Author: kannadanewsnow05

ಬೆಂಗಳೂರು : ಕಳೆದ ಮೇ 20 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿಲಾಗಿತ್ತು. ಈ ಒಂದು ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದು ಇದೀಗ ಸಿಸಿಬಿ ವಿಚಾರಣೆಗೆ ಹೇಮಾ ಅವರು ಹಾಜರಾಗಿದ್ದು ಅವರನ್ನು ಬಂಧಿಸಿದ್ದಾರೆ ಎಂದು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರು ಹೊರಗಡೆ ಬಂದು ವಿಡಿಯೋ ರೆಕಾರ್ಡ್ ಮಾಡಿ ಪ್ರಕರಣದ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡಿದರು. ಅಲ್ಲದೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ಎರಡು ಬಾರಿ ನೋಟಿಸ್ ನೀಡಿದರೂ ಕೂಡ ಹೇಮಾ ಅವರು ಅದಕ್ಕೆ ಕ್ಯಾರೆ ಅನ್ನದೆ ವಿಚಾರಣೆಗೆ ಗೈರಾಗಿದ್ದರು. ಇದೀಗ ತೆಲುಗು ನಟಿ ಹೇಮಾಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ನಟಿ ಹೇಮಾ ಅವರು ಬುರ್ಖಾಹಾಕಿಕೊಂಡು ವಿಚಾರಣೆಗೆ ಬಂದಿದ್ದರು ಪಾರ್ಟಿಯಲ್ಲಿ ಹೇಮಾ ಡ್ರಗ್ಸ್…

Read More

ಉಡುಪಿ : ನಿನ್ನೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪುತ್ತಿರುವವರ ಘಟನೆ ನಡೆದಿದ್ದು, ಇದೀಗ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕೂಡ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಟ್ರಾನ್ಸ್ಫಾರ್ಮರ್ ದುರಸ್ತಿಯ ವೇಳೆ ಸಲೀಂ 38 ಸಾವನ್ನುಪ್ಪಿರುವ ದುರ್ದೈವಿ ಎಂದು ಹೇಳಲಾಗುತ್ತಿದೆ ಬೈಂದೂರು ಮೆಸ್ಕಾಂ ನಲ್ಲಿ ಕಳೆದ 8 ವರ್ಷದಿಂದ ಸಲೀಂ ಕೆಲಸ ಮಾಡುತ್ತಿದ್ದರು ಬೈಂದೂರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಗಾವಣೆಯಲ್ಲಿ ತೆಲಂಗಾಣಕ್ಕೆ ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಆಗಿದೆ ಎಂದು ಗಂಭೀರ ಆರೋಪ ಮಾಡಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೈ ಹೈಕಮಾಂಡ್ಗೆ ತಲುಪಿಸಲು ಹಣ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜು ಹೇಳಿಕೆಯನ್ನು ನೀಡಿದ್ದು, ಈ ಒಂದು ಪ್ರಕರಣದಲ್ಲಿ ಸಿಎಂ ಸಹ ತಪ್ಪಿತಸ್ಥರು. ಅವರ ಒಂದು ನಿಗಾವಣೆಯಲ್ಲಿ ಹಣ ವರ್ಗಾವಣೆ ಮಾಡಲಾಗಿದೆ.ಇದು ಸಿಎಂ ಮೂಗಿನ ಅಡಿಯಲ್ಲಿ ನಡೆದ ಅಕ್ರಮವಾಗಿದೆ.ಆರ್ಥಿಕ ಇಲಾಖೆಯ ಅನುಮತಿ ಇಲ್ಲದೆ ಹಣ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ತೆಲಂಗಾಣ ಚುನಾವಣೆಗೆ ದಲಿತರ ಹಣವನ್ನು ವರ್ಗಾವಣೆ ಮಾಡಲಾಗಿದೆ. ಕೂಡಲೇ ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆಯನ್ನು ಪಡೆಯಬೇಕು. ಇಲ್ಲದಿದ್ದರೆ ವಿಜಯೇಂದ್ರ ಹಾಗೂ ಆರ್ ಅಶೋಕ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲಾಗುತ್ತದೆ.ಈ…

Read More

ಮಂಡ್ಯ : ಕಾವೇರಿ ನದಿಯಲ್ಲಿ ಅಪರಿಚಿತ ಮಹಿಳೆ ಪುರುಷನ ಶವ ಪತ್ತೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದ ಬಳಿ ಶವ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ನದಿಯಲ್ಲಿ ಶವಗಳು ತೇಲುತ್ತಿವೆ.ಈ ವೇಳೆ ಜನರು  ತೇಲುತ್ತಿರುವ ಶವಗಳನ್ನು ನೋಡಲು ಮುಗಿಬಿದ್ದಿದ್ದಾರೆ. ಹೌದು ಕಾವೇರಿ ನದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವಗಳು ನದಿಯಲ್ಲಿ ತೇಲುತ್ತಿದ್ದು, ಜೋಡಿ ಶವ ನೋಡಲು ಈ ವೇಳೆ ಜನರು ಮುಗಿಬಿದ್ದರೂ. ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಕಳೆದ ಮೇ 20 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿಲಾಗಿತ್ತು. ಈ ಒಂದು ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದು ಇದೀಗ ಸಿಸಿಬಿ ವಿಚಾರಣೆಗೆ ಹೇಮಾ ಅವರು ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರು ಹೊರಗಡೆ ಬಂದು ವಿಡಿಯೋ ರೆಕಾರ್ಡ್ ಮಾಡಿ ಪ್ರಕರಣದ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡಿದರು. ಹಾಗಾಗಿ ಹೇಮಾಗೆ ಸಿಸಿಬಿ ಎರಡು ಸಲ ನೋಟಿಸ್ ನೀಡಿದರು ವಿಚಾರಣೆಗೆ ಹಾಜರಾಗಿರಲಿಲ್ಲ. ಅದಕ್ಕೆ ಕ್ಯಾರೆ ಅನ್ನದೆ ವಿಚಾರಣೆಗೆ ಗೈರಾಗಿದ್ದರು. ಇದೀಗ ಮೊದಲ ಬಾರಿಗೆ ನಟಿ ಹೇಮಾ ಅವರು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಅದರಂತೆ ಇಂದು ನಟಿ ಹೇಮಾಳನ್ನು ವಶಕ್ಕೆ ಪಡೆಯಲು ಸಿಸಿಬಿ ಸಿದ್ಧತೆ ಮಾಡಿಕೊಂಡಿದ್ದಾರೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ…

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಹಲವು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.ಕಿನೋ ಟಾಕೀಸ್ ಬಳಿ ಅಂಡರ್ ಪಾಸ್ ನಲ್ಲಿ ಬಿಎಂಟಿಸಿ ಬಸ್ ಮುಳುಗಡೆಯಾಗಿ ಪ್ರಯಾಣಿಕರು ಪ್ರಾಣಭಯದಲ್ಲಿ ಇದ್ದರು ಇವಳೇ ಸ್ಥಳದಲ್ಲಿದ್ದ ಜನರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಿಂದ ಜನಜೀವನ ಅಸ್ತವೇಸ್ತವಾಗಿದ್ದು, ಕಿನೋ ಟಾಕೀಸ್ ಬಳಿ ಅಂಡರ್ ಪಾಸ್ ನಲ್ಲಿ BMTC ಬಸ್ ಸಿಲುಕಿ ಮುಳುಗಡೆಯಾಗಿದೆ. ನೆಲಮಂಗಲದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ಬಸ್ ಇದೀಗ ಸಂಪೂರ್ಣ ಮುಳುಗಡೆಯಾಗಿತ್ತು. ಈ ವೇಳೆ ಸ್ಥಳೀಯರ ನೆರವಿನಿಂದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬಸ್ ನಲ್ಲಿ ಸಿಲುಕಿದ್ದ ಸ್ತ್ರೀಯರು ಮಕ್ಕಳನ್ನು ಹೊರಗೆ ಕರೆತಂದ ಚಾಲಕ ಮತ್ತು ನಿರ್ವಾಹಕ. ಪ್ರತಿಬಾರಿ ಮಳೆ ಬಂದಾಗಲೂ ಈ ಒಂದು ಅಂಡರ್ ಪಾಸ್ ಸಂಪೂರ್ಣವಾಗಿ ಜಲಾವೃತವಾಗುತ್ತದೆ.ಹಲವು ಬಾರಿ ರಸ್ತೆಯನ್ನು ದುರಸ್ತಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಬಸ್ ನಲ್ಲಿ ಸಿಲುಕಿದ್ದ ಸ್ತ್ರೀಯರು ಮಕ್ಕಳು ಸಿರಿಗಂತೆ ಎಲ್ಲರನ್ನು ಚಾಲಕ್ ಮತ್ತು ನಿರ್ವಾಹಕರು ಸ್ಥಳೀಯರ ನೆರವನಿಂದ ರಕ್ಷಣೆ ಮಾಡಿದ್ದಾರೆ.…

Read More

ವಿಜಯಪುರ : ಜಿಲ್ಲೆಯ ತಿಕೋಟಾ ಸಮೀಪ ನಿನ್ನೆ ತಡರಾತ್ರಿ ಬೈಕ್‌ ಮತ್ತು ಸರ್ಕಾರಿ ಬಸ್‌ ನಡುವೆ ನಡೆದ ರಸ್ತೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ರಾಮು ರಾಠೋಡ್‌ ಹಾಗೂ ಕಿಟ್ಟು ಎಂದು ಹೇಳಲಾಗುತ್ತಿದ್ದು, ಬಸ್ ತೆರಳುತ್ತಿದ್ದ ವೇಳೆ ಬೈಕ್ ಗೆ ಡಿಕ್ಕಿಯಾಗಿ ರಾಮು ಕಿಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ತಿಕೋಟಾ ಪೊಲೀಸ್‌ ಠಾಣಾ ವ್ಯಾಪ್ತಿಯ ರತ್ನಾಪುರ ಕ್ರಾಸ್‌ ಬಳಿ ಈ ಒಂದು ಅಪಘಾತ ನಡೆದಿದೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯಾದ್ಯಂತ ಇಂದು ನೈರುತ್ಯ ಮನ್ಸೂನ್ ಪ್ರವೇಶ ಮಾಡಿದ್ದೂ, ಇಂದು ಬೆಂಗಳೂರಿನ ಹಲವಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕೂಡ ಭಾರಿ ಮಳೆಯಾಗಿದೆ. ಅಲ್ಲದೆ ಇತ್ತ ಮಹಾಲಕ್ಷ್ಮಿ ಲೇಔಟ್ ನ ಮಾರುತಿ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರ ಧರೆಗೊಳದಿದ್ದರಿಂದ ಕಾರಿನ ಮುಂಭಾಗ ಭಾಗಶಹ ಜಿತಮ್ಗೊಂಡಿದೆ ಚಾಲಕ ಕಾರು ನಿಲ್ಲಿಸಿ ತೆರಳಿದ ಬಳಿಕ ಮರ ಬಿದ್ದಿದ್ದರಿಂದ ದುರಂತ ಒಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಬೆಂಗಳೂರಿನ ಹೊಸನಗರ, ಶಾಂತಿನಗರ, ಯಶವಂತಪುರ, ಹೆಬ್ಬಾಳ, ಮೆಜೆಸ್ಟಿಕ್, ರಾಜಾಜಿನಗರ ಬನಶಂಕರಿ ಸಿಟಿ ಮಾರ್ಕೆಟ್ ನಗರದ ಬಹುತೇಕ ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ ಮಳೆಯಲ್ಲಿ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ ಘಟನೆ ನಡೆಯಿತು. ಮೆಜೆಸ್ಟಿಕ್ ರಾಜಾಜಿನಗರ ಮಲ್ಲೇಶ್ವರಂ, ಶಾಂತಿನಗರ, ವಿಧಾನಸೌಧ ಟೌನ್ ಹಾಲ್ ಕೆಆರ್ ಮಾರ್ಕೆಟ್ ಶಾಂತಿನಗರ, ವಿಧಾನಸೌಧ, ಕಾರ್ಪೊರೇಷನ್ ಶಿವಾಜಿನಗರ, ಜಯನಗರ, ಸದಾಶಿವನಗರ, ಹೆಬ್ಬಾಳ, ಯಲಹಂಕ ವಿಜಯನಗರ, ಮೈಸೂರು ರಸ್ತೆ, ಕೆಂಗೇರಿ, ಮಾಗಡಿ ರಸ್ತೆ,…

Read More

ಶಿವಮೊಗ್ಗ : ವಾಲ್ಮೀಕಿ ನಿಗಮದ 180 ಕೋಟಿ ರುಪಾಯಿಗಳ 7-8 ಬ್ಯಾಂಕ್ ಖಾತೆಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ದೇಶನದಲ್ಲಿ ವರ್ಗಾಯಿಸಲಾಗಿದೆ.ಈ ಬಗ್ಗೆ ಜೂ.7ರ ನಂತರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಸಚಿವ ಅರಗ ಜ್ಞಾನೇಂದ್ರ ಹರಿಹಾಯ್ದರು. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣದಲ್ಲಿ ಅವರು ಬರೆದಿಟ್ಟಿರುವ ಡೆತ್ ನೋಟ್ ಅನೇಕ ಆಶ್ಚರ್ಯಕರ ಸಂಗತಿಗಳ ಹೊರಹಾಕಿದೆ. ದಲಿತರಿಗೆ ಪರಿಶಿಷ್ಟ ಜನಾಂಗದವರಿಗೆ ಮೀಸಲಿಟ್ಟ ಅನುದಾನ 187 ಕೋಟಿ ಅಕ್ರಮ ವರ್ಗಾವಣೆ ಆಗಿದೆ. ₹85 ಕೋಟಿಯಷ್ಟು ಅವ್ಯವಹಾರ ನಡೆದಿದೆ ಈ ಹಗರಣಕ್ಕೆ ಕಾರಣರಾರು ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಇದರ ಬಗ್ಗೆ ಸರಿಯಾದ ತನಿಖೆಯಾಗಬೇಕು ಎಂದು ಮಾಜಿ ಗೃಹಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಾಜ್ಯ ಸರ್ಕಾರ ಮದ ಏರಿದ ಆನೆಯಂತೆ ವರ್ತಿಸುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ. ಸ್ಟ್ಯಾಂಪ್ ಡ್ಯೂಟಿ, ಮದ್ಯದ ಧಾರಣೆ ಮತ್ತು ವಿದ್ಯುತ್ ಶುಲ್ಕ ಏರಿಕೆ ಯಾಗಿದೆ. ಸಾರ್ವಜನಿಕರಿಗೆ ಆಗಿರುವ ಅನಾನುಕೂಲದ ಬಗ್ಗೆ…

Read More

ಮಂಡ್ಯ : ಹಣ ಪಾವತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಹಾಗೂ ಟೋಲ್ ಸಿಬ್ಬಂದಿ ಮಧ್ಯ ಗಲಾಟೆ ನಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಗೂರು ನಾಗ ಬಳಿ ಈ ಒಂದು ಘಟನೆ ನಡೆದಿದೆ. ಕಾರ್ ಚಾಲಕ ಹಾಗೂ ಟೋಲ್ ಸಿಬ್ಬಂದಿ ನಡುವೆ ಕಿರಿಕ್ ಉಂಟಾಗಿದ್ದು, ಗಣಂಗುರು ಟೋಲ್ ಬಳಿ ಹಣ ಪಾವತಿ ವಿಚಾರಕ್ಕೆ ಗಲಾಟೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣನೂರು ಟೋಲ್ ಬಳಿ ಈ ಒಂದು ಘಟನೆ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನ ಜೊತೆಗೆ ಟೋಲ್ ಸಿಬ್ಬಂದಿ ಕಿರಿಕ್ ಮಾಡಿಕೊಂಡಿದ್ದಾನೆ ಇಬ್ಬರ ಗಲಾಟೆಯಿಂದಾಗಿ ಇತರೆ ವಾಹನ ಸವಾರರು ಪರದಾಟ ನಡೆಸುವಂತಾಯಿತು ಹಾಗಾಗಿ ಗಡಂಗೂರು ಟೋಲ್ ಸಿಬ್ಬಂದಿ ವಿರುದ್ಧ ಸವಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More