Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಸದನ ನಡಿಯೋ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿಯವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪರಹ ಪದ ಬಳಸಿದರು ಈ ವಿಚಾರವಾಗಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿಯವರು ದೇಶದಲ್ಲಿ ಇಂತಹ ಘಟನೆ ಹೊಸದೇನಲ್ಲ ಎಂದು ಹೇಳಿಕೆ ನೀಡಿದ್ದು ಇದೀಗ ಭಾರಿ ಸಂಚಲನ ಮೂಡಿಸಿದೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆ ಆಗಿದ್ದು ಆಗಿಹೋಗಿದೆ ಮುಂದುವರಿಸೋದ್ರಲ್ಲಿ ಅರ್ಥವಿಲ್ಲ.ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ, ಸಂಸತ್ತು, ವಿಧಾನಸಭೆಯಲ್ಲಿ ಬಹಳಷ್ಟು ನಡೆದಿವೆ. ಘಟನೆಗೆ ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ. ಈಗಲೂ ಅದೇ ರೀತಿ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ಎಂದರು. ನನ್ನನ್ನು ಪೊಲೀಸರು ಹತ್ಯೆ ಮಾಡಲು ಯತ್ನಿಸಿದ್ದರು ಎಂದು ಸಿಟಿ ರವಿ ಆರೋಪಿಸಿರುವ ಕುರಿತಾಗಿ, ಸಿಟಿ ರವಿ ಓರ್ವ ಶಾಸಕ ಅವರನ್ನು ಹೇಗೆ ಎನ್ಕೌಂಟರ್ ಮಾಡಲಾಗುತ್ತೆ? ತೊಂದರೆ ಕೊಡಬೇಕೆಂದು ಠಾಣೆಯಿಂದ ಠಾಣೆಗೆ ಸುತ್ತಾಡಿಸಿಲ್ಲ ಮೊದಲೆಲ್ಲ ಬಿಜೆಪಿ ಕಾರ್ಯಕರ್ತರು ಧರಣಿ ಶುರುಮಾಡಿದರು ಈ ಕಾರಣಕ್ಕೆ…
ವಿಜಯಪುರ : ಕಳೆದ ಕೆಲವು ದಿನಗಳ ಹಿಂದೆ ಮುರುಡೇಶ್ವರ ಬೀಚ್ ನಲ್ಲಿ ಸಮುದ್ರದಲ್ಲಿ ಮುಳುಗಿ ಕೋಲಾರ ಜಿಲ್ಲೆಯ ವಸತಿ ನಿಲಯದ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು. ಇದೀಗ ಶಾಲಾ ಶೈಕ್ಷಣಿಕ ಪ್ರವಾಸದ ಬಳಿಕ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ವಿದ್ಯಾರ್ಥಿನಿಯ ಪ್ರಾಣಕ್ಕೆ ಇದೀಗ ಶಾಲಾ ಶೈಕ್ಷಣಿಕ ಪ್ರವಾಸ ಕಂಟಕವಾಗಿದೆ ಎನ್ನಲಾಗಿದೆ. ಪ್ರವಾಸದ ಬಳಿಕ ಅನಾರೋಗ್ಯದಿಂದ ಶಂಕ್ರಮ್ಮ ಮಲ್ಲನಗೌಡ (15) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳಿದ್ದಾಳೆ.ಪ್ರವಾಸದ ಬಳಿಕ ಅನಾರೋಗ್ಯದಿಂದ 30ಕ್ಕೂ ಹೆಚ್ಚು ಮಕ್ಕಳು ಬಳಲುತ್ತಿದ್ದರು. ಈ ಪೈಕಿ 9ನೇ ತರಗತಿಯ ವಿದ್ಯಾರ್ಥಿನಿ ಶಂಕ್ರಮ್ಮ ಮಲ್ಲನಗೌಡ ಬಿರಾದರ್ ಸಾವನ್ನಪ್ಪಿದ್ದಾಳೆ. ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದ ಸರ್ಕಾರಿ ಶಾಲೆಯ ಸುಮಾರು 110 ಮಕ್ಕಳನ್ನು ಕಳೆದ ಡಿಸೆಂಬರ್ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ಎಂದು ಕರೆದುಕೊಂಡು ಹೋಗಲಾಗಿತ್ತು. ಪ್ರವಾಸದ ಬಳಿಕ ಚಳಿ ಜ್ವರ ನೆಗಡಿ ಕೆಮ್ಮು ಕಫದಿಂದ 30ಕ್ಕೂ ಹೆಚ್ಚು…
ರಾಯಚೂರು : ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಧಾರಣವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ನಲ್ಲಿ ನಡೆದಿದೆ. ಹೌದು ಲಾರಿ ಕೆಳಗೆ ಸಿಲುಕಿ ಹುಸೇನಮ್ಮ (55) ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಲಾರಿ ಹರಿದ ಪರಿಣಾಮ ಹುಸೇನಮ್ಮರ ದೇಹ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಅರಗಿನಮರ ಕ್ಯಾಂಪ್ನಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಪರಮೇಶ್ವರದಿನ್ನಿ ಗ್ರಾಮದ ಹುಸೇನಮ್ಮ ದುರ್ಮರಣ ಹೊಂದಿದ್ದಾರೆ. ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿಯಾಗಿ ಮಹಿಳೆ ಕೆಳಗೆ ಬಿದ್ದಿದ್ದರು. ಈ ವೇಳೆ ಲಾರಿ ಹರಿದು ಸ್ಥಳದಲ್ಲೇ ಹುಸೇನಮ್ಮ ಸಾವನಪ್ಪಿದ್ದಾರೆ. ತಾಯಿಯ ದೇಹದ ಅರ್ಧ ಭಾಗ ಹಿಡಿದು ಮಗ ಗೋಳಾಟ ನಡೆಸುತ್ತಿದ್ದಾನೆ.ಮಗ ಹಾಗೂ ತಾಯಿ ಬೈಕ್ ನಲ್ಲಿ ಸಿಂಧನೂರಿಗೆ ತೆರಳುತ್ತಿದ್ದರು. ಸಿಂಧನೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ನಾಳೆ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ವೈಶಿಷ್ಟತೆಗಳು ಕಲಬುರಗಿಯಲ್ಲಿ ರೂ.377 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಆಸ್ಪತ್ರೆಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಿದ್ದು, ಹೈದರಾಬಾದ್ – ಕರ್ನಾಟಕ ವಿಶೇಷ ಪ್ರಾತಿನಿಧ್ಯ 371J ದೊರೆತು ದಶಕ ಪೂರೈಸಿದ ನೆನಪಿಗಾಗಿ 7 ಐಸಿಯು ಕೊಠಡಿ, 4 ಜನರಲ್ ವಾರ್ಡ್, 13 ಸೆಮಿ ಸ್ಪೆಷಲ್ ವಾರ್ಡ್‌ಗಳನ್ನು ಒಳಗೊಂಡ 371 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಇದು ರಾಜ್ಯದ ಮೂರನೇ ಸರ್ಕಾರಿ ಹೃದ್ರೋಗ ಆಸ್ಪತ್ರೆಯಾಗಿ ಲೋಕಾರ್ಪಣೆಗೊಳ್ಳುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.ಕಲಬುರಗಿಯಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳುತ್ತಿರುವ ಜಯದೇವ ಆಸ್ಪತ್ರೆಯ ಬಗ್ಗೆ…
ಬೆಂಗಳೂರು : ಇಂದು ಬೆಂಗಳೂರಿನ ನೆಲಮಂಗಲದ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದರೆ. ಇದೀಗ ಈ ಒಂದು ಪ್ರಕರಣ ವಿಶೇಷ ತನಿಖಾಧಿಕಾರಿಯಾಗಿ Dysp ಜಗದೀಶ್ ನೇಮಕವಾಗಿದ್ದರೆ. ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಜಗದೀಶ್ ನೇಮಕವಾಗಿದ್ದಾರೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ಕುರಿತ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಹಿನ್ನೆಲೆ? ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಮೃತಪಟ್ಟಿದ್ದಾರೆ.ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. ಈ ಭೀಕರ ಅಪಘಾತ…
ಚಿಕ್ಕಮಗಳೂರು : ಇತ್ತೀಚಿಗೆ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ 5 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ನಡೆದಿದೆ. ಹೌದು ಶಾಲೆಯಿಂದ ಮನೆಗೆ ಬರುವಾಗ ದಾಳಿ ಮಾಡಿದ ನಾಯಿಗಳು, ಬಾಲಕಿಯ ತುಟಿ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಎಂ ಸಿ ಹಳ್ಳಿಯಲ್ಲಿ ಏಂಜಲಿನ (5) ಎನ್ನುವ ಬಾಲಕಿಯ ಮೇಲೆ ನಾಯಿ ದಾಳಿ ಮಾಡಿವೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಸದ್ಯ ಬಾಲಕಿಗೆ ಶಿವಮೊಗ್ಗದ ಸಜ್ಜಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ತುಮಕೂರು : ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿ ಹಾಗೂ ಭಾವನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೆಬ್ಬೇನಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪೂಜಾ (25) ಎಂದು ತಿಳಿದುಬಂದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಸಬ್ಬೆನಹಳ್ಳಿಯ ಹೊಂಡದಲ್ಲಿ ಉಗಳ ಮೃತ ದೇಹ ಸಿಕ್ಕಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೂಜಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ಕೂಡ ಇದೀಗ ಮೂಡುತ್ತಿದೆ. ಪತಿ ಓಂಕಾರ್ ಹಾಗೂ ಆತನ ಅಣ್ಣ ರಾಜಣ್ಣ ಸೇರಿ ಪೂಜಾಳಿಗೆ ಕಿರುಕುಳ ನೀಡುತ್ತಿದ್ದರು ಇದರಿಂದಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪ ಕೇಳಿಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆ ರಾಜಣ್ಣ, ಪೂಜಾಳನ್ನ ಗಂಡನ ಮನೆಗೆ ಕರೆದೊಯ್ದಿದ್ದ. ಆದ್ರೆ, ಎರಡು ದಿನಗಳಿಂದ ನಾಪತ್ತೆಯಾಗಿದ್ದ ಪೂಜಾ, ಇಂದು ಸೆಬ್ಬೇನಹಳ್ಳಿಯ ಹೊಂಡದಲ್ಲಿ ಪೂಜ ಶವ ಪತ್ತೆಯಾಗಿದೆ. ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ತನಿಖೆ ನಡೆಸಿದ್ದಾರೆ.
ಶಿವಮೊಗ್ಗ : ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕಾಲೇಜು ಆಡಳಿತ ಅಧಿಕಾರಿಯೊಬ್ಬ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಕಾಲೇಜು ಆಡಳಿತ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನರ್ಸಿಂಗ್ ಕಾಲೇಜಿನ ಆಡಳಿತ ಅಧಿಕಾರಿ ವಿರುದ್ಧ ವಿದ್ಯಾರ್ಥಿಗಳು ಇದೀಗ ಆಕ್ರೋಶ ಹೊರ ಹಾಕುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬದ ಖಾಸಗಿ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಮಂಜುನಾಥ್ ವಿರುದ್ಧ ವಿದ್ಯಾರ್ಥಿನಿಯರು ಈ ಒಂದು ಆರೋಪ ಮಾಡಿದ್ದಾರೆ. ಆಡಳಿತಾಧಿಕಾರಿಯ ವರ್ತನೆಯ ವಿರುದ್ಧ ಸಚಿವ ಮಧು ಬಂಗಾರಪ್ಪಗೆ ದೂರು ನೀಡಿದ್ದಾರೆ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸಚಿವರು ಸೂಚಿಸಿದ್ದಾರೆ. ಸೊರಬ ಠಾಣೆಯಲ್ಲಿ ಆಡಳಿತಾಧಿಕಾರಿಯ ಮಂಜುನಾಥ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಮಂಜುನಾಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಶಿವಮೊಗ್ಗ : ಈಗಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿದ್ದು, ಪೋಷಕರು ಸ್ವಲ್ಪ ಬೈದರು ಸಾಕು ಏನಾದರೂ ಒಂದು ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವಂತಹ ಕೆಲಸ ಮಾಡಿಕೊಳ್ಳುತ್ತಾರೆ. ಇದೀಗ ಶಿವಮೊಗ್ಗದಲ್ಲೂ ಕೂಡ ಇಂಥ ಘಟನೆ ನಡೆದಿದ್ದು, ರಿಮೋಟ್ ಗಾಗಿ ಗಲಾಟೆ ನಡೆದು, ಈ ವೇಳೆ ಅಜ್ಜಿ ಮೊಮ್ಮಕ್ಕಳಿಗೆ ಬೈದಿದ್ದರಿಂದ ಯುವತಿ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೌದು ಈ ಒಂದು ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಅವಾಚ್ಯ ಪದಗಳಿಂದ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಮೂರು ಜಿಲ್ಲೆಗಳನ್ನು ಸುತ್ತಾಡಿಸಿಕೊಂಡು ಕೊನೆಗೆ ಖಾನಾಪುರ ಠಾಣೆಗೆ ಕರೆದೋಯ್ದಿದ್ದಾರೆ.ಈ ವಿಚಾರವಾಗಿ ಸಿಟಿ ರವಿ ಅವರು ನನ್ನ ವಿರುದ್ಧ ಕೊಲೆಗೆ ಸಂತು ರೂಪಿಸಿದ್ದರು. ಆದರೆ ಅವರು ಯಾರು ಎಂಬುದನ್ನು ತಿಳಿದುಕೊಳ್ಳಲು ನ್ಯಾಯಾಂಗ ತನಿಖೆ ಆಗಬೇಕು ಎಂದು ಸಿಟಿ ರವಿ ಅವರು ಆಗ್ರಹಿಸಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಕಿಟಾಕಿ ಮೂಲಕ ಸೂಚನೆ ಬಂದರೆ ಉಳಿದೆಲ್ಲವೂ ಫೋನ್ ಮೂಲಕ ಸೂಚನೆ ಬರುತ್ತಿತ್ತು. ಪೊಲೀಸರ ಬಳಿ ಎರಡು, ಮೂರು ಫೋನ್‌ಗಳಿದ್ದವು. ಹಿರಿಯ ಅಧಿಕಾರಿಗಳು ಅಥವಾ ಮಂತ್ರಿಯಿಂದ ನಿರಂತರ ಫೋನ್ ಬರುತ್ತಿತ್ತು. ನಾನು ಕ್ರಿಮಿನಲ್ ಅಲ್ಲ, ಯಾಕೆ ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಅವರು ಇದೆ ವೇಳೆ ಪ್ರಶ್ನಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಡಿಕೆ ಶಿವಕುಮಾರ್ ಅಥವಾ ಯಾರು ನನ್ನ ವಿರುದ್ಧ ಸಂಚು ಮಾಡಿದ್ದಾರೆ ಎನ್ನುವುದರ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಪೊಲೀಸರ ವೈಯಕ್ತಿಕ, ಇಲಾಖೆ…













