Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಇದೀಗ ಸ್ಪೋಟಕ ವಾದಂತಹ ಆರೋಪ ಮಾಡಿದ್ದು, ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿಸಲು ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ ವಿಜಯೇಂದ್ರ ದೆಹಲಿಗೆ ಹೋಗಿ ಬಂದು ಮಾಡುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿಸಲು ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಹಲವು ಬಾರಿ ದೆಹಲಿಗೆ ಹೋಗಿ ಬಂದರೂ, ಅವರ ಕೈಗೆ ಸಿಕ್ಕಿದ್ದೂ ಕೇವಲ ಚೆಂಡು ಮಾತ್ರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ. ಅಪ್ಪ-ಮಗ ದೆಹಲಿಗೆ ಹೋಗುತ್ತಿದ್ದಂತೆ ಯತ್ನಾಳ್ ಪಕ್ಷದಿಂದ ಉಚ್ಚಾಟನೆ ಖಚಿತ ಎಂಬ ಸುಳ್ಳು ಸುದ್ದಿ ಹಬ್ಬುತ್ತದೆ. ಆದರೆ ಅವರು ದೆಹಲಿಯಿಂದ ವಾಪಸ್ ಬರುವಾಗ ತಲೆ ಕೆಳಗೆ ಹಾಕಿಕೊಂಡು ಬರುತ್ತಾರೆ. ಅಪ್ಪ-ಮಗ ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಸಾಧ್ಯವಿಲ್ಲ. ಪಂಚಮಸಾಲಿ ಸಮುದಾಯ…
ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು. ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ. ಹೌದು ಈ ವಿಚಾರವಾಗಿ ಇಂದು ವಿಜಯಪುರ ತಾಲೂಕಿನ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಮಠಾಧೀಶರು,ಬೆಂಬಲಿಗರೊಂದಿಗೆ ಸಭೆ ನಡೆಸಿದರು. ತಮ್ಮ ಎಲ್ಲ ಬೆಂಬಲಿಗರೊಂದಿಗೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ. ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್ ಬೇಕು ಎಂದು ಅನೇಕರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕೂಡ ಈಶ್ವರಪ್ಪ ಮತ್ತು ಬಸನಗೌಡ ಪಾಟೀಲ ಯತ್ನಾಳ ಸೇರಿ…
ಈ ಇಬ್ಬರ ಸೂಚನೆಯಂತೆ ರೇಣುಕಾಸ್ವಾಮಿ ಕಿಡ್ನಾಪ್ ಆಗಿದೆ, ಇದರಲ್ಲಿ ದರ್ಶನ್ ಪಾತ್ರವಿಲ್ಲ : ಜಾಮೀನು ಅರ್ಜಿಯಲ್ಲಿ ಉಲ್ಲೇಖ!
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲು ಸೇರಿ ಬರೋಬ್ಬರಿ 100 ದಿನಗಳು ಪೂರೈಸಿವೆ. ಇದೀಗ ಕೊಲೆ ಆರೋಪಿ ದರ್ಶನ್ ಮೊದಲ ಬಾರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದೀಗ ಜಾಮೀನು ಅರ್ಜಿಯಲ್ಲಿ ಸ್ಪೋಟಕ ವಾದಂತಹ ಮಾಹಿತಿ ಬಹಿರಂಗವಾಗಿದೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಗೌಡ A1 ಆರೋಪಿಯಾಗಿದ್ದು, ದರ್ಶನ್ A2 ಆರೋಪಿಯಾಗಿದ್ದಾರೆ. ದರ್ಶನ್ ಅವರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ವರೆಗೂ ಕೂಡ ಇದೇ ರೀತಿಯಾದಂತಹ ಒಂದು ಆರೋಪಿಗಳ ಪಟ್ಟಿ ಉಲ್ಲೇಖ ಮಾಡಿ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಆದರೆ ಮೊದಲ ಬಾರಿಗೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ, ಅರ್ಜಿಯಲ್ಲಿ ರೇಣುಕಾ ಸ್ವಾಮಿ ಕೊಲೆಗೂ ಹಾಗೂ ದರ್ಶನ್ಗು ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಎಂಬ ಮಾಹಿತಿ ಉಲ್ಲೇಖಿಸಲಾಗಿದೆ. ಹಾಗಾದರೆ ರೇಣುಕಾಸ್ವಾಮೆಯನ್ನು ಕಿಡ್ನ್ಯಾಪ್ ಮಾಡಿ ಬೆಂಗಳೂರಿಗೆ ಕರೆತಂದಿದ್ದು ಯಾರು? ಮುಂದೆ ಓದಿ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ ಗೂ ಯಾವುದೇ…
ಬೆಂಗಳೂರು : ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಿಗರ ಮೇಲೆ ಬೇರೆ ರಾಜ್ಯದವರ ದಬ್ಬಾಳಿಕೆ, ದೌರ್ಜನ್ಯ ಹೆಚ್ಚಾಗುತ್ತಿದೆ.ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶ ಮೂಲದ ಕಾರ್ಮಿಕರು ಕನ್ನಡ ಮಾತನಾಡಿದಕ್ಕೆ ಕನ್ನಡಿಗನ ಮೇಲೆ ಹಲ್ಲೆ ಮಾಡಿದ್ದರು. ಇದೀಗ ಉತ್ತರ ಭಾರತದವರು ಇಲ್ಲದಿದ್ರೆ ಬೆಂಗಳೂರು ಖಾಲಿಯಾಗುತ್ತೆ ಎಂಬ ಮಹಿಳೆಗೆ ಕರವೇ ಅಧ್ಯಕ್ಷ ನಾರಾಯಣಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಉತ್ತರ ಭಾರತದವರು ಇಲ್ಲದಿದ್ರೆ ಬೆಂಗಳೂರು ಖಾಲಿಯಾಗುತ್ತೆ ಎಂಬ ಮಹಿಳೆಯೊಬ್ಬಳ ವಿಡಿಯೋ ವೈರಲ್ ಆಗಿದ್ದು, ಮಹಿಳೆ ಮಾತು ಕೇಳಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನಲೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ, ‘ಕರ್ನಾಟಕ ಖಾಲಿ ಆಗೋದಿಲ್ಲ, ಬದಲಾಗಿ ಕ್ಲೀನ್ ಆಗುತ್ತದೆ. ಇರೋದಾದ್ರೆ ಸುಮ್ನೀರಿ, ಇಲ್ಲದಿದ್ರೆ ಮೂಟೆ ಕಟ್ಕೋಂಡು ಹೊರಡಿ ಎಂದು ಉತ್ತರ ಭಾರತ ಮೂಲದ ಮಹಿಳೆಗೆ ಟಿ.ಎ.ನಾರಾಯಣಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯುವತಿ ಹೇಳಿದ್ದೇನು? ಉತ್ತರ ಭಾರತದವರಾದ ನಾವೂ ಬೆಂಗಳೂರನ್ನು ಬಿಟ್ಟು ಹೋದ್ರೆ ನಿಮ್ಮ ಸಿಟಿ ಫುಲ್ ಖಾಲಿ ಆಗುತ್ತದೆ. ಇದಕ್ಕೂ ಮೊದಲು ಬೆಂಗಳೂರಿನ…
ವಿಜಯಪುರ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸೀಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದನ್ನ ಪ್ರಶ್ನಿಸಿ ಸಿದ್ದರಾಮಯ್ಯ ಕೂಡ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದರ ಮಧ್ಯ ಇಂದು ರಾಜ್ಯಪಾಲರು ರೀಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿ ವರದಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯಪಾಲರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ರಾಜ್ಯಪಾಲರ ಹಸ್ತಕ್ಷೇಪ ವಿಚಾರದ ಬಗ್ಗೆ ಮಾತನಾಡಿದ ಅವರು, ಇದು ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಿನ ಸಂಘರ್ಷವಲ್ಲ. ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡಬಾರದು. ಎಲ್ಲರೂ ಹೋಗಿ ರಾಜ್ಯಪಾಲರಿಗೆ ದೂರು ಕೊಡುವುದು, ಅವರು ಅದನ್ನು ಪರಿಗಣಿಸುವುದು ಆಗಬಾರದು ಎಂದರು. ಇದೇ ವೇಳೆ ಶಾಸಕ ಮುನಿರತ್ನ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸ್ವಾಭಾವಿಕವಾಗಿ ಯಾರೂ ಊಹಿಸದ ಆಪಾದನೆಗಳು ಅವರ ಮೇಲೆ ಬರುತ್ತಿವೆ. ಎಲ್ಲದರ ಕುರಿತು ತನಿಖೆಯಾಗಲಿ. ನಿಜವಾಗಿ ಆ…
ರಾಮನಗರ : ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ಇದೀಗ ಭಾರಿ ರಣಕಣದಿಂದ ಕೂಡಿದ್ದು, ಒಂದು ಕಡೆ ಮೈತ್ರಿ ಪಕ್ಷದ ಪರವಾಗಿ ಸಿಪಿ ಯೋಗೇಶ್ವರ್ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನೊಂದು ಕಡೆ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಯಾರೇ ಸ್ಪರ್ಧಿಸಿದರು, ಕಾಂಗ್ರೆಸ್ ನಿಂದ ನಾನೆ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇಂದು ಪಟ್ಟಣದ ಟಿಪ್ಪು ಮೈದಾನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ದಾಖಲೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಉಪಚುನಾವಣೆ ಟಿಕೆಟ್ ವಿಚಾರವಾಗಿ ನಾನು ಈ ವೇದಿಕೆ ಮೇಲೆ ಮಾತನಾಡುವುದಿಲ್ಲ. ಇಲ್ಲಿ ನಾನೇ ಅಭ್ಯರ್ಥಿ. ನಾನು ಅಧ್ಯಕ್ಷನಾಗಿ ಯಾರಿಗೆ ಟಿಕೆಟ್ ನೀಡುತ್ತೇನೋ ಅವರಿಗೆ ಬೆಂಬಲ ನೀಡಿ ಎಂದರು. ನಾನು ನಿಮ್ಮ ಸೇವಕನಾಗಿ ಬಂದಿದ್ದೇನೆ. ನಿಮ್ಮ ಮೇಲೆ ಅಧಿಕಾರ ಚಲಾಯಿಸಲು ಬಂದಿಲ್ಲ. ನಿಮ್ಮ ಮನೆಗೆ ಅವಕಾಶ ಬಂದಿದೆ, ಯಾಮಾರಬೇಡಿ. ಚನ್ನಪಟ್ಟಣದ ಜನರಿಗೆ ಒಳ್ಳೆಯದಾಗಬೇಕು. ಈ ಜನರ ಋಣ ತೀರಿಸಬೇಕು. ಈ ಕ್ಷೇತ್ರದ ಜನರ ಜತೆಗಿನ ಸಂಬಂಧ ಗಟ್ಟಿ…
ಬೆಂಗಳೂರು : ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ಇಡೀ ದೇಶದಲ್ಲಿ ಪ್ರಸಿದ್ಧವಾಗಿದೆ. ಯಾರೇ ಆ ಒಂದು ಪ್ರಸಾದ ತಂದು ಕೊಟ್ಟರೂ ಸಹ ಪ್ರತಿಯೊಬ್ಬರೂ ಕಣ್ಣಿಗೆ ಒತ್ತಿಕೊಂಡು ತಿನ್ನುವಂತಹ ಒಂದು ಸಂಪ್ರದಾಯ, ಪದ್ಧತಿ ಇದೆ. ಆದರೆ ಈ ಒಂದು ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು ಬಳಸುತ್ತಿರುವ ವಿಚಾರ ಕೇಳಿ ಇಡೀ ದೇಶದ ಜನತೆ ಬೆಚ್ಚಿ ಬಿದ್ದಿದೆ. ಇದೀಗ ತಿರುಪತಿ ಲಡ್ಡುವನ್ನು ರಾಜ್ಯದ ದೇವಸ್ಥಾನಗಳಲ್ಲಿ ಬಳಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘವು ತೀರ್ಮಾನಿಸಿದೆ. ಹೌದು ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು, ಮೀನಿನೆಣ್ಣೆ ಸೇರಿದಂತೆ ಇನ್ನಿತರ ಕಲಬೆರಕೆ ಪದಾರ್ಥಗಳನ್ನು ಬಳಸಲಾಗಿದೆ ಎನ್ನುವ ವಿಚಾರದಿಂದ ಎಲ್ಲರೂ ಶಾಕ್ ಆಗಿದ್ದಾರೆ. ಈ ಗೊಂದಲದ ಬೆನ್ನಲ್ಲೇ ರಾಜ್ಯದ ಅರ್ಚಕರೆಲ್ಲ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ.ಇನ್ನು ಮುಂದೆ ತಿರುಪತಿ ಲಡ್ಡು ಪ್ರಸಾದವನ್ನು ಇಲ್ಲಿನ ದೇವಸ್ಥಾನಗಳಲ್ಲಿ ಬಳಸದಿರಲು ಅಖಿಲ ಕರ್ನಾಟಕ ಅರ್ಚಕರ ಸಂಘ ತೀರ್ಮಾನಿಸಿದೆ. ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ನಡೆದಿಲ್ಲ ಎನ್ನುವ ಬಗ್ಗೆ ಸ್ಪಷ್ಟತೆ ಸಿಗುವರೆಗೂ ಪ್ರಸಾದವನ್ನು ನಾವು ಯಾರೂ ಬಳಸುವುದಿಲ್ಲ…
ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯಲ್ಲಿ ರಿಲ್ಸ್ ಗಳನ್ನು ನಾವು ನೋಡುತ್ತಿರುತ್ತೇವೆ. ಅದರಲ್ಲೂ ಅತಿ ಹೆಚ್ಚು ಲೈಕ್ಸ್, ಕಮೆಂಟ್ಸ್ ಪಡೆಯೋ ಒಂದು ಆಸೆಗೆ ಬಿದ್ದು, ಎಷ್ಟೋ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನ ಮಾರತ ಹಳ್ಳಿಯಲ್ಲಿ ಕೆರೆಯಲ್ಲಿ ರಿಲ್ಸ್ ಮಾಡುವ ಹುಚ್ಚಿಗೆ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ನಡೆದಿದೆ. ಹೌದು ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನೀರಿನ ರಭಸಕ್ಕೆ ನೀರು ಪಾಲಾಗಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಪಣತ್ತೂರು ಕೆರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ರೀಲ್ಸ್ ಮಾಡುವುದಕ್ಕೆ ಮೂವರು ಸ್ನೇಹಿತರು ಕೆರೆಯ ಬಳಿ ಆಗಮಿಸಿದ್ದರು. ಈ ವೇಳೆ ಇಬ್ಬರು ಕೆರೆಯಲ್ಲಿ ಈಜಾಡುತ್ತಿದ್ದರು. ಓರ್ವ ಸ್ನೇಹಿತ ವಿಡಿಯೋ ಮಾಡುತ್ತಿದ್ದ. ಈಜಾಡುತ್ತಿದ್ದ ಇಬ್ಬರ ಪೈಕಿ ಓರ್ವ ಯುವಕ ನೀರು ಪಾಲಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಅನೇಕ ದುರಂತಗಳು ಸಂಭವಿಸುತ್ತವೆ. ಆದರೂ ಅಧಿಕಾರಿಗಳು ಇದು ಯಾವುದಕ್ಕೂ ಕೂಡ ತಲೆಕೆಡಿಸಿಕೊಳ್ಳುವುದಿಲ್ಲ ಇದೀಗ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದೆ. ಹೌದು ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದೆ. ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಇದೀಗ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸದ್ಯ ಕಠಿಣ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಸಿರುವ ಆರೋಪದ ವಿವಾದದ ಬೆನ್ನಲ್ಲೆ ಇದೀಗ ಕರ್ನಾಟಕದ ಬ್ರಾಂಡ್ ಆಗಿರುವಂತಹ ನಂದಿನಿ ತುಪ್ಪಕ್ಕೆ ಎಲ್ಲೆಡೆ ಬೇಡಿಕೆ ಹೆಚ್ಚಾಗುತ್ತಿದ್ದು, ಅಲ್ಲದೆ TTD ಲಡ್ಡು ತಯಾರಿಕೆಗೆ ಮತ್ತಷ್ಟು ತುಪ್ಪ ಪೂರೈಸುವಂತೆ ಇಮೇಲ್ ಮೂಲಕ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ಹೌದು ಈ ಕುರಿತು ಕೆಎಂಎಫ್ ಎಂಡಿ ಜಗದೀಶ್ ರವರು ಪ್ರತಿಕ್ರಿಯೆ ನೀಡಿ, ರಾಜ್ಯದ ಮುಜರಾಯಿ ದೇಗುಲಗಳಿಗೆ ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಪ್ರತಿದಿನ 15 ಲಕ್ಷ ಲೀಟರ್ ಹಾಲಿನಿಂದ ತುಪ್ಪ ತಯಾರಿಸಲು ಸಿದ್ಧತೆ ನಡೆಯುತ್ತಿದೆ. ಟಿಟಿಡಿಗೆ ತೆರಳುವ ನಂದಿನಿ ತುಪ್ಪದ ವಾಹನಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತೆ ಎಂದರು. ಅಲ್ಲದೆ ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ GPS ಟ್ರ್ಯಾಕ್, ಎಲೆಕ್ಟ್ರಿಕ್ ಡೋರ್ ವ್ಯವಸ್ಥೆ ಮಾಡಿಸಲಾಗುತ್ತಿದೆ. ಲ್ಯಾಬ್ ಟೆಸ್ಟ್ ಮಾಡಿದ ಬಳಿಕ ನಂದಿನಿ ತುಪ್ಪ ಪೂರೈಸಲಾಗುತ್ತೆ. ಈ ಹಿಂದೆ ಇದ್ದ ಸರ್ಕಾರದಲ್ಲಿ ಟಿಟಿಡಿಗೆ ತುಪ್ಪ ಪೂರೈಕೆ…














