Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯಲ್ಲಿ ಮುಂದಿನ ಏಳು ದಿನದ ಒಳಗಾಗಿ ಕಬ್ಬು ಅರೆಯುವ ಪ್ರಕ್ರಿಯೆಯನ್ನು ಆರಂಭಿಸಲು ಸೂಕ್ತ ಆದೇಶ ನೀಡುವಂತೆ ರಾಜ್ಯಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿರುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಎಥೆನಾಲ್ ಉತ್ಪಾದನೆ ವಿಚಾರದಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ನೋಟಿಸ್ ಪ್ರಶ್ನಿಸಿ ಯತ್ನಾಳ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ಕಾರ್ಖಾನೆ ತೆರೆಯಲು ಅನುಮತಿ ನೀಡಿತ್ತು. ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲ್ಮನವಿ ಸಲ್ಲಿಸಿರುವ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಕಾರ್ಖಾನೆ ಮಾಲೀಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಈ ಕುರಿತಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡು,…
ಮಂಗಳೂರು : ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎನ್ಐಎ ಅಧಿಕಾರಿಗಳು ಪ್ರಕರಣದ ಆರನೇ ಆರೋಪಿಯನ್ನು ದೆಹಲಿಯ ಏರ್ಪೋರ್ಟ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಎಂದು ತಿಳಿದುಬಂದಿದೆ. ಬಂಧಿತ ಮಹಮ್ಮದ್ ಶರೀಫ್ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.ಅಲ್ಲದೇ ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಕೂಡ ಘೋಷಿಸಿದ್ದರು. ಈ ವರೆಗೆ 20 ಜನ ಅರೆಸ್ಟ್! ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಒಂದು ಕೊಲೆ ರಾಜ್ಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಿಂದು ಪರ ಹೋರಾಟಗಾಗರು ಸ್ವತಃ ಬಿಜೆಪಿ ವಿರುದ್ದ ರೊಚ್ಚಿಗೇಳುವಂತೆ ಆಗಿತ್ತು ಅವತ್ತಿನ ಸ್ಥಿತಿ. ಎನ್ಐಎ ಪ್ರವೀಣ್ ನೆಟ್ಟಾರು…
ಬಾಗಲಕೋಟೆ : ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲವಾಗಿ ನಿಂದಿಸಿರುವ ಕುರಿತಂತೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬಿಜೆಪಿಯವರ ಸಂಸ್ಕೃತಿಯೇ ಅದು. ಬಿಜೆಪಿಯ ನಾಯಕರು ಕೀಳುಮಟ್ಟದ ಭಾಷೆಯನ್ನು ಬಳಸುತ್ತಾರೆ. ವಿಜಯಪುರದ ಒಂದು ಕೋಣ ಅಲ್ಲ ಗೊಡ್ಡೆಮ್ಮೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು. ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸ್ಕೃತಿಗೆ ಅದು. ಅವರಿಗೆ ಸಂಸ್ಕಾರ ಸಂಸ್ಕೃತಿಯೇ ಇಲ್ಲ. ಬಿಜೆಪಿ ನಾಯಕರು ಕೀಳು ಮಟ್ಟದ ಶಬ್ದವನ್ನು ಬಳಸಿದ್ದಾರೆ. ಬಿಜೆಪಿ ಶಾಸಕ ಯತ್ನಾಳ ಹೆಸರು ಹೇಳದೆ ವಿಜಯಾನಂದ ಕಾಶಪ್ಪನವರ್ ವಾಗ್ದಾಳಿ ನಡೆಸಿದ್ದು, ವಿಜಯಪುರದ ಕೋಣ ಅಲ್ಲಲ್ಲ ಗೊಡ್ಡೆಮ್ಮೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಬಿಜೆಪಿ ನಿಂದಿಸಿದ್ದಾರೆ. ಸಿಟಿ ರವಿ ಒಬ್ಬ ಬಚ್ಚಾ. ಸದನದಲ್ಲಿ ಯಾವ ಶಬ್ದ ಬಳಕೆ ಮಾಡಬೇಕೆಂಬ ಬಗ್ಗೆ ನಿಯಮವಿದೆ. ಆದರೆ ಸಿಟಿ ರವಿ ಮಂತ್ರಿಯಾಗಿದ್ದರೂ ಸಂಸದೀಯ ಪದ ಬಳಸಿದ್ದಾರೆ. ಒಬ್ಬ ಹೆಣ್ಣು ಮಗಳ ಬಗ್ಗೆ ಅಶ್ಲೀಲವಾಗಿ…
ರಾಯಚೂರು : ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದ್ದು, ಅತಿಯೇ ತನ್ನ ಪತ್ನಿಯ ಕೊಲೆ ಮಾಡಿರುವ ಸಂಖ್ಯೆ ವ್ಯಕ್ತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಎಂಬಲ್ಲಿ ನಡೆದಿದೆ. ಇನ್ನು ಮೃತ ಗೃಹಿಣಿಯನ್ನು ಲಿಪಿ ಸರ್ಕಾರ್ (23) ಎಂದು ತಿಳಿದುಬಂದಿದೆ. ಈಕೆ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಕಳೆದ ಕೆಲವು ವರ್ಷಗಳ ಹಿಂದೆ ಲಿಪಿ ಸರ್ಕಾರ ಮಂಜುನಾಥ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಮಂಜುನಾಥ್ ಯಾವುದೇ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದ. ಈ ಹಿನ್ನೆಲೆಯಲ್ಲಿ ಮದುವೆಯಾದ ಬಳಿಕ ದಿನವೂ ಕುಡಿದು ಬಂದು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಸದ್ಯ ರಿಮ್ಸ್ ಆಸ್ಪತ್ರೆಗೆ ಮೃತ ಲಿಪಿ ಸರ್ಕಾರ್ ಮೃತದೇಹವನ್ನು ರವನಿಸಲಾಗಿದೆ. ಘಟನೆ ಹಿನ್ನೆಲೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪತಿ ಮಂಜುನಾಥ ವಿರುದ್ಧ ಕೇಸ್ ದಾಖಲಾಗಿದೆ.
ಬೆಂಗಳೂರು : ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ. ರವಿಯನ್ನು ಬಂಧಿಸಲಾಗಿದೆ. ಈ ಮಧ್ಯೆ ಕರ್ನಾಟಕ ಕಾಂಗ್ರೆಸ್ ಸಮಿತಿ ಮಹಿಳಾ ಆಯೋಗಕ್ಕೆ ದೂರು ನೀಡಿದೆ. ಸಿಟಿ ರವಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಈಗಾಗಲೇ ನಿನ್ನೆ ಬೆಳಗಾವಿಯ ಹಿರೇ ಬಾಗೇವಾಡಿ ಪೊಲೀಸರು ಎಂಎಲ್ಸಿ ಸಿಟಿ ರವಿ ಅವರನ್ನು ಅರೆಸ್ಟ್ ಮಾಡಿ ಇಂದು ಬೆಂಗಳೂರಿನ ಜೆಎಂಎಫ್‌ಸಿ ಕೋರ್ಟಿಗೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ಉಚ್ಚಾರಣೆ ಬಳಿಕ ಜಡ್ಜ್ ಸ್ಪರ್ಶ ಡಿಸೋಜ ಅವರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸರು ಸಿಟಿ ರವಿ ಅವರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ ಭಟ್ ಅವರು ಪ್ರಕರಣದ ಕುರಿತು ವಿಚಾರಣೆ ಆರಂಭಿಸಿದ್ದಾರೆ. ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…
ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಕೋಲಾರ ಜಿಲ್ಲೆಯ ವಸತಿ ನಿಲಯದ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದರು.ಇದೀಗ ಇದೇ ಕೋಲಾರ ಜಿಲ್ಲೆಯಿಂದ ಪ್ರವಾಸಕ್ಕೆಂದು ಆಗಮಿಸಿದಂತಹ ಶಾಲಾ ಬಸ್ ಒಂದು ಪಲ್ಟಿಯಾಗಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಹೌದು ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿಯಾಗಿ 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹೊನ್ನಾವರ ಮುಗ್ವಾ ಅರೊಳ್ಳೀ ಕ್ರಾಸ್ ಬಳಿ ಗುರುವಾರ ಮಧ್ಯರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಾಲೂರು ಮಾಸ್ತಿಹಳ್ಳ ಪ್ರೌಢಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ ಕರ್ನಾಟಕ ಪ್ರೌಢಶಾಲಾ ವಿದ್ಯಾರ್ಥಿಗಳಿದ್ದ ಬಸ್ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲಕ್ಕೆ ಚಿಕಿತ್ಸೆಗಾಗಿ ಸಾಗಿಸಲಾಗಿದೆ. ಇತ್ತೀಚೆಗೆ ಕೋಲಾರದ ಮಕ್ಕಳು ಪ್ರವಾಸಕ್ಕೆ ಬಂದು ನಾಲ್ವರು ವಿದ್ಯಾರ್ಥಿನಿಯರು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದರು.ಇದೀಗ ಇಂದು…
ಬೆಳಗಾವಿ : ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಜಯಂ ಎಫ್ ಸಿ ಕೋರ್ಟ್ ನಲ್ಲಿ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು ಇದೀಗ JMFC ಜಡ್ಜ್ ಸ್ಪರ್ಶ ಡಿಸೋಜ ಅವರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿ ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೇ ನೋಟಿಸ್ ಕೊಡದೆ ಅಕ್ರಮ ಬಂಧನದಲ್ಲಿ ಇಟ್ಟು ರಾತ್ರಿ ಇಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ, ಸರ್ವಾಧಿಕಾರ ಮೆರೆದಿದ್ದಾರೆ. ಎಲ್ಲದಕ್ಕೂ ಒಂದು ಫುಲ್ ಸ್ಟಾಪ್ ಇದ್ದೆ ಇರುತ್ತೆ. ಫುಲ್ ಸ್ಟಾಪ್ ಬೀಳುತ್ತೆ. ಸರ್ವಾಧಿಕಾರ ಬಹಳ ದಿನ ನಡೆಯಲ್ಲ ಸರ್ವಾಧಿಕಾರ ಕೊನೆ ಆಗಲೇಬೇಕು . ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದೀರಲ್ಲ ಅತ್ತೆಗೆ ಒಂದು ಕಾಲ ಸೊಸೆಗೆ ಒಂದು ಕಾಲ ಎಂಬಂತೆ,…
ಪುಣೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಳಿಕ, ಹೊಸ ಮಂದಿರ-ಮಸೀದಿ ವಿವಾದಗಳನ್ನು ಉದ್ದೇಶಪೂರ್ವಕವಾಗಿ ಹುಟ್ಟುಹಾಕಲಾಗುತ್ತಿದೆ. ಇಂತಹ ವಿವಾದಗಳನ್ನು ಸೃಷ್ಟಿಸುವ ಮೂಲಕ ಕೆಲವರು ತಾವು ಹಿಂದೂ ನಾಯಕ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದರಿಂದ ಸಮಾಜಕ್ಕಾಗುವ ಹಾನಿಯನ್ನು ನಾವು ಅರಿಯಬೇಕಿದೆ. ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪುಣೆ ನಗರದಲ್ಲಿ ನಡೆದ ವಿಶ್ವಗುರು ಭಾರತ್ ಎಂಬ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುಗಯುಗಾಂತರಗಳಿಂದ ವಿವಿಧ ಧರ್ಮ, ಜಾತಿ, ಮತ, ಮತ, ಸಿದ್ಧಾಂತಗಳ ಜನರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಅದಕ್ಕಾಗಿಯೇ ನಾವು ವಿಭಜನೆಯ ಭಾಷೆಯನ್ನು ಬಿಟ್ಟು, ಅಲ್ಪಸಂಖ್ಯಾತ-ಬಹುಸಂಖ್ಯಾತ ತಾರತಮ್ಯ ಮರೆತು ಹೋರಾಡಬೇಕು. ನಮ್ಮ ಅಂತರ್ಗತ ಸಂಸ್ಕೃತಿಯ ಅಡಿಯಲ್ಲಿ ನಾವು ಒಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಹಿಂದೂ ಸೇವಾ ಮಹಾವತ್ ಕಾರ್ಯಕ್ರಮದ ಸಂದರ್ಭದಲ್ಲಿ, ಆರ್‌ಎಸ್‌ಎಸ್ ಮುಖ್ಯಸ್ಥರು ಇತ್ತೀಚಿನ ಮಂದಿರ-ಮಸೀದಿ ವಿವಾದಗಳನ್ನೂ ಪ್ರಸ್ತಾಪಿಸಿದರು. ರಾಮ ಮಂದಿರ ನಿರ್ಮಾಣದ ನಂತರ ಕೆಲವರು ಹೊಸ ಜಾಗಗಳಲ್ಲಿ ಇದೇ ವಿಚಾರಗಳನ್ನು…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಜಯಂ ಎಫ್ ಸಿ ಕೋರ್ಟ್ ನಲ್ಲಿ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಇದೀಗ ನ್ಯಾಯಾಧೀಶರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಿ ಟಿ ರವಿ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿ ಎಂದು ಬೆಳಿಗ್ಗೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಸಿಟಿ ರವಿ ಅವರ ಪರ ವಕೀಲ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬಳಿಕ ಜಡ್ಜ್ ಮದ್ಯಾಹ್ನ 3 ಗಂಟೆಗೆ ವಿಚಾರಣೆ ಒಂದುಡಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಬಂದ ಮಾಹಿತಿಗಳ ಪ್ರಕಾರ ಸಿ ಟಿ ರವಿ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ…
ದಾವಣಗೆರೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಬಿಜೆಪಿಯ MLA ಸಿಟಿ ರವಿ ಅವ್ರು ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ನಿನ್ನೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಸಿಟಿ ರವಿಯವರನ್ನು ಅರೆಸ್ಟ್ ಮಾಡಿದರು. ಈ ವಿಚಾರವಾಗಿ ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ MP ರೇಣುಕಾಚಾರ್ಯ ಸಿಟಿ ರವಿ ಅವರನ್ನು ಕೊಲೆ ಮಾಡುವ ಉದ್ದೇಶ ಇತ್ತು ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. MLC ಸಿಟಿ ರವಿ ಹತ್ಯೆ ಮಾಡುವ ಉದ್ದೇಶವಿತ್ತು. ಸಿಟಿ ರವಿ ತಲೆಗೆ ಪೆಟ್ಟಾಗಿದೆ, ಇಡೀ ರಾತ್ರಿ ವ್ಯಾನಿನಲ್ಲಿ ಸುತ್ತಾಡಿಸಿದ್ದಾರೆ. ಇದರ ಹಿಂದೆ ಸಿಟಿ ರವಿ ಅವರ ಹತ್ಯೆಯ ಉದ್ದೇಶವಿದೆ. ಸಿಟಿ ರವಿ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಏಕವಚನದಲ್ಲಿ ಮಾತನಾಡಿದ್ದಾರೆ.ಸಿಟಿ ರವಿ ಮಾತನಾಡಿದ್ದು ರೆಕಾರ್ಡ್ ಆಗಿಲ್ಲವೆಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹಾಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ ಕೇಳಬೇಕು ಎಂದು ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.














