Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬಿ ನಾಗೇಂದ್ರ ಸೇರಿದಂತೆ ಐವರ ವಿರುದ್ಧ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷ ರಮೇಶ್ ಎನ್.ಆರ್ ED ಕಚೇರಿಯಲ್ಲಿ ನಾಳೆ ದೂರು ದಾಖಲಿಸಲಿದ್ದಾರೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬೃಹತ್ ಹಗರಣ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಅಧೀನದಲ್ಲಿರುವ ನಿಗಮದ ಖಾತೆಯಿಂದ ತೆಲಂಗಾಣ ರಾಜ್ಯದ ಹೈದರಾಬಾದ್ ನಗರದಲ್ಲಿ ಇರುವ ರತ್ನಾಕರ ಬ್ಯಾಂಕ್ ಲಿಮಿಟೆಡ್ ಎಂಬ ಖಾಸಗಿ ಬ್ಯಾಂಕಿನಲ್ಲಿ ಖಾತೆಗಳನ್ನು ಹೊಂದಿರುವ 10 ಖಾಸಗಿ ಕಾರ್ಪೊರೇಟ್ ಕಂಪೆನಿಗಳ ಹೆಸರುಗಳಲ್ಲಿರುವ ಖಾತೆಗಳಿಗೆ 89.62 ಕೋಟಿ ರೂಪಾಯಿ ಗಳಷ್ಟು ಹಣ ಅಕ್ರಮವಾಗಿ ವರ್ಗಾವಣೆ ಆಗಿತ್ತು. ಅಂತರ ರಾಜ್ಯಗಳ ಬೃಹತ್ ಹಗರಣಕ್ಕ ಸಂಬಂಧಿಸಿದಂತೆ, ಸ್ವತಃ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ CBI ಐವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದೆ. ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಇದೀಗ ಸಿಬಿಐ ಅಧಿಕಾರಿಗಳು FIR ದಾಖಲಿಸಿಕೊಂಡಿದ್ದಾರೆ. ಬ್ಯಾಂಕಿನ ಮೂರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎ ಜೆ. ಮಹೇಶ್ ಎಂಬುವವರು ದೂರು ನೀಡಿದ್ದಾರೆ. ಜೆ.ಮಹೇಶ್ ದೂರಿನ ಮೇರೆಗೆ ಸಿಬಿಐ ಇದೀಗ ಐವರ ವಿರುದ್ಧ ಕೇಸ್ ದಾಖಲಿಸಿದೆ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳು ಖಾಸಗಿ ವ್ಯಕ್ತಿಗಳು ಶಾಮಿಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲವು ದಿನಗಳ ಇದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ನಿಗಮದಿಂದ 187 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ.ಅಲ್ಲದೆ ಇದರಲ್ಲಿ ಸಚಿವ ನಾಗೇಂದ್ರ ಅವರು ಹೆಸರು ಕೇಳಿ ಬಂದಿದ್ದರಿಂದ ಈ ಒಂದು ಪ್ರಕರಣ ಇದೀಗ ಸಿಬಿಐ ತನಿಖೆ ಮಾಡುತ್ತಿದೆ.
ತುಮಕೂರು : ಕಾಮಗಾರಿ ಮಾಡಿದರು ಕೂಡ ಹಣ ಬಿಡುಗಡೆಯಗಿಲ್ಲ ಎಂದು ಆರೋಪಿಸಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದೆ. ತುಮಕೂರು ಜಿಲ್ಲೆಯ ಪಾವಗಡದ ಗುತ್ತಿಗೆದಾರ ಸುಜಿತ್ ವಿಡಿಯೋ ಇದೀಗ ವೈರಲ್ ಆಗಿದೆ. ಹೌದು ಸುಜೀತ್ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಎಂದು ಹೇಳಲಾಗುತ್ತಿದೆ. ಕಾಮಗಾರಿ ಮುಗಿದರು ಹಣ ಬಿಡುಗಡೆ ಮಾಡದ ಆರೋಪ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿ ಎಂ ಡಿ ಸಣ್ಣಚಿತ್ತಪ್ಪ ವಿರುದ್ಧ ಸುಜಿತ್ ಆರೋಪಿಸಿದ್ದಾರೆ. ಎಸ್ ಸಿ ಪಿ ಅಡಿ ಕಾಮಗಾರಿ ಮಾಡಿದ್ದ ಗುತ್ತಿಗೆದಾರ ಸುಜೀತ್ ಕಾಮಗಾರಿ ಮಾಡಿದ್ದರು. ಆದರೆ ಕಾಮಗಾರಿ ಸರಿ ಇಲ್ಲ ಎಂದು ಸಣ್ಣಚಿತ್ತಪ್ಪ ತನಿಖೆಯು ಮಾಡಿದ್ದರು. ತನಿಖೆಯಲ್ಲಿ ಕಾಮಗಾರಿ ಪೂರ್ಣವಾಗಿ ಎಂದು ಸಾಬೀತಾಗಿತ್ತು.ಆದರೂ 45 ಲಕ್ಷ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪ ಕೇಳಿ ಬಂದಿದೆ. ರಾಜಕೀಯ ದುರುದ್ದೇಶದಿಂದ ಹಣ ಬಿಡುಗಡೆ ಆಗಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸುಜೀತ್ ವಿಡಿಯೋ ಮಾಡಿ…
ಮಂಡ್ಯ : ಕೌಟುಂಬಿಕ ಕಲಹದಿಂದ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಕಿರಂಗೂರು ಗ್ರಾಮದಲ್ಲಿ ನಡೆದಿದೆ. ಪ್ರಭಾವತಿ (45) ದಿಲೀಪ್ (45) ಮೃತ ದುರ್ದೈವಿ ದಂಪತಿಗಳು ಎಂದು ತಿಳಿದುಬಂದಿದೆ. ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಹಾಗಾಗಿ ಕಳೆದ ರಾತ್ರಿ ಪ್ರಭಾವತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತ್ನಿ ಸಾವಿನಿಂದ ನೊಂದು ಬೆಳಗ್ಗೆ ಪತಿ ದಿಲೀಪ್ ಕೂಡ ನೇಣಿಗೆ ಶರಣಾಗಿದ್ದಾರೆ. ಬಾಬುರಾಯನ ಕೊಪಲ್ಲು ಬಳಿ ಜಮೀನೊಂದರಲ್ಲಿ ನೇಣಿಗೆ ಶರನಾಗಿದ್ದಾರೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
ನವದೆಹಲಿ : ನಿನ್ನೆ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್ ಡಿ ಎ ಈ ಬಾರಿ 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮೋದಿ ಹೇಳಿದರು. ಆದರೆ ಕೇವಲ 294 ಸ್ಥಾನಗಳನ್ನು ಪಡೆಯುವಲ್ಲಿ ಸಫಲವಾಯಿತು.ಅದೇ ರೀತಿ ಇಂಡಿಯಾ ಮೈತ್ರಿಕೂಟ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನ ಪಡೆದುಕೊಂಡು ಬಿಜೆಪಿಗೆ ಶೆಡ್ಡು ಹೊಡೆದಿದೆ ಇದೀಗ ದಿಲ್ಲಿ ಗದ್ದುಗೆ ಏರಲು ಎನ್.ಡಿ.ಎ ಹಾಗೂ ಇಂಡಿಯಾ ಮೈತ್ರಿ ಕೂಟ ಕಸರತ್ತು ನಡೆಸುತ್ತಿದ್ದು ಇಂದು ಎರಡು ಪಕ್ಷಗಳು ಮಹತ್ವದ ಸಭೆ ನಡೆಸಲಿವೆ. ದೆಹಲಿಗೆ ಬರುವಂತೆ NDA ಮಿತ್ರ ಪಕ್ಷಗಳಿಗೆ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಪ್ರಯಾಣಿಸಲಿದ್ದಾರೆ. ಇದೀಗ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮೋದಿ ಭವಿಷ್ಯ ನಿತೀಶ್ ಹಾಗೂ ಚಂದ್ರಬಾಬು ನಾಯ್ಡು ಅವರ ಮೇಲೆ ನಿಂತಿದೆ. ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದು ತಿಳಿದುಬರಲಿದೆ. ಅಲ್ಲದೆ ಇಂದು ಮಾಜಿ ಮುಖ್ಯಮಂತ್ರಿ ಎಚ್…
ಬೆಂಗಳೂರು : 2019ರಲ್ಲಿ ಪುತ್ರ ನಿಖಿಲ್ ಸೋಲಿಗೆ ಇದೀಗ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಜಯ ಗಳಿಸಿ ಕಾಂಗ್ರೆಸ್ಗೆ ಸೆಡ್ಡು ಹೊಡೆದು, ಇದೀಗ ರಾಜ್ಯ ರಾಜ್ಯ ಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಧುಮುಕಿದ್ದಾರೆ. ಹೌದು ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗಳಿಸಿದ್ದಾರೆ. ಹಾಗಾಗಿ ಬೆಳಗ್ಗೆ 10 ಗಂಟೆಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ದೆಹಲಿಗೆ ತೆರಳಿರಲಿದ್ದಾರೆ. ನೆನ್ನೆ ಎಚ್ ಡಿ ಕುಮಾರಸ್ವಾಮಿ ಅವರ ಗೆಲವು ಖಚಿತವಾಗುತ್ತಿದ್ದಂತೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಕುಮಾರಸ್ವಾಮಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಇದೀಗ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಲಗ್ಗೆ ಇಟ್ಟಿದ್ದು, 2019 ರಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಎಚ್ಡಿಕೆ 2019 ರಲ್ಲಿ ಮಂಡ್ಯದಲ್ಲಿ ಜೆಡಿಎಸ್ ನ 8 ಶಾಸಕರಿದ್ದರು, ಸೋತಿದ್ದರು. ಇದೀಗ ಮಂಡ್ಯದಲ್ಲಿ ಕಾಂಗ್ರೆಸ್ನ 7 ಶಾಸಕರಿದ್ದರು…
ಹುಬ್ಬಳ್ಳಿ : ಕಳೆದ ಎಂಎಲ್ಸಿ ಚುನಾವಣೆ ಗಿಂತ ನಮ್ಮ ಪರ್ಫಾರ್ಮೆನ್ಸ್ ಉತ್ತಮವಾಗಿದೆ ರಾಜ್ಯದಲ್ಲಿ ಬಿಜೆಪಿಗೆ ಶೇಕಡ 9 ರಷ್ಟು ವೋಟ್ ಜಾಸ್ತಿಯಾಗಿದೆ ಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಕಾದುನೋಡಿ ಎಂದು ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಆಪರೇಷನ್ ಕಮಲದ ಮುನ್ಸೂಚನೆ ನೀಡಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ಮಾತ್ರ ಸೀಮಿತವಾಗಿತ್ತು ಆದರೆ ಈ ಬಾರಿ ಆ ಒಂದು ಸ್ಥಾನಗಳನ್ನು 9ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಬಿಜೆಪಿಗೆ ಟಕ್ಕರ್ ನೀಡಿದೆ. ಹೀಗಾಗಿ ಈ ಬಾರಿ ಒಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 17 ಕಾಂಗ್ರೆಸ್ ಒಂಬತ್ತು ಹಾಗೂ ಜೆಡಿಎಸ್ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ಇನ್ನು ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರದ ಜನರಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ರಾಜ್ಯ ಸರ್ಕಾರದ ಹಣಬಲ ಅಧಿಕಾರ ಬಲ ಹಾಗೂ ಗ್ಯಾರೆಂಟಿ ಯಿಂದ ನಮಗೆ…
ಬೆಂಗಳೂರು : ರಾಜ್ಯದ ಪ್ರಮುಖ ಲೋಕಸಭಾ ಕ್ಷೇತ್ರ ಆಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಯ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಹ್ಯಾಟ್ರಿಕ್ ಗೆಲುವು ಕಂಡ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಗೆಲವು ಖಚಿತವಾದ ನಂತರ ಸುದ್ದಿಗಾರರನ್ನಾಗಿ ಮಾತನಾಡಿದವರು ಇದೊಂದು ಕಾರ್ಯಕರ್ತರ ಐತಿಹಾಸಿಕ ಗೆಲುವಾಗಿದೆ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕರ್ತರ ಗೆಲುವು ನೂತನ ಸಂಸದ ಡಾ. ಸಿ.ಎನ್ ಮಂಜುನಾಥ್ ಹೇಳಿಕೆಯನ್ನು ನೀಡಿದ್ದು, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಈ ಒಂದು ಚುನಾವಣೆಯಲ್ಲಿ ಒಟ್ಟಾಗಿ ಶ್ರಮಿಸಿದ್ದಾರೆ. ಗೆಲವು ಕಾರ್ಯಕರ್ತರು ಮತದಾರರಿಗೆ ಅರ್ಪಿಸುತ್ತೇನೆ.ಆರೋಗ್ಯ ಕೃಷಿ ಶಿಕ್ಷಣ ಕ್ಷೇತ್ರದಲ್ಲಿ ಗಮನಹರಿಸುತ್ತೇನೆ ಎಂದು ಬೆಂಗಳೂರಲ್ಲಿ ನೂತನ ಸಂಸದ ಡಾ. ಸಿಎಂ ಮಂಜುನಾಥ್ ಹೇಳಿದರು. ಬಹಳ ಪ್ರಮುಖವಾದದ್ದು ಅಂದರೆ ಆರೋಗ್ಯ ಕ್ಷೇತ್ರ ಈ ಒಂದು ಕ್ಷೇತ್ರದಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತೇನೆ ಅಲ್ಲದೆ ಮೂಲಭೂತ ಸೌಕರ್ಯಗಳ ಕುರಿತಂತೆ, ಕೃಷಿಯಾಗಿರ್ಬೋದು ಶಿಕ್ಷಣ ಆಗಿರಬಹುದು ಉಳಿದ ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಮಾಣಿಕವಾಗಿ ಕೆಲಸ ಮಾಡಿ ಅಭಿವೃದ್ಧಿಯ…
ಕ್ಕಬಳ್ಳಾಪುರ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ಮನೆಯ ಮೇಲೆ ಇದೀಗ ಕಲ್ಲುತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೆಡಿಗಳು ಕಲ್ಲು ತೂರಾಟ ನಡೆಸಿದ್ದು, ಮನೆಯ ಕಿಟಕಿ, ಗಾಜು ಒಡೆದು ಪುಡಿ ಪುಡಿ ಮಾಡಿದ್ದಾರೆ. ಚುನಾವಣೆಯಲ್ಲಿ ಡಾ. ಸುಧಾಕರ್ ಗೆ ಗೆಲುವು ಸಿಕ್ಕ ಹಿನ್ನೆಲೆಯಲ್ಲಿ ಇದೀಗ ಕಲ್ಲು ತೂರಾಟ ನಡೆಸಿರುವ ಶಂಕೆ ವ್ಯಕ್ತವಾಗುತ್ತಿದೆ. ತಕ್ಷಣ ಚಿಕ್ಕಬಳ್ಳಾಪುರ ನಗರ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ. ಯಾಕೆಂದರೆ ಸ್ವತಃ…
ಹುಬ್ಬಳ್ಳಿ : ಈ ಬರಿಯಾ ಲೋಕಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಆನಂದ್ ಅಸೂಟಿ ಎದುರು ಬಿಜೆಪಿಯ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.ಈ ಮೂಲಕ ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ. ಗೆಲುವು ಕಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನವರು ಕ್ಷೇತ್ರದಲ್ಲಿ ಹಣ ಹಂಡ ಹಂಚಿದರೂ ಕೂಡ ಕ್ಷೇತ್ರದ ಜನತೆ ನನ್ನ ಕೈ ಬಿಡಲಿಲ್ಲ.ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಪಪ್ರಚಾರದ ಪರಾಕಾಷ್ಠೆ ಮುಟ್ಟಿತ್ತು. ಅವರು ಪ್ರಚಾರ ಮಾಡುವುದನ್ನು ಬಿಟ್ಟು ಕೇವಲ ಅಪಪ್ರಚಾರದಲ್ಲೇ ತೊಡಗಿದ್ದರು. ದೇಶ ಮತ್ತು ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡುತ್ತಿರಲಿಲ್ಲ ಎಂದರು. ನಿರೀಕ್ಷೆಗೆ ತಕ್ಕಂತೆ ಸೀಟು ಬಂದಿಲ್ಲ. ಎಲ್ಲಿ ಏನಾಗಿದೆ ಎಂಬ ವಾಸ್ತವವನ್ನು ನೋಡಬೇಕಾಗಿದೆ. ಆದಷ್ಟು ಶೀಘ್ರವೇ ದೆಹಲಿಗೆ ತೆರಳುತ್ತೇನೆ. ಈ ಬಗ್ಗೆ ವರಿಷ್ಠರ ಜೊತೆಗೆ ಚರ್ಚಿಸುತ್ತೇನೆ. ದೇಶದಲ್ಲಿ ಚುನಾವಣೆ ಆಗಿದ್ದು ಎನ್‌ಡಿಎ ಹಾಗೂ ‘ಇಂಡಿ’ ಮೈತ್ರಿ ಮಧ್ಯೆ. ಆದ್ದರಿಂದ ನಮ್ಮ ಜೊತೆಗೆ ನಿಂತವರು ಗಟ್ಟಿಯಾಗಿ ನಿಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನತಾ…













