಹಾಸನ ಜಿಲ್ಲೆಯಲ್ಲಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಮನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಿ ಬಂದಿತ್ತು. ಈ ಒಂದು ನೋಟಿಸ್ ಗೆ ಇದೀಗ ಶಾಸಕ ಎಚ್ ಡಿ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು ಮೇ 4 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಇಂದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಮನ್ಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆಗಾಗಿ ಕಾಂಗ್ರೆಸ್ ಎಸ್ಐಟಿ ರಚಿಸಿದ ನಂತರ ಜೆಡಿಎಸ್ ಅವರನ್ನು ಅಮಾನತುಗೊಳಿಸಿದ ಒಂದು ದಿನದ ನಂತರ ತಂದೆ-ಮಗನ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.ಮನೆ ಕೆಲಸದವರು ನೀಡಿದ ದೂರಿನ ಮೇರೆಗೆ ಪ್ರಜ್ವಲ್ ಮತ್ತು…
ಕಲಬುರಗಿ : ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಇಲ್ಲವೇ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ವಿರೋಧಿಸುವ ಭರದಲ್ಲಿ ಕಲ್ಬುರ್ಗಿಯ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ಉಮೇಶ್ ಜಾಧವ ಅವರು, ಒಂದು ಎಡವಟ್ಟನ್ನು ಮಾಡಿಕೊಂಡಿದ್ದಾರೆ. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜು ಕಾಗೆ ಹೇಳಿಕೆ ವಿರೋಧಿಸುವ ದರದಲ್ಲಿ ಡಾ. ಉಮೇಶ್ ಯಾದವ್ ಎಡವಟ್ಟು ಮಾಡಿಕೊಂಡಿದ್ದು, ಹೇಳಿಕೆ ವಿರೋಧಿಸುವ ಭರದಲ್ಲಿ ಡಾ. ಮಹೇಶ್ ಯಾದವ್ ಎಡವಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುವುದಿಲ್ಲ ಎಂದು ಉಮೇಶ್ ಜಾಧವ ಹೇಳಿಕೆ ನೀಡಿದ್ದಾರೆ. ಕಲ್ಬುರ್ಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಈ ಹೇಳಿಕೆ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ. ನಮ್ಮಲ್ಲಿ ಬಹಳ ಜನ ಪ್ರಧಾನಿ ಅಭ್ಯರ್ಥಿಗಳಿದ್ದಾರೆ.ನಮ್ಮಲ್ಲಿ ಸೂಕ್ತ ಸಮಯ ಬಂದಾಗ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ.ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಇದ್ದಾರೋ ಇಲ್ಲವೋ ಎಂದು ನೋಡಿಕೊಳ್ಳಲಿ ಎಂದು ರಾಜುಕಾಗೆ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾದವ್…