Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಮಂಡ್ಯ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭ್ರೂಣ ಲಿಂಗ ಪತ್ತೆ ಮತ್ತು ಬಾಲ ಗರ್ಭಿಣಿಯರ ವಿಚಾರವಾಗಿ ಸಂಚಲನ ಮೂಡುತ್ತಿದೆ. ಇತ್ತೀಚೆಗಷ್ಟೇ ಅಕ್ರಮ ಸ್ಕ್ಯಾನಿಂಗ್ ಸೆಂಟರ್ ಮೇಲೆ ದಾಳಿ ನಡೆಸಿ ಮೂವರು ವೈದ್ಯರನ್ನು ಬಂಧಿಸಿದ ಬೆನ್ನಲ್ಲೇ, ಮತ್ತೊಂದು ಕಹಿಸತ್ಯ ಹೊರಬಿದ್ದಿದೆ. ಕಳೆದ ಐದು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ ಬರೊಬ್ಬರಿ 1,354 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿರುವುದು ಜಿಲ್ಲಾಡಳಿತವನ್ನು ಬೆಚ್ಚಿಬೀಳಿಸಿದೆ. ಕಳೆದ ಐದು ವರ್ಷಗಳ ಅಂಕಿ-ಅಂಶಗಳನ್ನು ಗಮನಿಸಿದಾಗ, 18 ವರ್ಷಕ್ಕಿಂತ ಕೆಳಗಿನ ಹೆಣ್ಣುಮಕ್ಕಳು ಗರ್ಭಧರಿಸುತ್ತಿರುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವುದು ಕಂಡುಬಂದಿದೆ. ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವರದಿಗಳ ಪ್ರಕಾರ, ಗ್ರಾಮೀಣ ಭಾಗಗಳಲ್ಲಿ ಈ ಪ್ರಮಾಣ ಹೆಚ್ಚಿದೆ. ಬಾಲ್ಯ ವಿವಾಹ ಮತ್ತು ಜಾಗೃತಿಯ ಕೊರತೆಯೇ ಇದಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಇತ್ತೀಚೆಗೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಮತ್ತಷ್ಟು ಆಘಾತಕಾರಿ ವಿಷಯಗಳು ಹೊರಬಂದಿವೆ. ಈ ಕೇಂದ್ರಗಳಲ್ಲಿ ನಿಯಮ…

Read More

ಬೆಂಗಳೂರು: ಇತ್ತೀಚೆಗೆ ರಾಜ್ಯದ ವಿವಿಧೆಡೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವೇಳೆ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಮುಂದಾಗಿದೆ. ಜನಿವಾರ ತೆಗೆಸಿದ್ದರಿಂದ ಮಾನಸಿಕವಾಗಿ ಕುಗ್ಗಿದ ಮತ್ತು ಪರೀಕ್ಷೆಯ ಮೇಲೆ ಏಕಾಗ್ರತೆ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ತಪಾಸಣೆಯ ನೆಪದಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿತ್ತು. ಈ ಘಟನೆಯು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಪರೀಕ್ಷಾ ನಿಯಮಾವಳಿಗಳಲ್ಲಿ ಜನಿವಾರ ತೆಗೆಯುವ ಬಗ್ಗೆ ಯಾವುದೇ ಸ್ಪಷ್ಟ ಉಲ್ಲೇಖವಿಲ್ಲದಿದ್ದರೂ, ಸಿಬ್ಬಂದಿಗಳು ಅತಿರೇಕದ ವರ್ತನೆ ತೋರಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ನೊಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಸರ್ಕಾರಕ್ಕೆ ದೂರು ನೀಡಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌಲಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನಸಾಮಾನ್ಯದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ ಬೌರಿಂಗ್ ಆಸ್ಪತ್ರೆಯ ಮುಖ್ಯಸ್ಥರನ್ನು ಸಭೆಯಲ್ಲಿ ತರಾಟೆ ತೆಗೆದುಕೊಂಡರು ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಕೊಟ್ಟಿದ್ದಾರೆ. ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ಯಾಕೆ ನೀವು ಯಾಕೆ ಅದನ್ನು ನೋಡಿಕೊಳ್ಳಲಿಲ್ಲ ಅದೇ ಈ ಒಂದು ದುರಂತಕ್ಕೆ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗರಾಂ ಆಗಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನ ಸಾವನಪ್ಪಿದ್ದರು. ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ಗೆ ಆದೇಶ ಸಭೆಯ ಉದ್ದಕ್ಕೂ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಬೌರಿಂಗ್ ಆಸ್ಪತ್ರೆಯ ಮುಖ್ಯಸ್ಥರಿಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌಲಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನಸಾಮಾನ್ಯದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಬೌರಿಂಗ್ ಆಸ್ಪತ್ರೆಯ ಮುಖ್ಯಸ್ಥರನ್ನು ಸಭೆಯಲ್ಲಿ ತರಾಟೆ ತೆಗೆದುಕೊಂಡರು. ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಕೊಟ್ಟಿದ್ದಾರೆ. ಕಾರ್ಯಪಾಲಕ ಇಂಜಿನಿಯರ್ ನನ್ನು ಅಮಾನತು ಮಾಡಿ ಎಂದು ಆದೇಶ ಹೊರಡಿಸಿದ್ದಾರೆ. ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ಯಾಕೆ ನೀವು ಯಾಕೆ ಅದನ್ನು ನೋಡಿಕೊಳ್ಳಲಿಲ್ಲ ಅದೇ ಈ ಒಂದು ದುರಂತಕ್ಕೆ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗರಾಂ ಆಗಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನ ಸಾವನಪ್ಪಿದ್ದರು. ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

Read More

ಹಾಸನ : ಪ್ರೇಯಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಇದೀಗ ಜವಾವಧಿ ಶಿಕ್ಷೆ ವಿಧಿಸಿ ಹಾಸನದ 3ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ಹುಟ್ಟುಹಬ್ಬ ಆಚರಣೆಗೆ ಬಂದಿದ್ದ ಪ್ರೇಯಸಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ್ದು ಅಲ್ಲದೇ ಉಸಿರುಗಟ್ಟಿಸಿ ಕೊಲೆ ಮಾಡಿದ ಪಾಪಿ ಕಳೆದ 2018ರ ಏಪ್ರಿಲ್ 22ರಂದು ಪ್ರಿಯಕರ ಪ್ರವೀಣ್ (29) ಎಂಬಾತ ಈ ಒಂದು ಕೃತ್ಯ ಎಸಗಿದ್ದ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಪ್ರಕರಣದ A1ಹಾಡ್ಲಗಿರಿಯ ಪ್ರವೀಣ್ ಗೆ ಇದೀಗ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದ್ದು ಸಾಕ್ಷಿ ನಶಾ ಆರೋಪದಲ್ಲಿ A2 ತಿಮ್ಮಣ್ಣನಿಗೆ ಎರಡು ವರ್ಷ ಶಿಕ್ಷೆ ವಿಧಿಸಿದೆ. ಪ್ರಕರಣದ ತನಿಖೆ ನಡೆಸಿ ಇನ್ಸ್ಪೆಕ್ಟರ್ ಪಿಕೆ ರಾಜು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸದ್ದರು. ಏಪ್ರಿಲ್ 27 ರಂದು ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

Read More

ಹಾಸನ : ಹಾಸನದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು ಪ್ರೀವೆಡ್ಡಿಂಗ್ ಶೂಟ್ ಗೆ ಕಾರಿನಲ್ಲಿ ವರ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು.…

Read More

ಧಾರವಾಡ : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಒಂದು ಪತ್ತೆಯಾಗಿದೆ. ಟಿಬೆಟಿಯನ್ ಮೂಲದ ಸನ್ಯಾಸಿಯ ಥಾಶಿದೊಂಡು (39) ಎನ್ನುವ ಸನ್ಯಾಸಿಯ ಮೃತದೇಹ ಪತ್ತೆಯಾಗಿದೆ. ಇವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ನಿವಾಸಿಯಾಗಿದ್ದಾರೆ. ಇನ್ನು ಮೃತ ಥಾಶಿದೊಂಡು ಅವರ ಮುಖದ ಮೇಲೆ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗುತ್ತಿದೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ನವದೆಹಲಿ : ಬಾಂಗ್ಲಾದೇಶದ ಕಿಶೋರ್‌ಗಂಜ್ ನ ಭೈರಬ್ ರೈಲು ನಿಲ್ದಾಣದಲ್ಲಿ ಚಲಿಸುವ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಬಿದ್ದು ತಂದೆ ಮತ್ತು ಅವರ ಒಂದು ವರ್ಷದ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ತಂದೆಯ ಧೈರ್ಯ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿಸುತ್ತಿದ್ದಾರೆ. ಘಟನೆಯ ವಿವರ: ವರದಿಗಳ ಪ್ರಕಾರ, ತಂದೆ ತನ್ನ ಒಂದು ವರ್ಷದ ಮಗುವಿನೊಂದಿಗೆ ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಪ್ಲಾಟ್‌ಫಾರ್ಮ್ ಮತ್ತು ಹಳಿಯ ನಡುವಿನ ಅಂತರಕ್ಕೆ ಬಿದ್ದಿದ್ದಾರೆ. ಕ್ಷಣಾರ್ಧದಲ್ಲಿ ರೈಲು ವೇಗ ಪಡೆದುಕೊಂಡಿದ್ದರಿಂದ, ಅವರು ಮೇಲಕ್ಕೆ ಬರಲು ಸಾಧ್ಯವಾಗದೆ ಹಳಿಯ ಪಕ್ಕದಲ್ಲೇ ಸಿಲುಕಿಕೊಂಡರು. ಪ್ಲಾಟ್‌ಫಾರ್ಮ್‌ನಲ್ಲಿದ್ದ ಪ್ರಯಾಣಿಕರು ಇದನ್ನು ಕಂಡು ಗಾಬರಿಯಿಂದ ಕಿರುಚಾಡತೊಡಗಿದರು. ತಂದೆಯ ಅದಮ್ಯ ಧೈರ್ಯ: ಸಾವು ಕಣ್ಣೆದುರೇ ಕಂಡರೂ ಎದೆಗುಂದದ ಆ ತಂದೆ, ತನ್ನ ಮಗುವನ್ನು ರಕ್ಷಿಸಲು ತೋರಿದ ಸಮಯಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ರೈಲು ಪೂರ್ಣವಾಗಿ ಹಾದು ಹೋಗುವವರೆಗೆ ಅವರು ಪ್ಲಾಟ್‌ಫಾರ್ಮ್‌ನ ಗೋಡೆಗೆ…

Read More

ಬೀದರ್ : ಬೀದರ್ನಲ್ಲಿ ಬೈಕ್ ಹಾಗೂ ಕಾರಿನ ಮಧ್ಯ ಭೀಕರವಾದ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಳಸದಾಳ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಕಳಸದಾಳ ಗ್ರಾಮದ ಮಹಾತ್ಮ ಗಾಂಧಿ ಸಕ್ಕರೆ ಕಾರ್ಖಾನೆ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಬೈಕ್ನಲ್ಲಿ ಇದ ಕಾಕನಾಳ ಗ್ರಾಮದ ನಿವಾಸಿ ರಾಜೇಂದ್ರ ಪಾಂಚಾಳ (28) ಕಳಸದಾಳದ ವಿಠಲ ಪಾಂಚಾಳ (25) ಹಾಗೂ ಮಹೇಶ್ ಬಿರಾದಾರ್ (25) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬಾಲ್ಕಿ ತಾಲೂಕು ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ವಿವರ: ಮೃತರು ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಅತೀ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗೊಂಡ ಮೂವರು ಸ್ಥಳದಲ್ಲೇ ಪ್ರಾಣ…

Read More

ಕೊಪ್ಪಳ : ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಇಂದು ಶಿಕ್ಷೆ ತೀರ್ಪು ಪ್ರಕಟಿಸಿದರು. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು. ಕಳೆದ ಕೆಲವು ವರ್ಷಗಳ ಹಿಂದೆ ನಗರದ ಸಾರ್ವಜನಿಕ ಪ್ರದೇಶದಲ್ಲಿ ನಡೆದಿದ್ದ ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅವರ ಭೀಕರ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೊಪ್ಪಳದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಈ ತೀರ್ಪು ನೀಡಿದೆ. ಅಪರಾಧದ ತೀವ್ರತೆ ಮತ್ತು ಕ್ರೌರ್ಯವನ್ನು ಪರಿಗಣಿಸಿದ ನ್ಯಾಯಾಧೀಶರು, ಇದು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ಅಭಿಪ್ರಾಯಪಟ್ಟು ಆರು ಜನರಿಗೆ ಮರಣದಂಡನೆ ವಿಧಿಸಿದ್ದಾರೆ.…

Read More