Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ನಿನ್ನೆ ಬೀದರ್ನಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಕಾರ್ಯಕ್ರಮ ಒಂದರಲ್ಲಿ ಮುಸ್ಲಿಮತಗಳಿಂದ ಮಾತ್ರ ಸಾಗರ ಖಂಡ್ರೆ ಗೆದ್ದಿದ್ದು, ಮುಸ್ಲಿಂ ಅವರ ಕೆಲಸಗಳನ್ನು ಯಾವುದೇ ಮುಲಾಜಿಲ್ಲದೆ ಮಾಡಬೇಕಾಗುತ್ತದೆ ಎಂಬ ಹೇಳಿಕೆ ಭಾರಿ ಸದ್ದು ಮಾಡಿತ್ತು. ಈ ಒಂದು ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಲು ಇವರು ನಾಲಾಯಕರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಇವರ ನಡವಳಿಕೆಯನ್ನು ನೋಡಿದರೆ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಬೆಂಗಳೂರು ಮಹಾನಗರದಲ್ಲಿ ಪಶು ಆಸ್ಪತ್ರೆಗೆ ನೀಡಿದ ಜಾಗವನ್ನು ಏಕಾಏಕಿ ವಕ್ಫ ಮಂಡಳಿಗೆ ನೀಡಿದೆ. ಒಂದು ಕಡೆಯಿಂದ ಮಾತನಾಡಿದ್ದಾರೆ ಜವಾಬ್ದಾರಿ ಸ್ಥಾನದಲ್ಲಿದ್ದು ಈ ರೀತಿ ಹೇಳಿಕೆ ನೀಡಿದ್ದಾರೆ. ಯಾವ ಅರ್ಥದಲ್ಲಿ ಜಮೀರ್ ಅವರು ಮಾತನಾಡಿದ್ದಾರೆ ಎಂದರೆ ಮುಸಲ್ಮಾನ ಓಟಿನಿಂದ ಮಾತ್ರ ಸಾಗರ್ ಖಂಡ್ರೆ ಗೆದ್ದಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರದಲ್ಲಿ ಸಚಿವ ರಾಗಿ ಕೆಲಸ ಮಾಡಲು ಕೂಡ ನಾಲಾಯಕ ಸಚಿವರಾಗಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿಯವರು ಆಯ್ಕೆಯಾಗಿದ್ದಾರೆ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಐಡಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಇನ್ನು ಮುಂದೆ ಸಂಸತ್ತಿನಲ್ಲಿ ಜನರ ಧ್ವನಿಯಾಗಿ ರಾಹುಲ್ ಗಾಂಧಿ ಇರಲಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ ನಲ್ಲಿ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಗುಣಗಾನ ನಡೆಯುತ್ತಿತ್ತು ಈ ವೇಳೆ ವಿರೋಧ ಪಕ್ಷದ ನಾಯಕರನ್ನು ಹೊರಹಾಕಲಾಗುತ್ತಿತ್ತು. ಆದರೆ ಇದೀಗ ಸಂಸತ್ತಿನಲ್ಲಿ ಕೊನೆಗೂ ಜನರ ಧ್ವನಿಯನ್ನು ಕೇಳಬಹುದಾಗಿದೆ. ಪ್ರಸ್ತುತ ಸಮಸ್ಯೆಗಳನ್ನು ಅಲ್ಲಿ ಚರ್ಚಿಸಲಾಗುತ್ತದೆ. ಮೊದಲು ವಿಪಕ್ಷದರನ್ನು ಹೊರಗೆ ಹಾಕಲಾಗುತ್ತಿತ್ತು ಇದೀಗ ರಾಹುಲ್ ಗಾಂಧಿಯವರು ಜನರ ಧ್ವನಿಯಾಗಿ ಸಂಸತ್ತಿನಲ್ಲಿ ಇರಲಿದ್ದಾರೆ ಎಂದು ತಿಳಿಸಿದರು. ಇನ್ನೂ ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕರಾಗಿ ಆಯ್ಕೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕೂಡ ಅಭಿನಂದನೆ ಸಲ್ಲಿಸಿದ್ದು, ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ…
ಬೆಂಗಳೂರು : ರಾಜ್ಯದಲ್ಲಿ ಜೂನ್ 25 ರಿಂದ 29 ರವರೆಗೆ ಹಲವೆಡೆ ಭಾರಿ ಮಳೆಯಾಗಲಿದೆ, ಹಾಗಾಗಿ ರಾಜ್ಯದ 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಅಲ್ಲದೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಗಲಕೋಟೆ,ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲ್ಬುರ್ಗಿ, ರಾಯಚೂರು, ಹಾವೇರಿಯಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಹುಬ್ಬಳ್ಳಿ : ಅಪರಿಚಿತ ವ್ಯಕ್ತಿ ಒಬ್ಬನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್ ಕುಮಾರ್ ಗೆ ಬೆದರಿಕೆ ಮೆಲ್ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ. ವ್ಯಕ್ತಿ ಒಬ್ಬನಿಂದ ಇ-ಮೇಲ್ ಮೂಲಕ ಜೀವ ಬೆದರಿಕೆಯ ಸಂದೇಶ ಬಂದಿದೆ. ನಿರ್ದೇಶಕರ ಕಚೇರಿಯ ಮೆಲ್ ಐಡಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದೆ ಎಂದು ಹೇಳಲಾಗುತ್ತಿದೆ. ಲಾಂಗ್ ಲೀವ್ ಪ್ಯಾಲೆಸ್ತೀನ್ ಎಂಬ ಹೆಸರಿನ ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲಾ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರಾ ಬೆಂಕಿಯಲ್ಲಿ ಎಸುತ್ತೇವೆ ಉಸಿರುಗಟ್ಟಿ ಸಾಯುತ್ತೀರಾ ಎಂದು ಸಂದೇಶ ಬಂದಿದ್ದು, ಈ ವಿಚಾರವನ್ನು ರೂಪೇಶ್ ಕುಮಾರ್ ಅವರು ಟರ್ಮಿನಲ್ ಉಸ್ತುವಾರಿ ಗಮನಕ್ಕೆ ತಂದಿದ್ದಾರೆ.
ನವದೆಹಲಿ : ಅಬಕಾರಿ ನೀತಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಕಳೆದ ಸೋಮವಾರ ತಿಹಾರ್ ಜೈಲಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದುಕೊಂಡಿತ್ತು. ಇದೀಗ ಕೇಜ್ರಿವಾಲ್ ಬಂಧನ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೋಸ್ ಅವೆನ್ಯೂ ಕೋರ್ಟಿಗೆ ಸಿಎಂ ಕೇಜ್ರಿವಾಲ್ ಇದೀಗ ಆಗಮಿಸಿದ್ದಾರೆ.ಕೋರ್ಟ್ ಪ್ರಕ್ರಿಯೆ ಮುಗಿದ ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇನ್ನೂ ನಿನ್ನೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಸಿಬಿಐ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಇಂದು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ. ಹಾಗಾಗಿ ಇಂದು ಅರವಿಂದ್ ಕೇಜ್ರಿವಾಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಹಲಿಯ ರೋಸ್ ಅವೆನ್ಯೂ ಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಮಂಗಳವಾರ ದೆಹಲಿ ಹೈಕೋರ್ಟ್ ರದ್ದು ಮಾಡಿತ್ತು.
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಈ ಕುರಿತು ಬೆಸ್ಕಾಂ ಮಾಧ್ಯಮ ಪ್ರಕಟನೆಯಲ್ಲಿ ಬೆಂಗಳೂರು ನಗರದ ಆಲೋ ಪ್ರದೇಶಗಳಲ್ಲಿ ಬೆಳಿಗ್ಗೆ 10:30 ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದ್ದು, ಅದೇ ರೀತಿ ರಾಮನಗರದಲ್ಲಿ 10.30 ರಿಂದ 3 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನಲ್ಲಿ ಯಾವ್ಯಾವ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ? ಬೆಂಗಳೂರಿನ, ಆರ್ಟಿ ನಗರ, ಗಂಗಾ ನಗರ, ಚೋಳನಗರ, ಹೊರ ವರ್ತುವಲ್ ರಸ್ತೆ, ಕರಿಯಪ್ಪ ಲೇಔಟ್, ಆಶ್ರಮ ರಸ್ತೆ, ಆನಂದನಗರ ಮೊದಲನೇ ಬ್ಲಾಕ್, ಗುಡ್ಡಪ್ಪರೆಡ್ಡಿ ಲೇಔಟ್, ಹೆಬ್ಬಾಳ, ಜಯಮಹಲ್ ಮೊದಲನೇ ಬ್ಲಾಕ್, ನಂದಿದುರ್ಗ ರಸ್ತೆ, ಮರಪ್ಪ ಗಾರ್ಡನ್, ಜೆಸಿನಗರ, ಮಿಲ್ಲರ್ಸ್ ರಸ್ತೆ, ಗಂಗಾನಗರ, ಚಾಮುಂಡಿನಗರ, ದಿನ್ನುರ, ಪಿ&ಟಿ ಕಾಲೋನಿ,…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಗೌಡ ಮತ್ತು ಗ್ಯಾಂಗ್ ಈಗಾಗಲೇ ಜೈಲು ಪಾಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ವರು ಆರೋಪಿಗಳನ್ನು ತುಮಕೂರು ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೌದು ಇಂದು 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ ಸಾಧ್ಯತೆ ಇದೆ. ರವಿಶಂಕರ್, ಕಾರ್ತಿಕ್, ಕೇಶವ, ನಿಖಿಲ ನಾಯಕ್ ಆರೋಪಿಗಳನ್ನು ಶಿಫ್ಟ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಆರೋಪಿಗಳ ಸ್ಥಳಾಂತರಕ್ಕೆ ಅನುಮೋದನೆ ನೀಡಿದ ಬಂಧಿಖಾನೆಯ ಎಡಿಜಿಪಿ. ಕೋರ್ಟ್ ಆದೇಶದಂತೆ ವಿಚಾರಣಾದಿನ ಕೈದಿಗಳನ್ನು ಶಿಫ್ಟ್ ಮಾಡಲು ಅನುಮೋದನೆ ದೊರಕಿದೆ. ಆರೋಪಿಗಳ ಸ್ಥಳಾಂತರ ಪ್ರಕ್ರಿಯೆಯನ್ನು ಜೈಲಧಿಕಾರಿಗಳು ಈಗಾಗಲೇ ಮುಗಿಸಿದ್ದಾರೆ. ಮಧ್ಯಾಹ್ನ ಪರಪ್ಪನ ಅಗ್ರಹಾರ ಜಯಲಿಂದ ತುಮಕೂರು ಜಿಲ್ಲೆಗೆ ಶಿಫ್ಟ್ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ನಾವೇ ಕೊಂದಿದ್ದೇವೆಂದು ಹೇಳಿಕೊಂಡು ಮೊದಲು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಶರಣಾಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮೂವರು ಬಾಯ್ಬಿಟ್ಟಿದ್ದರಿಂದ…
ಬೆಂಗಳೂರು : ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ್ದು, ಇಂದು ಮಧ್ಯಾಹ್ನದಿಂದಲೇ ಪ್ರತಿ ಪ್ಯಾಕೆಟ್ನ ಬೆಲೆ ರೂ.2 ಏರಿಕೆಯಾಗಲಿದೆ ಎಂದು ಕೆಎಂಎಫ್ ಮಾಹಿತಿ ನೀಡಿದೆ. ಹೌದು ಹೊಸ ಹಾಲಿನ ಪ್ಯಾಕೆಟ್ ನಿಂದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಗುಲಿದೆ. ಆದರೆ ರಾತ್ರಿ ಬಂದಿರುವಂತಹ ಸ್ಟಾಕ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಸದ್ಯ ಹಳೆಯ ದರದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಮಧ್ಯಾಹ್ನದ ನಂತರ ಹೊಸ ದರದಲ್ಲಿ ಹಾಲು ಮಾರಾಟ ಮಾಡಲಾಗುತ್ತದೆ. ಮಧ್ಯಾಹ್ನದಿಂದ ನಂದಿನಿ ಹಾಲಿನ ದರ ಹೆಚ್ಚಾಗಲಿದೆ ಹಾಗಾಗಿ ಸದ್ಯ ಸಾಮಾನ್ಯ ದರದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇವಾಗ ಇರುವುದು ರಾತ್ರಿ ಬಂದಿರುವ ಸ್ಟಾಕ್ ಒಂದು ಲೀಟರ್ ಒಂದು ಪ್ಯಾಕೆಟ್ ತಗೊಂಡ್ರೆ 2 ರೂಪಾಯಿ ಜಾಸ್ತಿ ಆಗುತ್ತದೆ ಅರ್ಧ ಲೀಟರ್ 2 ಪ್ಯಾಕೆಟ್ ತಗೊಂಡ್ರೆ 4 ರೂಪಾಯಿ ಜಾಸ್ತಿ ಆಗುತ್ತದೆ. ಪ್ಯಾಕೆಟ್ ಮೇಲೆ 2 ರೂಪಾಯಿ ಜಾಸ್ತಿ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ…
ಮೈಸೂರು : ಸಿಎಂ ಬೆಂಗಾವಲು ವಾಹನಕ್ಕೆ ಬೈಕ್ ಸವಾರನಿಂದ ಅಡಚಣೆ ಆರೋಪದ ಹಿನ್ನೆಲೆಯಲ್ಲಿ ಇದೀಗ ಮೈಸೂರಿನ ಕೆಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಬರಳ್ಳಿ ನಿವಾಸಿ ಶಿವು ವಿರುದ್ಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಜೂನ್. 23 ರಂದು ಏರ್ಪೋರ್ಟ್ನಿಂದ ನಜರಾಬಾದ್ಗೆ ಸಿಎಂ ಸಿದ್ದರಾಮಯ್ಯನವರು ಹೊರಟಿದ್ದರು. ಮೈಸೂರು ನಂಜನಗೂಡು ಹೆದ್ದಾರಿಯಲ್ಲಿ ಈ ವೇಳೆ ಬ್ಯಾರಿಕೆಡ್ ಅಳವಡಿಕೆ ಮಾಡಲಾಗಿತ್ತು. ಪೊಲೀಸರು ಸೂಚಿಸಿದ್ದರು ಕೂಡ ಬೈಕ್ ಸವಾರ ತೆರಳಿರುವ ಆರೋಪ ಕೇಳಿ ಬಂದಿದೆ. ಸಿಎಂ ಬರುತ್ತಿದ್ದ ಮಾರ್ಗದಲ್ಲಿ ಬೈಕ್ ಸವಾರ ತೆರಳಿರುವ ಆರೋಪ ಕೇಳಿ ಬಂದಿದೆ. ಈ ವೇಳೆ ಬೈಕ್ ಸವಾರ ಶಿವುನನ್ನು ತಡೆಯಲು ಮುಂದಾದ ಪೊಲೀಸರಿಗೆ ಆರೋಪಿ ಶಿವು ಡಿಕ್ಕಿ ಹೊಡೆದಿದ್ದಾನೆ. ನಂತರ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ಶಿವುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇದೀಗ ಶಿವು ವಿರುದ್ಧ FIR ದಾಖಲಾಗಿದೆ.
ಬೆಂಗಳೂರು : ಪೆಟ್ರೋಲ್ ಡೀಸೆಲ್ ಹಾಗೂ ಹಾಲಿನ ದರ ಏರಿಕೆಯಾದ ಬಳಿಕ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಪೆಟ್ರೋಲ್, ಗ್ಯಾಸ್ ಬೆಲೆ ಹೆಚ್ಚಾಳವಾಗಿದ್ದರಿಂದ ಆಟೋ ಪ್ರಯಾಣ ದರ ಪರಿಷ್ಕರಣೆಗೆ ಆಟೋ ಚಾಲಕರ ಮತ್ತು ಮಾಲೀಕರ ಸಂಘಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದು, ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ. ಹೌದು ಈ ಕುರಿತು ಪ್ರತಿಕ್ರಿಯಿಸಿರುವ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜು ನಾಥ್, 2021ರ ಡಿಸೆಂಬರ್20ರಿಂದ ಆಟೋ ಪ್ರಯಾಣ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಈ ಕೂಡಲೇ ಆಟೋ ಪ್ರಯಾಣ ದರ ಹೆಚ್ಚಿಸು ವಂತೆ ಒತ್ತಾಯಿಸಿವೆ. ಸದ್ಯ ಕನಿಷ್ಠ ಆರಂಭದ 2 ಕಿ.ಮೀ. ಪ್ರಯಾಣ ರೂ.30 ಇದ್ದು, ಅದನ್ನು ರೂ.40ಕ್ಕೆ ಹೆಚ್ಚಿಸಬೇಕು. ಪ್ರತಿ 2 ಕಿ. ಮೀ. ನಂತರದ ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆಸಾರಿಗೆ ಇಲಾಖೆಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಈವರೆಗೆ ಕ್ರಮ ಕೈಗೊಂಡಿಲ್ಲ. ಬಿಡಿ ಭಾಗಗಳು,…














