Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಅಪ ಹರಣಪ್ರಕರಣದಲ್ಲಿ ಜಾಮೀನು ಪಡೆದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತಿದೆ. ಹೌದು ನಿನ್ನೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದ ರೇವಣ್ಣ, ಅಪಹರಣ ಪ್ರಕರಣಕ್ಕೆ ಸಾಕ್ಷ್ಯ ಕೊರತೆ ಆಧಾರದ ಮೇಲೆ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಆಧಾರದ ಮೇಲೆ ತಮ್ಮ ವಿರುದ್ಧ ಎಫ್‌ಐಆರ್ ರದ್ದು ಮಾಡುವಂತೆ ಅರ್ಜಿ ಸಲ್ಲಿಸುವ ಕುರಿತು ಗಂಭೀರವಾಗಿ ಚಿಂತನೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದರು. ಇದೇ ಅಂಶಗಳನ್ನಿಟ್ಟುಕೊಂಡು ಪ್ರಕರಣ ರದ್ದು ಮಾಡುವಂತೆ ಕೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ ಎಂದು ತಿಳಿದುಬಂದಿದೆ. ಮುಂದಿನ ದಿನದಲ್ಲಿ ಪ್ರಕರಣ ತಲೆಬಿಸಿಯನ್ನುಂಟು ಮಾಡುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಫ್‌ಐಆರ್…
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ಕಾಲ ಜೈಲುವಾಸ ಅನುಭವಿಸಿ ನಿನ್ನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಿಂದ ಬಿಡುಗಡೆಯಾದ ಹೆಚ್ ಡಿ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ ಎಂದು ತಿಳಿದು ಬಂದಿದೆ. ಕಿಡ್ನ್ಯಾಪ್ ಕೆಎಸ್ ಅಲ್ಲಿ ಎಚ್ ಡಿ ರೇವಣ್ಣಗೆ ಜಾಮೀನು ದೊರಕಿದ್ದು ಇದಿರ ಎಸ್ಐಟಿ ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ತಮ್ಮ ಪುತ್ರ ಹಾಗೂ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ಹಗರಣದ ಸಂತ್ರಸ್ತೆ ಅಪಹರಣ ಪ್ರಕರಣ ಸಂಬಂಧ ಆರೋಪಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಜಾಮೀನು ರದ್ದು ಕೋರಿ ಬುಧವಾರ ಅಥವಾ ಗುರುವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ವಿಶೇಷ ತನಿಖಾ ದಳ ಮುಂದಾಗಿದೆ ಎಂದು ತಿಳಿದು ಬಂದಿದೆ. ತನ್ಮೂಲಕ ಜೈಲಿನಿಂದ ಹೊರಬಂದ ಕೂಡಲೇ ದೇವರ ದರ್ಶನಕ್ಕೆ ಯಾತ್ರೆ ನಡೆಸಿದ್ದ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಲ್ಲದೆ ಎಸ್‌ಐಟಿ ಈ ನಿರ್ಧಾರಕ್ಕೆ…
ಬೆಂಗಳೂರು : ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ರೇವಣ್ಣ ಅವರಿಗೆ ಜಾಮೀನು ಮಂಜೂರು ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆಗಿರುವ ತನಿಖಾ ಬೆಳವಣಿಗೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಎಸ್‌ಐಟಿ ಪೊಲೀಸರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು ಎಂದು ತಿಳಿದುಬಂದಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ನೀಡಿದರು. ಪ್ರಮುಖವಾಗಿ ರೇವಣ್ಣ ಅವರಿಗೆ ಜಾಮೀನು ಸಿಗಲು ಕಾರಣ, ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಬಂಧನಸೇರಿದಂತೆಮತ್ತಿತರ ವಿಷಯಗಳನ್ನು ತಿಳಿಸಿದರು. ಈ ವೇಳೆ ಸಿಎಂ, ತನಿಖೆ ಯನ್ನು ಚುರುಕುಗೊಳಿಸು ವಂತೆ ತಿಳಿಸಿದರಲ್ಲದೆ, ಪಾರ ದರ್ಶಕವಾಗಿ ಮಾಡುವಂತೆ ಸೂಚನೆ ನೀಡಿದರುಎಂದು ಮೂಲಗಳು ತಿಳಿಸಿವೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಡಿಸಿಎ೦ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಬೈರತಿ ಸುರೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು…
ಬೆಂಗಳೂರು : ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾ ಲಯ ಕಾನೂನು ಕ್ರಮ ಜರುಗಿಸಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೌದು ನಕಲಿ ಜಾತಿ ಪ್ರಮಾಣ ಪ್ರಮಾಣ ಪತ್ರ ಪಡೆದು ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಆರೋಪ ಸಂಬಂಧ ಕೇಂದ್ರ ಶಿಪ್ಪಿಂಗ್ ಸಚಿವಾಲಯದಲ್ಲಿ ಸಹಾಯಕ ಲೈಟ್ ಕೀಪರ್‌ಆಗಿ ಸೇವೆ ಸಲ್ಲಿಸುತ್ತಿದ್ದ ಎ.ಎಸ್. ಪಳನಿ ಎಂಬುವವರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ ಅವರ ಪೀಠ ಈ ಸ್ಪಷ್ಟನೆ ನೀಡಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಹಾಗೂ ಇತರೆ ಹಿಂದುಳಿದ ವರ್ಗಗಳ (ಮೀಸಲಾತಿ ಮತ್ತು ನೇಮಕಾತಿ ಇತರೆ) ಅಧಿನಿಯಮ 1992ರ ನಿಯಮ 7ರ ಪ್ರಕಾರ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಶಿಫಾರಸು ಮಾಡಬೇಕು. ಆ ಬಳಿಕವೇ ಜಾರಿ ನಿರ್ದೇಶನಾಲಯ…
ಬೆಂಗಳೂರು : ರಾಜಧಾನಿಯಲ್ಲಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಖಾಸಗಿ ಬ್ಯಾಂಕ್ ಉದ್ಯೋಗಿ, 3 ವಿದೇಶಿ ಪ್ರಜೆಗಳು ಸೇರಿ ಆರು ಮಂದಿಯನ್ನು ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಜಪ್ತಿ ಮಾಡಿದೆ. ನೈಜೀರಿಯಾ ದೇಶದ ಆಗಸ್ಟೆನ್ ನಾನ್ನೊ, ಫ್ರೆಡೈಲಿಸ್, ಎರೇಂಜಿನ್ ಸ್ಟಾರ್ಟ್, ಮಡಿಕೇರಿ ಜಿಲ್ಲೆ ನಾಣಯ್ಯ, ವಿ.ವಿ.ಪುರದ ಕುಶಾಲ್ ಹಾಗೂ ಮಡಿವಾಳದ ವಿಶ್ವಾಸ್ ಬಂಧಿತರಾಗಿದ್ದು, ಆರೋ ಪಿಗಳಿಂದ MDMA, ಕ್ರಿಸ್ಟೆಲ್, ಕೊಕೆನ್, , ಎಲ್ ಎಸ್ ಡಿ ಚರಸ್ প্রơ, 12 ಕೆಜಿ ಗಾಂಜಾ, ಹ್ಯಾಶೀಶ್ ಆಯಿಲ್ ಸೇರಿ ಒಟ್ಟು 22.74 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಹಲವು ದಿನಗಳಿಂದ ನಗರದಲ್ಲಿ ಈ ಆರು ಮಂದಿ ಪೆಡ್ಡರ್‌ಗಳು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಸಿಬಿ ಕಾರ್ಯಾಚರಣೆ ನಡೆಸಿದೆ. ಈ ವಿದೇಶಿ ಪ್ರಜೆಗಳು ಬಿಜಿನೆಸ್, ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಬಂದು ನೆಲೆಸಿದ್ದರು. ಮೋಜಿನಜೀವನ ನಡೆಸಲು ಗೋಡಾ, ಮುಂಬೈ ಹಾಗೂ ದೆಹಲಿಯಲ್ಲಿ ನೆಲೆಸಿರುವ ತಮ್ಮ ದೇಶದ…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ನೀಡಿತ್ತು. ಇಂದು ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ಹೆಚ್.ಡಿ ರೇವಣ್ಣ ಟೆಂಪಲ್ ರನ್ ನಲ್ಲಿ ತೊಡಗಿದ್ದಾರೆ. ಹೌದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹೆಚ್ ಡಿ ರೇವಣ್ಣ ಟೆಂಪಲ್ ರನ್ ಮಾಡುತ್ತಿದ್ದು ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಮಾಜಿ ಸಚಿವ ಎಚ್ ಡಿ ರೇವಣ್ಣ ಭೇಟಿ ನೀಡಿದ್ದಾರೆ. ಗರ್ಭಗುಡಿಯಲ್ಲಿ ಎಚ್ಡಿ ರೇವಣ್ಣ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಇದೆ ವೇಳೆ ಅವರ ಜೊತೆಗೆ ಸಾರಾ ಮಹೇಶ್, ಸಿ ಎಸ್ ಪುಟ್ಟರಾಜು, ಎಂಎಲ್ಸಿ ಮಂಜೇಗೌಡ ಸಾಥ್ ನೀಡಿದ್ದಾರೆ. ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಎಚ್ಡಿ ರೇವಣ್ಣ ಅರ್ಚನೆ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬದ ಪ್ರತಿಯೊಬ್ಬರ ಹೆಸರು ನಕ್ಷತ್ರ ಹೇಳಿ ಎಚ್ಡಿ ರೇವಣ್ಣ ಅರ್ಚನೆ ಮಾಡಿಸಿದ್ದಾರೆ.ಚಾಮುಂಡೇಶ್ವರಿ ಗೆ ಪೂಜಿ ಸಲ್ಲಿಸಿ, ಇದೀಗ ಎಚ್ಡಿ ರೇವಣ್ಣ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಇದಕ್ಕೂ ಮುಂಚೆ ಬೆಂಗಳೂರಿನ ಪರಪ್ಪನ…
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕೇಂದ್ರ ಸರ್ಕಾರದಿಂದ ಬರುವ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲು ಕೇಂದ್ರ ಒಪ್ಪದಿದ್ದಾಗ ಐದು ಕೆಜಿ ಬದಲಾಗಿ ಸರ್ಕಾರ ಪಡಿತರ ಖಾತೆಗೆ ಹಣ ನೀಡಿತು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಕೇಂದ್ರ ಆಹಾರ ನಿಗಮದಲ್ಲಿ ಅಕ್ಕಿ ಕೊಳೆಯುತ್ತಿದೆ.ಭಾರತ್ ಬ್ರಾಂಡ್ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿತಾ ಎಂದು ಪ್ರಶ್ನಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ.18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ. ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ…
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ರೈತರ ಮುಖದಲ್ಲಿ ಸಂತಸ ತರಿಸಿದೆ ಏಕೆಂದರೆ ಕಳೆದ ಒಂದು ವರ್ಷದಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು ಇದೀಗ ವರುಣ ಕೃಪೆ ತೋರಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದು ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಂಗಳವಾರ ವರುಣಾರ್ಭಟ ಜೋರಾಗಿತ್ತು. ಉತ್ತರ ಕನ್ನಡದ ಸಿದ್ದಾಪುರದಲ್ಲಿ 52 ಮಿಮೀ, ಶೃಂಗೇರಿಯಲ್ಲಿ 50 ಮಿಮೀ ಮಳೆ ಸುರಿದಿದೆ.ಕೆಲವೆಡೆ ಸಾಧಾರಣ ಪ್ರಮಾಣದಲ್ಲಿ ಗುಡುಗು ಮಿಂಚು ಸಹಿತ ವರ್ಷಧಾರೆಯಾಗಿದೆ ತಿಳಿದುಬಂದಿದೆ. ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ ಎರಡು ದಿನ ಹಾಗೂ ಶಿವಮೊಗ್ಗ, ಹಾಸನ, ಚಾಮರಾಜನಗರದಲ್ಲಿ ಮೇ 15ರಂದು, ದಣ ಕನ್ನಡ, ಉಡುಪಿಯಲ್ಲಿ ಮೇ 17ರಿಂದ ಮುಂದಿನ ಮೂರು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ…
ತುಮಕೂರು : ಹಳ್ಳದಲ್ಲಿ ನೀರು ಕುಡಿದು ವಾಪಸ್ ಆಗುತ್ತಿದ್ದ ವೇಳೆ ರೈಲು ಹಳೆಯ ಮೇಲೆ ಕುರಿಮಂದೆ ಮೇಲೆ ರೈಲು ಹರಿದು ಸುಮಾರು 15 ಲಕ್ಷ ಮೌಲ್ಯದ 46 ಕುರಿಗಳು ಧಾರಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿಯಲ್ಲಿ ಎಂಬಲ್ಲಿ ನಡೆದಿದೆ. ನಿಡವಂದ ಗ್ರಾಮದ ಬಳಿ ರೈಲು ಹರಿದು 46 ಕುರಿಗಳ ಸಾವನ್ನಪ್ಪಿವೆ. ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ರೈತ ದೇವರಾಜುಗೆ ಸೇರಿದ ಕುರಿಗಳು ಎಂದು ಹೇಳಲಾಗುತ್ತಿದೆ.ಕೆರೆಯಲ್ಲಿ ನೀರು ಕುಡಿದು ಹಿಂತಿರುಗುತ್ತಿದ್ದ ವೇಳೆ ಮಂದೆ ಮೇಲೆ ರೈಲು ಹರಿದಿದೆ. ಈ ವೇಳೆ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ 46 ಕುರಿಗಳನ್ನು ರೈತ ದೇವರಾಜು ಕಳೆದುಕೊಂಡಿದ್ದಾನೆ. ಘಟನೆ ಕುರಿತಂತೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಇತ್ತೀಚಿಗೆ ಆಕಸ್ಮಿಕ ಹಾಗೂ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಉಡುಪಿಯಲ್ಲಿ ಕೂಡ ಶಾರ್ಟ್ ಸರ್ಕ್ಯೂಟ್ ನಿಂದ ಬಿರಿಯಾನಿ ಹೋಟೆಲ್ ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಉಡುಪಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬಿರಿಯಾನಿ ಹಟ್ ಹೋಟೆಲ್ ಒಂದು ಹೊತ್ತಿ ಉರಿದಿದೆ. ಕರಾವಳಿಯ ಜಂಕ್ಷನ್ ಬಳಿ ಇರುವ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ ಶಂಕೆ ವ್ಯಕ್ತವಾಗುತ್ತಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ, ಘಟನೆಯ ಕುರಿತಂತೆ, ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.










