Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ನಿನ್ನೆ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇರಿವುದರಿಂದ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೀಗ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಅನುಭವಿ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ ಕುರ್ಚಿಯಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬರುತ್ತದೆ ಎಂಬ ಯತೀಂದ್ರ ಅವರ ಹೇಳಿಕೆಗೆ ಗುರುವಾರ ಪ್ರತಿಕ್ರಿಯಿಸಿದ ಗೃಹ ಸಚಿವರು, ಯತೀಂದ್ರ ಅವರು ಹೇಳಿದ ಮೇಲೆ ಆಯ್ತಲ್ಲ. ನಾನು ಮಾತನಾಡುವುದೇನಿದೆ? ಈ ವಿಚಾರದಲ್ಲಿ ಏನನ್ನೂ ಮಾತನಾಡುವುದಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾದರೆ ನಾವು ಸ್ವಾಗತಿಸುತ್ತೇವೆ. ಖರ್ಗೆ ಅವರು ಹಿರಿಯರು, ಅವರ ಸಮಕಾಲೀನರೆಲ್ಲ ಮುಖ್ಯಮಂತ್ರಿ ಆಗಿದ್ದಾರೆ. ವೀರಪ್ಪ ಮೊಯ್ಲಿ, ಗುಂಡೂರಾವ್‌ ಎಲ್ಲರೂ ಮುಖ್ಯಮಂತ್ರಿ ಆಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಐವತ್ತು ವರ್ಷದ ಸಾಧನೆಯಲ್ಲಿ ಹೈಕಮಾಂಡ್‌ ಅವರಿಗೆ…

Read More

ಬೆಂಗಳೂರು : ಬೆಂಗಳೂರು: ತರಬೇತಿ ನಿರತ ಗಗನಸಖಿಯೊಬ್ಬರ(Air Hostess) ಮೇಲೆ ರಸ್ತೆಯಲ್ಲೇ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಬಂಧಿತ ಚಂದ್ರಶೇಖರ್ ಮತ್ತು ಸಂತ್ರಸ್ತ ಯುವತಿ ಇಬ್ಬರೂ ಪರಿಚಯಸ್ಥರಾಗಿದ್ದು, ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಆರಂಭದಲ್ಲಿ ಇಬ್ಬರ ನಡುವೆ ಸ್ನೇಹವಿತ್ತು. ಆದರೆ ಇತ್ತೀಚೆಗೆ ಆರೋಪಿ ಚಂದ್ರಶೇಖರ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸಲು ಆರಂಭಿಸಿದ್ದ ಎನ್ನಲಾಗಿದೆ. ಯುವಕನ ವರ್ತನೆಯಿಂದ ಬೇಸತ್ತಿದ್ದ ಯುವತಿ ಆತನನ್ನು ಸಂಪೂರ್ಣವಾಗಿ ದೂರ ಮಾಡಲು ಮುಂದಾಗಿದ್ದಳು. ನಡೆದಿದ್ದೇನು?: ನಗರದ ಖಾಸಗಿ ಏವಿಯೇಷನ್ ಅಕಾಡೆಮಿಯೊಂದರಲ್ಲಿ ಗಗನಸಖಿ ತರಬೇತಿ ಪಡೆಯುತ್ತಿದ್ದ ಸಂತ್ರಸ್ತೆ, ತನ್ನ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದ ರಸ್ತೆಯಲ್ಲಿ ಯುವತಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದರು. ಇದನ್ನೇ ಹೊಂಚು ಹಾಕಿದ್ದ ಆರೋಪಿ ಚಂದ್ರಶೇಖರ್, ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲೇ ಅಡ್ಡಗಟ್ಟಿದ್ದಾನೆ. ಬಳಿಕ ಆಕೆಯ ಮೇಲೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಲು…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮುರಗಮಲ್ಲಾದಲ್ಲಿ ಮೃತ್ಯು ದರ್ಶನವಾಗಿದೆ. ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ಪ್ರಾಣದ ಹಂಗು ತೊರೆದು ರಕ್ಷಿಸಲು ಹೋದ ತಾಯಿಯೋರ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಂಗಳೂರಿನ ಬನಶಂಕರಿ ನಿವಾಸಿ ತಬುಸುಮ್ ಖಾನ್ (24) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಬೆಂಗಳೂರಿನಿಂದ ಕುಟುಂಬ ಸಮೇತ ಮುರಗಮಲ್ಲಾದ ದರ್ಗಾಕ್ಕೆ ಭೇಟಿ ನೀಡಲು ಈ ತಂಡ ಆಗಮಿಸಿತ್ತು. ದರ್ಶನದ ನಂತರ ಎಲ್ಲರೂ ಸೇರಿ ಹತ್ತಿರದಲ್ಲೇ ಇರುವ ಕೆರೆಯ ಬಳಿ ವಿಶ್ರಾಂತಿ ಪಡೆಯಲು ತೆರಳಿದ್ದರು. ಈ ಸಂದರ್ಭದಲ್ಲಿ ಕುಟುಂಬಸ್ಥರು ಕೆರೆಯ ದಡದಲ್ಲಿ ಕಾಲ ಕಳೆಯುತ್ತಿದ್ದರು. ಸ್ವಲ್ಪ ದೂರದಲ್ಲಿದ್ದ ಬಟ್ಟೆಯನ್ನು ತರಲೆಂದು ತಾಯಿ ತಬುಸುಮ್ ಖಾನ್ ಅವರು ತೆರಳಿದ್ದಾಗ, ಮಕ್ಕಳು ಕೆರೆಯ ನೀರಿನಲ್ಲಿ ಆಟವಾಡಲು ಹತ್ತಿರ ಹೋಗಿದ್ದಾರೆ. ಮಕ್ಕಳನ್ನು ಉಳಿಸಲು ಹೋದ ತಾಯಿ: ಮಕ್ಕಳು ಆಟವಾಡುತ್ತಾ ಆಳವಾದ ಪ್ರದೇಶಕ್ಕೆ ಹೋದಾಗ ನೀರಿನಲ್ಲಿ ಮುಳುಗಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡ ತಾಯಿ ತಬುಸುಮ್ ಅವರು ಕ್ಷಣಾರ್ಧದಲ್ಲಿ ಧಾವಿಸಿ…

Read More

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯ ಜೊತೆ ರಾಸಲೀಲೆ ವಿಡಿಯೋ ಇಟ್ಟುಕೊಂಡು ಕಾಮುಕನೊಬ್ಬ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಆರ್ ಆರ್ ನಗರ ಪೊಲೀಸ್ರಿಂದ ಆರೋಪಿ ಚಂದ್ರೇಗೌಡನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಚಂದ್ರೇಗೌಡ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದು, ನಾನು ಪೊಲೀಸ್, ರಿಪೋರ್ಟರ್, ವಕೀಲ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಅಲ್ಲದೇ ಹಲವು ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ ಚಂದ್ರೆಗೌಡ ನನಗೆ ಡಿವೋರ್ಸ್ ಆಗಿದ್ದು ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ. ಅಲ್ಲದೆ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಹಾಗೆಯೇ ಜೊತೆಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ. ಆ ವೇಳೆ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲೆ ಮಾಡಿದ್ದಾನೆ ನಂತರ ಬೆದರಿಕೆ ಒಡ್ಡಿ 5 ಲಕ್ಷ ಹಣವನ್ನು ಕೂಡ ಚಂದ್ರೇಗೌಡ ಪಡೆದುಕೊಂಡಿದ್ದಾನೆ. ಸದ್ಯ ಪೊಲೀಸರು ಕಿರಾತಕನನ್ನು ಅರೆಸ್ಟ್ ಮಾಡಿದ್ದಾರೆ. ಚಂದ್ರೇಗೌಡನ ಮೊಬೈಲ್ ನಲ್ಲಿ ರಾಸಲೀಲೆ ವಿಡಿಯೋಗಳು ಇದ್ದು ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿದ್ದ ವಿಡಿಯೋಗಳು ಪತ್ತೆಯಾಗಿವೆ.…

Read More

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಈಗ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರವನ್ನು 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಪರಿಷ್ಕೃತ ದರವು ಇಂದಿನಿಂದಲೇ ಜಾರಿಗೆ ಬರಲಿದೆ. ದರ ಏರಿಕೆಗೆ ಕಾರಣವೇನು? ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗವು (KERC) ಈ ಬೆಲೆ ಏರಿಕೆಗೆ ಅನುಮೋದನೆ ನೀಡಿದೆ. ಬೆಸ್ಕಾಂ ಎದುರಿಸುತ್ತಿರುವ ಸುಮಾರು 2,000 ಕೋಟಿ ರೂಪಾಯಿಗಳ ಆರ್ಥಿಕ ನಷ್ಟವನ್ನು ಸರಿದೂಗಿಸಲು ಮತ್ತು ಇಂಧನ ಹೊಂದಾಣಿಕೆ ವೆಚ್ಚವನ್ನು (Fuel Adjustment Cost) ಸರಿದೂಗಿಸಲು ಈ ಕ್ರಮ ಅನಿವಾರ್ಯ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ಯಾವ ಜಿಲ್ಲೆಗಳಿಗೆ ಅನ್ವಯ? ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಒಟ್ಟು ಎಂಟು ಜಿಲ್ಲೆಗಳ ಗ್ರಾಹಕರಿಗೆ ಈ ಹೊರೆ ಬೀಳಲಿದೆ: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ರಾಮನಗರ, ಚಿತ್ರದುರ್ಗ ಮತ್ತು ದಾವಣಗೆರೆ. ಗ್ರಾಹಕರ ಮೇಲೆ ಬೀರುವ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ಮದ್ಯದ ಅಮಲಿನಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು, ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಪುಂಡರ ಅಟ್ಟಹಾಸ ಇದೀಗ ಮಿತಿಮೀರಿದೆ. ಮನೆಗಳ ಕಿಟಕಿ ಮತ್ತು ಗಾಜುಗಳನ್ನು ಹೊಡೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ಲಾಂಗ್ ಹಿಡಿದು ಓಡಾಡಿದ್ದಾರೆ. ರಸ್ತೆಗಳಲ್ಲಿ ಸಿಕ್ಕ ಸಿಕ್ಕವರನ್ನು ಮಚ್ಚಿನಿಂದ ಪುಂಡರು ಬೆದರಿಸಿದ್ದಾರೆ. ಪುಂಡರ ಅಟ್ಟಹಾಸದ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ನೀಡಿದ ಮನೆಗಳ ಕಿಟಕಿ ಮತ್ತು ಗಾಜುಗಳನ್ನು ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಇದನ್ನು ಪ್ರಶ್ನಿಸಿದ ಅಕ್ಕಪಕ್ಕದವರಿಗೂ ಮಚ್ಚು ತೋರಿಸಿ ಬೆದರಿಸಿದ್ದಾರೆ. ಪೊಲೀಸರಿಗೆ ಹೇಳಿದರೆ ಮುಗಿಸಿ ಬಿಡುತ್ತೇವೆ ಎಂದು ಪುಂಡರು ಬೆದರಿಸಿದ್ದಾರೆ ಗಲಾಟೆಯ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ ಏಪ್ರಿಲ್ 25 ರಂದು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಪುಂಡರ ಹಟಹಾಸಕ್ಕೆ ಜನರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಲೇಔಟ್ ಜನರು ಆಗ್ರಹಿಸಿದ್ದಾರೆ

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಖದೀಮರ ಅಟ್ಟಹಾಸ ಮುಂದುವರಿದಿದ್ದು, ನೆಲಮಂಗಲದ ಹತ್ತಿರವಿರುವ ಹಾವನೂರು ಲೇಔಟ್‌ನಲ್ಲಿ ಭೀಕರ ದರೋಡೆಯೊಂದು ನಡೆದಿದೆ. ಸಿನಿಮಾ ಶೈಲಿಯಲ್ಲಿ ಜುವೆಲರಿ ಶಾಪ್‌ನ ಗೋಡೆ ಕೊರೆದ ಕಳ್ಳರು, ಕೋಟ್ಯಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ. ಗೋಡೆ ಕೊರೆದು ಕನ್ನ ಹಾಕಿದ ಖದೀಮರು ಹಾವನೂರು ಲೇಔಟ್‌ನಲ್ಲಿರುವ ‘ಎಂ.ಬಿ. ಜುವೆಲರ್ಸ್’ ಮಳಿಗೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು, ಅತ್ಯಂತ ವ್ಯವಸ್ಥಿತವಾಗಿ ಈ ಕೃತ್ಯ ಎಸಗಿದ್ದಾರೆ. ಅಂಗಡಿಯ ಹಿಂಭಾಗದ ಗೋಡೆಯನ್ನು ಕೊರೆದು ಒಳ ನುಗ್ಗಿರುವ ಕಿರಾತಕರು, ಒಳಗಿದ್ದ ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಅಂಗಡಿಯಲ್ಲಿದ್ದ ಸಿಸಿಟಿವಿ ಹಾಗೂ ಭದ್ರತಾ ವ್ಯವಸ್ಥೆಗಳ ಕಣ್ಣು ತಪ್ಪಿಸಿ ಈ ಕಳವು ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 1.2 ಕೋಟಿ ಮೌಲ್ಯದ ಬೆಳ್ಳಿ ಮಾರುಕಟ್ಟೆ ಪಾಲು ಪ್ರಾಥಮಿಕ ವರದಿಗಳ ಪ್ರಕಾರ, ಸುಮಾರು 70 ಕೆಜಿ ತೂಕದ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಇದರ ಒಟ್ಟು ಮೌಲ್ಯ ಸುಮಾರು 1.2 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಕಳ್ಳರು ಕೇವಲ ಬೆಳ್ಳಿ ಆಭರಣಗಳ ಮೇಲೆ ಕಣ್ಣಿಟ್ಟಿದ್ದರೋ ಅಥವಾ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆ ಒಂದು ನಡೆದಿದ್ದು, ಲಿವಿಂಗ್ ರಿಲೇಶನ್ ಶಿಪ್ ನಲ್ಲಿ ಇದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಯುವತಿಯನ್ನು ಮೇಘಾಲಯದ ಅಗತ ಬೈತಿಯಂಅಂಗಂ (34) ಎಂದು ತಿಳಿದು ಬಂದಿದೆ. ಫ್ಯಾನ್ ಗೆ ನೇಣು ಬಿಗಿದುಕೊಂಡು ಆಗತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಳೆದ ಬುಧವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ವರ್ಷಗಳಿಂದ ಯುವತಿ ಲಿವಿಂಗ್ ರಿಲೇಶನ್ ಶಿಪ್ ನಲ್ಲಿ ಇದ್ದಳು. ಈಕೆ 26 ವರ್ಷದ ನವಾಜ್ ಶರೀಫ್ ಜೊತೆಗೆ ಲಿವಿಂಗ್ ರಿಲೇಶನ್ಶಿಪ್ ನಲ್ಲಿ ಇದ್ದಳು. ಸಂಜೀವಿನಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಕಳೆದ ಬುಧವಾರ ಕೂಡ ಗಲಾಟೆ ನಡೆದ ಸಂದರ್ಭದಲ್ಲಿ ಯುವಕ ನವಾಜ್ ಶರೀಫ್ ಹೊರಗಡೆ ಹೋಗಿದ್ದಾನೆ ಈ ವೇಳೆ ಈಕೆ ನೀಡುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆ ಘಟನೆ ಬಂದು ಗುಡಿ ಆರ್ ಪ್ರಕರಣ ದಾಖಲಿಸಿದ್ದು, ಆಕೆ ಮರಣೋತ್ತರ…

Read More

ಬೆಂಗಳೂರು : ಕಳೆದ ಕೆಲವು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ, ಕೈದಿಗಳು ಮೊಬೈಲ್ ಬಳಕೆ ಮಾಡುವುದು ಸೇವನೆ ಸಿಗರೇಟ್ ಸೇರದಂತೆ ಇತರೆ ಅಕ್ರಮ ಚಟುವಟಿಕೆಗಳು ನಡೆಸುತ್ತಿದ್ದು ಬೆಳಕಿಗೆ ಬಂದಿದ್ದು,  ಅಲ್ಲದೆ ಪೊಲೀಸರು ದಾಳಿ ಮಾಡಿ ಪ್ರಕರಣಗಳನ್ನು ದಾಖಲು ಮಾಡಿದ್ದರು. ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಕೈದಿ ಒಬ್ಬ ಮೊಬೈಲ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ. ಜೈಲಲ್ಲಿ ಇದ್ದುಕೊಂಡೆ ವಿಚಾರಣಾ ದೀನ ಕೈದಿ ಒಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದಾನೆ. ಸೆಲ್ ನಲ್ಲಿ ಕುಳಿತು ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದಾನೆ. ಅಧಿಕಾರಿಗಳ ಕಣ್ಣು ತಪ್ಪಿಸಿ ಮತ್ತೆ ಮೊಬೈಲ್ ಬಳಕೆ ಆಗಿದೆ ವಿಚಾರಣಾಧೀನ ಕೈದಿ ಅಕ್ಬರ್ ನಿಂದ ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದಾನೆ. ಏಪ್ರಿಲ್ 9ರಂದು ಇನ್ಸ್ಟಾಗ್ರಾಮ್ ನಲ್ಲಿ ತನ್ನ ಪತಿಯ ಜೊತೆಗೆ ವಿಡಿಯೋ ಕಾಲ್ ನಲ್ಲಿ ಮಾತನಾಡಿರುವಂತಹ ವಿಡಿಯೋವನ್ನು ಪತ್ನಿ ಶೇರ್ ಮಾಡಿದ್ದಾಳೆ. ಆದರೆ ಅಕ್ಬರ್ ಏಪ್ರಿಲ್ 28ರಂದು ಜೈಲಿನಿಂದ ರಿಲೀಸ್ ಆಗಿದ್ದಾನೆ. ಆದರೆ ವಿಚಾರಣೆಯನ್ನು ಎದುರಿಸುತ್ತಿದ್ದ ಜೈಲಿನಲ್ಲಿದ್ದಾಗಲೇ…

Read More

ಬೆಂಗಳೂರು: ಚುನಾವಣೆ ಅಥವಾ ಯಾವುದೇ ರಾಜಕೀಯ ಉದ್ದೇಶಗಳಿಗಾಗಿ ಧಾರ್ಮಿಕ ಸ್ಥಳಗಳನ್ನು ಬಳಸುವುದು ಕಾನೂನುಬಾಹಿರ ಮತ್ತು ಅಕ್ಷಮ್ಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಶಿವಮೊಗ್ಗದ ದೇವಸ್ಥಾನವೊಂದರಲ್ಲಿ ರಾಜಕೀಯ ಸಭೆ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧದ ಕಾನೂನು ಕ್ರಮಗಳಿಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಕೆ.ಎಸ್. ಈಶ್ವರಪ್ಪ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಾಲಯ, ಧಾರ್ಮಿಕ ಕೇಂದ್ರಗಳ ದುರ್ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು. ನ್ಯಾಯಾಲಯದ ಕಠಿಣ ನಿಲುವು: ವಿಚಾರಣೆ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, “ರಾಜಕೀಯ ಕಾರಣಗಳಿಗಾಗಿ ನೀವು ಧಾರ್ಮಿಕ ಸ್ಥಳಗಳನ್ನು ಬಳಕೆ ಮಾಡುವಂತಿಲ್ಲ. ದೇವಸ್ಥಾನ,…

Read More