Author: kannadanewsnow05

ನವದೆಹಲಿ : ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಐದು ಬಾರಿ ಸಂಸದರಾಗಿ ಸಂಸತ್ ಪ್ರವೇಶಿಸಿರುವ ಪ್ರಹ್ಲಾದ ಜೋಶಿ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಹ್ಲಾದ್ ಜೋಶಿ ಅವರು ಸತತವಾಗಿ 5 ಬಾರಿ ಸಂಸದರಾಗಿ ಸಂಸತ್ತು ಪ್ರವೇಶಿಸಿದ್ದಾರೆ. 2004ರಲ್ಲಿ ಧಾರವಾಡ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿದ್ದು, 2009 ರಂದು ಮತ್ತೆ ಎರಡನೇ ಬಾರಿಗೆ ಸಂಸದರಾಗಿದ್ದಾರೆ. 2014 ರಂದು ಧಾರವಾಡ ಕ್ಷೇತ್ರದಿಂದ ಮೂರನೇ ಬಾರಿಗೆ ಸಂಸದರಾಗಿದ್ದು, 2019 ರಂದು ಧಾರವಾಡ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದಾರೆ. 2019 ರಲ್ಲಿ ಕೇಂದ್ರ ಸರ್ಕಾರದ ವ್ಯವಹಾರ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ.…

Read More

ನವದೆಹಲಿ : ಕೇಂದ್ರ ಸಚಿವರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಮೋದಿ ಸಚಿವ ಸಂಪುಟದಲ್ಲಿ ಮೊದಲಿಗರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇದಕ್ಕೂ ಮೊದಲು ಕೇಂದ್ರ ಸಚಿವರಾಗಿ ಜೆಪಿ ನಡ್ದ, ನಿತಿನ್ ದಡ್ಕರಿ ಅಂಬ್ಚ್ ಷಾ ರಾಜನಾಥ್ ಸಿಂಗ್, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

Read More

ನವದೆಹಲಿ: ಇಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಒಂದೆಡೆಯಾದರೆ, ಇನ್ನೊಂದೆಡೆ ಮಿತ್ರಪಕ್ಷ ಎನ್‌ಸಿಪಿ ಸಚಿವ ಸ್ಥಾನದ ವಿಷಯದಲ್ಲಿ ಅಸಮಾಧಾನ ಹೊರಹಾಕಿದೆ. ಹೌದು ಈ ಕುರಿತಂತೆ ಉಪಮುಖ್ಯಮಂತ್ರಿ ಅಜಿತ್‌ ಪವಾ‌ರ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದ ಪ್ರಫುಲ್ ಪಟೇಲ್‌ ಅವರು ಕ್ಯಾಬಿನೆಟ್‌ ದರ್ಜೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಈಗ ಸ್ವತಂತ್ರ ಖಾತೆ ರಾಜ್ಯ ಸಚಿವ ಸ್ಥಾನ ನೀಡುವುದಾಗಿ ಹೇಳುತ್ತಿದ್ದಾರೆ. ಇದುಸೂಕ್ತವಲ್ಲ. ಹಾಗಾಗಿ, ಕೆಲ ದಿನಗಳ ಕಾಲ ನಾವು ಕಾಯಲು ಸಿದ್ಧವಿದ್ದೇವೆ. ನಮಗೆ ಸಂಪುಟ ದರ್ಜೆಯೇ ಬೇಕು ಎಂದು ಎನ್‌ಸಿಪಿ ಅಧ್ಯಕ್ಷ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾ‌ರ್ ಹೇಳಿದ್ದಾರೆ. ಇದೇವೇಳೆ, ಇಂದಿನ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ ಅವರು, ಸದ್ಯ ನಾವು ಒಂದು ಲೋಕಸಭಾ ಮತ್ತು ಒಂದು ರಾಜ್ಯಸಭಾ ಸ್ಥಾನ ಹೊಂದಿದ್ದೇವೆ. ಮುಂದಿನ 2-3 ತಿಂಗಳಲ್ಲಿ ರಾಜ್ಯಸಭೆಯಲ್ಲಿ ನಮ್ಮ ಸಂಖ್ಯೆ 3ಕ್ಕೆ ಏರಲಿದೆ. ಒಟ್ಟಾರೆ ನಮ್ಮ ಪಕ್ಷದ ಸಂಸತ್ ಸದಸ್ಯರ ಸಂಖ್ಯೆ 4ಕ್ಕೆ ಏರಲಿದೆ. ಹಾಗಾಗಿ,…

Read More

ಹಾವೇರಿ : ಹಾವೇರಿ ರೈಲು ನಿಲ್ದಾಣದ ಬಳಿ ಇರುವ ಓವರ್ ಬ್ರಿಡ್ಜ್​ನಲ್ಲಿ ಅಕ್ರಮವಾಗಿ ಸುಮಾರು 7.91 ಲಕ್ಷ ಮೌಲ್ಯದ 10 ಕೆ.ಜಿ ಗಾಂಜಾವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ನಗರ ಠಾಣೆಯ ಪೊಲೀಸರು ದಾಳಿ ಮಾಡಿ, ಗಾಂಜಾವನ್ನು ಜಪ್ತಿ ಮಾಡಿಕೊಂಡಿದ್ದು ನಾಲ್ವರನ್ನು ಇದೆ ವೇಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಿಳ್ಳೆಪ್ಪ ಮಲ್ಲಪ್ಪ ಅಳಲಗೇರಿ, ಫಾರೂಕ್ ಅಹ್ಮದ್​ ಕುಂಚೂರು, ಇಸ್ಮಾಯಿಲ್ ನದಾಫ್​ ಮತ್ತು ಸಾಹಿಲ್ ಕರ್ಜಗಿ ಎಂದು ಗುರುತಿಸಲಾಗಿದೆ. ಹಾವೇರಿ ರೈಲು ನಿಲ್ದಾಣದ ಬಳಿ ಇರುವ ಓವರ್ ಬ್ರಿಡ್ಜ್​ನಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದಾಗ ನಾಲ್ವರು ಆರೋಪಿಗಳು ಪೊಲೀಸರಿಗೆ ಸೆರೆಸಿಕ್ಕಿದ್ದಾರೆ. ಹಾವೇರಿಯ ನಾಲ್ವರು ಆರೋಪಿಗಳು ಒಡಿಶಾದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಚಿಲ್ಲರೆ ಗ್ರಾಹಕರಿಗೆ ಮಾರಾಟ ಮಾಡಲು ಗಾಂಜಾವನ್ನು ರೈಲಿನ ಮೂಲಕ ಹಾವೇರಿಗೆ ತಂದಿದ್ದರು. ಖಚಿತ ಮಾಹಿತಿ ಮೇರೆಗೆ ಹಾವೇರಿ ನಗರ ಪೊಲೀಸ್ ಠಾಣೆಯ ಸಿಪಿಐ ಮೋತಿಲಾಲ್ ಪವಾರ್ ಮತ್ತು ತಂಡ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿತ್ತು. ಅಲ್ಲದೆ ನಾಲ್ವರು ಆರೋಪಿಗಳನ್ನು ಬಂಧಿಸಿ…

Read More

ಮಹಾರಾಷ್ಟ್ರ : 3ನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿಯಲು ನರೇಂದ್ರ ಮೋದಿ ಅವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 7:00 15 ನಿಮಿಷಕ್ಕೆ ಮೋದಿಯವರು ಪ್ರಧಾನಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇದರ ಮಧ್ಯ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಭೀ ನಡೆಯುತ್ತಿದ್ದು ಈ ಬಾರಿ ಬಿಜೆಪಿ ಅಜಿತ್ ಪವಾರ್ ಬಣದ ಎನ್ ಸಿಪಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿಲ್ಲ. ಅಜಿತ್ ಪವಾರ್ ಬಣ್ಣದ ಎನ್ ಸಿ ಪಿ ಗೆ ಸಚಿವ ಸ್ಥಾನ ನೀಡದ ವಿಚಾರವಾಗಿ ಎನ್‌ಸಿಪಿ ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿಕೆಯನ್ನು ನೀಡಿದ್ದು, ರಾಜ್ಯ ದರ್ಜೆಯ ಸಚಿವ ಸ್ಥಾನ ನೀಡುವುದಾಗಿ ನೆನ್ನೆ ರಾತ್ರಿ ಹೇಳಿದ್ದರು. ನಾನು ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ ಅದರಿಂದ ಇದು ನನಗೆ ಹಿನ್ನಡೆಯಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ನಾವು ಕೇಳಿದ್ದೇವೆ ಕೆಲದಿನ ಕಾಯುವಂತೆ ಬಿಜೆಪಿ ಹೈಕಮಾಂಡ್ ಹೇಳಿದೆ. ಬಿಜೆಪಿ ನಾಯಕರು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಎಂಸಿಪಿ ಹಿರಿಯ ನಾಯಕ…

Read More

ಹುಬ್ಬಳ್ಳಿ : ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು 2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಈ ವೇಳೆ ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪರಶುರಾಮ್ ದಾವಣಗೆರೆ ಅವರಿಗೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್​ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆ ಹಿನ್ನೆಲೆ? ಕಳೆದ 2023 ಡಿಸೆಂಬರ್ 30ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು.ಈ ವೇಳೆ…

Read More

ಬೆಂಗಳೂರು : ದೇಶವನ್ನು ಮುನ್ನಡೆಸಲು ದೇಶವನ್ನು ಅಭಿವೃದ್ಧಿ ಕಡೆ ಕರೆದೋಯ್ಯಲು ಹಾಗೂ ಸಂವಿಧಾನದ ಆಶಯವನ್ನು ಅನುಷ್ಠಾನಕ್ಕೆ ತರುವುದು ಮೋದಿಯವರ ಅಜೆಂಡವಾಗಿದೆ ಎಂದು ಬಿಜೆಪಿಯ ಮಾಜಿ ಸಚಿವ ಸಿಟಿ ರವಿ ಅವರು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಿಂದ ಐವರಿಗೆ ಸಚಿವರಾಗೋದಕ್ಕೆ ಅವಕಾಶ ಸಿಕ್ಕಿದೆ. ಮೋದಿಯವರ ಸಂಪುಟದಲ್ಲಿ ಸಚಿವರಾಗುವುದು ಎಂದರೆ ಅವರಿಗೂ ಒಂದು ಗೌರವ. ರಾಜಕೀಯವನ್ನು ಗೌರವ ಹಾಗಾಗಿ ನಾನು ಅವರಿಗೆ ಶುಭ ಹಾರೈಸುತ್ತೇನೆ.ರಾಜ್ಯ ಮತ್ತು ದೇಶದ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ನಿಮ್ಮ ಸಮರ್ಥ್ಯವನ್ನು ಉಪಯೋಗಿಸಿ ಅಭಿವೃದ್ಧಿ ಕೆಲಸಗಳಲ್ಲಿ ದೇಶಕ್ಕೆ ಒಳ್ಳೆಯದಾಗಲಿ ಅಂತ ನಿರೀಕ್ಷೆ ಇಟ್ಕೊಂಡು ಶುಭ ಹಾರೈಸುತ್ತೇನೆ. ಇನ್ನೂ ಮೈತ್ರಿ ಕುರಿತಂತೆ ಮಾತನಾಡಿದ ಅವರು, ರಾಜಕಾರಣ ದೃಷ್ಟಿಯಿಂದ ಅಷ್ಟೇ ನೋಡೋಕೆ ಬಯಸುವುದಿಲ್ಲ. ಅವರಿಂದ ರಾಜ್ಯ ಮತ್ತು ದೇಶಕ್ಕೆ ಒಳ್ಳೆಯದಾಗಬೇಕು. ಪಕ್ಷದ ರಾಜಕಾರಣ ಚುನಾವಣೆ ಬಂದಾಗ ಮಾಡೋಣ ಈಗ ನಾವು ಮಾಡಬೇಕಾಗಿರುವುದು ರಾಷ್ಟ್ರದ ರಾಜಕಾರಣ ರಾಜ್ಯ ಹಿತದ ರಾಜಕಾರಣ ರಾಜ್ಯ ಹಿತ ಮತ್ತು ರಾಷ್ಟ್ರ ಹಿತ ರಾಜಕಾರಣ ಎರಡು ಆಗಲಿ…

Read More

ಒಡಿಶಾ : ಒಡಿಶಾ ವಿಧಾನ ಸಭಾ ಚುನಾವಣೆಯಲ್ಲಿ ಬಿಜು ಜನತಾ ದಳ (ಬಿಜೆಡಿ) ಗೆ ಸೋಲು ಹಿನ್ನೆಲೆಯಲ್ಲಿ ಇದೀಗ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ಸಕ್ರಿಯ ರಾಜಕೀಯಕ್ಕೆ ವಿಕೆ ಪಾಟೀಲ್ ನಿವೃತ್ತಿ ಘೋಷಿಸಿದ್ದಾರೆ. ಹೌದು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಬಿಜು ಜನತಾ ದಳ (ಬಿಜೆಡಿ) ಮುಖಭಂಗ ಅನುಭವಿಸಿದ ನಂತರ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ವಿಕೆ ಪಾಂಡಿಯನ್ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

Read More

ದಾವಣಗೆರೆ : ದೇಶ ಎಷ್ಟೇ ಮುಂದುವರೆದರು ಎಷ್ಟೇ ಅಭಿವೃದ್ಧಿ ಹೊಂದಿದರು ಕೂಡ ರೈತರು ಆತ್ಮಹತ್ಯೆ ಮಾಡಿಕೊಳ್ಳೋದು ನಿಂತಿಲ್ಲ. ಇದೀಗ ರೈತನೊಬ್ಬ ಬ್ಯಾಂಕ್ ನಲ್ಲಿ ಸಾಲ ಮಾಡಿದ್ದ. ಬರಗಾಲದ ಹೊಡೆತ ಹಾಗೂ ಅವಮಾನ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಹನುಮಂತಪ್ಪ(42) ಆತ್ಮಹತ್ಯೆ ಮಾಡಿಕೊಂಡ ರೈತ. ಮನೆ ಮೇಲೆ 4 ಲಕ್ಷ್, ಕುರಿ ಮೇಲೆ 2.60 ಲಕ್ಷ ರೂ. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದ ರೈತ. ಆದರೆ ಮರುಪಾವತಿಸಲು ಸಾಧ್ಯವಾಗದ್ದರಿಂದ ರೈತನಿಗೆ ನೋಟಿಸ್ ನೀಡಿದ್ದ ಬ್ಯಾಂಕ್. ಸಾಲ ಮರುಪಾವತಿ ಮಾಡದ ಹಿನ್ನೆಲೆ ಮನೆ ಹರಾಜಿಗೆ ಬ್ಯಾಂಕ್ ನೋಟಿಸ್ ನೀಡಿತ್ತು. ಇಷ್ಟು ದೊಡ್ಡ ಮಟ್ಟದ ಸಾಲ ಮಾಡಿದ್ದ ಹನುಮಂತಪ್ಪ ಸಾಲ ತೀರಿಸಲಾಗದೆ ಒದಡುತ್ತಿದ್ದ ಒಂದು ಕಡೆ ಮನೆ ಹರಾಜಿಗೆ ಬಂದಂತಹ ಬ್ಯಾಂಕ್ ನವರಿಂದ ಅವಮಾನ ಇನ್ನೊಂದು ಕಡೆ ಬರಗಾಲದಿಂದ ಕೈಕೊಟ್ಟ ಬೆಳೆ ಹೀಗಾಗಿ ಹೆದರಿಕೊಂಡು ರೈತ ಹನುಮಂತಪ್ಪ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ದಾವಣಗೆರೆ…

Read More

ಬೆಂಗಳೂರು : ಕಳೆದ ವರ್ಷ ಮಳೆಯಾಗದೆ ತೀವ್ರ ಬರಗಾಲ ಎದುರಿಸಿದ್ದ ರಾಜ್ಯ ಇದೀಗ ಈ ಬಾರಿ ವಾಡಿಗೆಯಂತೆ ಮಳೆಯಾಗುತ್ತಿದ್ದು ಜನರಲ್ಲಿ ಹಾಗೂ ರೈತರಲ್ಲಿ ಸಂತಸ ಉತ್ತರಿಸಿದೆ ಇದೀಗ ಬೆಂಗಳೂರಿನಲ್ಲಿ ಹಲವು ಪ್ರದೇಶಗಳಲ್ಲಿ ಮಧ್ಯಾಹ್ನದಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರದ ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ, ಲಾಲ್​ಬಾಗ್, ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ ಸದಾಶಿವನಗರ, ಶಿವಾಜಿನಗರ, ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ಹೆಬ್ಬಾಳ, ಯಲಹಂಕ​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಳೆ ಹಿನ್ನಲೆ ವಾಹನ ಸವಾರರು ರಸ್ತೆಯಲ್ಲಿ ತೀವ್ರ ಪರದಾಟ ನಡೆಸಿದರು. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.11ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಉತ್ತರ ಕರ್ನಾಟಕದ ಕೆಲವೆಡೆ ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ.ಹಾಗಾಗಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಪರಿಣಾಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More