Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದು, ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಅವರ ಮುಖಂಡರಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಕರೆತರುವಂತೆ ಹೇಳಿಸುತ್ತಿದ್ದಾರೆ ಎಂದು ತಿಳಿಸಿದರು. ಇಂದು ರಾಮನಗರ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮುನ್ನ ಯೋಗೇಶ್ವರ್ ಬಂದಿದ್ದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೆವು. ಅವರಿಗೆ ಗೌರವ ನೀಡುತ್ತಿದ್ದೆವು. ಈಗ ಎಚ್.ಡಿ ಕುಮಾರಸ್ವಾಮಿ ಜೊತೆ ಸೇರಿಸಿಕೊಂಡಿದ್ದಾರೆ. ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಾರೆ ನೋಡೋಣ. ನಮ್ಮ ಹಣೆ ಬರಹ ಏನಿತ್ತೋ ಗೊತ್ತಿಲ್ಲ. ಬಂದಿದ್ದರೆ ಗೌರವವಾಗಿ ನಡೆಸಿಕೊಳ್ಳುತ್ತಿದ್ದೇವು ಎಂದರು. ಚನ್ನಪಟ್ಟಣ ಉಪಚುನಾವಣೆ ದೃಷ್ಟಿಯಿಂದ ಈಗಾಗಲೇ ಕ್ಷೇತ್ರದಲ್ಲಿ ಓಡಾಟ ನಡೆಸಿ ಮುಖಂಡರ ಜೊತೆ ಚರ್ಚೆ ಮಾಡಿ ದ್ದೇವೆ. ಅಂತಿಮವಾಗಿ ನಮ್ಮ ವಿರೋಧಿ ಯಾರು ಅಂತಾ ಗೊತ್ತಾದ ಮೇಲೆ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹಿಂದೆ ಸಿ ಪಿ ಯೋಗೇಶ್ವರ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡದೆ ಹೋದರೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಹಾಗೂ ಇಡಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾ ಆಯುಕ್ತರಿಗೆ ಪತ್ರದ ಮೂಲಕ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎಂದರೆ ರಾಜೀನಾಮೆ ಕೊಡು ಪ್ರಶ್ನೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಜಮೀನನ್ನು ಡಿ ನೋಟಿಫೈ ಮಾಡಿದ್ದರು. ಅವತ್ತು ಯಡಿಯೂರಪ್ಪ ತಪ್ಪು ಮಾಡಿದ್ದರು. ಆದರೆ ಈ ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ ರಾಜಿನಾಮೆ, ಯಾಕೆ ನೀಡಬೇಕು ಕಾನೂನು ಹೋರಾಟ ಮಾಡುತ್ತೇನೆ ಎಂದು ಅವರು ಮತ್ತೆ ತಿಳಿಸಿದ್ದಾರೆ. ಯಡಿಯೂರಪ್ಪನವರು ಡಿನೋಟಿಫೈ ಮಾಡಿದ್ದರು. ನಾನೇನಾದರೂ ಡಿನೋಟಿಫೈ ಮಾಡಿದ್ದೀನಾ? ಅಥವಾ ನಂದೇನಾದರೂ ಆದೇಶ ಇದೆಯಾ? ಅಥವಾ ನಂದೇನಾದರೂ ಪತ್ರ ವ್ಯವಹಾರ ಇದೆಯಾ? ಅಥವಾ ಮನಿಲ್ಯಾಂಡ್ ರಿಂಗ್ ಇದೆಯಾ? ಆ ಪ್ರಕರಣಕ್ಕೂ ಈ ಪ್ರಕರಣಕ್ಕೂ ಬಹಳ…
ಹುಬ್ಬಳ್ಳಿ : ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ, ತನಿಖೆ ನಡೆದಿದೆ. ಈಗ ವಾಪಸ್ ಮಾಡಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ ಸೈಟ್ ವಾಪಸ್ ಮಾಡುವ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಎಫ್ಐಆರ್ ಆದಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್ ಐ ಆರ್ ಮಾಡಿಕೊಂಡು ತನಿಖೆ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರದ ಮೂಲಕ 14 ನಿವೇಶನಗಳ ಕರ ಪತ್ರಗಳನ್ನು ಹಿಂತಿರುಗಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಕೂಡ ಈ ಒಂದು ಪ್ರಕರಣದ ಕುರಿತಾಗಿ ಮಾತನಾಡಿದ್ದು ನಮ್ಮ ಅಣ್ಣನ ವಿರುದ್ಧ HD ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಅವರು 40ವರ್ಷದಿಂದ ನಮ್ಮ ಅಣ್ಣನ ಮೇಲೆ ಒಂದು ಕಪ್ಪು ಚುಕ್ಕೆಯೇ ಇಲ್ಲ. ಸೈಟ್ ವಾಪಸ್ ಕೊಟ್ಟ ಮೇಲೆ ಯಾಕೆ ರಾಜೀನಾಮೆ ನೀಡಬೇಕು? ಸಿದ್ದರಾಮಯ್ಯ ಯಾವ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ ಹೇಳಿಕೆ ನೀಡಿದ್ದಾರೆ. ಅಣ್ಣನ ವಿರುದ್ಧ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ, ಕುಮಾರಸ್ವಾಮಿ, ಬಿವೈ ವಿಜಯೇಂದ್ರ ಸೇರಿದಂತೆ ಅನೇಕರು ನಮ್ಮ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು, ಮುಡಾದ ಎಲ್ಲಾ 14 ನಿಮಿಷಗಳ ಕರಪತ್ರಗಳನ್ನು ಹಿಂದಿರುಗಿಸಲು ಬಯಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಇದೇ ವೇಳೆ ಅವರ ಭಾವನಾತ್ಮಕ ಪತ್ರ ಕೂಡ ಬಿಡುಗಡೆ ಮಾಡಿದ್ದಾರೆ. ಹಾಗಾದ್ರೆ ಪತ್ರದಲ್ಲಿ ಏನಿದೆ? ವಿವರ ಇಲ್ಲಿದೆ ನನ್ನ ಪತಿ ಸಿದ್ದರಾಮಯ್ಯ ಸಣ್ಣ ಕಳಂಕವನ್ನು ಅಂಟಿಸಿಕೊಂಡಿಲ್ಲ. ಸಣ್ಣಕಳಂಕ ಅಂಟಿಸಿಕೊಳ್ಳದೆ ನೈತಿಕತೆ ವ್ರತವನ್ನು ಪಾಲಿಸಿದ್ದಾರೆ. ನಾನೆಂದು ಮನೆ, ಆಸ್ತಿ, ಚಿನ್ನ ಸಂಪತ್ತನ್ನು ಬಯಸಿದವಳು ಅಲ್ಲ. ನನ್ನಿಂದ ಅವರ ರಾಜಕೀಯ ಜೀವನಕ್ಕೆ ಕಳಂಕ ಬರಬಾರದು. ಸಣ್ಣ ಹನಿಯಷ್ಟು ಕಳಂಕ ತಟ್ಟಬಾರದು. ಹೀಗಿದ್ದರು ಮುಡಾ ನಿವೇಶನಕ್ಕೆ ಸಂಬಂಧಪಟ್ಟಂತೆ ಆರೋಪ ಬಂದಿರುವುದಕ್ಕೆ ನಾನು ಘಾಸಿಗೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಪತ್ನಿಯ ಭಾವನಾತ್ಮಕ ಪತ್ರ ಬಿಡುಗಡೆ ಮಾಡಿದ್ದಾರೆ. ನಿವೇಶನ, ಮನೆ, ಆಸ್ತಿ, ಯಾವುದು ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿ ಗಿಂತ ದೊಡ್ಡದಲ್ಲ. ಇಷ್ಟು ವರ್ಷ ಅಧಿಕಾರದಲ್ಲಿದ್ದ ಅವರಿಂದ ಏನನ್ನು ನನಗಾಗಲಿ ನನ್ನ…
ಚಿಕ್ಕಮಗಳೂರು : ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಒಬ್ಬ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಹೌದು ಶೃಂಗೇರಿಯ ಹರಿಹರ ಬೀದಿಯ ಬಿದಿಯಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಧ್ರುವ ನೇಣಿಗೆ ಶರಣಾಗಿರುವ ವಿದ್ಯಾರ್ಥಿಯನ್ನು ಧ್ರುವ (16) ಎಂದು ತಿಳಿದು ಬಂದಿದೆ. ನನಗೆ ಕೊಳಲು ನುಡಿಸುವ ಶಾಲೆಗೆ ಸೇರಿಸಿ ಎಂದು ಈಗಾಗಲೇ ಧ್ರುವ ಪೋಷಕರ ಬಳಿ ತಿಳಿಸಿದ್ದ. ಈ ವೇಳೆ ಪೋಷಕರಿಗೆ ಧ್ರುವ ಒತ್ತಾಯ ಮಾಡಿದ್ದ ಎಸ್ ಎಸ್ ಎಲ್ ಸಿ ವ್ಯಾಸಂಗ ಮುಗಿದ ನಂತರ ಪೋಷಕರು ಕೊಳಲು ನುಡಿಸುವ ಶಾಲೆಗೆ ಸೇರಿಸುವುದಾಗಿ ಹೇಳಿದ್ದರುಬೇಸರದಿಂದ ಪರೀಕ್ಷೆಗೆ ಗೈರಾಗಿ ಧ್ರುವ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : 14 ಮುಡಾ ನಿವೇಶನಗಳ ಕ್ರಯಪತ್ರ ಹಿಂದಿರುಗಿಸುತ್ತೇನೆ : ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪತ್ನಿ ಪಾರ್ವತಿ!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ED ಸಂಕಷ್ಟ ಎದುರಾಗಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಸಿಐಆರ್ ದಾಖಲಿಸಿಕೊಂಡಿದೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ನಿ ಪಾರ್ವತಿಯವರು 14 ನಿಮಿಷಗಳ ಕ್ರಯ ಪತ್ರವನ್ನು ಹಿಂದಿರುಗಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಮುಡಾ ಸೈಟ್ ಹಿಂದಿರುಗಿಸಲು ಬಯಸುತ್ತಿದ್ದೇನೆ ಎಂದು ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ ಪಾರ್ವತಿ ಪತ್ರ ಬರೆದಿದ್ದಾರೆ.ಮುಡಾಗೆ ಸಂಬಂಧ ಪಟ್ಟಂತೆ 14 ನಿವೇಶನಗಳ ಪತ್ರಗಳನ್ನು ಹಿಂದಿರುಗಿಸುವುದಾಗಿ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ವಿಜಯನಗರದಲ್ಲಿ ಮೂರನೇ ಮತ್ತು ನಾಲ್ಕನೇ ಹಂತದಲ್ಲಿ ಈ ಒಂದು ನಿವೇಶನಗಳು ಇವೆ. ಹಾಗಾಗಿ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಪತ್ನಿ ಪಾರ್ವತಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಒಂದು ಪ್ರಕರಣ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.
ಮಂಡ್ಯ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದಂತಹ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 55 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮಂಡ್ಯದ ಜಿಲ್ಲಾ ಸತ್ರ ನ್ಯಾಯಾಲಯವು ಕಳೆದ ಶುಕ್ರವಾರ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ ಶನಿವಾರ ಮತ್ತು ಭಾನುವಾರ ರಜೆ ಇದ್ದಿದ್ದರಿಂದ ಇಂದು ಎಲ್ಲಾ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶುಕ್ರವಾರ ಎಲ್ಲ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿತ್ತು.ತಲಾ ಒಂದು ಲಕ್ಷ ಬಾಂಡ್ ಹಾಗೂ ಪ್ರತಿ ರವಿವಾರ ಠಾಣೆಗೆ ಬಂದು ಸಹಿ ಹಾಕುವಂತೆ ಕೋರ್ಟ್ ಆದೇಶ ನೀಡಿತ್ತು. ಅದರ ಅನ್ವಯ ಇಂದು 55 ಆರೋಪಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಭಾರತೀಯ ಸಂಪ್ರದಾಯದಲ್ಲಿ ಗೋವಿನ ಸಾಂಸ್ಕೃತಿಕ ಮಹತ್ವವನ್ನ ಗುರುತಿಸಿ ಅಧಿಕೃತವಾಗಿ ‘ರಾಜ್ಯ ಮಾತಾ’ ಎಂದು ಘೋಷಿಸಿದೆ. ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಿವೈ ವಿಜಯೇಂದ್ರ ಸ್ವಾಗತಿಸಿದ್ದು, ಕರ್ನಾಟಕದಲ್ಲೂ ಗೋವನ್ನು ರಾಜ್ಯ ಮಾತೆ ಅಥವಾ ಕ್ಷೀರಮಾತೆ ಎಂದು ಘೋಷಿಸಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಬಿವೈ ವಿಜಯೇಂದ್ರ,ಗೋಮಾತೆಯನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ನಂದಿನಿ ಉತ್ಪನ್ನಗಳ ಮೂಲಕ ಕರ್ನಾಟಕ ವಿಶ್ವ ಮಾನ್ಯತೆ ಪಡೆಯುತ್ತಿದೆ. ನಂದಿನಿ ಉತ್ಪನ್ನಗಳ ಧಾತೆ ಗೋ ಮಾತೆ ಆದ್ದರಿಂದ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಗೋವನ್ನು ರಾಜ್ಯ ಮಾತೆ ಎಂದೇ ಘೋಷಿಸಲಿ ಇಲ್ಲವೇ ‘ಕ್ಷೀರಮಾತೆ’ ಎಂದು ಘೋಷಿಸಲಿ ಎಂದು ತಿಳಿಸಿದ್ದಾರೆ. https://twitter.com/BYVijayendra/status/1840763723775910205?t=D6X7ktGN0tW0VOFXMqFBUg&s=19
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದ್ದಾರೆ.ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ. ಇದರ ಬೆನ್ನಲ್ಲೆ ಇಂದು ಬೆಂಗಳೂರಿನಲ್ಲಿ ಕಾವೇರಿ ನಿವಾಸದಲ್ಲಿ ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಹತ್ವದ ವಿಷಯ ಚರ್ಚೆಯಾಗುವ ಸಾಧ್ಯತೆಯಿದ್ದು, ರಾಜಕೀಯ ಬೆಳವಣಿಗೆ ಹಾಗೂ ಕಾನೂನು ಹೋರಾಟದ ಬಗ್ಗೆ ಚರ್ಚಿಸಿದ್ದಾರೆ. ಸಭೆಯಲ್ಲಿ ಕಾನೂನು ಸಚಿವ ಎಚ್ ಕೆ ಪಾಟೀಲ್, ಎಚ್ ಸಿ ಮಹದೇವಪ್ಪ, ಕೃಷ್ಣ ಬೈರೇಗೌಡ ಹಾಗೂ ಸಿಎಂ ಇಬ್ರಾಹಿಂ ಜೊತೆಗೆ ಚರ್ಚಿಸಿದ್ದಾರೆ. ಇಸಿಐಆರ್ ದಾಖಲಾದ ಬೆನ್ನಲ್ಲೇ ಸಚಿವರ ಜೊತೆಗಿನ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.












