Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ತುಮಕೂರಿನ ಕುಂಚಿಟಿಗರ ಭವನದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶ ನಡೆಯುತ್ತಿರುವಾಗ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ದೇವೇಗೌಡರ ವಿರುದ್ಧ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಇದೀಗ ದೇವೇಗೌಡರಿಗೆ ಭದ್ರತಾ ವೈಫಲ್ಯವಾಗಿದೆ ಎಂದು ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಮಾಜಿ ಪ್ರಧಾನಿ ದೇವೇಗೌಡರಿಗೆ ಭದ್ರತಾ ವೈಫಲ್ಯವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಹಕಾರ ಸಚಿವ ಕೆಎನ್ ರಾಜಣ್ಣ ಪ್ರಚೋದನೆಯಿಂದ ಗಲಾಟೆ ಮಾಡಲಾಗಿದೆ. ಪ್ರಚಾರ ಸಭೆಗೆ ನುಗ್ಗಿ ಗಲಾಟೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಸ್ಥಳದಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಲಾಗಿದೆ. ಜೆಡಿಎಸ್ ಪಕ್ಷದ ಕಾನೂನು ವಿಭಾಗದ ಅಧ್ಯಕ್ಷ ಎಪಿ ರಂಗನಾಥ್ ಉಭಯ ಪಕ್ಷಗಳ ಪರವಾಗಿ ದೂರು ನೀಡಿದ್ದಾರೆ. ಅಷ್ಟಕ್ಕೂ ನಡೆದಿದ್ದೇನು? ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಪರ ಚುನಾವಣಾ ಪ್ರಚಾರಕ್ಕೆ ದೇವೇಗೌಡರು ತುಮಕೂರಿಗೆ ಆಗಮಿಸಿದ್ದರು. ತುಮಕೂರಿನ ಕುಂಚಿಟಿಗರ ಭವನದಲ್ಲಿ ಮೈತ್ರಿ ಪಕ್ಷದ ಸಮಾವೇಶ ನಡೆಯುತ್ತಿತ್ತು. ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರ…
ಕಲಬುರಗಿ : ಕಲ್ಬುರ್ಗಿ ಜಿಲ್ಲೆಯನ್ನು ಅಗ್ರಿಕಲ್ಚರ್ ಹಬ್ ಮಾಡಲು ನಿರ್ಧರಿಸಿದ್ದು ಹಾಗಾಗಿ ಮುಂದಿನ ಆರು ತಿಂಗಳಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅಗ್ರಿಕಲ್ಚರ್ ಹಬ್ ಮಾಡಲು 39 ಕೋಟಿ ವೆಚ್ಚವನ್ನು ಭರಿಸಲಾಗುತ್ತದೆ ಎಂದು ಕಲ್ಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಜಿಲ್ಲೆಯ ರೈತರು ಬೆಳೆಗಳ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಕೋಲ್ಡ್ ಸ್ಟೋರೇಜ್, ಕಸ್ಟಮ್ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮುಂದಿನ ಆರು ತಿಂಗಳಲ್ಲಿ ಜಾರಿಗೆ ತರುವ ಮೂಲಕ ಅಗ್ರಿಕಲ್ಚರ್ ಹಬ್ ಮಾಡಲಾಗುವುದು. ಇದಕ್ಕಾಗಿ ₹39 ಕೋಟಿ ವೆಚ್ಚಮಾಡಲಾಗುವುದು ಎಂದರು. ನೆಹರು ಗಂಜನ್ನು ನಗರದ ಹೊರ ವಲಯದಲ್ಲಿ ಶಿಫ್ಟ್ ಮಾಡುವ ಪ್ರಸ್ತಾವನೆ ಕುರಿತು ಹೇಳಿದ ಸಚಿವರು ಚುನಾವಣೆ ಮುಗಿದ ನಂತರ ಈ ವಿಷಯಕ್ಕೆ ಕುರಿತಂತೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದರ ಜೊತೆಗೆ ಒಂದು ವೇರ್ ಹೌಸ್, ಕೋಲ್ಡ್ ಸ್ಟೋರೇಜ್, ಕುಡಿಯುವ ನೀರು ಹಾಗೂ ಶೌಚಾಲಯ…
ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ (81) ಅವರು ಇಂದು ಅದ್ಯಾಗಾತದಿಂದ ಸಾವನ್ನಪ್ಪಿದ್ದು ನಾಳೆ ಬೆಳಿಗ್ಗೆ 11:30ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 7:30ರ ಬಳಿಕ ರವೀಂದ್ರ ಕಲಾಕ್ಷೇತ್ರಕ್ಕೆ ಅವರ ಪಾರ್ಥಿವ ಶರೀರವನ್ನು ಶಿಫ್ಟ್ ಮಾಡಲಾಗುತ್ತಿದ್ದು, ಇಂದು ಅವರ ನಿವಾಸದಲ್ಲಿಯೇ ಪಾರ್ಥಿವ ಶರೀರ ಇರಲಿದೆ. ಹಾಗಾಗಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11:30 ನಂತರ ದ್ವಾರಕೀಶ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.
ಮಂಗಳೂರು : 6ನೇ ತರಗತಿ ವಿದ್ಯಾರ್ಥಿ ನಿಗೆ ಶಿಕ್ಷಕನೊಬ್ಬ ಕಳೆದ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡುತ್ತಿರುವ ಹಿನೆಲೆಯಲ್ಲಿ ಇದೀಗ ಮಂಗಳೂರು ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಶಿಕ್ಷಕ ವಿರಾಜ್ ಜೈನ್ ಕಳೆದ ಜೂನ್ ನಿಂದ ದೂರು ನೀಡುವ ದಿನದವರೆಗೂ ಕೂಡ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಮಾರ್ಚ್ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್ ಜೈನ್ ಕಳೆದ ವರ್ಷ ಜೂನ್ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,…
ಬೆಂಗಳೂರು : ನಟ ನಿರ್ಮಾಪಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಅಪಾರ ಸೇವೆ ಸಲ್ಲಿಸಿದಂತಹ ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಟ್ವೀಟ್ ನಲ್ಲಿ ಸಂತಾಪಸೂಚಿಸಿದ್ದಾರೆ. ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ. ವರನಟ ಡಾ||ರಾಜ್‌ಕುಮಾರ್, ಡಾ||ವಿಷ್ಣುವರ್ಧನ್, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಆಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು. https://twitter.com/hd_kumaraswamy/status/1780130986870947853?t=ZS6NA2qBUYylN8pwvjU37Q&s=19
ದಾವಣಗೆರೆ: ಲೋಕಸಭಾ ಚುನಾವಣೆ ಮಾತ್ರವಲ್ಲದೇ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಪ್ರಯತ್ನ ಶುರುವಾಗಿದೆ. ನಾನು 23 ಕ್ಷೇತ್ರಗಳಲ್ಲೂ ಸುತ್ತಿದ್ದೇನೆ. ಉಳಿದ ಕ್ಷೇತ್ರಗಳಿಗೂ ಹೋಗುವೆ. ದೇವೇಗೌಡರು ಇಳಿವಯಸ್ಸಿನಲ್ಲೂ ಪ್ರಚಾರ ಮಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿರೋಧಿಯಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಅಂಬೇಡ್ಕರ್ ನಿಧನರಾದಾಗ ಅವರ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಜವಾಹರಲಾಲ್ ನೆಹರೂ ಸಮಾಧಿಗೆ 52.6 ಎಕರೆ, ಇಂದಿರಾಗಾಂಧಿ ಸಮಾಧಿಗೆ 45 ಎಕರೆ, ರಾಜೀವ್ ಗಾಂಧಿ ಸಮಾಧಿಗೆ 15 ಎಕರೆ ಜಾಗ ನೀಡಲಾಗಿದೆ. ಆದರೆ ಅಂಬೇಡ್ಕರ್ ಅವರಿಗೆ…
ವಿಜಯಪುರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿಯ ಮಾಜಿ ಸಚಿವ ಸಿಟಿ ರವಿ ಇದೀಗ ವಿಜಯಪುರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲೂ ರಾಹುಲ್ ಗಾಂಧಿ ರಾಜಕೀಯ ಮಾಡಬಹುದು ಎಂದು ಕಿಡಿ ಕಾರಿದರು. ಕಾಂಗ್ರೆಸ್ ಗೆಲವು ಸಂಭ್ರಮಿಸುವವರು ಪಾಕಿಸ್ತಾನದಲ್ಲಿ ಅಷ್ಟೇ ಇದ್ದಾರೆ. ವಿಜಯಪುರದಲ್ಲಿ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಹೇಳಿಕೆ ನೀಡಿದ್ದು ಮುಸ್ಲಿಮರು ಹೆಚ್ಚಿರುವ ಕಾರಣ ರಾಹುಲ್ ಗಾಂಧಿ ಕೇರಳಕ್ಕೆ ಹೋಗಿದ್ದಾರೆ ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲೂ ಕೂಡ ರಾಜಕೀಯ ಮಾಡಬಹುದು ರಾಹುಲ್ ಗಾಂಧಿ ಪಾಕಿಸ್ತಾನದಲ್ಲೂ ರಾಜಕೀಯ ಮಾಡಬಹುದು ಎಂದು ವಿಜಯಪುರದಲ್ಲಿ ಬಿಜೆಪಿ ಮಾಜಿ ಶಾಸಕ ಸಿಡಿ ರವಿ ಹೇಳಿಕೆ ನೀಡಿದರು. ಗ್ಯಾರಂಟಿ ಹೆಸರಿಗೆ ಕೈ ಪೇಟೆಂಟ್ ಪಡೆದಿದ್ದೀಯ? ಗ್ಯಾರಂಟಿ ಅನ್ನೋದು ಕಾಂಗ್ರೆಸ್ ಹುಟ್ಟು ಹಾಕಿದ ಪದವಾಗಿದ್ಯಾ? ಬಿಜೆಪಿ ಗ್ಯಾರಂಟಿ ಅಭಿವೃದ್ಧಿಯತ್ತ ಕೊಂಡುಯುತ್ತದೆ. ನಮ್ಮ ಗ್ಯಾರಂಟಿ ಅಭಿವೃದ್ಧಿ ಗ್ಯಾರಂಟಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.
ಮಂಡ್ಯ : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದ ಪ್ರಮುಖ ಅಖಾಡವಾಗಿರುವ ಮಂಡ್ಯದಲ್ಲಿ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತ ಭೇಟಿ ನಡೆಸಲಿದ್ದಾರೆ ಈ ಕುರಿತಂತೆ ಈಗಾಗಲೇ ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶ ಕುರಿತಂತೆ ಭರದ ಸಿದ್ಧತೆ ನಡೆಸಲಾಗುತ್ತಿದೆ. ನಾಳೆ ಮಂಡ್ಯದಲ್ಲಿ ರಾಹುಲ್ ಗಾಂಧಿಯಿಂದ ಮತ ಬೇಟೆ ನಡೆಸಲಿದ್ದು, ನಾಳೆ ಮಂಡ್ಯದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಯೋಜನೆ ಮಾಡಲಾಗಿದೆ. ಮಂಡ್ಯದ ವಿವಿ ಮೈದಾನದಲ್ಲಿ ಬೃಹತ್ ವೇದಿಕೆ ತಯಾರಿ ಆಗುತ್ತಿದ್ದು ಜರ್ಮನ್ ಟೆಂಟ್ ಮೂಲಕ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಮಂಡ್ಯ ಕಾಂಗ್ರೆಸ್ ಶಾಸಕರಿಂದ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಶಾಸಕ ಗಣಿಗ ರವಿಕುಮಾರ್ ಇಂದ ಇದೀಗ ವೇದಿಕೆ ಪರಿಶೀಲನೆ ನಡೆಸಲಾಗುತ್ತಿದೆ. ರಾಹುಲ್ ಗಾಂಧಿಯವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಾಥ್ ನೀಡಲಿದ್ದಾರೆ.ನಾಳೆ ಮಧ್ಯಾಹ್ನ 1.30 ಕ್ಕೆ ಮಂಡ್ಯಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಕೈ ಅಭ್ಯರ್ಥಿ ಸ್ಟಾರ್ ಚಂದ್ರ ರಾಹುಲ್ ಗಾಂಧಿ ಮತ ಪ್ರಚಾರ ಮಾಡಲಿದ್ದಾರೆ ಎಂದು…
ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನೀಟ್ಟಾಗಿ ಪಾಲಿಸುತ್ತಿದ್ದು, ಅಕ್ರಮವಾಗಿ ಸಾಗಿಸುತವ ಹಣ ಮದ್ಯದ ಮೇಲೆ ಚುನಾವಣೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜೈನ್ ರಸ್ತೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದಾರೆ. ರಾತ್ರಿ ಜೈನ್ ನಗರ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕಾರು ನಿಲ್ಲಿಸಿಕೊಂಡಿದ್ದರು ಈ ವೇಳೆ ಕಾರು ತಪಾಸನೆ ನಡೆಸಿದ ಅಧಿಕಾರಿಗಳಿಗೆ ವೇಳೆ 13.10 ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಪ್ಪಳ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ ಕೊಪ್ಪಳ ಹಾಲಿ ಸಂಸದರಾಗಿರುವ ಕರಡಿ ಸಂಗಣ್ಣ ಅವರಿಗೆ ಗಾಳ ಹಾಕಿದ್ದು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಕರಡಿ ಸಂಗಣ್ಣ ಅವರು ನಾಳೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನು ಭೇಟಿಯಾಗಿ ನಂತರ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತಂತೆ ನಿಖರವಾದ ಮಾಹಿತಿ ಬಂದಿಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಕರಡಿ ಶಂಕರಣ್ಣ ಪ್ರತಿಕ್ರಿಯೆ ನೀಡಿದ್ದು, ಇಂದು ಬೆಂಗಳೂರಿಗೆ ಹೋಗುತ್ತಿದ್ದೇನೆ ನಾಳೆ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತೇನೆ. ಸಿಎಂ ಡಿಸಿಎಂ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಹೇಳಿಕೆ ನೀಡಿದರು. ಈಗಾಗಲೇ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಲಕ್ಷ್ಮಣ ಸವದಿ ಅವರು ಸಂಸದ ಕರಡಿ ಸಂಗಣ್ಣ ಅವರನ್ನು ಭೇಟಿಯಾಗಿದ್ದು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತಂತೆ ಬಹುತೇಕ ಚರ್ಚಿಸಲಾಗಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ ಹೀಗಾಗಿ ನಾಳೆ ಮುಖ್ಯಮಂತ್ರಿ…