Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು: ಬಾಳೆಹಣ್ಣಿನಲ್ಲಿ ಔಷದ ಹಾಕಿ ಸುಮಾರು 30 ಮಂಗಗಳನ್ನು ದಾರುಣವಾಗಿ ಸಾಯಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ತಾಲೂಕಿನ ದ್ಯಾವಣ ಎಂಬ ಅರಣ್ಯ ವಲಯ ಪ್ರದೇಶದಲ್ಲಿ ನಡೆದಿದೆ. ಹೌದು ದ್ಯಾವಣ ಗ್ರಾಮದ ಬಳಿ 30 ಮಂಗಗಳ ಮಾರಣಹೋಮ ನಡೆದಿದ್ದು, ಬಾಳೆಹಣ್ಣಿಗೆ ಔಷಧಿ ಹಾಕಿ 30 ಮಂಗಗಳನ್ನು ಕಿಡಿಗೇಡಿಗಳು ಕೊಂದಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ದ್ಯಾವನ ಬಳಿ ಈ ದುರ್ಘಟನೆ ಸಂಭವಿಸಿದೆ. 16 ಗಂಡು 14 ಹೆಣ್ಣು 4 ಮರಿ ಕೋತಿಗಳ ಮಾರಣ ಹೋಮ ನಡೆದಿದೆ. 30 ಕೋತಿಗಳನ್ನು ಕೊಂದು ಪಾಪಿಗಳು ರಸ್ತೆಗೆ ತಂದು ಎಸೆದು ಹೋಗಿದ್ದಾರೆ. ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದುಕೊಂದಿದ್ದಾರೆ. 30 ಮಂಗಳ ತಲೆಯಲ್ಲಿ ಒಂದೇ ರೀತಿಯ ಗಾಯ ರಕ್ತ ಸುರಿದು ಸಾವನ್ನಪ್ಪಿವೆ. ಸ್ಥಳಕ್ಕೆ ಡಿಎಫ್ಓ, ಆರ್ಎಫ್ಓ, ಪಿಎಸ್ಐ ಪಶು ಸಂಗೋಪನೆ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/congress-convenes-cwc-meet-on-8-june-to-discuss-poll-result/ https://kannadanewsnow.com/kannada/bigg-boss-contestant-chandan-shetty-and-nivedita-file-for-divorce/
ಕೋಲಾರ : ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗಳಿಸದಿದ್ದರೂ ಕೂಡ ಇದೀಗ ಎನ್ ಡಿ ಎ ಸರ್ಕಾರ ರಚನೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು ಜೂನ್ 9ರಂದು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇತ್ತ ಕೋಲಾರ ಜಿಲ್ಲೆಯ ಮಾಲೂರು ಶಾಸಕ ಕೆ ವೈ ನಂಜೇಗೌಡ ಕೇಂದ್ರ ಸರ್ಕಾರ ಯಾವಾಗ ಬೇಕಾದರೂ ಬದಲಾಗಬಹುದು ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಳಗಾಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆವರು, bಕೇಂದ್ರದ ಹೊಸ ಸರ್ಕಾರ ಯಾವತ್ತೂ ಬೇಕಾದರೂ ಬೀಳಬಹುದು ಎಂದು ಕೋಲಾರದಲ್ಲಿ ಮಾಲೂರು ಶಾಸಕ ಕೆ ವೈ ನಂಜೇಗೌಡ ಹೇಳಿದರು. ನಾಯ್ಡು ನಿತೀಶ್ ಯಾವಾಗ ಬೇಕಾದರೂ ಚೇಂಜ್ ಆಗುತ್ತಾರೆ. ಐದು ವರ್ಷದಲ್ಲಿ ಏನು ಬೇಕಾದರೂ ಆಗಬಹುದು ಆದರೆ ರಾಜ ಕಾಂಗ್ರೆಸ್ ಸರ್ಕಾರವನ್ನು ಅಳಗಾಡಿಸಲು ಆಗಲ್ಲ. ಈ ಚುನಾವಣೆಯಲ್ಲಿ ಮೋದಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿಲ್ಲ. ಎಂದು ಕೋಲಾರದಲ್ಲಿ ಮಾಲೂರು ಶಾಸಕ ಕೆನ್ನೆ ಕೂಡ ಹೇಳಿಕೆ ನೀಡಿದರು.
ಮೈಸೂರು : ಇತ್ತೀಚೆಗೆ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದ ತನಿಖೆ ಇನ್ನು ನಡೆಯುತ್ತಿರುವಾಗಲೇ ಮೈಸೂರಿನಲ್ಲಿ ಮತ್ತೊಂದು ಅಕ್ರಮ ಹಣ ವರ್ಗಾವಣೆ ಆಗಿರುವಂತಹ ಹಗರಣ ಬೆಳಕಿಗೆ ಬಂದಿದೆ.ಜನರ ಕಂದಾಯ ಹಣವನ್ನ ಸರ್ಕಾರಕ್ಕೆ ಕಟ್ಟದೇ ಸಿಬ್ಬಂದಿ ತಮ್ಮ ಖಾತೆಗೆ ಜಮೆ ಮಾಡಿಕೊಂಡ ಘಟನೆ ಮೈಸೂರು ತಾಲೂಕಿನ ಶ್ರೀರಾಂಪುರ ಪಟ್ಟಣ ಪಂಚಾಯ್ತಿಯಲ್ಲಿ ನಡೆದಿದೆ. ಹೌದು ಮೈಸೂರು ತಾಲೂಕಿನ ಶ್ರೀರಾಂಪುರ ಪಟ್ಟಣ ಪಂಚಾಯ್ತಿಯಲ್ಲಿ ಜನರು ಸರ್ಕಾರಕ್ಕೆ ಕಟ್ಟಿರುವಂತಹ ತೆರಿಗೆ ರೂಪದ ಕಂದಾಯದ ಹಣವನ್ನು ನೌಕರರ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಆಗಿದೆ.ತೆರಿಗೆದಾರರು ಪಾವತಿಸಿರುವ ಹಣಕ್ಕೆ ನಕಲಿ ರಸೀದಿ ನೀಡಿ, ತಮ್ಮ ಖಾತೆಗೆ ಹಣ ವರ್ಗಾಯಿಸಿಕೊಂಡಿರುವ ಸಿಬ್ಬಂದಿ. ಪಟ್ಟಣ ಪಂಚಾಯಿತಿ ಡೇಟಾ ಆಪರೇಟರ್ ನಮ್ರತಾ ಸೇರಿ ಮೂವರು ಸಿಬ್ಬಂದಿ ಕೃತ್ಯ ಆರೋಪ ಕೇಳಿಬಂದಿದೆ. ಕಳೆದ 15 ದಿನಗಳ ಹಿಂದೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಬಿ.ಶುಭಾ ತಪಾಸಣೆ ನಡೆಸಿದ್ದರು. ಮೂವರು ಸಿಬ್ಬಂದಿಗಳು ಸುಮಾರು ಒಂದೂವರೆ ಲಕ್ಷ ರೂಪಾಯಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು…
ಬೆಂಗಳೂರು : ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿ ರೀತಿಯಲ್ಲಿ ತೋರಿಸಿದ್ದಕ್ಕಾಗಿ ರಾಜ್ಯದಲ್ಲಿ ಬಾಲಿವುಡ್ ಸಿನಿಮಾ ‘ಹಮ್ ದೊ ಹಮಾರಾ ಬಾರಾ’ ಪ್ರದರ್ಶನಕ್ಕೆ ನಿಷೇಧಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ ಅಡಿ ಸರ್ಕಾರದಿಂದ ಈ ಒಂದು ಚಿತ್ರ ಪ್ರದರ್ಶನಕ್ಕೆ ನಿಷೇಧಿಸಲಾಗಿದೆ. ಸಿನಿಮಾದಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿನಿಮಾ ವಿರುದ್ಧ ಮುಸ್ಲಿಂ ಸಂಘಟನೆಗಳು ಆರೋಪ ಮಾಡಿದ್ದವು.ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ವಿವಾದಾತ್ಮಕ ಸಿನಿಮಾಗೆ ಇದೀಗ ರಾಜ್ಯ ಸರ್ಕಾರ ನಿಷೇಧಿಸಿದೆ.
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅತ್ಯಂತ ಪ್ರಮುಖವಾದಂತಹ ಕ್ಷೇತ್ರ ಹಾಗೂ ಜಿದ್ದಾಜಿದ್ದಿ ಕ್ಷೇತ್ರ ಅಂದರೆ ಬೆಂಗಳೂರು ಗ್ರಾಮಾಂತರವಾಗಿತ್ತು. ಈ ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಸಿ ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದಾರೆ. ತಮ್ಮನ ಸೋಲಿನ ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಇದು ನನ್ನ ವಯಕ್ತಿಕ ಸೋಲು ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಸೋಲಿನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ನನ್ನ ವೈಯಕ್ತಿಕ ಸೋಲು.ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರದಲ್ಲಿ ಓವರ್ ಕಾನ್ಫಿಡೆನ್ಸ್ ನಲ್ಲಿ ಇದ್ದೆ. ಬಿಜೆಪಿ ನಾಯಕರು ಕೂಡ ಒಳ್ಳೆಯ ತಂತ್ರಗಾರಿಕೆಯನ್ನು ಮಾಡಿದ್ದರು ಎಂದರು. ಜೆಡಿಎಸ್ ಬದಲಿ ಬಿಜೆಪಿಯಿಂದಲೇ ಅಭ್ಯರ್ಥಿಯನ್ನು ನಿಲ್ಲಿಸಿದರು. ಮಾಗಡಿ ರಾಮನಗರ ಕ್ಷೇತ್ರದಲ್ಲಿ ನಮಗೆ ಚೆನ್ನಾಗಿ ಮತ ಬಂದಿತ್ತು. ಆದರೆ ಬೆಂಗಳೂರು ದಕ್ಷಿಣ ಭಾಗದಲ್ಲಿ ಕಡಿಮೆ ಮತಗಳು ಬಂದಿವೆ.ಎಚ್…
ಬೆಂಗಳೂರು : ಬೆಂಗಳೂರಲ್ಲಿ ಅತ್ಯಂತ ಭೀಕರವಾದ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದಂತಹ ಟ್ಯಾಂಕರ್ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ ತಮ್ಮನ ಮೇಲೆ ಹರಿದಿದೆ ಈ ವೇಳೆ ಸ್ಥಳದಲ್ಲೇ ಅಕ್ಕ-ತಮ್ಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡ ನಾಗಮಂಗಲದಲ್ಲಿ ನಡೆದಿದೆ. ಹೌದು ಇಂದು ಬೆಳಿಗ್ಗೆ ಕಾಲೇಜಿಗೆ ಹೋಗುವಾಗ ಈ ಒಂದು ದುರ್ಘಟನೆ ನಡೆದಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ದೊಡ್ಡ ನಾಗಮಂಗಲದಲ್ಲಿ ಈ ಒಂದು ದುರಂತ ಸಂಭವಿಸಿದೆ. ಮೃತ ಪಟ್ಟವರನ್ನು ಮಧುಮಿತ (20) ಹಾಗೂ ಆಕೆಯ ತಮ್ಮ ರಂಜನ್ (19)ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವೇಗವಾಗಿ ಬರುತ್ತಿದ್ದ ವಾಟರ್ ಟ್ಯಾಂಕರ್ ಮೊದಲು ಬೈಕ್ ಮಿರರಿಗೆ ಟಚ್ ಆಗಿದೆ. ಈ ವೇಳೆ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಕ್ಕ ತಮ್ಮ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಆಗ ಇಬ್ಬರ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ…
ವಿಜಯನಗರ : ಕಳೆದ ಎರಡು ದಿನಗಳ ಹಿಂದೆ ಇಡೀ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಅತ್ಯಂತ ಸಡಗರದಿಂದ ಶಾಲೆಗೆ ಆಗಮಿಸಿದ್ದಾರೆ.ಆದರೆ ವಿಜಯನಗರದಲ್ಲಿ ಒಂದು ಘೋರ ದುರಂತ ಸಂಭವಿಸಿದ್ದು ಬೆಳಿಗ್ಗೆ ಶಾಲೆಗೆ ತೆರಳಿದ ಬಾಲಕಿ ವಿದ್ಯುತ್ ಕಂಬವನ್ನು ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ಮೃತಪಟ್ಟ ಬಾಲಕಿ ಕಾತ್ರಿಕಾಯನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಶಾಲೆಗೆ ಹೋಗಿದ್ದ ಬಾಲಕಿಯು, ಗ್ರಾಮದಲ್ಲಿ ಮಳೆ ಬಂದಿರೋ ಹಿನ್ನೆಲೆ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿದೆ. ಬಾಲಕಿ ವಿದ್ಯುತ್ ಕಂಬ ಸ್ಪರ್ಶಿಸಿದ್ದರಿಂದ ಶಾಕ್ ಹೊಡೆದಿದೆ.ಕಣ್ಮುಂದೆ ಶಾಲೆಗೆ ಹೋಗಿದ್ದ ಬಾಲಕಿ ಕೆಲವೇ ಸಮಯಕ್ಕೆ ದುರ್ಮರಣಕ್ಕೀಡಾದದ್ದು ಕೇಳಿ ಕುಟುಂಬಸ್ಥರು ಸಹಜವಾಗಿ ಅಘಾತಕ್ಕೆ ಒಳಗಾಗಿದ್ದಾರೆ. ಗ್ರಾಮದಲ್ಲಿ ವಿದ್ಯುತ್ ಕಂಬಗಳ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾದ ಕಂಬಗಳನ್ನ ಹಾಕದೇ ಬೇಕಾಬಿಟ್ಟಿ ಹಾಕಿರುವ ವಿದ್ಯುತ್ ಕಂಬಗಳಿಂದ ಬಾಲಕಿ ಸಾವನ್ನಪ್ಪಿದ್ದಾಳೆ. ಬಾಲಕಿಯ ಈ ಒಂದು ಸಾವಿಗೆ ಹೊಣೆ ಯಾರು…
ಚಿಕ್ಕಮಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬುಧವಾರ ಚಿಕ್ಕಮಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಬುಧವಾರ ರಾತ್ರಿ ಚಿಕ್ಕಮಗಳೂರಿನಲ್ಲಿ ಅಜಿತ್ ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿದ್ದ ಚಾಲಕ ಅಜಿತ್ ಇರುವ ಮಾಹಿತಿಯನ್ನು ಆಧರಿಸಿ ಇದೀಗ ಆತನನ್ನು ಬಂಧಿಸಿದ್ದಾರೆ. ಮನೆಯಿಂದ ಸಂತ್ರಸ್ತೆ ಮಹಿಳೆಯನ್ನು ಕರೆದೋಯ್ದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರಿನಲ್ಲಿ ಅಜಿತ್ ಆಗಿ SIT ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಜಿತ್ ಮಾವನ ಮನೆಯಲ್ಲಿ ಕೂಡ ಎಸ್ಐಟಿ ಅಧಿಕಾರಿಗಳು ಶೋಧ ನಡೆಸಿದರು. ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿರುವ ಅಜಿತ್ ಮಾವನ ಮನೆಯಲ್ಲಿ ಕೂಡ ಅಜಿತ್ ಕಾಗಿ ಹುಡುಕಾಟ ನಡೆಸಿದರು. ಸತ್ರಸ್ತೆ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ ಹಾಗೂ ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ ಇದೀಗ ಆತನನ್ನು ಬಂಧಿಸಲಾಗಿದೆ. ಭವಾನಿ ರೇವಣ್ಣ ಸೂಚನೆಯ ಮೇರೆಗೆ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ ಐ ಟಿ ಪೊಲೀಸರು ತನಿಖೆಯನ್ನು ಚುರುಕುಗೋಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. 18 ನಕಲಿ ಖಾತೆಯನ್ನು ಸೃಷ್ಟಿಸಿ ಹಣ ವರ್ಗಾಯಿಸಿದ ಆರೋಪದ ಅಡಿ ಇದೀಗ ಆತನನ್ನು ಬಂಧಿಸಲಾಗಿದೆ. ಎಂಟು ದಿನಗಳ ಕಸ್ಟಡಿಗೆ SIT ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಪೊಲೀಸರು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದರು. ತೆಲಂಗಾಣದ ನಲ್ಲಕುಂಟ ಪ್ರದೇಶದಲ್ಲಿರುವ ಸಹಕಾರ ಸಂಘದ ಅಧ್ಯಕ್ಷ ಎಂದು ಹೇಳಲಾಗುತ್ತಿದೆ.
ನವದೆಹಲಿ : ನಿನ್ನೆ ಪ್ರಕಟವಾದ ಲೋಕಸಭಾ ಚುನಾವಣೆ-2024 ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ ಕಡೆ ಜೂನ್ 8ರಂದು ಸಂಜೆ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದು, ಮತ್ತೆ ಪ್ರಧಾನಿ ಹುದ್ದೆಗೆ ಆಯ್ಕೆಯಾಗುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದಿರುವುದರಿಂದ 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲಿದ್ದಾರೆ ಎಂದು ವರದಿಯಾಗಿವೆ. ಇತ್ತ ಕಾಂಗ್ರೆಸ್ ಕೂಡ ಅಧಿಕಾರ ರಚನೆಗೆ ಪ್ರಯತ್ನ ಶುರು ಮಾಡಿದೆ. ಇಂದು ಎನ್ಡಿಎ ಮತ್ತು ಇಂಡಿ ಒಕ್ಕೂಟ ಮಹತ್ವದ ಸಭೆಯನ್ನು ನಡೆಸಲಿವೆ. ಇನ್ನೂ ಇತ್ತ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟಕ್ಕೆ (ಎನ್ಡಿಎ) ನಿಷ್ಠೆಯನ್ನು ಬದಲಾಯಿಸುವ ವದಂತಿಗಳನ್ನು ತಳ್ಳಿಹಾಕಿದ ತೆಲುಗು ದೇಶಂ ಪಕ್ಷ (ಟಿಡಿಪಿ) ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಗೆ ಬೆಂಬಲ ನೀಡುವುದನ್ನು…













