Author: kannadanewsnow05

ತುಮಕೂರು : ಕಲ್ಲು ಕ್ವಾರಿಯಲ್ಲಿ ಮದ್ದು ಸ್ಫೋಟಗೊಂಡು ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಹೊಸಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಮದ್ದು ಸ್ಪೋಟಿಸಿದ ಕಾರಣ ನಿಷ್ಕ್ರಿಯಗೊಳಿಸಲು ಹೋದಾಗ ಮದ್ದು ಸ್ಪೋಟಗೊಂಡಿದೆ. ಮಂಜುನಾಥ್ ಹಾಗೂ ಕೋಟಪ್ಪ ಎಂಬುವವರಿಗೆ ಗಂಭೀರವಾದ ಗಾಯವಾಗಿದೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Read More

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತಹ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ಅಂಶ ಬಹಿರಂಗವಾಗಿದ್ದು, ಈ ಒಂದು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಇಡಿ ಅಧಿಕಾರಿಗಳು ಮುಡಾದಲ್ಲಿ ಸುಮಾರು 700 ಕೋಟಿ ರೂಪಾಯಿಗೂ ಅಧಿಕ ಅಕ್ರಮ ನಡಿದಿದೆ ಎಂದು ತನಿಖೆಯ ವೇಳೆ ದೃಢವಾಗಿದೆ ಎಂದು ಇಡಿ ತಿಳಿಸಿದೆ. ಹೌದು ಮುಡಾದ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 700 ಕೋಟಿಗೂ ಅಧಿಕ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. 1095 ಸೈಟ್ ಗಳು ಅಕ್ರಮ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಬೆನಾಮಿ ವ್ಯಕ್ತಿಗಳ ಹೆಸರಿಗೆ ಸೈಟ್ ಹಂಚಿಕೆ ಆಗಿರುವುದು ಇದೀಗ ಪತ್ತೆಯಾಗಿದೆ. ಬೆನಾಮಿ ಹಾಗೂ ನಕಲಿ ವ್ಯಕ್ತಿಗಳ ಹೆಸರಿನಲ್ಲಿ ಕೂಡ ಸೈಟ್ ಹಂಚಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೂ ಕೂಡ 14 ಸೈಟ್ ಗಳು ಹಂಚಿಕೆಯಾಗಿದ್ದವು. ಸಿಎಂ ಪತ್ನಿ ಪಾರ್ವತಿ ಹೆಸರಿನಲ್ಲಿ 14 ಸೈಟ್ ಇದರಲ್ಲಿ ಪತ್ತೆಯಾಗಿವೆ. ಗಣ್ಯರಿಂದ ಸೈಟ್ ಹಂಚಿಕೆಗೆ ಪ್ರಭಾವ ಬೀರಿರುವುದು ಬೆಳಕಿಗೆ ಬಂದಿದೆ.…

Read More

ಕಲಬುರ್ಗಿ : ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ, ಯಡಿಯೂರಪ್ಪ ಅವರನ್ನು ಕಂಡರೆ ರಾಜ್ಯ ಸರ್ಕಾರಕ್ಕೆ ಈಗಲೂ ಭಯವಿದೆ. ಹೀಗಾಗಿ ದಿನ ಬೆಳಗಾದರೆ ಕೇಸ್ ಅಂತಿದ್ದಾರೆ. ಬಿಎಸ್ ಯಡಿಯೂರಪ್ಪ ಒಬ್ಬ ಹೋರಾಟಗಾರ ನಾವು ಹೆದರುವ ಮಾತೆ ಇಲ್ಲ ಎಂದು ಕಲಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಶೋಕ್ ದೆಹಲಿಗೆ ಭೇಟಿ ನೀಡುವ ವಿಚಾರವಾಗಿ, ಆರ್ ಅಶೋಕ್ ವಿರೋಧ ಪಕ್ಷದ ನಾಯಕ ವರಿಷ್ಠರ ಭೇಟಿಗೆ ಅಶೋಕ್ ದೆಹಲಿಗೆ ಹೋಗಿರಬಹುದು. ಆರ್ ಅಶೋಕ ದೆಹಲಿ ಭೇಟಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಡಿಸೆಂಬರ್ 7ರಂದು ಕೋರ್ ಕಮಿಟಿ ಸಭೆ ನಿಗದಿಯಾಗಿದೆ. ಅವತ್ತು ಎಲ್ಲವೂ ಸರಿ ಹೋಗುತ್ತೆ. ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಸ್ ಟಿ ಸೋಮಶೇಖರ್ ಬಗ್ಗೆ ಮಾತನಾಡಲು ಹೋಗಲ್ಲ ಎಂದರು. ವಕ್ಫ್ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ.ರೈತರನ್ನು ಬೀದಿಗೆ…

Read More

ಪಂಜಾಬ್ : ಪಂಜಾಬಿನ ಅಮೃತ್ ಸರದಲ್ಲಿರುವ ಗೋಲ್ಡನ್ ಟೆಂಪಲ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಅಕಾಲಿ ದಳ ನಾಯಕ ಹಾಗೂ ಪಂಜಾಬ್ ನ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಖಾಲಿಸ್ತಾನಿ ಒಬ್ಬ ಬಂದೂಕಿನಿಂದ ಫೈರಿಂಗ್ ಮಾಡಿದ್ದು ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಸುಖ್ಬೀರ್ ಸಿಂಗ್ ಬಾದಲ್ ಗುಂಡಿಕ್ಕಿ ಹತ್ಯೆಗೆ ಯತ್ನ ನಡೆದಿದ್ದು, ಖಾಲಿಸ್ತಾನಿ ಬೆಂಬಲಿತ ವ್ಯಕ್ತಿಯಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ನಾರಾಯಣ ಸಿಂಗ್ ಚೌರಾ ಎನ್ನುವ ವ್ಯಕ್ತಿಯಿಂದ ಹತ್ಯೆಗೆ ಯತ್ನಿಸಲಾಗಿದೆ. ಪಂಜಾಬ್ ನ ಗೋಲ್ಡನ್ ಟೆಂಪಲ್ ಗೆ ತೆರಳುತ್ತಿದ್ದಾಗ ಈ ಒಂದು ಘಟನೆ ನಡೆದಿದೆ. ದಾಳಿ ನಡೆದ ತಕ್ಷಣ ಸುಖ್ಬೀರ್ ಸಿಂಗ್ ಬಾದಲ್ ಬೆಂಬಲಿಗರು ನಾರಾಯಣ ಸಿಂಗ್ ನನ್ನು ತಡೆದಿದ್ದಾರೆ.ಪಂಜಾಬಿನ ಗೋಲ್ಡನ್ ಟೆಂಪಲ್ ನಲ್ಲಿ ಗುಂಡಿನ ಸದ್ದಿಗೆ ಸ್ಥಳೀಯ ಜನರು ಸಹಜವಾಗಿ ಬೆಚ್ಚಿ ಬಿದ್ದಿದ್ದಾರೆ. ಕೂಡಲಿ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಯಾವ ಕಾರಣಕ್ಕೆ ಹತ್ಯೆಗೆ ಯತ್ನಿಸಲಾಗಿದೆ ಎಂಬುದನ್ನು ತನಿಖೆ…

Read More

ಮಂಗಳೂರು : ಕಳೆದ ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಎಲ್ಲರಿಗೂ ಗೊತ್ತಿರುವ ವಿಷಯ. ಇದೀಗ ಮಂಗಳೂರಿನ ವಿಮಾನ ನಿಲ್ದಾಣಕ್ಕೂ ಇದೇ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಕರೆ ಸಂದೇಶವೊಂದು ಬಂದಿದೆ. ಹೌದು ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್‌ಎಲ್‌ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ…

Read More

ಮಂಗಳೂರು : ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲು ಬೀರಿದ್ದು, ಇದೀಗ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಕುಸಿದಿದೆ. ಇದರಿಂದ ಮಂಗಳೂರು ಉಡುಪಿಗೆ ತೆರಳುವ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಹೌದು ಭಾರಿ ಮಳೆಯಿಂದ ಮಂಗಳೂರು ಉಡುಪಿ ರಾಷ್ಟೀಯ ಹೆದ್ದಾರಿಯ ಕೂಳೂರು ಬಳಿ ರಸ್ತೆ ಬದಿ ಭೂಕುಸಿತ ಉಂಟಾಗಿದೆ. ಹೆದ್ದಾರಿ ಬದಿ ರಸ್ತೆಯನ್ನು ಗೆಲ್ಗಾಸ್ ಕಂಪನಿ ಆಗೆದಿತ್ತು. ಹೊಂಡದಲ್ಲಿ ನೀರು ತುಂಬಿಕೊಂಡು ರಸ್ತೆಯ ಬದಿ ಕುಸಿತ ಕಂಡಿದೆ. ಲಾರಿ, ಬೈಕ್ ಸೇರದಂತೆ ಹಲವು ವಾಹನಗಳು ತೆರಳಿದ ಕೂಡಲೇ ರಸ್ತೆ ಕುಸಿದಿದೆ. ಹಾಗಾಗಿ ಭಾರಿ ಅನಾಹುತ ಒಂದು ತಪ್ಪಿದೆ.ಉಡುಪಿಯಿಂದ ಮಂಗಳೂರಿಗೆ ತೆರಳುವ ವಾಹನಗಳ ಸವಾರರು ಟ್ರಾಫಿಕ್ ಜಾಮ್ ಆಗಿ ಇದೀಗ ಪರದಾಟ ನಡೆಸುತ್ತಿದ್ದಾರೆ.

Read More

ಉತ್ತಕನ್ನಡ : ಶಾಲಾ ಮೈದಾನದಲ್ಲಿ ಮಕ್ಕಳು ತಮ್ಮ ಪಾಡಿಗೆ ತಾವು ಆಟವಾಡುತ್ತಿದ್ದರು. ಈ ವೇಳೆ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಇದರಿಂದ 23ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಡಾನ್ ಬಾಸ್ಕೋ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಶಾಲಾ ಮೈದಾನದಲ್ಲಿ ಆಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಸುಮಾರು 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ನಡೆದಿದೆ. ಶಿರಸಿಯ ಡಾನ್ ಬಾಸ್ಕೋ ಶಾಲಾ ಮೈದಾನದಲ್ಲಿ ಈ ಒಂದು ಘಟನೆ ನಡೆದಿದೆ. ಕೂಡಲೇ ಶಿರಸಿ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಯಿತು.

Read More

ಬೆಂಗಳೂರು : ರಾಜ್ಯದ ಆಸ್ಪತ್ರೆಗಳಲ್ಲಿ ಬಳಸುವಂತಹ ‘IV’ ಫ್ಲುಯೆಡ್ ಅಸುರಕ್ಷಿತವಾಗಿವೆ. ಈ ಕುರಿತು ರಾಜ್ಯದ ಲ್ಯಾಬ್ ನಲ್ಲಿ ಸುಮಾರು 92 ಐವಿ ಫ್ಲುಯೆಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 22 ಅಸುರಕ್ಷಿತ ಎಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ಹೌದು 92 ಐವಿ ಫ್ಲುಯೆಡ್ ಗಳಲ್ಲಿ 22 ‘ಐವಿ ಫ್ಲ್ಯೂಯೆಡ್’ ರಿಪೋರ್ಟ್ ನಲ್ಲಿ ಫಂಗಸ್ ಸೇರಿದಂತೆ ಬ್ಯಾಕ್ಟೀರಿಯಲ್ ಅಂಶ ಪತ್ತೆಯಾಗಿದೆ. ಆಸ್ಪತ್ರೆಗಳಲ್ಲಿ ಬಳಸೋ ಬಹುತೇಕ ಐವಿ ಫ್ಲುಯೆಡ್ ಅಸುರಕ್ಷಿತ ಎಂದು ವರದಿ ಬಂದಿದೆ. 92 ಸ್ಯಾಂಪಲ್ಗಳ ರಿಪೋರ್ಟ್ ನಲ್ಲಿ 22 ಅಸುರಕ್ಷಿತ ಎಂದು ರಾಜ್ಯದ ಲ್ಯಾಬ್ ನಲ್ಲಿ ಈ ಒಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ರಾಜ್ಯದ ಐವಿ ಫ್ಲುಯೆಡ್ ವರದಿಯಲ್ಲಿ ಶಾಕಿಂಗ್ ವರದಿ ಬಹಿರಂಗವಾಗಿದೆ. 92 ಸ್ಯಾಂಪಲ್ಸ್ ವರದಿ ಬಿಡುಗಡೆಯಾಗಿದ್ದು, ಅದರಲ್ಲಿ 22 ಅಸುರಕ್ಷಿತ ಎಂದು ತಿಳಿದು ಬಂದಿದೆ. 22 ನಲ್ಲಿ ಫಂಗಸ್ ಸೇರಿದಂತೆ ಬ್ಯಾಕ್ಟೀರಿಯಾ ಅಂಶಗಳು ಕಂಡುಬಂದಿವೆ. ಐ ವಿ ಫ್ಲೂಯೆಡ್ ರಿಪೋರ್ಟ್ ನಲ್ಲಿ ಸುರಕ್ಷಿತ ಎಂದು ಉಲ್ಲೇಖವಾದ ಹಿನ್ನೆಲೆಯಲ್ಲಿ ಕೇಂದ್ರದ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟ್ ನಲ್ಲಿ A1 ಆರೋಪಿ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ, ಎಲ್ಲಾ ಆರೋಪಿಗಳ ಅರೆಸ್ಟ್ ಮೆಮೋದ ಕಾಪಿ ನೀಡಲು ಆರೋಪಿಗಳ ಪರ ವಕೀಲರಿಗೆ ಜಡ್ಜ್ ವಿಶ್ವಜೀತ್ ಶೆಟ್ಟಿ ಸೂಚನೆ ನೀಡಿದರು.ಬಳಿಕ ವಿಚಾರಣೆಯನ್ನು ಡಿಸೆಂಬರ್ 6 ರಂದು ಮುಂದೂಡಿ ಆದೇಶ ಹೊರಡಿಸಿದರು.ಇದೆ ವೇಳೆ ನಟ ದರ್ಶನ್ ಅವರ ಜಾಮೀನು ಅರ್ಜಿ ಕೂಡ ಡಿಸೆಂಬರ್ 6 ರಂದು ಮುಂದೂಡಿ ಆದೇಶಿಸಿದರು. ವಿಚಾರಣೆ ಆರಂಭವಾದ ಬಳಿಕ ಹೈಕೋರ್ಟ್ ಜಡ್ಜ್ ಎಸ್.ವಿಶ್ವಜೀತ್ ಶೆಟ್ಟಿ ಅವರು, ಪವಿತ್ರ ಗೌಡ ಅವರ ಪರ ವಕೀಲ ಟಾಮಿ ಸೆನಾಸ್ಟಿಯನ್ ಅವರಿಗೆ ಎಷ್ಟು ಹೊತ್ತು ವಾದ ಮಂಡಿಸುತ್ತೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅವರು ಅರ್ಧ ಗಂಟೆಗಳ ಕಾಲ ವಾದ ಮಂಡಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು. ಪವಿತ್ರಾಗೌಡ ಹಾಗೂ ನಟ ದರ್ಶನ್ ಲೀವ್ ಇನ್ ರಿಲೇಷನ್ಶಿಪ್ ನಲ್ಲಿ ಇದ್ದರು. ಪ್ರಕರಣದ A3 ಆರೋಪಿ ಪವಿತ್ರ ಗೌಡ ಬಳಿ…

Read More

ದಾವಣಗೆರೆ : ಪ್ರಕರಣ ಒಂದರಲ್ಲಿ ಆರೋಪಿಗಳ ಹೆಸರನ್ನು ಕೈ ಬಿಡಲು ASI ಈರಣ್ಣ ಎನ್ನುವವರು ವ್ಯಕ್ತಿ ಒಬ್ಬರ ಬಳಿ 50 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಗಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಸರಸ್ವತಿ ನಗರದ ಮಣಿಕಂಠ ಆಚಾರ್ಯನಿಂದ ಎಎಸ್ಐ ಅಧಿಕಾರಿ ಲಂಚ ಪಡೆಯುತ್ತಿದ್ದ. ಮಣಿಕಂಠ ತಾಯಿ ಮತ್ತು ಪತಿ ನಡುವೆ ಜಗಳವಾಗಿ ಎಫ್ಐಆರ್ ದಾಖಲಾಗಿತ್ತು. ಚಾರ್ಜ್ ಶೀಟ್ ನಲ್ಲಿ ಇಬ್ಬರ ಹೆಸರು ಕೈಬಿಡಲು 1 ಲಕ್ಷ ರೂಪಾಯಿಗೆ ಕೆಟಿಜಿ ನಗರ ಠಾಣೆಯ ಎಎಸ್ಐ ಈರಣ್ಣ ಬೇಡಿಕೆ ಇಟ್ಟಿದ್ದ. ಈ ವೇಳೆ ಮುಂಗಡವಾಗಿ ಠಾಣೆ ಬಳಿ ರಂಜಸ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಎಂ. ಎಸ್ ಕೌಲಾಪುರೆ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ. ಸದ್ಯ ಎಎಸ್ಐ ಈರಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದು ತನಿಖೆ ಮುಂದುವರಿಸಿದ್ದಾರೆ.

Read More