Subscribe to Updates
Get the latest creative news from FooBar about art, design and business.
Author: kannadanewsnow05
ಕೊಡಗು : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನ ಮೇಲೆ ಕೊಡಲಿಯಿಂದ ಭೀಕರವಾಗಿ ಕೊಂದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮದಲ್ಲಿ ಕೊಡಲಿಯಿಂದ ಕೊಚ್ಚಿ ಸ್ನೇಹಿತನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹಲ್ಲೆಗೆ ಒಳಗಾಗಿದ್ದ ವಸಂತ (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕೆ ಕೊಡಲಿದ್ದ ಹೊಡೆದು ನಿನ್ನೆ ಜೋಸೆಫ್ (45) ಮೇಲೆ ಕೊಲೆ ಆರೋಪಿ ಗಿರೀಶ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಜಗಳ ತಡೆಯಲು ಹೋಗಿದ್ದ ವಸಂತ ಮೇಲು ಗಿರೀಶ್ ಹಲ್ಲೆಗೈದಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ವಸಂತ್ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾನೆ. ಕೃತ್ಯದ ಬಳಿಕ ಪೊಲೀಸರಿಗೆ ಆ ಕೊಲೆ ಆರೋಪಿ ಗಿರೀಶ್ ಶರಣಾಗಿದ್ದಾನೆ.ಕುಶಲಾನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಆನೇಕಲ್ಲಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಅವಘಡ ಸಂಭವಿಸಿದೆ. ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಪರಶುರಾಮ (24) ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈ ವೇಳೆ ಮತ್ತೊಬ್ಬ ಕಾರ್ಮಿಕನಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪೈಪ್ ಅಳವಡಿಕೆಗೆ ಮಣ್ಣು ಹಾಗೆ ಇರುವಾಗ ಕಾಂಪೌಂಡ್ ಕುಸಿದು ಬಿದ್ದಿದೆ. ರಾಯಚೂರು ಮೂಲದ ಐದರಿಂದ ಆರು ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಈ ವೇಳೆ ಏಕಾಏಕಿ ಕಾರ್ಮಿಕರ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು ಇಂದು ಮೈಸೂರಿನ ವಿಜಯನಗರದಲ್ಲಿರುವ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ 14 ಸೈಟ್ಗಳ ಸ್ಥಳ ಮಹಜರು ನಡೆಸಿದರು. ಇದೇ ವೇಳೆ ಸ್ಥಳದಲ್ಲಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಮುಡಾ ಹಗರಣದಲ್ಲಿ ಜಿಟಿ ದೇವೇಗೌಡರ ಅಕ್ರಮವು ಇದೆ ಎಂದು ಸ್ಪೋಟಕವಾದ ಆರೋಪ ಮಾಡಿದರು. ಸ್ಥಳ ಮಹಜರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ಜಿಟಿ ದೇವೇಗೌಡ ವಿರುದ್ಧ ಸ್ಪೋಟಕ ಹೇಳಿಕೆ ನೀಡಿದ್ದು ಮುಡಾದಲ್ಲಿ ಜಿಟಿ ದೇವೇಗೌಡರ ಅಕ್ರಮವಿರಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅವರು ಈ ಒಂದು ಹಗರಣದಲ್ಲಿ ಭಾಗಿಯಾಗಿರುವುದರಿಂದ ಈ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ ಎಂದು ಅವರು ಆರೋಪಿಸಿದರು. ಅಲ್ಲದೆ HC ಮಾದೇವಪ್ಪ ಸಹೋದರ ಮಗನಿಗೂ ಸೈಟ್ ಕೊಡಲಾಗಿದೆ. ಮರಿಗೌಡ ಸಹೋದರನಿಗೂ ಶಿವಣ್ಣನಿಗೂ ಸೈಟ್ ಕೊಡಲಾಗಿದೆ ಕಳ್ಳರು ಕಳ್ಳರು ಎಲ್ಲರೂ ಒಂದಾಗಿದ್ದಾರೆ. ಹಾಗಾಗಿ ಹೀಗೆ ಹೇಳುತ್ತಿದ್ದಾರೆ ತಮ್ಮ ರಕ್ಷಣೆಗಾಗಿ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು ಇಂದು ಮೈಸೂರಿನ ವಿಜಯನಗರದಲ್ಲಿರುವ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ 14 ಸೈಟ್ಗಳ ಸ್ಥಳ ಮಹಜರು ನಡೆಸಿದರು. ಹೌದು ಕೆಸರೆ ಗ್ರಾಮದ ಜಮೀನಿನ ಬದಲಾಗಿ ಮೈಸೂರಿನ ವಿಜಯನಗರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ಈ ಒಂದು ಸೈಟ್ ಪಡೆದುಕೊಂಡಿದ್ದರು. ಮೈಸೂರಿನ ವಿಜಯನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸ್ಥಳ ಮಹಜರು ಪ್ರಕ್ರಿಯೆ ನಡೆಯಿತು. ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು ಲೋಕಾಯುಕ್ತ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಸೈಟ್ ಗಳ ಮಹಜರು ನಡೆಸಲಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಇಂದು ಲೋಕಾಯುಕ್ತ ಅಧಿಕಾರಿಗಳು ಸಹ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಸೂಚಿಸಿದ್ದರು. ಹಾಗಾಗಿ ಅವರ ಸಮ್ಮುಖದಲ್ಲಿ ಮೈಸೂರಿನ ವಿಜಯನಗರದಲ್ಲಿರುವ 14 ಸೈಟ್ ಗಳ…
ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆದಂತಹ ಬಿ.ದಯಾನಂದ ಅವರು ಪೊಲೀಸ್ ಸಿಬ್ಬಂದಿಗಳಿಗೆ ಇಂದು ಖಡಕ್ ವಾರ್ನಿಂಗ್ ನೀಡಿದ ಪ್ರಸಂಗ ನಡೆಯಿತು. ಪೊಲೀಸ್ ಸಿಬ್ಬಂದಿಗಳಿಗೆ ದಯಾನಂದ ಅವರು ಯಾವ ಕಾರಣಕ್ಕಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಕೊಳ್ಳಲು ಮುಂದೆ ಈ ಸುದ್ದಿ ಓದಿ ಇಂದು ಪೊಲೀಸ್ ಸಿಬ್ಬಂದಿಗಳಿಗೆ ಕಮಿಷನರ್ ಬಿ.ದಯಾನಂದ್ ವರ್ಗಾವಣೆ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮಾಸಿಕ ಸೇವಾ ಕವಾಯಿತು ಕಾರ್ಯಕ್ರಮದಲ್ಲಿ ವಾರ್ನ್ ನೀಡಿದ್ದಾರೆ. ಆಡುಗೋಡಿ ಸಿ ಎ ಆರ್ ಮೈದಾನದಲ್ಲಿ ಈ ಒಂದು ಕಾರ್ಯಕ್ರಮ ನಡೆದಿತ್ತು. ವರ್ಗಾವಣೆ ವಿಚಾರವಾಗಿ ಸಾಕಷ್ಟು ಸಿಬ್ಬಂದಿ ಕಚೇರಿಗೆ ಬರುತ್ತಿದ್ದಾರೆ. ಸರಿಯಾದ ಸಮಯದಲ್ಲಿ ನಾವೇ ವರ್ಗಾವಣೆ ಮಾಡುತ್ತೇವೆ.ಪ್ರತಿದಿನ ಸಿಬ್ಬಂದಿ ಬರುವುದರಿಂದ ಇದೇ ಕೆಲಸವಾಗಿ ಬಿಡುತ್ತದೆ. ಇದನ್ನು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಪೊಲೀಸ್ ಸಿಬ್ಬಂದಿಗಳಿಗೆ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದು, ಇಂದು ಬೆಳಿಗ್ಗೆ ಏಕಾಏಕಿ ದೆಹಲಿಯ ಇಡಿ ಅಧಿಕಾರಿಗಳಿಂದ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮೇಲೆ ದಾಳಿ ನಡೆದಿದೆ. ಹೌದು ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆಯ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಬೆಂಗಳೂರಿನ 5 ಕಡೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿಯ ಇಡಿ ಅಧಿಕಾರಿಗಳ ತಂಡದಿಂದ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಸಿಬ್ಬಂದಿಗಳ ಮನೆಯಲ್ಲಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ದಾಳಿಯ ಕುರಿತಂತೆ ಅಧಿಕಾರಿಗಳಿಂದ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಕಲಬುರಗಿ : ಕುಡಿದ ಮತ್ತಿನಲ್ಲಿ ಪತ್ನಿಯ ತಲೆಯನ್ನು ಜಜ್ಜಿ ಭೀಕರವಾಗಿ ಕೊಂದಿರುವ ಘಟನೆ ಕಲಬುರಗಿ ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.ಕೊಲೆಯಾದ ಮಹಿಳೆಯನ್ನು ಪ್ರಿಯಾಂಕಾ (35) ಎಂದು ಹೇಳಲಾಗುತ್ತಿದ್ದು, ಪತಿಯನ್ನು ವಕೀಲ್ ರಾಠೋಡ್ ಎಂದು ತಿಳಿದುಬಂದಿದೆ. ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಪ್ರಿಯಾಂಕಾಳನ್ನ ಅದೇ ತಾಲೂಕಿನ ನಿಂಬರ್ಗಾ ಗ್ರಾಮದ ವಕೀಲ್ ರಾಠೋಡ್ ಜೊತೆ ಮದ್ವೆ ಮಾಡಿಕೊಡಲಾಗಿತ್ತು. ಇವರು ಮಕ್ಕಳೊಂದಿಗೆ ಶಹಬಾದ್ ರಸ್ತೆಯಲ್ಲಿನ ಇಟ್ಟಿಗೆ ಭಟ್ಟಿ ಬಳಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದರು. ಹಿಗೇ ಅದೇ ಇಟ್ಟಿಗೆ ಭಟ್ಟಿಯಲ್ಲಿ ಒಟ್ಟೊಟ್ಟಿಗೆ ಕೆಲಸ ಮಾಡ್ತಿದ್ದ ದಂಪತಿ ನಿತ್ಯವೂ ಕಂಠಪೂರ್ತಿ ಕುಡಿಯುತ್ತಿದ್ದರು. ಪತಿ ವಕೀಲ್ ರಾಠೋಡ್ ಮತ್ತು ಪತ್ನಿ ಪ್ರಿಯಾಂಕಾ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಾ, ಸಂಜೆಯಾದರೆ ಸಾಕು ರಾಠೋಡ್ ಮನೆಗೆ ಎಣ್ಣೆ ತರುತ್ತಿದ್ದನು. ಬಳಿಕ ಇಬ್ಬರೂ ಒಟ್ಟೊಟ್ಟಿಗೆ ಎಣ್ಣೆ ಹೊಡೆದು ಇಬ್ಬರು ಮಕ್ಕಳನ್ನ ನಿರ್ಲಕ್ಷ್ಯ ಮಾಡುತ್ತಿದ್ದರಿಂದ, ಕೆಲ ದಿನಗಳ ಹಿಂದೆ ಮಕ್ಕಳನ್ನ ಅಜ್ಜ ಅಜ್ಜಿ ಬಳಿ ಬಿಟ್ಟು ಬಂದಿದ್ದರು. ಇಷ್ಟಾದರೂ ಸಹ ಇಬ್ಬರ…
ಗುಜರಾತ್ : ಇತ್ತೀಚೆಗೆ ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಮಾಡಿರುವಂತಹ ಘಟನೆ ಇಡೀ ದೇಶವೇ ಬೆಚ್ಚಿ ಬೀಳಿಸುವಂತಿತ್ತು. ಅದಾದ ದೇಶದ ಎಲ್ಲೆಡೆ ಮಹಿಳೆಯರ ಮೇಲೆ ಹಾಗೂ ಯುವತಿಯರ ಮೇಲೆ ಲೈಂಗಿಕ ಕಿರುಕುಳ ಹಾಗು ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ಗುಜರಾತ್ ನಲ್ಲಿ ಸ್ವಂತ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರ ಎಸಗಿರುವ ಹೀನ ಕೃತ್ಯ ನಡೆದಿದೆ. ಆತ 16 ವರ್ಷದವನಾಗಿದ್ದು, ತಂಗಿಗಿನ್ನು 13 ವರ್ಷ ವಯಸ್ಸು, ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ. ಘಟನೆ ಬಳಿಕ ಬಾಲಕಿಯ ತಾಯಿ ಸೆ.30ರಂದು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಲೀಸರ ಪ್ರಕಾರ, ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಡುತ್ತಿದ್ದರು ಮತ್ತು ಅವರ…
ಬೆಂಗಳೂರು : ಉದ್ಯಮಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ನೀಡಿದ್ದ ದೂರಿನ ಮೇರೆಗೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಈ ಕುರಿತಂತೆ ಉದ್ಯಮಿ ವಿಜಯ್ ತಾತ ಅವರು ಎಚ್ ಡಿ ಕುಮಾರಸ್ವಾಮಿ ಅವರು 50 ಕೋಟಿ ರೂಪಾಯಿ ಕೇಳಿದ್ದಾರೆ ಎಂದು ನಾನು ಪ್ರೂವ್ ಮಾಡುತ್ತೇನೆ ಎಂದು ಮತ್ತೊಂದು ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ವಿಜಯ್ ತಾತಾ ಅವರು ಮಾತನಾಡಿದ್ದು, ನನ್ನ ವಿರುದ್ಧ 100 ಕೋಟಿ ರೂಪಾಯಿ ಆರೋಪ ಕೇಳಿ ಬಂದಿದೆ. ಇಂತದಕ್ಕೆಲ್ಲ ಅರ್ಥ ಬೇಡ್ವಾ? ಕೇಂದ್ರ ಸಚಿವರ ಹತ್ತಿರ ನಾನು 100 ಕೋಟಿ ಕೇಳುವುದಕ್ಕೆ ಸಾಧ್ಯನಾ? ಸ್ವಲ್ಪ ಆದ್ರೂ ಕಾಮನ್ ಸೆನ್ಸ್ ಇದೆಯಾ ಇಂತ ಹೇಳಿಕೆ ಕೊಡೋದಕ್ಕೆ ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ತಾತಾ ಆಕ್ರೋಶ ಹೊರಹಾಕಿದ್ದಾರೆ. ನಾನು 50 ಕೋಟಿ ಕೇಳಿದ್ದಾರೆ ಅಂತ…
ತೃತೀಯ ಚಂದ್ರಾಕೃತಿಯೊಂದಿಗೆ ಶುಕ್ರವಾರದಂದು ಮನೆಯಲ್ಲಿ ವಾರಾಹಿ ಅಮ್ಮನವರನ್ನು ಈ ರೀತಿ ಪೂಜಿಸುವವರಿಗೆ ಎಲ್ಲಾ ಕಷ್ಟಗಳು ದೂರವಾಗುತ್ತವೆ ಮತ್ತು ಮುಟ್ಟಿದ ಎಲ್ಲಾ ವಿಷಯಗಳು ವಿಜಯಶಾಲಿಯಾಗುತ್ತವೆ. ನವರಾತ್ರಿಯ ಎರಡನೇ ದಿನವಾದ ಈ ಅದ್ಭುತವಾದ ದಿನವಾದ ಶುಕ್ರವಾರದಂದು ವರಗಿ ಅಮ್ಮನನ್ನು ಪೂಜಿಸುವುದರಿಂದ ನಮ್ಮ ಜೀವನದಲ್ಲಿನ ಎಲ್ಲಾ ಕಷ್ಟಗಳು ದೂರವಾಗುತ್ತವೆ ಮತ್ತು ಬಯಸಿದ ಕೆಲಸವು ಯಶಸ್ವಿಯಾಗುತ್ತದೆ, ಆದರೆ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಾವು ಅಂತಹ ಒಂದು ರೀತಿಯ ಪೂಜೆಯನ್ನು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ…














