Author: kannadanewsnow05

ಬೆಂಗಳೂರು : ಕಾಂಗ್ರೆಸ್ ನವರಿಗೆ ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಹುಡುಕುವ ಗಾದೆ ಸೂಕ್ತ ಆಗುತ್ತೆ ಎನ್ನುವ ಮೂಲಕ, ಅಪೂರ್ಣ ರಾಮಮಂದಿರ ಮೂಲಕ ಬಿಜೆಪಿ ರಾಜಕಾರಣ ಮಾಡ್ತಿದೆ. ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್ ಮುಸ್ಲಿಂ ಥರ ಕಾಣಿಸ್ತಾರೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟೀಕಾಪ್ರಹಾರ ನಡೆಸಿದ್ದಾರೆ. ಬಿಜೆಪಿಯವರದ್ದು ಢೋಂಗಿ ಹಿಂದುತ್ವ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕೆ ಮಾತಾಡಿದ ಸಿ.ಟಿ.ರವಿ, ಸಿದ್ದರಾಮಯ್ಯ ಟೋಪಿ‌ ಮೇಲಿನ ಪ್ರೀತಿ ಕೇಸರಿ ಮೇಲೆ ತೋರಿಸಲ್ಲ. ಟೋಪಿ ಹಾಕ್ಕೊಂಡು ಸೂಟ್ ಆಗುತ್ತಾ ಇಲ್ವಾ ಅಂತಾ ನೋಡಿಕೊಂಡಿದ್ದಾರೆ. ‌ಕೇಸರಿ‌ ಪೇಟಾ ಇಡಲು ಬಂದ್ರೆ ಧಿಕ್ಕರಿಸ್ತಾರೆ. ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್ ಮುಸ್ಲಿಂ ಥರ ಕಾಣಿಸ್ತಾರೆ. ಇದು ಢೋಂಗಿತನ ಎಂದು ಟಾಂಗ್‌ ಕೊಟ್ಟಿದ್ದಾರೆ. ರಾಮಂದಿರ ದೇವಾಲಯಗಳ ಸಮುಚ್ಛಯ. ಮೊದಲ ಹಂತ ಈಗ ಪೂರ್ಣ ಆಗಿ ರಾಮಲಲ್ಲಾ ಪ್ರತಿಷ್ಠಾಪನೆ ಆಗ್ತಿದೆ ಈಗ. ಹಲವು ಹಂತಗಳಲ್ಲಿ ನಿರ್ಮಾಣ ಆಗಲಿದೆ. ಈ‌ ನಿರ್ಣಯ ಕೈಗೊಂಡಿರೋದು ಟ್ರಸ್ಟ್,…

Read More

ಬೆಂಗಳೂರು : ಮೇಕೆದಾಟು ಯೋಜನೆ ವಿಚಾರದಲ್ಲಿ ಪ್ರತಿಯೊಂದಕ್ಕೂ ನೆರೆ ರಾಜ್ಯ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ ಎಂದು ಜಡಿಎಸ್ ವರಿಷ್ಠ ಎಚ್ .ಡಿ.ದೇವೇಗೌಡ ಆರೋಪಿಸಿದ್ದಾರೆ.ನಿನ್ನೆ ಕೇಂದ್ರ ಜಲಶಕ್ತಿ ಸಚಿವಾಲಯದ ಸ್ಥಾಯಿ ಸಮಿತಿ ಸಭೆ ಬಳಿಕ ಹೇಳಿಕೆಯನ್ನ ನೀಡಿದ್ದಾರೆ. ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವಾಲಯದ ಸ್ಥಾಯಿ ಸಮಿತಿಯ ಸಭೆಯ ಬಳಿಕ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಒಪ್ಪಿಗೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ತಮಿಳುನಾಡು ಎಲ್ಲದಕ್ಕೂ ತಕರಾರು ತೆಗೆಯುತ್ತಿದೆ. ನಮ್ಮ ಹಣದಲ್ಲಿ ನಾವು ಅಣೆಕಟ್ಟು ನಿರ್ಮಾಣ ಮಾಡುತ್ತೇವೆ. ಸ್ವಾಮಿನಾಥನ್ ಅವರೇ ವರದಿ ನೀಡಿದ್ದು, ಮೂರು ಬಾರಿ ಬೆಳೆ ಬರಲಿದೆ ಎಂದು ಹೇಳಿದರೂ ಕ್ಯಾತೆ ತೆಗೆಯುತ್ತಿದೆ ಎಂದು ದೂರಿದರು.ವಿವಿಧ ನೀರಾವರಿ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಲಾಗಿದೆ. ಬೆಳೆ ಮತ್ತು ಕುಡಿಯುವ ನೀರಿನ ಸಮಸ್ಯೆ ಚರ್ಚೆಯಾಗಿದೆ. ಹೊಗೇನಕಲ್‌ನಿಂದ ಎಲ್ಲಾ ಕಡೆ ನೀರು ನೀಡಲಾಗಿದೆ. ಆದರೂ ನಮ್ಮ ಕುಡಿಯುವ ನೀರಿಗೆ ಅಡ್ಡಿ ಮಾಡಲಾಗುತ್ತಿದೆ. ಅಲ್ಲದೇ,…

Read More

ಬೆಂಗಳೂರು : ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಸಾಯತ ಸ್ವಾಯತ್ತ ಸಂಸ್ಥೆಯಾಗಿರುವ ರಾಜ್ಯ ಹಜ್ ಸಮಿತಿಯಿಂದ ಯಾತ್ರೆ ಪ್ರಾರಂಭ ವಾಗುವ ಮುನ್ನ ಹಜ್ ಕ್ಯಾಂಪ್ ಆಯೋ ಜಿಸಲಾಗುತ್ತದೆ. ಈ ವೇಳೆ ಯಾತ್ರಿಗಳು ಉಳಿದುಕೊಳ್ಳಲು ಬೋರ್ಡಿಂಗ್ ಮತ್ತು ಲಾಡ್ಡಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತದೆ. ಕಾಗದ ಪತ್ರ, ವಿದೇಶಿ ವಿನಿಮಯ ಹಂಚಿಕೆ ವ್ಯವಸ್ಥೆ, ವಿಮಾನ ನಿಲ್ದಾಣಕ್ಕೆ ತಲುಪಿಸುವುದು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಂಬಂಧ ಪಟ್ಟ ಇಲಾಖೆಗಳ ಸಹಕಾರದೊಂದಿಗೆಒದಗಿಸಲಾಗುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ. ಜನಸಂಖ್ಯೆ ಆಧಾರದ ಮೇಲೆ ಎಷ್ಟುಯಾತ್ರಿಕರನ್ನು ಹಜ್‌ ಯಾತ್ರೆಗೆ ಕಳುಹಿಸ ಬೇಕು ಎಂಬುದನ್ನು ಮುಂಬೈ ನಲ್ಲಿರುವ ಹಜ್ ಸಮಿತಿ ನಿರ್ಧರಿಸುತ್ತದೆ. ಈ ಸಮಿತಿಯೊಂದಿಗೆ…

Read More

ಬೆಂಗಳೂರು : ನಗರದಲ್ಲಿ ಅಕ್ರಮವಾಗಿ ಗೃಹ ಬಳಕೆ ಗ್ಯಾಸ್‌ ಸಿಲಿಂಡ‌ರ್ ದಾಸ್ತಾನು ಮಾಡಿಕೊಂಡು ರೀಫಿಲ್ಲಿಂಗ್ ಮಾಡುತ್ತಿದ್ದ ಎರಡು ಸ್ಥಳಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ದಳದೆ ಪೊಲೀಸರು ದಾಳಿ ಮಾಡಿ ₹33 ಲಕ್ಷ ಮೌಲ್ಯದ 290 ಗ್ಯಾಸ್‌ ಸಿಲಿಂಡರ್‌ಗಳು ಹಾಗೂ ರೀಫಿಲ್ಲಿಂಗ್ ಗೆ ಬಳಸುತ್ತಿದ್ದ ಉಪಕರಣಗಳನ್ನು ಜಪ್ತಿ ಮಾಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ಎಂಟ‌ರ್ ಪ್ರೈಸಸ್ ಅಂಗಡಿ ಮೇಲಿನ ದಾಳಿ ವೇಳೆ 140 ದೊಡ್ಡ ಸಿಲಿಂಡರ್‌ಗಳು 30 ಸಣ್ಣ ಸಿಲಿಂಡರ್‌ಗಳು ಸೇರಿದಂತೆ ಒಟ್ಟು 170 ಗ್ಯಾಸ್ ಸಿಲಿಂಡರ್‌ಗಳು, 5 ರೀಫಿಲ್ಲಿಂಗ್ ರಾಡ್‌ಗಳು, 200 ಸೀಲ್ ಲೇಬಲ್‌ಗಳು, 3 ರೆಗ್ಯುಲೇಟರ್‌ಗಳು ಮತ್ತು 3 ಗೂಡ್ಸ್ ಕ್ಯಾಂಟರ್ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಯ್ಯ ರೆಡ್ಡಿ ಲೇಔಟ್ ಮನೆಯೊಂದರ ಮೇಲಿನ ದಾಳಿ ವೇಳೆ 120 ಗ್ಯಾಸ್ ಸಿಲಿಂಡರ್‌ಗಳು, 5 ರೀಫಿಲ್ಲಿಂಗ್‌ ರಾಡ್‌ಗಳು, 100 ಸೀಲ್ ಲೇಬಲ್‌ಗಳನ್ನು ಜಪ್ತಿ ಮಾಡಲಾಗಿದೆ.ಈ ಎರಡೂ ಪ್ರಕರಣಗಳಲ್ಲಿ ಪರವಾನಗಿ ಇಲ್ಲದೆ ಜನವಸತಿ…

Read More

ಬೆಂಗಳೂರು : ನಗರದ ಸುಂಕದಕಟ್ಟೆ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿವಾದಿತ ಸ್ಥಳವನ್ನು ಸರ್ವೇ ನಡೆಸಿ ಮೂರುವಾರದಲ್ಲಿ ವಸ್ತುನಿಷ್ಠ ವರದಿ ಸಲ್ಲಿಸುವಂತೆ ಬೆಂಗಳೂರು ಜಿಲ್ಲಾಧಿಕಾರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತಂತೆ ಸುಂಕದಕಟ್ಟೆ ನಿವಾಸಿ ಸಿ. ಹೊನ್ನಯ್ಯ ಮತ್ತಿತರರು ಸಲ್ಲಿಸಿದ್ದ ಸಾರ್ವ ಜನಿಕ ಜನಿಕ ಹಿತಾಸಕಿ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಜತೆಗೆ, ಪ್ರತಿವಾದಿಯಾಗಿರುವ ಸರ್ಕಾರ, ಬಿಬಿಎಂಪಿ ಹಾಗೂ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರಿಗೆ ನೋಟಿಸ್ ಜಾರಿಗೊಳಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸರ್ಕಾರಿ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಿಸುತ್ತಿದ್ದಾರೆ ಹಾಗೂ ಸಾರ್ವಜನಿಕರ ಓಡಾಟಕ್ಕೆ ರಸ್ತೆ ನಿರ್ಬಂಧಿಸಿ ದ್ದಾರೆ ಎಂದು ಪೀಠದ ಗಮನಕ್ಕೆ ತಂದರು..ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾ ಲಯ ನಿರ್ಮಿಸಲಾಗಿದೆಯೇ? ಸಾರ್ವಜನಿಕ…

Read More

ಬೆಂಗಳೂರು: ರಾಮಲಲ್ಲಾ ಪ್ರತಿಷ್ಠಾಪನೆಗೆ ಆಮಂತ್ರಣ ನೀಡಿದರೂ ಹೋಗುವುದಿಲ್ಲ ಎಂಬ ತೀರ್ಮಾನ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಇಡೀ ದೇಶವೇ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿದೆ. ರಾಮರಾಜ್ಯ ಹಾಗೂ ರಾಮನ ಕನಸು ನನಸಾಗಬೇಕಿದೆ. ಅಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ಕೈಗೊಂಡ ನಿರ್ಧಾರವನ್ನು ನಾನು ಖಂಡಿಸುತ್ತೇನೆ’ ಎಂದರು. ‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅಂತಹವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪಪಡುತ್ತಾರೆ’ ಎಂದು ಹೇಳಿದರು. ಇಲ್ಲಿಯವರೆಗೆ ಜಾತ್ಯತೀತತೆಯ ಮುಖವಾಡ ಹಾಕಿದ್ದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ರಾಮಲಲ್ಲಾ ಪ್ರತಿಷ್ಠಾಪನೆ ಆಹ್ವಾನ ತಿರಸ್ಕರಿಸುವ ಮೂಲಕ ಅದು ಮತೀಯವಾದಿ ಪಕ್ಷ ಎಂಬುದು ಸಾಬೀತಾಗಿದೆ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ರಾಮಮಂದಿರ ನಿರ್ಮಿಸಲಾಗಿದೆ.…

Read More

ಶಿವಮೊಗ್ಗ : ಅಯ್ಯೋ ದೆಹಲಿಯಲ್ಲಿ ಜನವರಿ 22ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಹ್ವಾನವನ್ನು ತಿರಸ್ಕರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ ಈ ಒಂದು ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸರ್ಕಾರದ 5ನೇ ಗ್ಯಾರಂಟಿ ಯೋಜನೆಯದ ಯುವನಿಧಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ವಿಮಾ ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾವು ಕೂಡ ಶ್ರೀರಾಮ ಭಕ್ತರು ಆದರೆ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿಸಿ ರಾಜಕೀಯ ಮಾಡೋದಕ್ಕೆ ಹೊರಟಿದ್ದಾರೆ. ನಾವು ಧಾರ್ಮಿಕ ವಿಷಯಗಳಲ್ಲಿ ರಾಜಕೀಯ ವಿರೋಧಿಸುತ್ತಿವೆ ಹೊರತು ಶ್ರೀ ರಾಮನನ್ನು ವಿರೋಧಿಸಿಲ್ಲ.ನಾನು ಕೂಡ ಶ್ರೀರಾಮನ ಭಕ್ತ ಆದ್ದರಿಂದ ನಾನು ಹೋಗಿ ನೋಡಿಕೊಂಡು ಬರುತ್ತೇನೆ 22 ರಂದು ರಾಜ್ಯದಲ್ಲಿ ನಮ್ಮ ಎಲ್ಲ ಕಾರ್ಯಕರ್ತರು ಎಲ್ಲ ಶ್ರೀ ರಾಮನ ಮಂದಿರಕ್ಕೆ ಪೂಜೆ ಸಲ್ಲಿಸುತ್ತಾರೆ. ಬಿಜೆಪಿಯವರು ಕೇವಲ ರಾಜಕೀಯ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು ಏಳು ಜನರನ್ನು ಪೆಡ್ಲರ್ ಗಳನ್ನು ಸಿಸಿಬಿ ಅಧಿಕಾರಿಗಳು ಇದೀಗ ಬಂದಿಸಿ ಸುಮಾರು 1.66 ಕೋಟಿ ರೂಪಾಯಿ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಲ್ಲಿ ವಿದೇಶಿಗರು ಸೇರಿ 7 ಡ್ರಗ್ ಪೆಡ್ಲರ್ ಗಳ ಬಂಧನವಾಗಿದ್ದು, ಕಳೆದ ಒಂದು ವಾರದಿಂದ ಬೆಂಗಳೂರಿನ ವಿವಿಧೆಡೆ ಕಾರ್ಯಾಚರಣೆ ಮಾಡಲಾಗಿದ್ದು, ಗಿರಿನಗರ, ಮಡಿವಾಳ,ಚಿಕ್ಕಜಾಲ, ಆರ್ ಟಿ ನಗರ ಬೈಯಪ್ಪನಹಳ್ಳಿ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು ಬಂದಿತರ ವಿರುದ್ಧ ಒಟ್ಟು ಐದು ಪ್ರಕರಣಗಳನ್ನು ಸಿಸಿಬಿ ದಾಖಲಿಸಿದೆ. ಏಳು ಜನ ಬಂದಿದ್ದರಲ್ಲಿ ಕೆಲವರು ವಿದೇಶಿ ಪೆಡ್ಲರ್ ಗಳು ಸೇರಿದ್ದು, ಬಂದಿದರಿಂದ ಸುಮಾರು ಒಂದುವರಿ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿಕೊಂಡು ಇದೀಗ ಏಳು ಜನರ ವಿರುದ್ಧ ಸುಮಾರು ಐದು ಪ್ರಕರಣಗಳನ್ನು ಸಿಸಿಬಿ ಅಧಿಕಾರಿಗಳು ದಾಖಲಿಸಿದ್ದಾರೆ.

Read More

ಬೆಳಗಾವಿ : ಸ್ಕೂಟಿ ಕಿ ಕೊಡಲಿಲ್ಲವೆಂದು ಕೋಪಗೊಂಡು ಚಿಕ್ಕಮ್ಮನನ್ನೇ ಮಗನೊಬ್ಬ ರಾಡ್ ನಿಂದ ತಲೆಗೆ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದಿದೆ. ಜನವರಿ 8ರಂದು ಈ ಘಟನೆ ಸಂಭವಿಸಿದ್ದು, ಮಗನಿಂದ ಹತ್ಯೆಗೆ ಒಳಗಾದ ಚಿಕ್ಕಮ್ಮನನ್ನು ಮಂಗಳ ಸಾವರ್ಡ್ಕರ್ ಎಂದು ಹೇಳಲಾಗುತ್ತಿದ್ದು, ಆರೋಪಿ ಸಂಜಯ್ ಸವಾಡ್ಕರ್ ಚಿಕ್ಕಮ್ಮನ ಬಳಿ ಸ್ಕೂಟಿ ಕಿ ಕೇಳಿದ್ದಾನೇ ಆಗ ಚಿಕ್ಕಮ್ಮ ಸ್ಕೂಟಿ ಕಿ ಕೊಡಲವೆಂದು ತಿಳಿಸಿದಾಗ ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯದು ವಿಕೋಪಕ್ಕೆ ತಿರುಗಿದಾಗ ಸಂಜಯ್ ಅಲ್ಲೇ ಇದ್ದ ರಾಡ್ ನಿಂದ ಚಿಕ್ಕಮಗೆ ತಲೆಗೆ ಬಲವಾಗಿ ಹೊಡೆದಿದ್ದಾನೆ. ಚಿಕ್ಕಮ್ಮಗೆ ಬಲವಾಗಿ ಹೊಡೆದ ನಂತರ ಸಂಜಯ್ ಅಲ್ಲಿಂದ ಕಾಲ್ ಕಿತ್ತಿದ್ದಾನೆ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಸಂಜಯ್, ತನ್ನ ಚಿಕ್ಕಮ್ಮನ ಬಳಿ ಸ್ಕೂಟಿ ಕಿ ಸಲುವಾಗಿ ಜಗಳ ತೆಗೆದು ಈ ರೀತಿ ಕೊಲೆ ಮಾಡಿದ್ದಾನೆ. ಇದೀಗ ಅಥಣಿ ಪೊಲೀಸ್ ಠಾಣೆಯಲ್ಲಿ ಕಡಿಮೆ ಕುರಿತು…

Read More

ಬೆಂಗಳೂರು : ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ಗೆ ಇಮೇಲ್ ಮುಖಾಂತರ ಉಸಿಬಾಂಬ್ ಬೆದರಿಕೆ ಸಂದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪೊಲೀಸರ ಪರಿಶೀಲನೆ ಬಳಿಕ ಹುಸಿ ಮೇಲ್ ಎಂಬುದು ಪತ್ತೆಯಾಗಿದೆ. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು ಉಗ್ರ ಸಂಘಟನೆ ಹೆಸರನ್ನು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು‘ Morgue999lol’ ಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ಉಲ್ಲೇಖಿಸಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು. ಈ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮ್ಯೂಸಿಯಂಗೆ ಡಾಗ್ ಸ್ಕ್ವಾಡ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ…

Read More