Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ವೇ* ಎಂಬ ಬಳಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಪರಿಶೀಲನೆ ಕಾರ್ಯ ನಡೆಯುತ್ತಿರುವ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿ.ಟಿ. ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು 15 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇಂದು ಸುವರ್ಣಸೌಧಕ್ಕೆ ಕಾರಿನಲ್ಲಿ ಆಗಮಿಸಿದ ಎಂಎಲ್ಸಿ ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ. ಈ ವೇಳೆ ಸುಮಾರು 15ರ ಜನರು ಗುಂಪುಗೂಡಿ…
ಬೆಳಗಾವಿ : ಅಂಬೇಡ್ಕರ್ ಭಾವಚಿತ್ರ ಹಿಡಿದು ಇಂದು ಸದನದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ MLC ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿ ಇದೀಗ, ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಲಾಗಿದ್ದು, ಸುವರ್ಣಸೌಧದ ಮೊಗಸಾಲೇಯಲ್ಲಿ ಭಾರಿ ಹೈಡ್ರಾಮಾ ನಡೆಯಿತು.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿಟಿ ರವಿ ಮೇಲೆ ಹಲ್ಲಿಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಇದಕ್ಕೂ ಮೊದಲು, ಬೆಳಗಾವಿಯ ಸುವರ್ಣಸೌಧದ ಬಳಿ ಎಂಎಲ್ಸಿ ಸಿಟಿ ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಘೋಷಣೆ ಕೂಗಿ ಧಿಕ್ಕಾರ ಕೂಗಿದರು. ಬಿಜೆಪಿಯ ಎಂ.ಎಲ್ ಸಿ ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಘೋಷಣೆ ಕೂಗಿದರು.ಅಶ್ಲೀಲ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲಾಯಿತು. ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಘೋಷಣೆ ಕೂಗಿದರು. ಸುವರ್ಣ ಸೌಧದ ಬಳಿ ಎಂಎಲ್ಸಿ ಸೀಟಿ ರವಿಗೆ…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಐಐಎಸ್ ಸಿ ವಿದ್ಯಾರ್ಥಿ ಅನ್ಮೋಲ್ ಗಿಲ್ ನಾಪತ್ತೆಯಾಗಿದ್ದ. ಇದೀಗ ಇಂದು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಐಐಎಸ್‌ಸಿ ವಿದ್ಯಾರ್ಥಿ ಅನ್ಮೋಲ್ ಗಿಲ್ ಪತ್ತೆಹಚ್ಚಿದ್ದಾರೆ. ಆತನನ್ನು ಅನ್ಮೋಲ್ ಎಂದು ಪತ್ತೆ ಹಚ್ಚಿ ಪೊಲೀಸರು ಆತನ ಪೋಷಕರಿಗೆ ಅವವನ್ನು ಒಪ್ಪಿಸಿದ್ದಾರೆ. ಡಿಸೆಂಬರ್ 16ರಂದು ಅನ್ಮೋಲ್ ಗಿಲ್ ನಾಪತ್ತೆಯಾಗಿದ್ದ. ಕಳೆದೆರಡು ದಿನದಿಂದ ನಗರದ ವಿವಿಧ ಭಾಗದಲ್ಲಿ ಅನ್ಮೋಲ್ ಓಡಾಡಿದ್ದಾನೆ. ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿ ಅನ್ಮೋಲ್ ರಾತ್ರಿಯನ್ನು ಕಳೆದಿದ್ದಾನೆ. ಇಷ್ಟವಿಲ್ಲದ ಕೋರ್ಸ್ ಗೆ ಪೋಷಕರು ಸೇರಿಸಿ ಹಾಸ್ಟೆಲ್ ಗೆ ಕೂಡ ಸೇರಿಸಿದ್ದರು. ಹಾಸ್ಟೆಲ್ ಸೇರಿಸಿದ್ದು ಸೇರಿ ಹಲವು ಕಾರಣಕ್ಕೆ ಗಿಲ್ ಮನನೊಂದಿದ್ದ. ಸದ್ಯ ಅನ್ಮೋಲ್ ಪತ್ತೆ ಹಚ್ಚಿ ಪೋಷಕರಿಗೆ ಯಶವಂತಪುರ ಪೊಲೀಸರು ವಿಧಿಗೆ ಒಪ್ಪಿಸಿದ್ದಾರೆ. ಐಐಎಸ್ ಸಿ ಯಲ್ಲಿ ಅನ್ಮೋಲ್ ಗಿಲ್ ಎಂಟೆಕ್ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ಯಶವಂತಪುರ ಬಳಿ ಇರುವ ಐಐಅ ಎಸ್ ಸಿ ಕ್ಯಾಂಪಸ್…
ಬೆಂಗಳೂರು : ಸಾರ್ವಜನಿಕರಿಂದ ವ್ಯಾಪಕವಾದ ಅಂತಹ ದೂರುಗಳು ಬಂದಂತಹ ಹಿನ್ನೆಲೆಯಲ್ಲಿ ಇಂದು ಉಪಲೋಕಾಯುಕ್ತ ನ್ಯಾ.ಬಿ ವೀರಪ್ಪ ಹಾಗೂ ಎಸ್.ಪಿ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಬೆಂಗಳೂರಿನ ಎಂಬಿ ರಸ್ತೆಯ ಬೆಸ್ಕಾಂ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಹಾಗೂ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಕಡತ ಪರಿಶೀಲನೆ ಮಾಡುತ್ತಿದ್ದಾರೆ. ಬೆಸ್ಕಾಂ ಮತ್ತು ಜಲ ಮಂಡಳಿಯ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇದೀಗ ದಾಳಿ ಮಾಡಿದ್ದಾರೆ.
ಮಂಗಳೂರು : ಪಹಣಿ ಒಂದರಲ್ಲಿ ತಮ್ಮ ಹೆಸರನ್ನು ಸೇರಿಸಲು ಕಂದಾಯ ಇಲಾಖೆಯ ನಿರೀಕ್ಷಕನೊಬ್ಬ ವ್ಯಕ್ತಿಯ ಒಬ್ಬರ ಬಳಿ ನಾಲ್ಕು ಲಕ್ಷ ರೂಪಾಯಿಯ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಸಂದರ್ಭದಲ್ಲಿ ವ್ಯಕ್ತಿಯಿಂದ ನಾಲ್ಕು ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಕಂದಾಯ ನೀರಿಕ್ಷಕ ದಿನೇಶ್ ಎನ್ನುವ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ. ಹೌದು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಆರ್ ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ ಲಂಚಕ್ಕೆ ಆರ್ ಐ ಬೇಡಿಕೆ ಇಟ್ಟಿದ್ದ. ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರೂ ಕೂಡ ಒಂದು ವರ್ಷದಿಂದ ಕ್ರಮ ಕೈಗೊಂಡಿರಲಿಲ್ಲ. ಸರ್ಕಾರಿ ಕೆಲಸಕ್ಕೆ ಕಂದಾಯ ನಿರೀಕ್ಷಕ ದಿನೇಶ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುರಿತಂತೆ ಮಂಗಳೂರು ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಕೆಯಾಗಿತ್ತು ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್ ಪಿ ನಟರಾಜ್ ನೇತ್ರತ್ವದಲ್ಲಿ…
ನವದೆಹಲಿ : ರಾಜ್ಯಸಭಾಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತವಾಗಿದೆ.14 ದಿನಗಳ ನೋಟಿಸ್ ನೀಡಿಲ್ಲ ಮತ್ತು ಧನ್ಕರ್ ಅವರ ಹೆಸರನ್ನು ಸರಿಯಾಗಿ ಬರೆಯಲಾಗಿಲ್ಲ ಎಂಬ ಕಾರಣಕ್ಕಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಉಪಸಭಾಪತಿ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಡಿಸೆಂಬರ್ 10 ರಂದು ರಾಜ್ಯಸಭೆ ಸ್ಪೀಕರ್ ಜಗದೀಪ್ ಧನ್ಕರ್ ವಿರುದ್ಧ ಪ್ರತಿಪಕ್ಷಗಳ INDIA ಮೈತ್ರಿಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದರು. INDIA ಮೈತ್ರಿಕೂಟದ ಪಕ್ಷಗಳಾದ ಕಾಂಗ್ರೆಸ್, ತೃಣಮೂಲ, ಎಎಪಿ, ಎಸ್ಪಿ, ಡಿಎಂಕೆ ರಾಷ್ಟ್ರೀಯ ಜನತಾ ದಳದ 50ಕ್ಕೂ ಅಧಿಕ ಸಂಸದರು ಸಹಿ ಹಾಕಿರುವ ಅವಿಶ್ವಾಸ ನಿರ್ಣಯ ಪತ್ರವನ್ನು ರಾಜ್ಯಸಭೆಯ ಕಾರ್ಯದರ್ಶಿಗೆ ನೀಡಲಾಗಿತ್ತು. ಇದೀಗ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತವಾಗಿದೆ. ರಾಜ್ಯಸಭಾ ಸ್ಪೀಕರ್ ಸದನದಲ್ಲಿ ಕಲಾಪದ ವೇಳೆ ಪಕ್ಷಪಾತ ಮಾಡುತ್ತಾರೆ, ಅವರು ತಮ್ಮ ಭಾಷಣಗಳಿಗೆ ಆಗಾಗ್ಗೆ ಅಡ್ಡಿ ಪಡಿಸುತ್ತಿದ್ದಾರೆ, ನಿರ್ಣಾಯಕ ವಿಷಯಗಳ ಬಗ್ಗೆ ಸಾಕಷ್ಟು…
ಬೆಳಗಾವಿ : ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ಇಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲೂ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು ಈ ವೇಳೆ ಕಾಂಗ್ರೆಸ್ ವಿರುದ್ಧ ಕೂಡ ಪ್ರತಿಪಕ್ಷ ಬಿಜೆಪಿ ಹೋರಾಟ ಮಾಡಿತು ಈ ಸಂದರ್ಭದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಎಂಎಲ್ಸಿ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಟೀ ಕುಡಿದು ಸೀಮ್ ಸಿದ್ದರಾಮಯ್ಯ ಅವರು ಸಿ ಟಿ ರವಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಇದೊಂದು ಕ್ರಿಮಿನಲ್ ಆಫೆನ್ಸ್ ಆಗಿದೆ ಎಂದು ಕಿಡಿಕಾರಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಮಾತಿಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಈ ಸಂಬಂಧಪಟ್ಟ ಸಭಾಪತಿಗೆ ದೂರು ಕೊಟ್ಟಿದ್ದಾರೆ. ಪೊಲೀಸ್ ಠಾಣೆಯಲು ದೂರು ಸಲ್ಲಿಕೆ ಮಾಡುತ್ತಾರೆ. ಪೊಲೀಸರು ಏನು ಕ್ರಮ ತೆಗೆದುಕೊಳ್ಳುತ್ತಾರೆ ನೋಡೋಣ ಇದು ಕ್ರಿಮಿನಲ್ ಅಫೆನ್ಸ್ ಆಗಿದೆ ಎಂದು ತಿಳಿಸಿದರು. ಸಿಟಿ ರವಿ ಅವರ ಈ…
ಬೆಳಗಾವಿ : ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ಹೇಳಿಕೆಗೆ ಇಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲಿಯೂ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದರು. ಈ ವೇಳೆ ಬಿಜೆಪಿಯ ಸದಸ್ಯರು ಕೂಡ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಬೆಳಗಾವಿಯ ಸುವರ್ಣಸೌಧದ ಬಳಿ ಎಂಎಲ್ಸಿ ಸಿಟಿ ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಘೋಷಣೆ ಕೂಗಿ ಧಿಕ್ಕಾರ ಕೂಗಿದರು. ಹೌದು ಬಿಜೆಪಿಯ ಎಂ.ಎಲ್ ಸಿ ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಘೋಷಣೆ ಕೂಗಿದರು. ಅಶ್ಲೀಲ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲಾಯಿತು. ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಘೋಷಣೆ ಕೂಗಿದರು. ಸುವರ್ಣ ಸೌಧದ ಬಳಿ ಎಂಎಲ್ಸಿ ಸೀಟಿ ರವಿಗೆ ಮುತ್ತಿಗೆ ಹಾಕಲು…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, 2025 ಜನವರಿ 15ಕ್ಕೆ ಮುಂದೂಡಿದರು. ಅಲ್ಲದೇ ಅವತ್ತೇ ಈ ಒಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಲು ನಿರ್ಧರಿಸಿದೆ. ವಿಚಾರಣೆ ಆರಂಭವಾದ ಬಳಿಕ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್ ಜಾರಿಯಾಗಿದೆ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ಅವರು ವಾದ ಮಂಡಿಸಿದರು. ಹೈ ಕೋರ್ಟ್ ಎದುರಿನ ಬಿಲ್ಡಿಂಗ್ ನೋಟಿಸ್ ಜಾರಿಯಾಗಲು 35 ದಿನ ಸಮಯ ತಗುಲಿರುವುದು ಶಾಕಿಂಗ್ ವಿಚಾರ ಎಂದು ಇದೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು. ಈ ಸಂದರ್ಭದಲ್ಲಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದಂತಹ ಅಭಿಷೇಕ್ ಮನುಸಿಂಗ್ವಿ ಹಾಗೂ…
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಇಂದು ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯಕ್ಕಡಬೈಲು ಎಂಬ ಗ್ರಾಮದಲ್ಲಿ ಒಂಟಿ ಸಲಗಕ್ಕೆ 60 ವರ್ಷದ ಎಲಿಯಸ್ ಎನ್ನುವ ವ್ಯಕ್ತಿ ಇದೀಗ ಸಾವನಪ್ಪಿದ್ದಾರೆ. ಕಳೆದ 20 ದಿನದ ಅಂತರದಲ್ಲಿ ಇಬ್ಬರನ್ನು ಒಂಟಿ ಸಲಗ ಬಲಿ ಪಡೆದಿದೆ. ಯಕ್ಕಡಬೈಲು ಗ್ರಾಮದ ಬಳಿ 60 ವರ್ಷದ ಏಲಿಯಾಸ್ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ತಾಲೂಕಿನ ಯಕ್ಕಡ ಬೈಲು ಗ್ರಾಮದ ಈ ವ್ಯಕ್ತಿ ಮನೆಯ ಹಿಂಭಾಗದ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಇವರು ಬಲಿಯಾಗಿದ್ದಾರೆ. ಮುತ್ತಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಕ್ಕಡಬೈಲು ಎಂಬಲ್ಲಿ ಒಂದು ಘಟನೆ ನಡೆದಿದೆ.ಕೊಪ್ಪ ವಲಯ ಅರಣ್ಯ ವ್ಯಾಪ್ತಿಯಲ್ಲಿ ಒಂಟಿ ಸಲಗ ದಾಳಿ ಮಾಡಿದೆ. ಕಳೆದ 20 ದಿನದ ಹಿಂದೆ ಸೀತೂರು ಬಳಿ ಉಮೇಶ್ ಎನ್ನುವ ವ್ಯಕ್ತಿಯನ್ನು ಇದೇ ಒಂಟಿ ಸಲಗ ಬಲಿಪಡೆದಿತ್ತು. ಇದೀಗ 2ನೇ ಬಲಿ ಪಡೆದುಕೊಂಡಿದೆ.












