Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಟ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಬೈಕ್ ಸವಾರ ಫುಡ್ ಡೆಲಿವರಿ ಬಾಯ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಕಾಡುಗೋಡಿ ನಿವಾಸಿ ಫಕೀರ್ ಅಹಮದ್ (28) ಎಂದು ಗುರುತಿಸಲಾಗಿದೆ.ಅಸ್ಸಾಂ ಮೂಲದ ಫಕೀರ್ ಅಹಮದ್ ಅವರು ಎರಡು ವರ್ಷಗಳಿಂದ ಬೆಂಗಳೂರಿನ ಕಾಡುಗೋಡಿಯಲ್ಲಿ ವಾಸವಾಗಿದ್ದರು. ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಪಟ್ಟಂದೂರು ಮೆಟ್ರೊ ನಿಲ್ದಾಣದ ಮಾರ್ಗವಾಗಿ ವೈಟ್ ಫೀಲ್ಡ್ ಕಡೆಗೆ ತೆರಳುವಾಗ ಹಿಂದಿನಿಂದ ಬಂದ ಟ್ರ್ಯಾಕ್ಟರ್ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬೈಕ್‌ನಿಂದ ಕೆಳಕ್ಕೆ ಬಿದ್ದ ಫಕೀರ್ ಅಹಮದ್ ತಲೆಗೆ ಗಂಭೀರ ಪೆಟ್ಟುಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.ಟ್ರ್ಯಾಕ್ಟರ್ ಜಪ್ತಿ ಮಾಡಲಾಗಿದ್ದು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಹಾಸನದಲ್ಲಿ ತಾಯಿ ಹಾಗೂ ಇಬ್ಬರ ಮಕ್ಕಳ ಸಾವು ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಪ್ರಯಕರನಿಂದಲೇ ತಾಯಿ ಹಾಗೂ ಇಬ್ಬರ ಮಕ್ಕಳ ಹತ್ಯೆಯಾಗಿದೆ ಎಂದು ಪೋಲೀಸರ ತನಿಖೆಯ ವೇಳೆ ಬಯಲಾಗಿದೆ. ಜನೆವರಿ 1 ರಂದು ಹಾಸನದಲ್ಲಿ ತಾಯಿ ಹಾಗೂ ಇಬ್ಬರ ಮಕ್ಕಳನ್ನು ಹತ್ಯೆಗೈಯ್ದಿದ್ದ ವಿಜಯಪುರ ಮೂಲದ ನಿಂಗಪ್ಪ ಕಾಗವಾಡನನ್ನು ಪೆನ್ಷನ್ ಮೊಹಲ್ಲಾ ಪೊಲೀಸರು ಬಂಧಿಸಿದ್ದಾರೆ. ಪತಿ ಇಲ್ಲದ ವೇಳೆ ಹಣಕ್ಕಾಗಿ ಶಿವಮ್ಮ ಹಾಗೂ ಇಬ್ಬರು ಮಕ್ಕಳನ್ನು ನಿಂಗಪ್ಪ ಹತ್ಯೆ ಮಾಡಿದ ಎಂದು ತಿಳಿದುಬಂದಿದೆ. ತಾಯಿ ಶಿವಮ್ಮ ಮಕ್ಕಳದ ಪವನ್ (10)ಹಾಗೂ ಸಿಂಚನ (8) ಹತ್ಯೆಗೀಡಾದ ದುರ್ದೈವಿಗಳು.ಕಾರು ಚಾಲಕನೆಂದು ನಿಂಗಪ್ಪನನ್ನು ಪರಿಚಯ ಮಾಡಿಕೊಂಡಿದ್ದ ಶಿವಮ್ಮ. ವಿಜಯಪುರದಲ್ಲಿ ಶಿವಮಮ್ಮ ಪತಿ ತೀರ್ಥ ಪ್ರಸಾದ್ ಬೇಕರಿ ಇಟ್ಟಿದ್ದರು.ಬೇಕರಿ ಲಾಸ್ ಆಗಿದ್ದರಿಂದ ತೀರ್ಥಪ್ರಸಾದ್ ಅದನ್ನ ಮುಚ್ಚಿ ವಾಪಸ್ ಬಂದಿದ್ದರು.ಬಳಿಕ ತುಮಕೂರು ಬೇಕರಿಯಲ್ಲಿ ಶಿವಮ್ಮ ಪತಿ ತೀರ್ಥ ಪ್ರಸಾದ ಕೆಲಸ ಮಾಡುತ್ತಿದ್ದರು. ಈ ವೇಳೆ ಆರೋಪಿ ನಿಂಗಪ್ಪನ ಜೊತೆ ಶಿವಮ್ಮ ಸಲುಗೆಯಿಂದ ಇದ್ದಳು ಎನ್ನಲಾಗುತ್ತಿದ್ದು, ಹೊಸ ವರ್ಷಚರಣೆಗಾಗಿ…
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರಕ್ಕೆ ತೆರಳಲಿದ್ದು ಮಹಾರಾಷ್ಟ್ರದ ಸಹಕಾರ ಚಳುವಳಿ ನಾಯಕ ಬಾಹುಸಾಹೇಬ ಥರೋಟ್ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಸಹಕಾರ ಚಳುವಳಿ ನಾಯಕ ಬಾಹುಸಾಹೇಬ ಥರೋಟ್ ಕಾರ್ಯಕ್ರಮ ನಡೆಯಲಿದೆ.ಮಹಾರಾಷ್ಟ್ರಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಲ್ಲಿ ಇಂದು ಆಯೋಜಿಸಿರುವ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಬೆಳಗ್ಗೆ 9:30ಕ್ಕೆ ಎಚ್ ಎ ಎಲ್ ನಿಂದ ವಿಶೇಷ ವಿಮಾನದಲ್ಲಿ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ ಶಿರಡಿಗೆ ತೆರಳಲಿದ್ದಾರೆ. ಶಿರಡಿಯಲ್ಲಿ ಸಾಯಿಬಾಬಾ ದರ್ಶನಕ್ಕೆ ಸಿದ್ದರಾಮಯ್ಯ ಅವರು ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿರಡಿಯಿಂದ ಥರೋಟ ಜನ್ಮದಿನೋತ್ಸವಕ್ಕೆ ಕಾರ್ಯಕ್ರಮಕ್ಕೆ ತೆರಳ್ಳಲಿದ್ದು ಕಾರ್ಯಕ್ರಮ ಮುಗಿಸಿ ಸಂಜೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಕಾಂಗ್ರೆಸ್ ಸಚಿವರ, ಶಾಸಕರ ಹೇಳಿಕೆಗಳು ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಆದ್ದರಿಂದ ಬಿ.ಕೆ. ಹರಿಪ್ರಸಾದ್ ಅವರನ್ನ ಮಂಪರು ಪರೀಕ್ಷೆಗೆ ಒಳಪಡಿಸಬೇಕು ಈ ನಿರ್ಧಾರವನ್ನ ಮುಖ್ಯಮಂತ್ರಿಗಳು ತಕ್ಷಣ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸಚಿವರ, ಶಾಸಕರ ಹೇಳಿಕೆಗಳು ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ ಎಂದು ಆರೋಪಿಸಿದರು. ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ವಿಚಾರದಲ್ಲಿ ಹಿಂದೂ ಕಾರ್ಯಕರ್ತರನ್ನ ಬೆದರಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡ್ತಿದೆ. ಮತ್ತೊಂದು ಕಡೆ ಅಲ್ಪಸಂಖ್ಯಾತರನ್ನ ಓಲೈಸುವ ಕೆಲಸ ಮಾಡ್ತಿದೆ. ಹಿಂದೂ ಕಾರ್ಯಕರ್ತರನ್ನ ಬಂಧಿಸೋದು. ಯಾರು ಪೊಲೀಸ್ ಸ್ಟೇಷನ್ ಗೆ ಬೆಂಕಿ ಇಟ್ಟವರನ್ನ ಅಮಾಯಕರು ಅನ್ನೋದು. ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ. ಇದನ್ನ ನಾವು ಖಂಡಿಸುತ್ತೇವೆ ಎಂದು ಅವರು ಕಿಡಿಕಾರಿದರು.
ಬೆಂಗಳೂರು : ಬೆಂಗಳೂರು ನಗರದ ಓಲ್ಡ್ ಮದ್ರಾಸ್ ರಸ್ತೆಯ ಬಹುಮಹಡಿ ಕಟ್ಟಡದಲ್ಲಿರುವ ನಿರ್ವಾಣ ಸ್ಪಾ ಮೇಲೇ ಸಿಸಿಬಿ ದಾಳಿ ನಡೆಸಿದ್ದರಿಂದ ವೇಶ್ಯಾವಾಟಿಕೆ ದಂಧೆ ಬಯಲಾಗಿದೆ. ಸ್ಪಾ ಮಾಲೀಕ ಅನೀಲ್ ಎಂದು ಹೇಳಲಾಗುತ್ತಿದ್ದು, ಬೇರೆ ರಾಜ್ಯದಿಂದ ಆಗಮಿಸಿ ಇಲ್ಲಿ ಸ್ಪಾ ನಡೆಸುತ್ತಿದ್ದ, ಆದರೆ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದದ್ದು ಬಯಲಾಗಿದೆ. ಆರೋಪಿಯೂ ಹೊರ ರಾಜ್ಯ ವಿದೇಶದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗುತ್ತಿದೆ. ಸಿಸಿಬಿ ಮಹಿಳಾ ಸಂರಕ್ಷಣಾ ದಳವು ದಾಳಿ ನಡೆಸಿದ ವೇಳೆ ಒಟ್ಟು 44 ಮಹಿಳೆಯರನ್ನು ಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಹುಮಡಿ ಕಟ್ಟಡದ 1 ಮತ್ತು 6ನೇ ಫ್ಲೋರ್ ನಲ್ಲಿ ಈ ದಂದೆ ನಡೆಯುತ್ತಿತ್ತು. ಹೊರ ರಾಜ್ಯ ಹಾಗೂ ದೇಶದಿಂದ ಯುವತಿಯರನ್ನು ಕರೆದೊಯ್ದು ಆರೋಪಿ ವೇಶ್ಯಾವಾಟಿಕೆಯಲ್ಲಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಯನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಸುಮಾರು 15 ಜನರ ಪುಂಡರ ಗುಂಪೊಂದು ನೈತಿಕ ಪೊಲೀಸ್ ಗಿರಿ ನಡೆಸಿದ್ದು ಯುವಕನೋರ್ವನನ್ನು ಕೋಣೆಯಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಅಂತಹ ಘಟನೆ ಜರುಗಿದೆ. ಗೌಡಗಾಂವ ಗ್ರಾಮದ ಸಚಿನ್ (22) ಮುಸ್ಕಾನ್ (23) ಮೇಲೆ ಹಲ್ಲೆ ಮಾಡಲಾಗಿದ್ದು, ಇಬ್ಬರು ಸರ್ವರ್ ಸಮಸ್ಯೆ ಹಿನ್ನೆಲೆ ಕಿಲ್ಲ ಕೆರೆ ಬಳಿ ಜೋಡಿ ಕೂತಿದ್ದರು ಎನ್ನಲಾಗುತ್ತಿದೆ. ಈ ವೇಳೆ ಅಲ್ಲಿಗೆ ವಂದ ಸುಮಾರು 15ಕ್ಕೂ ಹೆಚ್ಚು ಪುಂಡರಿಂದ ಯುವಕ ಹಾಗೂ ಯುವತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಲ್ಲೆಗೆ ಒಳಗಾದವರನ್ನು ಸಚಿನ್ ಲಂಬಾಣಿ ಹಾಗೂ ಮುಸ್ಕಾನ್ ಪಟೇಲ್ ಎಂದು ಗುರುತಿಸಲಾಗಿದ್ದು, ಇಬ್ಬರ ಮೇಲೆ ಮೇಲೆ ಪುಂಡರು ಹಲ್ಲೆಗೈದಿದ್ದಾರೆ. ಕೆರೆ ಬಳಿ ನಿಂತಿದ್ದ ಜೋಡಿಯನ್ನು ಬಲವಂತವಾಗಿ ಕರೆದೋಯ್ದು ಹಲ್ಲೆ ನಡೆಸಿದ್ದಾರೆ.ಕಿಲ್ಲಕೆರೆ ಬಳಿ ಇರುವ ಕೋಣೆಯಲ್ಲಿ ಕೂಡಿಹಾಕಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ 3 ಗಂಟೆಗಳ ಕಾಲ ನಿರಂತರವಾಗಿ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ಬಳಿಕ ಯುವತಿಯ ಪೋಷಕರಿಂದ 112ಗೆ ಕರೆ ಮಾಡಿ…
ಬೆಂಗಳೂರು : ಇದೆ ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಆಯು ಕರು ಪ್ರತ್ಯೇಕ ಸುತ್ತೋಲೆ ಹೊರಡಿಸಲಿದ್ದು, ಜ.22ರಂದು ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುವ ಹೊತ್ತಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು. ಇದಕ್ಕಾಗಿ ಯಾವ ಕ್ರಮಗಳನ್ನು ಅನುಸರಿಸಬೇಕು ಹಾಗೂ ಯಾವ ನಿಧಿಯಿಂದ ಹಣ ಬಳಸಿಕೊಳ್ಳಬೇಕು ಎಂಬಿತ್ಯಾದಿ ವಿಷಯಗಳನ್ನು ಸುತ್ತೋಲೆ ಯಲ್ಲಿ ತಿಳಿಸಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡ ಸಚಿವ ರಾಮಲಿಂಗಾರೆಡ್ಡಿ,ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆ ಮಾಡುವ ವೇಳೆ ರಾಜ್ಯದಲ್ಲೂ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ತಿಳಿಸಿದ್ದೇನೆ.ಕೇವಲ ರಾಮನ ದೇವಾಲಯ ಮಾತ್ರವಲ್ಲ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ಸಲ್ಲಿಸಬೇಕು. ಈ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು…
ಬೆಂಗಳೂರು : ಕೆ.ಜೆ. ಹಳ್ಳಿ-ಡಿ.ಜೆ. ಹಳ್ಳಿ ಬಂಧಿತರ ಬಿಡುಗಡೆ ವಿಚಾರಕ್ಕೆ ಸಂಬಂಧಸಿದಂತೆ ಜೈಲು ಸೇರಿದವರನ್ನು ಬಿಡುಗಡೆ ಮಾಡಿಸುವಂತೆ ಸುಮಾರು 15 ಕುಟುಂಬಸ್ಥರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶಿವಾಜಿನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕಾರಕ್ಕೆ ಆಗಮಿಸಿದ್ದ ಡಿ.ಕೆ. ಶಿವಕುಮಾರ್‌ಅವರಿಗೆ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಕುಟುಂಬದ ಸದಸ್ಯರು ಮನವಿ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ನಾವು ಏನೇ ಮಾಡಿದರು ಮಾಡಿದರೂ ಕಾನೂನು ವ್ಯಾಪ್ತಿಯಲ್ಲಿ ಮಾಡಬೇಕು. ಈ ಬಗ್ಗೆ ಹೆಚ್ಚು ಮಾತನಾಡಲು ಆಗುವುದಿಲ್ಲ. ಬಿಜೆಪಿ ಸರ್ಕಾರ ಕೆಲವು ಸೆಕ್ಷನ್‌ಗಳನ್ನು ಪ್ರಯೋಗ ಮಾಡಿರುವುದರಿಂದ ಬಂಧಿತರು ಬಿಡುಗಡೆ ಆಗುತ್ತಿಲ್ಲ. ಕಾನೂನಿನ ಅಡಿಯಲ್ಲಿ ನ್ಯಾಯ ಒದಗಿಸಿ ಕೊಡಬೇಕು. ಈ ಬಗ್ಗೆ ಶಾಸಕರ ಬಳಿ ಚರ್ಚೆ ಮಾಡಿದ್ದು, ಕಾನೂನು ತಂಡದ ಜತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದರು. ಈ ಪ್ರಕರಣದ ಕುರಿತು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ತಿಳಿಸಿದರು.ಕಾನೂನು ಕೈಗೆತ್ತಿಕೊಂಡವರ ವಿರುದ್ಧದ ಕ್ರಮಕ್ಕೆ ಅಭ್ಯಂತರವಿಲ್ಲ.…
ಬೆಂಗಳೂರು : ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ವಿಪಕ್ಷ ನಾಯಕ ಅಶೋಕ್ ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು. ನಾನು ಮತ್ತು ಅಶೋಕ್ ಸ್ನೇಹಿತರು ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು. ಇನ್ನು ವಿ ಸೋಮಣ್ಣ ಜನವರಿ 8ರಂದು ನವದೆಹಲಿಗೆ ತೆರಳಲಿದ್ದಾರೆ. 12ರ ವರೆಗೂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಅವಧಿಯಲ್ಲಿ ವರಿಷ್ಠರಿಗೆ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೆ ಸಿಡಿದೆದ್ದ ಸೋಮಣ್ಣ ವಿಧಾನಸಭೆ ಚುನಾವಣೆಯಲ್ಲಿ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ವಿ ಸೋಮಣ್ಣ ಸೋತಿದ್ದಾರೆ. ಈ…
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂ ಹುದ್ದೆ ನೇಮಕ ವಿಚಾರ ಮುನ್ನಡೆಗೆ ಬಂದಿದ್ದು, ಸಹಕಾರ ಸಚಿವ ಕೆ ಎನ್ ರಾಜಣ್ಣ ಮೂರು ಡಿಸಿಎಂಗಳನ್ನು ನೇಮಕ ಮಾಡಿ ಎಂದು ಹೇಳಿಕೆಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರ ಹೈಕಮಾಂಡ್ ನಲ್ಲಿದ್ದರೆ ಖಂಡಿತವಾಗಿ ಮಾಡೇ ಮಾಡುತ್ತಾರೆ ನನ್ನ ಅಭಿಪ್ರಾಯ ಹೈಕಮಾಂಡ್ ಅಭಿಪ್ರಾಯ ಎರಡು ಒಂದೇ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಡಿಸಿಎಂ ಹುದ್ದೆ ಬಗ್ಗೆ ಯಾರು ಎಲ್ಲಿ ಚರ್ಚೆ ಮಾಡಿದ್ದಾರೆ? ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.ಸಚಿವ ಕೆಎನ್ ರಾಜಣ್ಣ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ ಎಂದು ಅವರು ತಿಳಿಸಿದರು. ಎಂಪಿ ಚುನಾವಣೆಗೂ ಮುನ್ನ ಡಿಸಿಎಂ ಮಾಡಲಿ ಅನ್ನೋ ಸಲಹೆಯನ್ನು ನೀಡಿದ್ದಾರೆ. ಆದರೆ ಹೈಕಮಾಂಡ್ ದೃಷ್ಟಿಕೋನ ಏನು ಅನ್ನೋದು ಗೊತ್ತಿಲ್ಲ.ಮೂವರನ್ನು ಡಿಸಿಎಂ ಮಾಡಿದರೆ ಲೋಕಸಭೆ ಚುನಾವಣೆಯನ್ನು ಗೆಲ್ಲಬಹುದು ಇದು ಹೈಕಮಾಂಡ್ ಗಮನದಲ್ಲಿದ್ದರೆ ಅವರು ಮಾಡೇ ಮಾಡುತ್ತಾರೆ.ನನ್ನ ಅಭಿಪ್ರಾಯ ಹೈಕಮಾಂಡ್ ಅಭಿಪ್ರಾಯ ಒಂದೇ…