Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ, ಪೆನ್ ಡ್ರೈವ್ ನ ಕಥಾನಾಯಕರೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗಂಭೀರವಾದ ಆರೋಪ ಮಾಡಿದರು.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಕಥಾನಾಯಕರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಅವರೇ ಇದರ ರೂವಾರಿ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದರಲ್ಲಿ ಇನ್ನೊಬ್ಬರ ನಾಯಕರ ಆಡಿಯೋ ಸಹ ಇದೆ ದೇವರಾಜೇಗೌಡ ಮೇಲೆ ಕೆಸ್ ಹಾಕಲು ಈಗ ಹೊರಟಿದ್ದಾರೆ.ಡಿಸಿಎಂ ರವರು ಮಾತುಕತೆಗೆ ನನ್ನ ಬಳಿ ಕೆಲ ಜನರನ್ನು ಕಳುಹಿಸಿದ್ದರು.ಪೆನ್ ಡ್ರೈವ್ ಒಬ್ಬ ಮಹಾ ನಾಯಕನ ಬಳಿ ಹೋಗಿತ್ತು. ಡಿಕೆ ಮಾತಾಡಿರುವ ಆಡಿಯೋ ಬಿಡುಗಡೆ ಮಾಡಿದ ದೇವರಾಜ್ ಗೌಡ LR ಶಿವರಾಮೇಗೌಡ ಮೊದಲು ಮಾತನಾಡಿದರು ಆಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಫೋನ್ ಕೊಟ್ಟರು ಎಲ್ಲರ ಶಿವರಾಮೇಗೌಡರಿಂದ ಆಡಿಯೋದಲ್ಲಿ ಭರವಸೆ ನೀಡಿದರು ಎಂದು ಡಿಕೆ ಶಿವಕುಮಾರ್…
ಬೆಂಗಳೂರು : ತೀವ್ರ ಬರ ಹಾಗೂ ಅತ್ಯಂತ ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಇತ್ತೀಚಿಗೆ ಹಲವು ಕಡೆಗಳಲ್ಲಿ ಮಳೆಯಾಗಿ ಜನರ ಮುಖದಲ್ಲಿ ಸ್ವಲ್ಪ ನೆಮ್ಮದಿ ಕಾಣುವಂತಾಗಿದೆ.ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆ ಸಾಧ್ಯತೆ ಇರಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರದಲ್ಲಿ ಮಳೆಯಾಗಲಿದೆ. ಇವತ್ತು ಬೆಂಗಳೂರಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು ಈ ಕುರಿತಂತೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಕೊಡಗು : ಸಾಮಾನ್ಯವಾಗಿ ಚಿಕ್ಕ ಚಿಕ್ಕ ವಿಷಯಗಳಿಗೆ ಸಂಬಂಧಿಸಿದಂತೆ ಮದುವೆ ಮುರಿದು ಬಿದ್ದಿರುವುದನ್ನು ನಾವು ನೋಡಿದ್ದೇವೆ ಇದೀಗ ಅಂತಹದ್ದೇ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದ್ದು ಸಿಹಿ ಅಡುಗೆ ಮಾಡಿಲ್ಲ ಎಂದು ಆರೋಪಿಸಿ ಇದೀಗ ವರನ ಕಡೆಯವರು ಮದುವೆ ಮುರಿದಿದ್ದಾರೆ. ಹೌದು ಸಿಹಿ ಅಡುಗೆ ಮಾಡಿಲ್ಲ ಎಂದು ಮದುವೆ ಮುರಿದ ವರನ ಕಡೆಯವರು, ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಈ ಒಂದು ಘಟನೆ ನಡೆದಿದೆ. ಸೋಮವಾರಪೇಟೆಯ ಛತ್ರ ಒಂದರಲ್ಲಿ ಮದುವೆಯೊಂದು ನಿಗದಿಯಾಗಿತ್ತು. ಸೋಮವಾರಪೇಟೆಯ ಹಾನಗಲ್ ಗ್ರಾಮದ ಯುವತಿ ಹಾಗೂ ಕುಣಿಗಲ್ ಯುವಕನ ಜೊತೆಗೆ ವಿವಾಹ ನಿಶ್ಚಯವಾಗಿತ್ತು. ಈ ವೇಳೆ ಅಡುಗೆಯಲ್ಲಿ ಸಿಹಿ ಮಾಡಿಲ್ಲ ಎಂದು ವರನ ಕಡೆಯವರು ತಗಾದೆ ತೆಗೆದಿದ್ದಾರೆ. ಇದೆ ಸಂದರ್ಭದಲ್ಲಿ ಮಧುಮಗ ಮತ್ತು ಮಧುಮಗಳು ಉಂಗುರವನ್ನು ಬಿಸಾಕಿದ್ದಾರೆ. ವಧು ಕಡೆ ವರದಕ್ಷಿಣೆ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಇದೀಗ ಸೋಮವಾರಪೇಟೆ ಠಾಣೆಯಲ್ಲಿ ವರನ ವಿರುದ್ಧ ಯುವತಿಯ ಕಡೆಯವರು ದೂರು ದಾಖಲಿಸಿದ್ದಾರೆ.
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಬಂದಿಯುತ ರಾಗಿರುವ ಶಾಸಕ ಎಚ್ಡಿ ರೇವಣ್ಣ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನೀಗಾಗಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು.ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ನಾಳೆ ಮುಂದೂಡಿದೆ. ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆಯ ಮಗ ಇತ್ತೀಚಿಗೆ ನನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ದೂರು ಸಲ್ಲಿಸಿದ್ದ. ಈ ಪ್ರಕರಣದಲ್ಲಿ HD ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಬಾಬು ವಿರುದ್ಧ FIR ದಾಖಲಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಈ ಒಂದು ಪ್ರಕರಣದಲ್ಲಿ ಶಾಸಕ HD ರೇವಣ್ಣ ಅವರನ್ನು ಬಂಧಿಸಲಾಗಿತ್ತು.ಬಂಧನಕ್ಕೂ ಮುನ್ನ ಅವರು ನಿರೀಕ್ಷಣಾ ಜಾಮೀನನ್ನು ಸಲ್ಲಿಸಿದ್ದರು. ಆದರೆ ಅದನ್ನು ಕೋರ್ಟ್ ಅದನ್ನು ಮುಕ್ತಾಯಗೊಳಿಸಿದ್ದು ಇದೀಗ ಬಂಧನದಲ್ಲಿರುವ ರೇವಣ್ಣ ಅವರು ಮತ್ತೆ ಜಾಮೀನಿಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ನಾಳೆಗೆ ಮುಂದೂಡಿದೆ.
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐ ಟಿ ಅಧಿಕಾರಿಗಳು ಶಾಸಕ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಸತತವಾಗಿ 5 ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದ್ದು ಇದೀಗ ಅದು ಮುಕ್ತಾಯವಾಗಿದೆ. ಹೌದು ಬೆಂಗಳೂರಿನ ಬಸವನಗುಡಿ ನಿವಾಸದಲ್ಲಿ ಸ್ಥಳ ಮಹಜರು ಇದೀಗ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಶಾಸಕ ನಿವಾಸಕ್ಕೆ ಇಂದು ಬೆಳಿಗ್ಗೆ ಎಸ್ಐಟಿ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ತ ಮಹಿಳೆಯರು ಕೂಡ ಸ್ಥಳ ಮಹಾರಾಜರು ಸಂದರ್ಭದಲ್ಲಿ ಮಹಾಜರು ಪ್ರಕ್ರಿಯೆ ನಡೆಸಿದ್ದಾರೆ ಈ ವೇಳೆ ಅಧಿಕಾರಿಗಳು ಸಂಪೂರ್ಣವಾಗಿ ಪ್ರಕ್ರಿಯೆಯ ವಿಡಿಯೋವನ್ನು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಸತತವಾಗಿ 5 ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿತು ಎಂದು ತಿಳಿದುಬಂದಿದೆ.
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಭಾವವನ್ನು ಇದೀಗ ಎಂಟು ದಿನಗಳ ಕಾಲ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿ ಎಂ ಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಎಸ್ಐಟಿ ಸತೀಶ್ ಬಾಬು ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮೇ 13 ರವರೆಗೆ ಆರೋಪಿ ಸತೀಶ್ ಬಾಬು ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಆರೋಪಿ ಸತೀಶ್ ಬಾಬುಗೆ ಎಂಟು ದಿನ ಎಸ್ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಸತೀಶ್ ಬಾಬುನನ್ನು ಬಂಧಿಸಲಾಗಿತ್ತು. ಈ ಕುರಿತಂತೆ ಎಸ್ಐಟಿ ಕೋರ್ಟ್ ಗೆ ಹಾಜರುಪಡಿಸಿ ಕಸ್ಟಡಿಗೆ…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಶಾಸಕ ಎಚ್ಡಿ ರೇವಣ್ಣ ಇದೀಗ ಮತ್ತೆ ಕೋರ್ಟ್ ಮೊರೆ ಹೋಗಿದ್ದು, ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ ಹೌದು ಈ ಮೊದಲು ಅಂದರೆ ಎಸ್ಐಟಿ ಬಂಧನಕ್ಕೂ ಮುನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ತಿರಸ್ಕರಿಸಿದ್ದು, ಇದೀಗ ಹೆಚ್ ಡಿ ರೇವಣ್ಣ ಮತ್ತೆ ಜಾಮೀನು ಕೋರಿ ಬೆಂಗಳೂರಿನ ವಿಶೇಷ ನ್ಯಾಯ ಇಲಾಖೆ ಅರ್ಜಿ ಸಲ್ಲಿಸಿದ್ದಾರೆ. ಹೌದು ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದು, ಎಚ್ ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ರೇವಣ್ಣ ಇದೀಗ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಬಂಧನ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಕ್ತಾಯಗೊಳಿಸಿತ್ತು. ಈಗ ಎಚ್ ಡಿ ರೇವಣ್ಣ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಕೃಷಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೋಡಂಬಲ್ ಗ್ರಾಮದ ಬಳಿ ನಡೆದಿದೆ. ಕೋಡಂಬಲ್ ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತರಾಗಿದ್ದಾಗ ಸಹಾಯಕ ಕೃಷಿ ಅಧಿಕಾರಿ ಆನಂದ್ (31) ಎನ್ನುವವರು ಸಾವನ್ನಪ್ಪಿದ್ದರೆ.ಬೀದರ ಜಿಲ್ಲೆಯ ಚಟಗುಪ್ಪ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಕೋಡಂಬಲ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವಾಗ ಆನಂದ್ ಅವರಿಗೆ ಹೃದಯಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಮಾರ್ಗ ಮಧ್ಯ ಕೃಷಿ ಅಧಿಕಾರಿ ಆನಂದ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣ ಬಂಧನ ವಾಗಿದ್ದು ಇದೀಗ ಬೆಂಗಳೂರಿನ ಬಸವನಗುಡಿಯಲ್ಲಿ ಇರುವ ನಿವಾಸದಲ್ಲಿ ಎಸ್ಐಟಿಯಿಂದ ಮಹಜರು ನಡೆಯುತ್ತಿದೆ. ಆದರೆ ಈ ಬೆಳೆ ರೇವಣ್ಣ ಪರ ವಕೀಲರಿಗೆ ನಿವಾಸದ ಒಳಗೆ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಇದೀಗ ಅವರು ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಕಕ್ಷಿದಾರನ ಮನೆಯಲ್ಲಿ ಮಹಜರು ನಡೆಯುತ್ತಿದೆ ಆದರೆ ವಕೀಲರಾದ ನನ್ನನ್ನೇ ನಿವಾಸದ ಒಳಗೆ ಬಿಡುತ್ತಿಲ್ಲ ಎಂದು ರೇವಣ್ಣ ಪರ ವಕೀಲರಾದ ಗೋಪಾಲ್ ಅವರು ಅಸಮಾಧಾನ ಹೊರಹಾಕಿದ್ದಾರೆ. ಮಹಜರು ಪ್ರಕ್ರಿಯೆ ನೋಟಿಸ್ ನನಗೆ ಕೊಟ್ಟಿದ್ದಾರೆ. ಭವಾನಿ ಅವರಿಗೆ ಮಂಡಿ ಆಪರೇಷನ್ ಆಗಿರುವ ಹಿನ್ನೆಲೆಯಲ್ಲಿ ಮಹಜರು ಪ್ರಕ್ರಿಯೆ ನೋಡಿಕೊಳ್ಳಲು ನನಗೆ ತಿಳಿಸಿದ್ದರು.ಆದರೆ ನನ್ನ ಕಕ್ಷಿದಾರ ಮನೆಯಲ್ಲಿ ನನಗೆ ಮಹಜರು ನಡೆಯುವ ವೇಳೆ ನಿವಾಸದ ಒಳಗೆ ಬಿಡುತ್ತಿಲ್ಲ ಎಂದು ವಕೀಲರಾದ ಗೋಪಾಲ್ ಅಸಮಾಧಾನ ಹೊರಹಾಕಿದ್ದಾರೆ.
ಚಿಕ್ಕಬಳ್ಳಾಪುರ : ಕಳೆದ ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆದಿತ್ತು. ಹೇಳೇ ಚಿಕ್ಕಬಳ್ಳಾಪುರ ಕ್ಷೇತ್ರದ ಕೆಲವು ಬೂತ್ ಗಳಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ಬಿಜೆಪಿ MLC ಎಂಟಿಬಿ ನಾಗರಾಜ ಗಂಭೀರ ಆರೋಪ ಮಾಡಿದರು. ಈ ಕುರಿತಂತೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಕ್ಷೇತ್ರದ ಹೊಸಕೋಟೆ ವ್ಯಾಪ್ತಿಯ 15ರಿಂದ 20 ಬೂತ್ ಗಳಲ್ಲಿ ಚುನಾವಣಾ ಅಕ್ರಮ ನಡೆದಿದ್ದು, ಅಕ್ರಮವಾಗಿ ಮತದಾನ ಮಾಡಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್ಸಿ ಎಂಟಿಬಿ ನಾಗರಾಜ್ ಗಂಭೀರವಾದ ಆರೋಪ ಮಾಡಿದರು. ಹೊಸಕೋಟೆ, ಬೆಂಡಿಗಾನಹಳ್ಳಿ ಬೂತ್ ನಂಬರ್ 23 ರಲ್ಲಿ ಈ ಕುರಿತು ಗಲಾಟೆ ಆಗಿದೆ. ಮತ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಕೂಡ ಕೆಲವರು ಮತ ಹಾಕಲು ಬಂದಿದ್ದರು. ಮೃತಪಟ್ಟವರ ಹೆಸರಿನಲ್ಲಿ ಹಾಗೂ ಊರು ಬಿಟ್ಟು ಹೋಗಿರುವವರ ಹೆಸರಿನಲ್ಲಿ ಹೊರಗಿನಿಂದ ಕೆಲವರನ್ನು ಕರೆತಂದು ನಕಲಿ ಮತದಾನ ಮಾಡಿಸಲಾಗಿದೆ.ಅಕ್ರಮ ಮತದಾನ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಜೊತೆ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಿದದು. ಗಲಾಟೆಯ ವೇಳೆ…












