Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಅಂತರ್ಜಾತಿ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಸಂಗೀತ ಹಾಗೂ ನಿಂಗಪ್ಪ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಸಂಗೀತಾ ಸಹವಾಸ ಬಿಡುವಂತೆ ನಿಂಗಪ್ಪಗೆ ಸಂಗೀತಾ ಕುಟುಂಬಸ್ಥರು ತಾಕಿತು ಮಾಡಿದ್ದರು.ಆನಂತರ ಸಂಗೀತಾಳೊಂದಿಗೆ ನಿಂಗಪ್ಪ ಅಂತರ ಕಾಯ್ದುಕೊಂಡಿದ್ದ. ಆದರೆ ನಿಂಗಪ್ಪನೊಂದಿಗೆ ಸಂಗೀತ ಓಡಿ ಹೋಗಿದ್ದಳು. ಒಂದು ತಿಂಗಳ ಹಿಂದೆ ಓಡಿ ಹೋಗಿ ಇಬ್ಬರು ಗುಜರಾತ್ ನಲ್ಲಿ ವಾಸವಿದ್ದರು. ಬಳಿಕ ನ್ಯಾಯ ಪಂಚಾಯಿತಿ ಮಾಡಿದ ನಂತರ ಆಕೆಯನ್ನು ಮನೆಗೆ ಕಳುಹಿಸಲಾಗಿತ್ತು. ನಂತರ ಕೂಲಿ ಕೆಲಸಕ್ಕಾಗಿ ಯುವಕ ನಿಂಗಪ್ಪ ಚಿತ್ತಾಪುರಕ್ಕೆ ತೆರಳಿದ್ದಾನೆ. ಈ ವೇಳೆ ಸಂಗೀತ ನಿಂಗಪ್ಪನಿಗೆ ಕರೆ ಮಾಡಿ ಮತ್ತೆ ಪರಾರಿಯಾಗಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಸಂಗೀತ ಕುಟುಂಬಸ್ಥರು ಯುವಕ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಾರೆ. ನಿಂಗಪ್ಪನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಯಾದಗಿರಿ…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದಂತಹ ಅಪಘಾತ ನಡೆದಿದ್ದು ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ದಂಪತಿಗಳು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕಲಬುರ್ಗಿ ನಗರದ ಹೊರವಲಯದ ಬೀದರ್ ರಸ್ತೆಯ ಸ್ವಾಮಿ ಸಮರ್ಥ ದೇವಸ್ಥಾನದ ಬಳಿ ನಡೆದಿದೆ. ನಿನ್ನೆ ಈ ಒಂದು ಅಪಘಾತ ನಡೆದಿದ್ದು, ಮೃತರನ್ನು ಮಹಮದ್ ಶೇಕಿಬ್ ಜಿಲ್ಹಾನಿ (32), ಶೇರಿನ್ ಶೆಕಿಬ್ (28) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.ಕಾರು ಹುಮನಾಬಾದ್ ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿತ್ತು, ಕಲಬುರಗಿಯಿಂದ ಹುಮನಾದ್ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಕುರಿತಂತೆ ಸಂಚಾರಿ ಪೊಲೀಸ್ ಠಾಣೆ ಎರಡರಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಕೃಷಿ ಹೊಂಡವೊಂದರಲ್ಲಿ ಸೋಡಿಯಂ ಮೆಟಲ್ ಬಳಸಿಕೊಂಡು, ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡ್ರೋನ್ ಪ್ರತಾಪ್ ಹಾಗೂ ಕೃಷಿ ಹೊಂಡ ಜಮೀನು ಮಾಲಿಕನ ವಿರುದ್ಧ ಇದೀಗ ಮಿಡಿಗೇಶಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಅರೆಸ್ಟ್ ಮಾಡಿದ್ದು, ಡ್ರೋನ್ ಪ್ರತಾಪ ರನ್ನು ಘಟನಾ ಸ್ಥಳಕ್ಕೆ ಪೊಲೀಸರು ಇದೀಗ ಕರೆ ತರಲಿದ್ದಾರೆ. ಮಧುಗಿರಿ ತಾಲೂಕಿನ ಜನಕಲೋಟಿ ಗೆ ಪೊಲೀಸರು ಪ್ರತಾಪ್ ಅವರನ್ನು ಕರೆ ತರಲಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಇಟ್ಟಕಲೋಟಿ ಗ್ರಾಮದ ಸ್ಫೋಟದ ಸ್ಥಳಕ್ಕೆ ಡ್ರೋನ್ ಪ್ರತಾಪ್ ಕರೆ ತಂದು ಮಹಜರು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಪ್ರತಾಪ್ ಸೋಡಿಯಂ ಎಸೆದು ಸ್ಪೋತಿಸಿದ್ದ. ಶ್ರೀರಾಯರ ಬೃಂದಾವನ ಫಾರ್ಮ್ಸ್ ನಲ್ಲಿರುವ ಕೃಷಿಹೊಂಡದಲ್ಲಿ ಡ್ರೋನ್ ಪ್ರತಾಪ್ ಸ್ಪೋಟಗೊಳಿಸಿದ್ದ, ಇದೀಗ ಪ್ರತಾಪ್ ಭೂಮಿ ಮಾಲಿಕ ಜಿತೇಂದ್ರ ಕುಮಾರ್ ಜೈನ ವಿರುದ್ಧ ಇದೀಗ FIR ದಾಖಲಾಗಿದೆ. ಪ್ರಕರಣ ಹಿನ್ನೆಲೆ ಮಧುಗಿರಿ ತಾಲೂಕಿನ ಜನಕಲೋಟಿ…
ಬೆಂಗಳೂರು : ಗಂಡನನ್ನು ಬಿಟ್ಟು ತನ್ನ ಜೊತೆ ಇರಲು ಒಪ್ಪದಿದ್ದಕ್ಕೆ ವಿವಾಹಿತ ಮಹಿಳೆಯನ್ನು ಕೊಂದು ಪ್ರಿಯಕರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರ ಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮೊವುಹಾ ಮಂಡಲ್ (26) ಎಂದು ತಿಳಿದುಬಂದಿದೆ. ಇನ್ನೂ ಮಹಿಳೆಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮಿಥುನ್ ಮಂಡಲ್ (40) ಎನ್ನಲಾಗಿದೆ. ಗಂಡನನ್ನ ತೊರೆದು ತನ್ನೊಂದಿಗೆ ಬರದಿದ್ದಕ್ಕೆ ಸಿಟ್ಟಿನಿಂದ ಕೊಲೆ ಮಾಡಿದ್ದಾನೆ. ಬಳಿಕ ಬಂಧನ ಭೀತಿಯಿಂದ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಐಟಿಪಿಎಲ್ ಬಳಿ ಮೊಹುವಾ ವಾಸವಾಗಿದ್ದಳು. ಆರು ತಿಂಗಳ ಹಿಂದೆ ಪರಿಚಿತರಾಗಿದ್ದ ಮೊವುಹಾ ಮಂಡಲ್‌ಗೆ ತನ್ನನ್ನ ಪ್ರೀತಿಸುವಂತೆ ಮಿಥುನ್ ಕೇಳಿಕೊಂಡಿದ್ದ. ತನಗೆ ಮದುವೆಯಾಗಿದೆ ಎಂದು ಹೇಳಿದರೂ ಗಂಡನನ್ನ ತೊರೆದು ತನ್ನ ಜೊತೆಯಿರುವಂತೆ ಒತ್ತಡ ಹೇರಿದ್ದ. ಈತನ ಒತ್ತಡಕ್ಕೆ ಮಣಿಯದೆ ಆತನೊಂದಿಗೆ ಗಲಾಟೆ ಮಾಡಿಕೊಂಡಿದ್ದಳು. ಮಿಥುನ್ ಇದರಿಂದ ತಲೆಕೆಡಿಸಿಕೊಂಡು ಕೆಲಸಕ್ಕೆ ಹೋಗುತ್ತಿರಲಿಲ್ಲ. ಖರ್ಚಿಗಾಗಿ ಸ್ನೇಹಿತರಿಂದ ಕೈಸಾಲ ಪಡೆದಿದ್ದ. ಗಂಡನನ್ನು ಬಿಟ್ಟು ತನ್ನ ಜೊತೆ…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿ ಕಳ್ಳರು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯ ರಾಂಪುರ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಗ್ಯಾಸ್ ಕಟರ್ ಬಳಸಿ ಗ್ರಾಮೀಣ ಬ್ಯಾಂಕ್ ನಲ್ಲಿ ಖದಿಮರು ದರೋಡೆಗೆ ಯತ್ನಿಸಿದ್ದಾರೆ. ರಾಂಪುರ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ಈ ಒಂದು ಕಳ್ಳತನಕ್ಕೆ ಯತ್ನಿಸಲಾಗಿದೆ. ಈ ಕುರಿತಂತೆ 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಮೊದಲ ಬಾರಿ ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿದ್ದು, ಎರಡನೇ ಬಾರಿ ಬ್ಯಾಂಕ್ ಕಳ್ಳತನ ಮಾಡುವ ಸಂದರ್ಭದಲ್ಲಿ ಈ ಮೂವರು ಕಳ್ಳರು ಸಿಕ್ಕಿ ಬಿದ್ದಿದ್ದಾರೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿದ್ದಾನೆ. ಕಲ್ಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಬಳಿ ಬಾಲಕರದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಪ್ರವಹಿಸಿ ಬಾಲಕ ಸಾವನಪ್ಪಿರುವ ಘಟನೆ ನಡೆದಿದೆ. ನಗರದ ಬಸವ ನಗರದ ಕಮಲರಾಜ್ (14) ಎನ್ನುವ ಬಾಲಕ ಸಾವನಪ್ಪಿದ್ದಾನೆ. ರಸ್ತೆ ದಾಟುವ ವೇಳೆ ರಸ್ತೆ ಮಧ್ಯ ಅಳವಡಿಸಿದ್ದ ವಿದ್ಯುತ್ ಕಂಬದ ಬಳಿ ಹೋದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಕಬ್ಬಿಣದ ರಾಡಿಗೆ ಅಂಟಿಕೊಂಡಿದ್ದ ವಿದ್ಯುತ್ ತಂತಿ ಹಿಡಿದಿದ್ದಾನೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ. ವಿದ್ಯುತ್ ಪ್ರವಹಿಸಿ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದ ಕಲಬುರ್ಗಿ ಪಾಲಿಕೆಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇದೀಗ ಸಾರ್ವಜನಿಕರು ಕಲ್ಬುರ್ಗಿ ಪಾಲಿಕೆಯ ನಿರ್ಲಕ್ಷತನಕ್ಕೆ ಬಾಲಕ ಸಾವಿನ ಪಿದ್ದಾನೆ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಬಿಎಂಆರ್‌ಸಿಎಲ್ ಮಾಹಿತಿಯ ಪ್ರಕಾರ ಕೇವಲ ಒಂದೇ ದಿನದಲ್ಲಿ 9 ಲಕ್ಷಕ್ಕೂ ಅಧಿಕ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ ಎಂದು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ನಿರ್ವಹಣಾ ವೆಚ್ಚ ಕೂಡ ಹೆಚ್ಚಾದ ಹಿನ್ನೆಲೆಯಲ್ಲಿ ಬರುವ ಹೊಸ ವರ್ಷಕ್ಕೆ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ಹೌದು ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಪರಾಮರ್ಶೆ ನಡೆಸಲು ಬಿಎಂಆರ್‌ಸಿಎಲ್ ಸಮಿತಿ ರಚನೆ ಮಾಡಿತ್ತು. ಮೆಟ್ರೋ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಅಕ್ಟೋಬರ್ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಸಮಿತಿ, ಆ ವರದಿಯನ್ನು ಈ ತಿಂಗಳ 3 ನೇ ವಾರದಲ್ಲಿ ಬಿಎಂಆರ್ಸಿಎಲ್ಗೆ ಸಲ್ಲಿಸಲಿದೆ. ವರದಿಯನ್ನು ಡಿಸೆಂಬರ್ ಕೊನೆಯ ವಾರದಲ್ಲಿ ಬಿಎಂಆರ್‌ಸಿಎಲ್ ಸರ್ಕಾರಕ್ಕೆ ಸಲ್ಲಿಸಲಿದೆ. ಮೆಟ್ರೋ ಟಿಕೆಟ್ ದರ ಶೇ 15 ರಷ್ಟು ಹೆಚ್ಚಳಕ್ಕೆ ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದೇ ಆದಲ್ಲಿ…
ಚಿಕ್ಕಮಗಳೂರು : ಚಿಕ್ಕಮಂಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದು ಮತ್ತು ನಾಳೆ ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮಧ್ಯ ಮಾರಾಟ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಧ್ಯ ಮಾರಟಣಿ ಶಶಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶಿಸಿದ್ದಾರೆ. ಚಿಕ್ಕಮಂಗಳೂರು ಕಡೂರು ಮೂಡಿಗೆರೆ, ಕೊಪ್ಪ ಹಾಗೂ ಎನ್ ಆರ್ ಪುರ ತರೀಕೆರೆ ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಮಧ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದೆ ವಿ ಎಚ್ ಪಿ ಬಜರಂಗದಳ ನೇತೃತ್ವದಲ್ಲಿ ಈ ಒಂದು ದತ್ತ ಜಯಂತಿ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಮಧ್ಯ ಮಾರಾಟ ಬಂದ್ ಮಾಡಲಾಗಿದೆ. ಚಿಕ್ಕಮಂಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ದತ್ತ ಜಯಂತಿ ಅಂಗವಾಗಿ ಇಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ನಾಳೆ ದತ್ತ ಮಾಲಾಧಾರಿಗಳು, ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ…
ಬೆಳಗಾವಿ : ಇತ್ತೀಚಿಗೆ ದೇಶ ಹಾಗೂ ರಾಜ್ಯದಲ್ಲಿ ಡಿಜಿಟಲ್ ವಂಚನೆ ಹಾಗೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ ಈ ಕುರಿತು ಸಾರ್ವಜನಿಕರಿಗೆ ವಾಟ್ಸಾಪ್, ಫೇಸ್ ಬುಕ್ ಹಾಗೂ ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ಡಿಜಿಟಲ್ ಫ್ರಾಡ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ ಆಗಿದೆ. ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ ಇತರೆ ಅಂತರ್ಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು,…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಲಹಂಕ ನ್ಯೂಟೌನ್ನ ಬಯಲು ಬಸವೇಶ್ವರ ದೇವಸ್ಥಾನದ ಸಮೀಪದ ಫ್ಯಾಕ್ಟರಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಡಿ.9 ರಂದು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಜೋಡಿ ಕೊಲೆ ನಡೆದಿತ್ತು. ಬಿಕ್ರಂ ಸಿಂಗ್ ಮತ್ತು ಚೋಟೋ ತೂರಿ ಕೊಲೆಗೀಡಾಗಿದ್ದರು. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಗೆಳತಿಗೆ ಇವರು ಮೆಸೇಜ್ ಹಾಗೂ ವಿಡಿಯೋ ಕಾಲ್ ಮಾಡುತ್ತಿದ್ದರಿಂದ ಮನನೊಂದು ಇವರಿಬ್ಬರನ್ನು ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಲವರ್ ಗೆ ಮೆಸೇಜ್ ಮಾಡಿದಕ್ಕೆ ಮರ್ಡರ್! ಮೊದಲ ಆರೋಪಿಯ ಗೆಳತಿಗೆ ಕೊಲೆಯಾದ ಬಿಕ್ರಂ ಸಿಂಗ್ ಆಗಾಗ ಮೆಸೇಜ್ ಹಾಗೂ ವಿಡಿಯೋ ಕಾಲ್ ಮಾಡುತ್ತಿದ್ದ. ಇವರೆಲ್ಲರೂ ಪರಿಚಯಸ್ಥರು ಹಾಗೂ ನೇಪಾಳದವರು. ರಕೂನ್ ಸಂಸ್ಥೆಯಲ್ಲಿ ಬಿಕ್ರಂ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡ್ತಿದ್ದ. ಅಲ್ಲಿಯೇ ಹಳೆಯ ಕಟ್ಟಡದಲ್ಲಿ ತನ್ನ ವಸತಿ ಪಡೆದುಕೊಂಡಿದ್ದ. ಇನ್ನೊಬ್ಬ ಚೋಟೋ ತೂರಿ ಎಂಬಾತ ವೆಂಕಟೇಶ್ವರ ಟೆಕ್ಸ್ಟೈಲ್ಸ್ನಲ್ಲಿ ಡ್ರೈವಿಂಗ್ ಕೆಲಸ…













