Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಮುಸ್ಲಿಂ ಸಮುದಾಯಗಳ ಕುರಿತಂತೆ ಅವಹೇಳನಾಕಾರಿ ಪೋಸ್ಟ್ ಅನ್ನು ಬಿಜೆಪಿಯ ಎಕ್ಸ್ ಕಾರ್ಪ್ ಖಾತೆಯಲ್ಲಿ ಹಂಚಿಕೊಂಡ ಆರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಸಾಮಾಜಿಕ ಜಾಲತಾಣಗಳ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋಟ್ ನೋಟಿಸ್ ಜಾರಿ ಮಾಡಿದೆ. ಹೌದು ಏಪ್ರಿಲ್ 4 ರಂದು ಬಿಜೆಪಿ ಕರ್ನಾಟಕದ ಸಾಮಾಜಿಕ ತಾಣ ಎಕ್ಸ್ ಜಾಲತಾಣದಲ್ಲಿ ಅನಿಮೇಷನ್ ಮಾದರಿಯ ವಿಡಿಯೋವೊಂದನ್ನು ಪೋಸ್ಟ್ ಆಗಿತ್ತು. ಅದರಲ್ಲಿ ಶಿರೋನಾಮೆಯನ್ನು ಎಚ್ಚರ.. ಎಚ್ಚರ.. ಎಚ್ಚರ ಎಂದು ಬರೆದಿದ್ದು, ಅದರಲ್ಲಿ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳನ್ನು ಮೂರು ಮೊಟ್ಟೆಗಳಿಂದ ಮರಿಗಳು ಹೊರ ಬರುತ್ತಿರುವಂತೆ ಗುರುತಿಸಲಾಗಿತ್ತು. ಅದರಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿದ್ದರಾಯ್ಯ ಮತ್ತೊಂದು ಧರ್ಮದ ಮೊಟ್ಟೆಯೊಂದನ್ನು ತಂದಿಟ್ಟು ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಿದ್ದ ಆಹಾರವನ್ನು ನೀಡುತ್ತಿರುವಂತೆ…
ಕಲಬುರ್ಗಿ : ಇಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಇದೀಗ ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ಪೊಲೀಸ್ ಠಾಣೆಗೆ ಧಾರಾಕಾರ ಮಳೆಯಿಂದ ನೀರು ಠಾಣೆಗೆ ನುಗ್ಗಿದೆ ಈ ವೇಳೆ ನೀರನ್ನು ಹೊರಹಾಕಲು ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ. ಹೌದು ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಇಂದು ಒಂದು ಗಂಟೆಗಳ ಕಾಲ ವರುಣ ಅಬ್ಬರಿಸಿ, ಠಾಣೆಯಲ್ಲೇ ಪೊಲೀಸರಿಗೆ ಮಳೆ ನೀರು ದಿಗ್ಬಂಧನ ಹಾಕಿದೆ. ವರುಣಾರ್ಭಟಕ್ಕೆ ಠಾಣೆ ಆವರಣ ಮಾತ್ರವಲ್ಲದೇ ಠಾಣೆ ಒಳಗೂ ನೀರು ನುಗ್ಗಿದೆ. ಪೊಲೀಸ್ ಸಿಬ್ಬಂದಿ ನೀರು ಹೊರ ಹಾಕುವ ಕೆಲಸದಲ್ಲಿ ನಿರತರಾಗಿದ್ದಾರೆ. ಪಟ್ಟಣದಲ್ಲಿ ಪೊಲೀಸ್ ಠಾಣೆಯು ತಗ್ಗು ಪ್ರದೇಶದಲ್ಲಿ ಇರುವುದರಿಂದ ಪ್ರತಿ ಬಾರಿ ಜೋರಾಗಿ ಮಳೆ ಬಂದರೆ ಸಾಕು ಠಾಣೆಯ ಒಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತದೆ. ಪ್ರತಿ ವರ್ಷ ಕೂಡ ಇದೇ ಘಟನೆ ಮುಂದುವರೆದಿದ್ದು ಸಿಬ್ಬಂದಿಗಳು ಮಳೆ ನೀರನ್ನು ಹೊರ ಹಾಕಿ ಬೇಸತ್ತಿದ್ದಾರೆ. ಮಳೆನೀರು ಠಾಣಿಗೆ ನುಗ್ಗಿರುವುದರಿಂದ ಹಲೋ ಸಮಸ್ಯೆಗಳನ್ನು ಉಂಟು ಮಾಡಿದೆ.
ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಲೇಡೀಸ್ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತುಮಕೂರು ನಗರದ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ವಿದ್ಯಾರ್ಥಿನಿರು ಅಸ್ವಸ್ಥರಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿನಿಯರು ಆತಂಕದಿಂದ ಹೊರಬಂದು ಪ್ರಾಣವನ್ನು ರಕ್ಷಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್‌ನಲ್ಲಿ 300 ವಿದ್ಯಾರ್ಥಿನಿಯರು ಇದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್ ಹಾಗೂ ವಿದ್ಯಾರ್ಥಿನಿಯರ ಜೊತೆ ಡಿಸಿ ಶುಭಕಲ್ಯಾಣ್ ಅವರು ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿಯನ್ನ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ ಹೊಸ ಬಡಾವಣೆ ಠಾಣಾ…
ಮೈಸೂರು : ರಾಜ್ಯದಲ್ಲಿ ಮತ್ತೊಂದು ಅನೀಲ ದುರಂತ ಸಂಭವಿಸಿದ್ದು, ಮೈಸೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಈ ಒಂದು ದುರಂತದಲ್ಲಿ ಐವರು ಜನರು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಹಳೆ ಕೆಸರೆಯ ಗುಜರಿ ಗೋದಾಮಿನಲ್ಲಿ ಈ ಘಟನೆ ಸಂಭವಿಸಿದೆ. ಗುಜರಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಸ್ವಸ್ಥಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಇದೀಗ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೂಡ ಬಿಜೆಪಿಯ ವಿರುದ್ಧ ಕಿಡಿಕಾರಿದ್ದು, 24 ಲಕ್ಷ ನೀಟ್ ಆಕಾಂಕ್ಷಿಗಳ ಭವಿಷ್ಯ ಅನಿಶ್ಚಿತತೆಯಲ್ಲಿದೆ ಎಂದು ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ಕಿಡಿ ಕಾರಿರುವ ಅವರು, 24 ಲಕ್ಷ ನೀಟ್ ಆಕಾಂಕ್ಷಿಗಳ ಭವಿಷ್ಯ ಅನಿಶ್ಚಿತತೆಯಲ್ಲಿದೆ. ಬಿಜೆಪಿ ಸರ್ಕಾರ ಏಕೆ ಸುಮ್ಮನಿದೆ? ಎನ್‌ಟಿಎ ಏಕೆ ಶಾಂತವಾಗಿದೆ? NEET ಫಲಿತಾಂಶಗಳು ನಿರ್ದಿಷ್ಟ ಫೌಲ್ ಪ್ಲೇ ಕಡೆಗೆ ಸೂಚಿಸುತ್ತವೆ. ನೀವು ಬೇರೆ ಹೇಗೆ ವಿವರಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ. 67 ಆಕಾಂಕ್ಷಿಗಳು 720/720 ಅಂಕಗಳನ್ನು ಪಡೆಯುತ್ತಿದ್ದಾರೆ, ಈ ಹಿಂದೆ ಕೇವಲ 1 ಅಥವಾ 2 ಆಕಾಂಕ್ಷಿಗಳು ಮಾತ್ರ ಪರೀಕ್ಷೆಯಲ್ಲಿ ಅಗ್ರಸ್ಥಾನದಲ್ಲಿದ್ದರು. NEET ಋಣಾತ್ಮಕ ಗುರುತು ವ್ಯವಸ್ಥೆಯನ್ನು ಹೊಂದಿದ್ದರೂ -67 ಟಾಪರ್ಸ್? 67ರಲ್ಲಿ 44 ಟಾಪರ್‌ಗಳು ‘ಗ್ರೇಸ್ ಮಾರ್ಕ್’ನಿಂದ ಟಾಪರ್‌ಗಳಾಗಿದ್ದಾರೆ. ಆಶ್ಚರ್ಯಕರವಾಗಿ, 62-67 ಸರಣಿ ಸಂಖ್ಯೆಗಳೊಂದಿಗೆ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಅದೇ…
ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆಯ ವೇಳೆ ವಿದೇಶದಿಂದ ಆಗಮಿಸಿದ ಇಬ್ಬರು ಮಹಿಳೆಯರು ಸಿಗಿ ಬಿದ್ದಿದ್ದು, ಅವರ ಬಳಿ ಇದ್ದ ಸುಮಾರು 6.29 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹೌದು ಕೆಂಪೇಗೌಡ ಏರ್ಪೋರ್ಟ್ ನಲ್ಲಿ 6.29 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬಳಿಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಿದೇಶದಿಂದ ಫ್ಲೈಟ್ ನಲ್ಲಿ ಮಹಿಳೆಯರು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು.ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಇಬ್ಬರು ಮಹಿಳೆಯರು ಬಂದು ಇಳಿದಿದ್ದಾರೆ. ನಾಜಿ ಲಿಟಿ ಎಂಬ ಮಹಿಳೆಯಿಂದ 4 ಕೆ.ಜಿ 61 ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಆರತಿ ಸಗಲ್ ಎಂಬುವವರಿಂದ 2 ಕೆ.ಜಿ 181 ಚಿನ್ನ ಗ್ರಾಂ ವಶಪಡಿಸಿಕೊಂಡಿದ್ದಾರೆ. ಏರ್ ಪೋರ್ಟ್ ನ ಶೌಚಾಲಯದಲ್ಲೂ 2 ಕೆ.ಜಿ 772 ಗ್ರಾಂ ಚಿನ್ನ ಪತ್ತೆಯಾಗಿದೆ. ಬ್ಯಾಗ್ ನಿಂದ ಇಬ್ಬರು ಮಹಿಳೆಯರು…
ಬೆಳಗಾವಿ : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗಳಿಸಿದಷ್ಟೇ ಶಕ್ತವಾಗಿತ್ತು. ಇದೀಗ ಈ ಬಾರಿ ಒಂದರಿಂದ 9 ಸ್ಥಾನಕ್ಕೆ ಏರಿಕೆ ಕಂಡಿದೆ. ಇದರಲ್ಲಿ ಚಿಕ್ಕೋಡಿ ಕ್ಷೇತ್ರದ ಪ್ರಿಯಾಂಕಾ ಜಾರಕಿಹೊಳಿ ಕೂಡ ಒಬ್ಬರು. ಇದೀಗ ಅಥಣಿ ಕ್ಷೇತ್ರದ ಲಕ್ಷ್ಮಣ ಸವದಿ ಹಾಗೂ ಕುಡಚಿ ಕ್ಷೇತ್ರದ ಮಹೇಂದ್ರ ತಮ್ಮಣ್ಣ ಅವರ ವಿರುದ್ಧ ಆಕ್ರೋಶ ಅವರ ಹಾಕಿದ್ದಾರೆ. ಬೆಳಗಾವಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನ ಇದ್ದೆ.ಆದರೆ ಮಹೇಂದ್ರ ತಮ್ಮಣ್ಣವರ್ ಅವರು ನನ್ನ ಕೈಗೆ ಸಿಗಲಿಲ್ಲ. ಅಥಣಿಯಲ್ಲೂ ಹಾಗೆ ಆಯಿತು. ಯಾರ ಬಗ್ಗೆಯೂ ಪಕ್ಷದ ವರಿಷ್ಠರಿಗೆ ದೂರು ಕೊಡುವುದಿಲ್ಲ. ಪಕ್ಷದ ವಿರುದ್ಧ ಕೆಲಸ ಮಾಡಿದವರ ಬಗ್ಗೆ ಜನರಿಗೆ ಗೊತ್ತಾಗಬೇಕಿತ್ತು ಅದನ್ನು ಜನರಿಗೆ ಹೇಳುವ ಕೆಲಸ ಮಾಡಿರುವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಲೀಡ್ ಆಗುತ್ತೆ ಅಂದುಕೊಂಡಿದ್ದೆ. ಆದರೆ ಅಥಣಿಯಲ್ಲಿ ಲೀಡ್ ಸಿಕ್ಕಿಲ್ಲ. ಪ್ರಕಾಶ್ ಹುಕ್ಕೇರಿ ಸೇರಿ…
ಬೆಂಗಳೂರು : ಮುಂಗಾರು ಮಳೆ ಆಗಮಿಸುತ್ತಿದ್ದಂತೆ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಬಿರುಸಿನಿಂದ ಆರಂಭವಾಗಿದೆ. ಈಗಾಗಲೇ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮುಡಿದು ಇಂದು ಕೂಡ ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದ ರಸ್ತೆಯಲ್ಲಿ ಸೆಂಚುರಿಸಲು ವಾಹನ ಸವಾರರು ಪರದಾಟ ನಡೆಸಿದರು. ಹೌದು ಇಂದು ಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆ ಯಾಗಿದೆ. ರೇಸ್ ಕೋರ್ಸ್ ರಸ್ತೆ, ಬಸವೇಶ್ವರ ವೃತ್ತ, ವಿಧಾನಸೌಧ, ರಾಜಭವನ, ಮೆಜೆಸ್ಟಿಕ್, ಶ್ರೀರಾಮಪುರ, ಮಲ್ಲೇಶ್ವರಂ, ರಾಜಾಜಿನಗರ, ಮಾಗಡಿ ರಸ್ತೆ ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ.ಮಳೆಯಿಂದಾಗಿ ಸಂಚಾರದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿರುವ ದೃಶ್ಯ ಕಂಡು ಬಂದಿತು. ಇವತ್ತಿನಿಂದ 10 ನೇ ತಾರೀಖಿನವರೆಗೂ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ. ರಾಜ್ಯದಲ್ಲಿ ಒಂದು ವಾರ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 6 ರಿಂದ 8 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಜೂನ್ 8 ರಿಂದ 12 ರವರೆಗೆ ಕರಾವಳಿ…
ದಾವಣಗೆರೆ : ಪೊಲೀಸರು ಎಷ್ಟೇ ಕಠಿಣವಾದಂತ ನಿಯಮ ಜಾರಿಗೊಳಿಸಿದರು, ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಂಡರು ಕೂಡ ನೈತಿಕ ಪೊಲೀಸ್ ಸಿಗಿರಿ ಪ್ರಕರಣಗಳು ನಿಲ್ಲುತ್ತಿಲ್ಲ. ಇದೀಗ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಂಕಿ ನಗರದಲ್ಲಿ ಯುವಕನೊಬ್ಬನನ್ನು ಐದಾರು ಜನ ರೂಮ್ನಲ್ಲಿ ಕೂಡಿಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೌದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವಕನೊಬ್ಬನನ್ನು ರೂಮ್ನಲ್ಲಿ ಕೂಡಿಹಾಕಿ ಹಲ್ಲೆ ನಡೆಸಿರುವ ಆರೋಪ ಇದೀಗ ಕೇಳಿಬಂದಿದೆ. ಯುವಕನನ್ನು ಕೂಡಿಹಾಕಿ ಐದಾರು ಜನರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹರಿಹರದ ಬೆಂಕಿ ನಗರದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ಮಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.ಘಟನೆ ಕುರಿತಂತೆ ಅಲ್ಲಿಗೆ ಒಳಗಾದ ಯುವಕ ಯಾವುದೇ ದೂರನ್ನು ದಾಖಲಿಸಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜಿನಾಮೆ ನೀಡಿದ್ದಾರೆ.ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ವೈದ್ಯಕೀಯ ಸಚಿವರಾದಂತಹ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರ ಹೆಸರು ಕೂಡ ಈ ಒಂದು ಪ್ರಕರಣದಲ್ಲಿ ತಳಕು ಹಾಕಿಕೊಂಡಿದೆ ಎಂದು ತಿಳಿದುಬಂದಿದೆ. ಹೌದು ಸದ್ಯ ಸಚಿವ ಶರಣಪ್ರಕಾಶ್ ಪಾಟೀಲ್ ವಿರುದ್ಧ ಕೂಡ ಈ ಒಂದು ಪ್ರಕರಣದಲ್ಲಿ ಅವರ ಹೆಸರು ಬಂದಿರುವ ಆರೋಪ ಕೇಳಿ ಬಂದಿದೆ. ಮೇ 24ರಂದು ಸಚಿವ ಶರಣಪ್ರಕಾಶ್ ಪಾಟೀಲ್ ಕೊಠಡಿಯಲ್ಲಿ ಮೀಟಿಂಗ್ ನಡೆದಿದೆ ಎನ್ನಲಾಗಿದೆ. ಈ ವೇಳೆ ಚಂದ್ರಶೇಖರ್ ಮತ್ತು ಪರಶುರಾಮ್ ಅವರು ನಿಗಮದ ಅಧ್ಯಕ್ಷ ದದ್ದಲ್ ಭೇಟಿಯಾಗಿದ್ದರು. ಹೀಗಾಗಿ ಚಂದ್ರಶೇಖರ್ ಸಾವಿಗೂ ಮುನ್ನ ದದ್ದಲ್‍ಗೆ ಎಲ್ಲವೂ ಗೊತ್ತಿತ್ತು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸಿಸಿಟಿವಿ ದೃಶ್ಯ ವಶಕ್ಕೆ ಪಡೆಯಲು ಸೂಚಿಸುವಂತೆ ವಕೀಲರು ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ಹಗರಣದಲ್ಲಿ ಮತ್ತೊಬ್ಬ ಸಚಿವರ…













