Author: kannadanewsnow05

ಬೆಂಗಳೂರು : ಹಣ ಡಬ್ಬಲಿಂಗ್ ಮಾಡುವುದಾಗಿ ನಂಬಿಸಿ ಸುಮಾರು ಎರಡು ಕೋಟಿ ಹಣ ವಂಚಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದ್ದು, ಸದ್ಯ ಆರೋಪಿಗಳನ್ನು ಇದೀಗ ಬೆಂಗಳೂರಿನ ಹಲಸೂರು ಗೇಟ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಇದೀಗ 7 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಶ್ಯಾಮ್ ಥಾಮಸ್, ಜೋಶ್ ಕರುವಿಲ್ಲ, ಜಾಫರ್ ಸಾಧಿಕ್ ಅಲಿಯಾಸ್ ದೀಪಕ್, ಜೀನ್ ಕಮಲ್, ವಿಜಯ್ ಚಿಕ್ಲೋಂಕರ್ ಅಲಿಯಾಸ್ ರವಿ, ಅಮಿತ್ ಅಲಿಯಾಸ್ ದೀಪಕ್, ಊರ್ವಶಿ ಗೋಸ್ವಾಮಿ ಅಲಿಯಾಸ್ ಸೋನು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದ್ದು ಬಂಧಿತರಿಂದ ಸುಮಾರು 44 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. PWD ಕಾಂಟ್ರಾಕ್ಟರ್ ನವೀನ್ ಎಂಬತರಿಗೆ 2 ಕೋಟಿ ಹಣ ವಂಚಿಸಿದ್ದಾರೆ. ಪ್ರಾರಂಭಿಕವಾಗಿ ಒಂದು ಲಕ್ಷ ಹಣ ಆರ್ಟಿಜಿಎಸ್ ಮಾಡಿದ್ದರು. ನಗರದಲ್ಲಿ ಲಾಕರ್ ಇಲ್ಲ ಅಂತ ಆರೋಪಿಗಳು ಹೇಳಿದ್ದರು. ನಗದು ಕೊಟ್ಟರೆ ಡಬಲ್ ಮಾಡಿ ಕೊಡುವುದಾಗಿ ಆಮೀಷ ಒಡ್ಡಿದ್ದಾರೆ. ಆರ್ ಟಿ ಜಿ ಎಸ್ ಮೂಲಕ ಹಣ…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆ ಅತ್ಯಂತ ಪ್ರಸಿದ್ಧವಾಗಿದ್ದು, ಈ ಒಂದು ಚಿಕ್ಕಲ್ಲೂರು ಜಾತ್ರೆಯ ಸಿದ್ದಪ್ಪಾಜಿ ಯವರ ಜಾತ್ರೆ ಪ್ರತಿ ವರ್ಷ ಅತ್ಯಂತ ವಿಜ್ರಂಭಣೆಯಿಂದ ನಡೆಯುತ್ತಿದ್ದು,ಕಳೆದ ಹಲವು ವರ್ಷಗಳಿಂದ ಇಲ್ಲಿ ಪ್ರಾಣಿ ಬಲಿ ನೀಡುವ ಪದ್ಧತಿ ಇತ್ತು. ಆದರೆ ಈ ಬಾರಿ ಚಾಮರಾಜನಗರದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಾಣಿ, ಪಕ್ಷಿ ಬಲಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಹೌದು ಇಂದಿನಿಂದ 5 ದಿನಗಳ ಕಾಲ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆ ನಡೆಯಲಿದೆ. ಈ ಬಾರಿ ದೇವಸ್ಥಾನದ ಆವರಣ ಗ್ರಾಮದ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದೆ. ಪ್ರಾಣಿ ಬಲಿ ನಿಶದಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಟ್ಯಾಟೂ & ಹಚ್ಚೆ ಹಾಕಿಸ್ಕೊಳ್ಳೋದಕ್ಕೂ ಜಿಲ್ಲಾಡಳಿತ ಇದೀಗ ಬ್ರೇಕ್ ಹಾಕಿದೆ. ಲಕ್ಷಾಂತರ ಭಕ್ತರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಸೇರುತ್ತಾರೆ. ಪ್ರಾಣಿವಧೆ ನಿಷೇಧಿಸಿ ಡಿಸಿ ಆದೇಶ  ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ಅನ್ವಯ ಜನವರಿ 13…

Read More

ಬೆಂಗಳೂರು : ಇದೆ ಜನವರಿ 26ರಂದು ದೇಶದಲ್ಲೇಡೆ ಗಣರಾಜ್ಯೋತ್ಸವ ಆಚರಿಸುತ್ತಿದ್ದು ಈ ಸಂದರ್ಭದಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದಂತೆ ಬೆಂಗಳೂರಿನ ವಿವಿಧೆಡೆ, ಬಾಂಬ್ ಸ್ಪೋಟಿಸುವುದಾಗಿ ಅಪರಿಚಿತನ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಅಪಚಿತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಗಣರಾಜೋತ್ಸವದ ಸಂದರ್ಭದಲ್ಲಿ ನಗರದ ವಿವಿಧೆಡೆ ಬಾಂಬ್ ಸ್ಫೋಟವಾಗಲಿದೆ ಎಂದು ಬೆಂಗಳೂರು ಪೊಲೀಸ್ ಕಂಟ್ರೋಲ್ ರೂಮ್‌ಗೆ ಅಪರಿಚಿತನೊಬ್ಬ ಕರೆ ಮಾಡಿದ್ದಾನೆ.ಜನವರಿ 9ರಂದು ಸಂಜೆ 5:30ರ ಸುಮಾರಿಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್‌ಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್‌ಗೆ ಕರೆ ಮಾಡಿದ್ದ ಅಪರಿಚಿತ, 6 ಜನರ ಹೆಸರು ಹಾಗೂ ವಿಳಾಸಗಳನ್ನು ತಿಳಿಸಿ ರಾಮೇಶ್ವರಂ ಕೆಫೆಯಲ್ಲಿ ಈ ಹಿಂದೆ ಬಾಂಬ್ ಸ್ಫೋಟವಾದಂತೆ ಆರು ಜನರು ಗಣರಾಜ್ಯೋತ್ಸವದ ದಿನ ನಗರದ ವಿವಿಧೆಡೆ ಬಾಂಬ್ ಸ್ಫೋಟಿಸಲು ಉದ್ದೇಶಿಸಿದ್ದಾರೆ ಎಂದು ಹೇಳಿದ್ದಾನೆ. ಮೇಲ್ನೋಟಕ್ಕೆ ಇದೊಂದು ಹುಸಿ ಬೆದರಿಕೆ ಎಂದು ಕಂಡುಬಂದಿದ್ದು, ಪೊಲೀಸ್ ಕಂಟ್ರೋಲ್…

Read More

ಕಲಬುರ್ಗಿ : ತಡರಾತ್ರಿ ಕಲಬುರ್ಗಿಯಲ್ಲಿ ಬಸ್ ಹಾಗು ಟ್ಯಾಂಕರ್ ನಡುವೆ ಬೀಕರವಾದ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಬಸ್ ಚಾಲಕ ಸೇರಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿ ಪಟ್ಟಣ ಹೊರವಲಯದಲ್ಲಿ ನಡೆದಿದೆ. ತಡರಾತ್ರಿ ಈ ಒಂದು ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಜೇವರ್ಗಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಬಸ್ ಚಾಲಕನಿಗೆ ಮತ್ತು ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಯಡ್ರಾಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ಕಳೆದ ಜನವರಿ 9 ರಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಈ ಒಂದು ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ತಾಲೋಕ್ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಿ ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಹೌದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುತಾಲಿಕ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಸಕಲೇಶಪುರದಲ್ಲಿ ಜನವರಿ 9ರಂದು ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಮುತಾಲಿಕ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪ ಕೇಳಿ ಬಂದಿತ್ತು. ಸದ್ಯ ಸಕಲೇಶಪುರ ಠಾಣೆಗೆ ಪೊಲೀಸ್ ಸಿಬ್ಬಂದಿ ಎಂ ಕೆ ಶ್ರೀಧರ್ ದೂರು ನೀಡಿದ್ದಾರೆ. ಅವರ ದೂರಿನ ಅನ್ವಯ BNS 2023 U/S-196(1) 353(2) 3(5)ರ ಅಡಿ ಕೇಸ್ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಅಗ್ನಿ ಅವಘಡಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ತಾನೇ ಬೆಂಗಳೂರಿನ, ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಾಯಗೊಂಡಿರುವ ಘಟನೆ ನಡೆದಿದೆ.ಇದರ ಬೆನ್ನಲ್ಲೇ ಇದೀಗ, ನೆಲಮಂಗಲದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಗಾರ್ಮೆಂಟ್ಸ್ ಒಂದಕ್ಕೆ ಬೆಂಕಿ ತೆಗೆದು ಸುಮಾರು 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆಗಳು ಕರಕಲಾಗಿರುವ ಘಟನೆ ನಡೆದಿದೆ. ಹೌದು ನೆಲಮಂಗಲದ ಬಳಿ ಆರ್.ಎ ಫ್ಯಾಶನ್ ಗಾರ್ಮೆಂಟ್ಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರುಣ್ ಮತ್ತು ಶಿವುಗೆ ಎಂಬುವರಿಗೆ ಸೇರಿದ ಗಾರ್ಮೆಂಟ್ಗೆ ಬೆಂಕಿ ತಗುಲಿದೆ. ಈ ಒಂದು ಅಗ್ನಿ ಅವಘಡದಲ್ಲಿ ಗಾರ್ಮೆಂಟ್ಸ್ನಲ್ಲಿದ್ದ ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ಬಟ್ಟೆಗಳು ಸೇರಿದಂತೆ ಇನ್ನೂ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಪಿಣ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಇದೀಗ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ಪೀಣ್ಯ ಪೊಲೀಸ್…

Read More

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ವ್ಯಕ್ತಿ ಒಬ್ಬನನ್ನು ಇಬ್ಬರು ಹಂತಕರು ಕೊಂದಿದ್ದಾರೆ. ಬಳಿಕ ಇದು ಸಹಜ ಸಾವು ಎಂದು ಬಿಂಬಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಆಗಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಮೂಡಲಗಿ ಬಾರ್ ಒಂದರಲ್ಲಿ ಈ ಒಂದು ಘಟನೆ ಸಂಭವಿಸಿದೆ.  ಲಕ್ಷ್ಮಣ್ ಮರಣೂರು ಎನ್ನುವ ವ್ಯಕ್ತಿಯ ಕೊಲೆಯಾಗಿದ್ದು,  ರಂಗಪ್ಪ ಪಾಟೀಲ್ ಮತ್ತು ಈರಪ್ಪ ತುಂಗಳ ಅವರು ಲಕ್ಶ್ಮಣ ಜೊತೆ ಗಲಾಟೆ ಮಾಡಿದ್ದಾರೆ. ಇಬ್ಬರು ಸಹ ಲಕ್ಷ್ಮಣನ ಜೊತೆ ಜಗಳ ಮಾಡಿದ್ದು, ಹಲ್ಲೆ ನಡೆಸಿ ಕೊಂದಿದ್ದಾರೆ. ಲಕ್ಷ್ಮಣ್ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಕೂಡ ಮೊಬೈಲ್ ನಲ್ಲಿ ಸೆರೆಯಾಗಿದೆ. ಸ್ಥಳೀಯರ ಒಬ್ಬರ ಮೊಬೈಲಲ್ಲಿ ಈ ಒಂದು ವಿಡಿಯೋ ಸೆರೆಯಾಗಿದೆ. ರಂಗಪ್ಪ ಪಾಟೀಲ್ ಮತ್ತು ಈರಪ್ಪ ತುಂಗಳ ಕೊಲೆ ಆರೋಪಿಗಳು, ಕೊಲೆ ಮಾಡಿ ಇದು ಸಹಜ ಸಾವು ಎಂದು ಬೆಂಬಲಿಸಲು ಇಬ್ಬರು ಆರೋಪಿಗಳು ಮುಂದಾಗಿದ್ದರು. ಆದರೆ  ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ಪೊಲೀಸ್ರು ಅರೆಸ್ಟ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ಸಿಲಿಂಡರ್ ಬ್ಲಾಸ್ಟ್ ಘಟನೆಯಲ್ಲಿ , ದಿಜುಧಾರ್, ಅಂಜಲಿದಾಸ್, ಮನುಶ್ರೀ, ತಿಪ್ಪರುದ್ರಸ್ವಾಮಿ, ಮನು, ಶೋಭಾ, ಕರೀಬುಲ್ಲ ಎಂಬುವರು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ 7 ಜನರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಗೆ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ ಸದ್ಯ ಘಟನಾ ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಿಕ್ಕಬಳ್ಳಾಪುರ : ತಮ್ಮ ಮಗಳ ನಾಮಕರಣ ಸಿದ್ಧತೆಯಲ್ಲಿದ್ದಂತಹ ಪತ್ರಕರ್ತರೊಬ್ಬರು ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ದೇವಾಲಯಕ್ಕೆ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಮಾಚಹಳ್ಳಿ ಕೆರೆ ಏರಿಯ ಮೇಲೆ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರನ್ನು ಗುಂಡಿಬಂಡೆ ಮೂಲದ ಭರತ್ (32) ಎಂದು ತಿಳಿದುಬಂದಿದ್ದು, ವೇಗವಾಗಿ ಬಂದು ದೇವಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಭರತ್ ಮೃತಪಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗುಡಿಬಂಡೆ ಪಟ್ಟಣದಿಂದ ಬಾಗೇಪಲ್ಲಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ದೇವಾಲಯಕ್ಕೆ ಡಿಕ್ಕಿ ಹೊಡೆದಿದೆ. ಭರತ್ ತಮ್ಮ ಮಗಳ ನಾಮಕರಣ ಸಿದ್ಧತೆಯಲ್ಲಿರುವಾಗಲೇ ಈ ಒಂದು ದುರಂತ ಸಂಭವಿಸಿದ್ದು, ಕುಟುಂಬಸ್ಥರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ.

Read More

ಉತ್ತರಕನ್ನಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು ಚಲಿಸುತ್ತಿರುವ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಚರಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿ ಸಂಚರಿಸುತ್ತಿದ್ದ 5 ಜನರ ಪೈಕಿ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮೃತರನ್ನು ದಂಪತಿಗಳೆಂದು ತಿಳಿದು ಬಂದಿದ್ದು, ಈ ಒಂದು ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿಯ 63 ರ ಬೊಳೆಯ ಜಮಗೋಡ ಬಳಿ ಭಾನುವಾರ ಸಂಜೆ ನಡೆದಿದೆ. ಮುಂಬಯಿ ಅಂದೇರಿಯ ನಾಗೇಂದ್ರ ಸದಾಶಿವ ಭಟ್ಕಳ (72) ಹಾಗೂ ಇವರ ಪತ್ನಿ ಸುಧಾ ನಾಗೇಂದ್ರ ಭಟ್ಕಳ (65) ಮೃತ ಪಟ್ಟವರು.ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು ನಮಿತಾ ನಿತ್ಯಾನಂದ ನಾಯಕ (56), ದೀಪ್ತಿ ವಿಶ್ವಾಸ ಪ್ರಭು (36) ಹಾಗೂ ಮಂಗಳೂರಿನ ನಿತ್ಯಾನಂದ ವಾಮನ ನಾಯಕ ಗಾಯಗೊಂಡವರು. ದೀಪ್ತಿ ವಿಶ್ವಾಸ ಪ್ರಭು ಅವರಿಗೆ ಗಂಭೀರ ಸ್ವರೂಪ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ನಾಗೇಂದ್ರ ಸದಾಶಿವ ಭಟ್ಕಳ ಅವರ ಕುಟುಂಬದವರು ಮಂಗಳೂರಿನಿಂದ ಅಂಕೋಲಾದ ಶ್ರೀ ಲಕ್ಷ್ಮೀನಾರಾಯಣ…

Read More