Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ A1 ಆರೋಪಿ ಎಂದು ಉಲ್ಲೆಖಿಸಿ FIR ದಾಖಲಿಸಲಾಗಿದೆ. ಹೌದು ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ A1 ಆರೋಪಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, A2 ಆರೋಪಿಯಾಗಿ ಇಡಿ, A3 ಕೇಂದ್ರ ಬಿಜೆಪಿ ಪದಾಧಿಕಾರಿಗಳು, A4 ಆರೋಪಿಯಾಗಿ ನಳಿನ್ ಕುಮಾರ್ ಕಟೀಲ್, A5 ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ A6 ಆರೋಪಿಗಳನ್ನಾಗಿ ಮಾಡಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಆದರ್ಶ ಅಯ್ಯರ್ ಎಂಬುವವರು ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ದೂರಿನ ಪ್ರತಿ, ದಾಖಲೆಗಳನ್ನು ಠಾಣೆಗೆ ಕಳುಹಿಸಲು ನಿನ್ನೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸೂಚನೆ ನೀಡಿತ್ತು. ಬೆಂಗಳೂರಿನ ತಿಲಕ ನಗರ ಠಾಣೆಗೆ ಕಳುಹಿಸುವಂತೆ ಜಡ್ಜ್…
ಮೈಸೂರು : ಮುಡಾ ಅಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿದೆ. ಇದೀಗ ಲೋಕಾಯುಕ್ತ ಎಸ್ ಪಿ ಉದೇಶ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳನ್ನು ರಚನೆ ಮಾಡಿದ್ದಾರೆ.ಇದೆ ವೇಳೆ ಸಿದ್ದರಾಮಯ್ಯ ಎಲ್ಲವನ್ನು ಸಹಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಏನು ಹೇಳಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ಇಂದು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ ಮತ್ತು ಕಲ್ಯಾಣ’ ಕೃತಿ ಬಿಡುಗಡೆಗೊಳಿಸಿ, ಸಂವಾದದಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿ, ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ. ಆದರೂ ಕೂಡ ಗ್ಯಾರಂಟಿಗಳಲ್ಲಿ ಜಾರಿ ಮಾಡಿದಾಗ ಹಲವು ಟೀಕೆ ಮಾಡುತ್ತಿದ್ದರು.…
ಬೆಂಗಳೂರು : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ, ನಳಿನ್ ಕುಮಾರ್ ಕಟೀಲ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿ ಹಲವರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆದರ್ಶ ಅಯ್ಯರ್ ಎಂಬುವವರು ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ದೂರಿನ ಪ್ರತಿ, ದಾಖಲೆಗಳನ್ನು ಠಾಣೆಗೆ ಕಳುಹಿಸಲು ನಿನ್ನೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸೂಚನೆ ನೀಡಿತ್ತು. ಬೆಂಗಳೂರಿನ ತಿಲಕ ನಗರ ಠಾಣೆಗೆ ಕಳುಹಿಸುವಂತೆ ಜಡ್ಜ್ ಸೂಚಿಸಿದ್ದರು. ಹಾಗಾಗಿ ಇದೀಗ ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡಲ್ಲ ಎಂದು ಪದೇಪದೇ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದು, ಈ ರೀತಿ ಪದೇಪದೇ ಹೇಳಿದರೆ ನೀವು ತಪ್ಪು ಮಾಡಿದ್ದೀರಿ ಎಂದು ಜನರಲ್ಲಿ ಭಾವನೆ ಮೂಡುತ್ತದೆ ಎಂದರು. ಇದೆ ವೇಳೆ ಸಿಎಂ ಪತ್ನಿ ಮುಗ್ದರು ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆ ತಾಯಿ ಎಂದೂ ಹೊರಬಂದವರಲ್ಲ. ಅವರು ಮುಗ್ದರು. ನೀವು ಈಗ ಅವರ ಸಹಿ ಹಾಕಿಸಿಕೊಂಡು ಅವರ ಹೆಸರಿನಲ್ಲಿ ಹಲವು ಸೈಟು ಮಾಡಿಸಿಕೊಂಡಿದ್ದೀರಿ. ಹೀಗಾಗಿ ಆ ತಾಯಿಗೆ ಯಾವುದೇ ತೊಂದರೆಯಾಗಬಾರದು ಎಂದು ನನ್ನ ಅಭಿಪ್ರಾಯ ಎಂದು ಈಶ್ವರಪ್ಪ ಹೇಳಿದ್ದಾರೆ. ಈ ಹಿಂದೆ ನಾನು ಏನೂ ತಪ್ಪು ಮಾಡಿಲ್ಲ. ನನ್ನ ಮೇಲೆ ಎಫ್ಐಆರ್ ಹಾಕಲಾಯಿತು. ಕೊನೆಗೆ ತನಿಖೆಯಾಗಿ ಕ್ಲೀನ್ ಚಿಟ್ ಬಂತು. ಆಗ ನನ್ನ ರಾಜೀನಾಮೆಗೆ ಇದೇ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ನಿಮಗೊಂದು ಕಾನೂನು ನಮಗೊಂದು ಕಾನೂನಾ. ಅದೇ…
ಮೈಸೂರು : ಮುಡಾ ಹಗರಣ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ 4 ತಂಡಗಳ ರಚನೆ ಮಾಡಲಾಗಿದೆ. ಲೋಕಾಯುಕ್ತ ಎಸ್ ಪಿ ಉದೇಶ, ಡಿವೈಎಸ್ಪಿಎಸ್ ಮಾಲತೀಶ್, ಚಾಮರಾಜನಗರ ಡಿ ವೈ ಎಸ್ ಪಿ ಮ್ಯಾಥ್ಯು ಥಾಮಸ್ ಹಾಗೂ ಇನ್ಸ್ಪೆಕ್ಟರ್ ಸೇರಿದಂತೆ 4 ತಂಡಗಳನ್ನು ರಚನೆ ಮಾಡಲಾಗಿದೆ. ಈ ವೇಳೆ ಲೋಕಾಯುಕ್ತ ಎಸ್ ಪಿ ಉದೇಶ ಎಲ್ಲಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಓದಿಕೊಂಡು ಇದೀಗ ತಂಡಗಳು ಪಾಯಿಂಟ್ಸ್ ಮಾಡಿಕೊಳ್ಳುತ್ತಿದ್ದಾರೆ. ಕೇಸಿನ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ, ಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ರಾಮನಗರ : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆಗೆ ಒಳಪಡಿಸಲಿದ್ದಾರೆ. ಇದರ ಮಧ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದರೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು? ಇಲ್ಲಿದೆ ವಿವರ ರಾಮನಗರ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಸೇವೆ ಮಾಡಬೇಕು ಅಂತ ಅಂದುಕೊಂಡಿದ್ದೇನೆ. ಜೊತೆಗೆ ದೊಡ್ಡ ಹೋರಾಟವೂ ಕೂಡ ನಡೆಯುತ್ತಿದೆ ಈಗ ಮಾತನಾಡಿದರೆ ವಿವಿಧ ರೀತಿಯಲ್ಲಿ ಬಿಂಬಿಸುತ್ತಾರೆ. ಕನಕಪುರ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಹಾಗಾಗಿ ರಾಜ್ಯದ ಸೇವೆ ಮಾಡಬೇಕು ಅಂತ ದೊಡ್ಡ ಪ್ರಯತ್ನ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಹಾಗಾಗಿ ಮತ್ತೆ ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದರಾ ಎಂಬ ಅನುಮಾನ ದಟ್ಟವಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ಬಾರಿ…
ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಎಫ್ಐಆರ್ ವಿಚಾರದ ಕುರಿತಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಹಿಂದೂ ದೇವರ ಆಶೀರ್ವಾದ ಪಡೆದುಕೊಂಡು ಮುಸ್ಲಿಮರನ್ನು ಓಲೈಸುತ್ತಾರೆ. ನಾವು ಎರಡು ಮಕ್ಕಳು ಎಂದರೆ ಮುಸ್ಲಿಂರು ಹಮ್ ಪಾಂಚ್ ಹಮಾರಾ ಪಂಚಿಸ್ ಅಂತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೌದು ಸಿದ್ದರಾಮಯ್ಯ ಅವರು ಕುಂಕುಮ ಹಚ್ಚಿಕೊಳ್ಳಲು ಹಿಂದೇಟು ಹಾಕ್ತಿದ್ದರು. ಪೇಟ ತೊಟ್ಟುಕೊಳ್ಳಲು ನಿರಾಕರಣೆ ಮಾಡುತ್ತಿದ್ದರು. ಆದರೆ ಈಗ ಚಾಮುಂಡಿ ದರ್ಶನ ಯಾಕೆ ಪಡೆಯುತ್ತಿದ್ದಾರೆ? ಎಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಹಿಂದೂ ದೇವಸ್ಥಾನದಲ್ಲಿ ಆಶೀರ್ವಾದ ಪಡೆಯುತ್ತಾರೆ. ಆದರೆ ಮುಸ್ಲಿಮರ ಪರ ಕೆಲಸ ಮಾಡುತ್ತಾರೆ.ಎಸ್ ಟಿ ಎಸ್ ಸಿ ಸಮುದಾಯದ ಹಣ ನುಂಗಿದ್ದಿರಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನುಂಗಿ ನೀರು ಕುಡಿದ್ರಿ. ಹಾಲುಮತದ ಸಮುದಾಯಕ್ಕೆ ಈವರೆಗೂ ಏನು ಮಾಡಿಲ್ಲ. ಆದರೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜಕೀಯ ನಾಯಕರ ಪರಸ್ಪರ ವಾಕ್ಸಮರ ತಾರಕಕ್ಕೆ ಏರಿದ್ದು, ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ನನ್ನ ಬಳಿ ಇರುವ ದಾಖಲೆಗಳನ್ನು ಏನಾದರೂ ಬಿಡುಗಡೆ ಮಾಡಿದರೆ ಐದರಿಂದ ಆರು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಬೆಳಗ್ಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ,ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ.ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ ಹೆಚ್ಡಿಕೆ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್ಐಆರ್ ಆಗಿದೆ.…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಒಂದು ತೀರ್ಪಿನ ಕುರಿತಾಗಿ ಸಚಿವ ಜಮೀರ್ ಅಹ್ಮದ್ ಹೈಕೋರ್ಟ್ ಆದೇಶ ರಾಜಕೀಯ ತೀರ್ಪು ಆಗಿದೆ ಎಂದು ಲಘುವಾಗಿ ಮಾತನಾಡಿದ್ದರು.ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಟಿಜೆ ಅಬ್ರಹಾಂ ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಲಘುವಾಗಿ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಈ ಒಂದು ತೀರ್ಪು ಕುರಿತು, ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ಹೈಕೋರ್ಟ್ ಆದೇಶ ರಾಜಕೀಯ ತೀರ್ಪು ಎಂದು ಹೇಳಿದ್ದರು. ಇದು ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ಈ…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಶಿರೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇರಳ ಮೂಲದ ಚಾಲಕ ಅರ್ಜುನ್ ನ ಮರಣೋತ್ತರ ಪರೀಕ್ಷೆ ಅಂತ್ಯವಾಗಿದೆ. 73 ದಿನದ ಬಳಿಕ ಅರ್ಜುನನ ಮೃತ ದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಹೌದು, ಕಾರವಾರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೇರಳ ಮೂಲದ ಚಾಲಕ ಅರ್ಜುನ ಮೃತ ದೇಹದ ಮರಣೋತ್ತರ ಪರೀಕ್ಷೆ ಅಂತ್ಯವಾಗಿದ್ದು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ದಿನಗಳ ಹಿಂದೆ ಗಂಗಾವಳಿ ನದಿಯಲ್ಲಿ ಚಾಲಕ ಅರ್ಜುನ್ ಹಾಗೂ ಆತನ ಲಾರಿ ಪತ್ತೆಯಾಗಿತ್ತು . ಇದೀಗ ಮೃತ ದೇಹವನ್ನು ವೈದ್ಯರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು, ಜಿಲ್ಲಾಡಳಿತದಿಂದ ಪ್ರಕೃತಿ ವಿಕೋಪದ ಅಡಿ 5 ಲಕ್ಷ ಪರಿಹಾರ ವಿತರಿಸಲಾಗಿದೆ











