Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ಅಥವಾ ನಾಳೆ ಭಾರತಕ್ಕೆ ಆಗಮಿಸಬಹುದು ಎಂಬುದರ ಕುರಿತು ಮಾಹಿತಿ ಇದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಖಂಡರೇ ಮಾಧ್ಯಮಗಳಿಗೆ ಈ ಒಂದು ಮಾಹಿತಿಯನ್ನು ನೀಡಿದ್ದಾರೆ.ಈ ಪ್ರಕರಣದಲ್ಲಿ ರಾಜಕಾರಣವನ್ನು ನಾವು ಬೆರೆಸುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು. ಇದರಲ್ಲಿ ನಮಗೆ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ರಾಜಕೀಯ ಸಡ್ಯಂತರ ನಡೆಸುವ ಅವಶ್ಯಕತೆ ನಮಗೆ ಇಲ್ಲ ನಿನ್ನೆ ರೇವಣ್ಣ ನೋವಿನಿಂದ ಈ ಮಾತು ಹೇಳಿರಬಹುದು ಯಾರೇ ತಪ್ಪು ಮಾಡಿದರು ಕೂಡ ಅಂಥವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಚೆಲುವರಾಯ ಸ್ವಾಮಿ ತಿಳಿಸಿದರು.
ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಇಡೀ ದೇಶದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಬಾರಿ ಸದ್ದು ಮಾಡುತ್ತಿದೆ ಅಲ್ಲದೆ ಅವರ ತಂದೆ ಎಚ್ ಡಿ ರೇವಣ್ಣ ಅವರು ಕೂಡ ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಬಳಸದಂತೆ ಉಭಯ ನಾಯಕರು ಸಷೆನ್ಸ್ ಕೋರ್ಟ್ ಇಂದ ತಡೆಯಾಜ್ಞೆ ತಂದಿದ್ದಾರೆ. ಇವತ್ತಿನ ದಿನದವರೆಗೂ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಪ್ರಸಾರ ಮಾಡುವಾಗ ಪ್ರಸ್ತಾಪಿಸಲಾಗುತ್ತಿತ್ತು.ಇದರಿಂದ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದರು.ಹಾಗಾಗಿ ಉಭಯ ನಾಯಕರು ತಮ್ಮ ಹೆಸರನ್ನು ಬಳಸದಂತೆ ಸೆಷನ್ಸ್ ಕೋರ್ಟ್ನಿಂದ ಇದೀಗ ತಡೆಯಾಜ್ಞೆ ತಂದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೆಂಗಳೂರಿನ ಮೆಟ್ರೋದಲ್ಲಿ ಆಗಾಗ ಕೆಲವು ಘಟನೆಗಳು ಪ್ರಯಾಣಿಕರಿಗೆ ಮುಜುಗರ ಉಂಟು ಮಾಡುತ್ತಿರುತ್ತವೆ. ಇದೀಗ ಮೆಟ್ರೋದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಯುವ ಜೋಡಿಗಳು ತಬ್ಬಿಕೊಂಡು ಮುದ್ದಾಡಿರುವ ಘಟನೆ ನಡೆದಿದೆ.ಈ ದೃಶ್ಯವನ್ನು ಮೆಟ್ರೋದ ಸಹ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರು ಮೆಟ್ರೋ ಕೂಡ, ದೆಹಲಿ ಮೆಟ್ರೋದಂತೆ ಅಸಹ್ಯಕರ ಘಟನೆಗಳಿಗೆ ಸಾಕ್ಷಿ ಆಗುತ್ತಿದೆಯೇ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಯುವ ಜೋಡಿಯೊಂದು ಮೆಟ್ರೋ ರೈಲಿನಲ್ಲಿ ನಿಂತುಕೊಂಡಾಗ ಪರಸ್ಪರ ತಬ್ಬಿಕೊಂಡು ನಿಂತಿದ್ದಾರೆ. ಇದನ್ನು ನೋಡಿದ ಕೆಲವರು, ಚಿಕ್ಕ ಮಕ್ಕಳು ನೋಡಿದರೆ ಇದನ್ನು ಅನುಕರಿಸುವುದಿಲ್ಲವೇ ಎಂದು ಅಸಹ್ಯದಿಂದ ಬೇಸರಿಸಿಕೊಂಡಿದ್ದಾರೆ. ಸಾರ್ವಜನಿಕ ಸಾರಿಗೆಯಾದ ಮೆಟ್ರೋದಲ್ಲಿ ತಬ್ಬಿಕೊಂಡು ನಿಂತರೂ ಯಾರೂ ಪ್ರಶ್ನೆ ಮಾಡದ ಹಿನ್ನೆಲೆಯಲ್ಲಿ ಯುವ ಜೋಡಿ ತಮ್ಮ ಆಪ್ತತೆಯನ್ನು ಮತ್ತಷ್ಟು ಮುಂದುವರೆಸಿದೆ. ಈ ವೇಳೆ ಮೈಮರೆತು ಇಬ್ಬರೂ ಪರಸ್ಪರ ಚುಂಬಿಸಿಕೊಂಡಿದ್ದಾರೆ. ಈ ಕುರಿತಂತೆ ಟ್ವಿಟರ್‌ನಲ್ಲಿ ಸ್ಯಾಮ್ ಎನ್ನುವ ವ್ಯಕ್ತಿಯೊಬ್ಬರು ಕೆಪಿಎಸ್‌ಬಿ52 ಎಂಬ ಹೆಸರಿನ ಖಾತೆಯಿಂದ ವಿಡಿಯೋ ಪೋಸ್ಟ್ ಹಂಚಿಕೊಂಡಿದ್ದು,ಬೆಂಗಳೂರು ಮೆಟ್ರೋ ರೈಲು…
ಬೆಂಗಳೂರು : ಅಶ್ಮಿಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು ಇದೀಗ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಕುಟುಂಬದ ಒತ್ತಡದ ಹಿನ್ನೆಲೆಯಲ್ಲಿ ಇದೀಗ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಈಗ ಕುಟುಂಬಸ್ಥರ ಒತ್ತಡದ ಮೇರೆಗೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕಳೆದ ಹತ್ತು ದಿನಗಳಿಂದ ಪ್ರಜ್ವಲ್ ವಿದೇಶದಲ್ಲಿ ತಲೆ ಮರಸಿಕೊಂಡಿದ್ದರು. ರೇವಣ್ಣ ಬಂಧನದ ಬೆನ್ನೆಲೆ ಪ್ರಜ್ವಲ್ ಗೆ ಕುಟುಂಬದಿಂದ ಒತ್ತಡ ಹೆಚ್ಚಾಗಿದೆ. ಜಾಮೀನು ಸಿಗಲಿ ಸಿಗದಿರಲಿ ವಿಚಾರಣೆಗೆ ಹಾಜರಾಗುವಂತೆ ಒತ್ತಡ ಹೇರಿದ್ದಾರೆ. ಹೀಗಾಗಿ ವಕೀಲರಿಗೆ ಮಾಹಿತಿ ನೀಡಿ ಪ್ರಜ್ವಲ್ ರೇವಣ್ಣ ಇದೀಗ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕಳೆದ 10 ದಿನಗಳಿಂದ ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್ಪೋರ್ಟ್ ಪಡೆದು ಜರ್ಮನಿಗೆ ತೆರಳಿದ್ದರು. ವಿದೇಶಕ್ಕೆ ತೆರಳಿದ ಬಳಿಕ ಸಂತ್ರಸ್ತ ಮಹಿಳೆ ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ಐಟಿ ರಚನೆ…
ಹುಬ್ಬಳ್ಳಿ : ಬಿಜೆಪಿ ಯಾವಾಗಲೂ ಸಂವಿಧಾನವನ್ನು ವಿರೋಧಿಸುತ್ತಾ ಬಂದಿದೆ ಹಾಗಾಗಿ ಸಂವಿಧಾನ ವಿರೋಧಿಸುವ ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಒಂದು ಫಿಫಿಲಾಸಫಿಯಾಗಿದೆ. ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೀಳು ಮಟ್ಟದ ರಾಜಕಾರಣಕ್ಕೆ ಕೈ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲಸ ಜನರನ್ನು ಜೋಡಣೆ ಮಾಡುವುದಾಗಿದೆ. ಬಿಜೆಪಿಯವರದ್ದು ಜನರನ್ನು ವಿಭಜನೆ ಮಾಡುವ ಕೆಲಸವಾಗಿದೆ. ಬಿಜೆಪಿ ಯಾವಾಗಲೂ ಮೀಸಲಾತಿ ವಿರೋಧಿಯಾಗಿದೆ ಎಂದು ಕಿಡಿ ಕಾರಿದರು. ಸಂವಿಧಾನ ವಿರೋಧಿಸುವುದು ಬಿಜೆಪಿ ಆರ್ ಎಸ್ ಎಸ್ ಆಂತರಿಕ ಫಿಲಾಸಫಿಯಾಗಿದೆ. ಬಿಜೆಪಿಯವರಿಗೆ ಸಂವಿಧಾನ ಮೀಸಲಾತಿ ಮೇಲೆ ನಂಬಿಕೆ ಇಲ್ಲ. ಗುಜರಾತ್ ನಲ್ಲಿ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಮೀಸಲಾತಿ ನೀಡಿದೆ ಎಂದರು. ಆದರೆ ನಾವು ಶೈಕ್ಷಣಿಕ ಆರ್ಥಿಕವಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿದ್ದೇವೆ. ನಾವು ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಚ್ಚರಿಯ ಫಲಿತಾಂಶ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ವಶಪಡಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ.ಈ ಮಧ್ಯ ಬೆಂಗಳೂರಿನಲ್ಲಿ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು 2019ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಪಕ್ಕದಲ್ಲಿ ಕೂರಿಸಿಕೊಂಡು ಪ್ರಚಾರ ಮಾಡಿದರು ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣರನ್ನು ಪಕ್ಕದಲ್ಲಿ ಕೂರಿಸಿಕೊಂಡು ಪ್ರಚಾರ ಮಾಡಿದ್ದರು. ಕಡೂರಿನ ಎಪಿಎಂಸಿ ಮೈದಾನದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಿದ್ದರು.ಪ್ರಜ್ವಲ್ ಯುವಕ ಓಡಾಡ್ತಾರೆ ಕೆಲಸ ಮಾಡುತ್ತಾರೆ ಎಂದು ಹೇಳಿದ್ದರು. 2019ರ ಏಪ್ರಿಲ್ 14ರಂದು ಪ್ರಜ್ವಲ್ ಹಾಡಿ ಹೊಗಳಿ ಟ್ವೀಟ್ ಮಾಡಿದ್ದರು. ಮೈತ್ರಿ ಕೈ ಬಲಪಡಿಸಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು ಎಂದು ಬೆಂಗಳೂರುನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ಮಹಿಳೆ ಕಿಡ್ನ್ಯಾಪ್ ಕೆಎಸ್ ನಲ್ಲಿ ಎಚ್ ಡಿ ರೇವಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಮಾಜಿ ಸಚಿವ ಎಚ್ ಡಿ ರೇವಣ್ಣ ರನ್ನು ಬಂಧಿಸಿದ್ದು ಸರಿಯಾಗಿದೆ ಎಂದು…
ಕೊಪ್ಪಳ : ನಾವು ಕಾಂಗ್ರೆಸ್ ಗೆ ಮತ ಹಾಕುವುದಿಲ್ಲ ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಗ್ರಾಮದಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದರು. ದ್ಯಾಮಣ್ಣ ಮನೆಗೆ ಬಂದ ಕಾರ್ಯಕರ್ತರು ಕಾಂಗ್ರೆಸ್ಗೆ ಓಟ ಹಾಕುವಂತೆ ಮನವಿ ಮಾಡಿದ್ದಾರೆ. ಈ ವೇಳೆ ದ್ಯಾಮಣ್ಣ ನಾನು ಕಾಂಗ್ರೆಸ್ಗೆ ಮತ ಹಾಕಲ್ಲ. ನಾವು ಬಿಜೆಪಿಗೆ ಮತ ಹಾಕುತ್ತೇವೆ ಅಂತ ಹೇಳಿದ್ದಾರೆ. ಇದೇ ಕಾರಣಕ್ಕೆ ಜಗಳ ಮಾಡಲಾಗಿದ್ದು, ಗವಿಸಿದ್ದಪ್ಪ, ಗಂಗಣ್ಣ, ನೀಲಪ್ಪ, ಬಸವರಾಜ್ ಸೇರಿದಂತೆ ಎಂಟಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಂದ ದ್ಯಾಮಣ್ಣ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾರವಾರ : ಪತಿ ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳದ ಮಧ್ಯದಲ್ಲಿ ಮಾತು ಬಾರದ ತಮ್ಮ ಮಗುವನ್ನೇ ಮೊಸಳೆಗಳು ಇರುವ ನಾಲೆಗೆ ಎಸೆದು ನಂತರ ಪಶ್ಚಾತಾಪ ಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ಎಂಬ ಮಹಿಳೆ ದುಷ್ಕೃತ್ಯವೆಸಗಿದ್ದಾರೆ. ಮೃತ 6 ವರ್ಷದ ವಿನೋದ್ ಮಾತು ಬಾರದ ಮಗು. ಇದನ್ನೇ ನೆಪಮಾಡಿಕೊಂಡಿದ್ದ ಗಂಡ ಕುಡಿದು ಹೆಂಡತಿ ಜತೆ ಜಗಳವಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಅಂತಾ ಗಂಡ ರವಿಕುಮಾರ್ ಬೈಯ್ಯುತ್ತಿದ್ದ. ಹೀಗಾಗಿ ಗಂಡನ ಜತೆ ಗಲಾಟೆಯ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋದ ತಾಯಿ ಸಾವಿತ್ರಿ ನಾಲೆಗೆ ಎಸೆದಿದ್ದಾರೆ. ನಿನ್ನೆ ರಾತ್ರಿ ಗಂಡ ರವಿಕುಮಾರ್ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದ ಸಾವಿತ್ರಿ, ಕೋಪದಲ್ಲಿ ಮಗುವನ್ನ ಮೊಸಳೆಗಳಿದ್ದ ನಾಲೆಗೆ ಎಸೆದು ನಂತರ ಪಶ್ಚಾತಾಪದಿಂದಾಗಿ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಮೊಸಳೆ ಬಾಯಲ್ಲಿ 6 ವರ್ಷದ ಮಗು ವಿನೋದ್ ಸಾವಿಗೀಡಾಗಿದೆ. ನಿನ್ನೆ ರಾತ್ರಿಯಿಂದ ಶವವನ್ನು ತೆಗೆಯಲು ಮುಳುಗು ತಜ್ಞರಿಂದ…
ದೊಡ್ಡಬಳ್ಳಾಪುರ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಹೆಂಡತಿಯನ್ನು ಪತಿಯೇ ಕೊಲೆ ಮಾಡಿ ಪತ್ನಿ ಕಾಣೆಯಾಗಿದ್ದಾಳೆ ಎಂದು ಠಾಣೆಗೆ ಬಂದು ದೂರು ನೀಡಿದ್ದ ಪತಿಯೇ ಈಗ ಪೊಲೀಸರಿಗೆ ಅತಿಥಿಯಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ 19 ವರ್ಷದ ವೀಣಾ, ಏಪ್ರಿಲ್ 22ರಂದು ಸೋಮವಾರ ನಾಪತ್ತೆಯಾಗಿದ್ದರು. ಗಾಬರಿಗೊಂಡ ಆಕೆಯ ಗಂಡ ರವಿ ಹೆಂಡತಿ ಕಾಣೆಯಾದ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದ. ಅದಾದ ಒಂದು ವಾರಕ್ಕೆ ತೂಬಗೆರೆಯ ನಾರಸಿಂಹನಹಳ್ಳಿಯ ಅರಣ್ಯ ಪ್ರದೇಶದಲ್ಲಿ ಫಾರೆಸ್ಟ್ ಗಾರ್ಡ್‌ಗೆ ಸುಟ್ಟು ಕರಕಲಾಗಿರುವ ಅಪರಿಚಿತ ಶವ ಕಣ್ಣಿಗೆ ಬಿದ್ದಿತ್ತು. ಈಕೆಯನ್ನು ಕೊಂದವರ ತನಿಖೆ ಕೈಗೆತ್ತಿಕೊಂಡ ಪೊಲೀಸರು, ವೀಣಾಳ ಅತ್ತೆ, ಮಾವ, ಆಕೆಯ ಗಂಡ ಮತ್ತು ಸಂಬಂಧಿಕರ ವಿಚಾರಣೆ ನಡೆಸಿದಾಗ ಆಕೆಯ ಗಂಡನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿ ರವಿಯನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಹೆಂಡತಿಯನ್ನು ಕೊಂದಿದ್ದು ನಾನೇ ಎಂದು ಆತ ಬಾಯಿ ಬಿಟ್ಟಿರುವುದಾಗಿ ಪೊಲೀಸ್ ಮೂಲಗಳು…
ಬೆಂಗಳೂರು : ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನಾಪ್ ಆರೋಪ ಪ್ರಕರಣದಲ್ಲಿ A2 ಆರೋಪಿಯಾಗಿರುವ ಸತೀಶ್ ಬಾಬು ಕಿಡ್ನಾಪ್ ಮಾಡಿಸಿದ್ದು ರೇವಣ್ಣನೇ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ರೇವಣ್ಣ ಹೇಳಿದ್ದಕ್ಕೆ ಮಹಿಳೆ ಕರೆದೊಯ್ದು ಬಿಟ್ಟು ಬಂದಿದ್ದೆ ಎಂದು ಎಸ್‌ಐಟಿ ಮುಂದೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನನ್ನ ತಾಯಿ ಕಾಣೆಯಾಗಿದ್ದಾರೆ ಹುಡುಕಿಕೊಡಿ ಎಂದು ಅಪಹರಣಕ್ಕೆ ಒಳಗಾದ ಮಹಿಳೆಯ ಆ ಮಗ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ದೂರು ನೀಡಿದ್ದ ಈ ಹಿನ್ನೆಲೆಯಲ್ಲಿ ಪೊಲೀಸರು A1 ಆರೋಪಿ HD ರೇವಣ್ಣ ಹಾಗೂ A 2 ಆರೋಪಿಯಾಗಿ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಬಾಬು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಈ ನೆಲೆಯಲ್ಲಿ ನಿನ್ನೆ ಎಸ್ಐಟಿ ಅಧಿಕಾರಿಗಳು ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆಯ ವೇಳೆ ಎಚ್ ಡಿ ರೇವಣ್ಣ ಅವರು ಕಿಡ್ನ್ಯಾಪು ನನಗೂ ಯಾವುದೇ ರೀತಿಯಾದ ಸಂಬಂಧ ಇಲ್ಲ ಎಂದು ಹೇಳಿಕೆನು ನೀಡಿದರು ಇದೀಗ ಸತೀಶ್…












